ಮೂಡುಬಿದಿರೆ : ಜಲಜೀವನ್ ಮಿಷನ್ ಯೋಜನೆಯಡಿ ಪುತ್ತಿಗೆ ಗ್ರಾ.ಪಂ.ವ್ಯಾಪ್ತಿಯ ಮುಂಡೇಲು, ಮಂಜೊಲು ಗುಡ್ಡೆ ಹಾಗೂ ಪೆಲತ್ತಡ್ಕ ಬಳಿ 94 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೀರಿನ ಟ್ಯಾಂಕ್ ಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಗುದ್ದಲಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಕೋಟ್ಯಾನ್ ಈ ಭಾಗದ ಮೂಲಭೂತ ಸೌಕರ್ಯವಾಗಿರುವ ಕುಡಿಯುವ ನೀರನ್ನು ಜನರಿಗೆ
ಮಂಗಳೂರಿನ ಹೆಸರಾಂತ ದ್ವಿಚಕ್ರ ವಾಹನ ಶೋರೂಮ್ ಆದ ವೆಸ್ಟ್ ಕೊಸ್ಟ್ ನಲ್ಲಿ ಇದೀಗ ಗ್ರಾಹಕರಿಗೆ ಸ್ವಾತಂತ್ರೋತ್ವದ ಪ್ರಯುಕ್ತ ಬೋನನ್ ಝಾ ಫೆಸ್ಟಿವಲ್‌ನ್ನು ಆಯೋಜಿಸಿದ್ದಾರೆ. ಹಲವಾರು ರೀತಿಯ ರಿಯಾಯಿತಿಯೊಂದಿಗೆ ಮತ್ತು ಉಚಿತ ಕೊಡುಗೆ ಜೊತೆಗೆ ಇದೀಗ ವೆಸ್ಟ್ ಕೋಸ್ಟ್ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ. ಭರ್ಜರಿ ಒಂದು ತಿಂಗಳುಗಳ ಕಾಲ ಈ ಆಫರ್‌ನ್ನು ನೀಡುತ್ತಿದ್ದಾರೆ. ಗ್ರಾಹಕರಿಗಾಗಿ ೦% ಡೌನ್ ಪೇಮೆಂಟ್, ಪ್ರತಿವಾರ ಲಕ್ಕಿ ಡ್ರಾ ಜೊತೆಗೆ ಬಂಪರ್ ಪ್ರೈಜ್
ನಿರಂತರವಾಗಿ ಪರಿಸರದ ಮೇಲೆ ಉಂಟಾಗುತ್ತಿರುವ ದೌರ್ಜನ್ಯದಿಂದಾಗಿ ಪರಿಸರದಲ್ಲಿ ಬದುಕು ಕಟ್ಟಿಕೊಂಡಿರುವ ಜೀವ ಸಂಕುಲಗಳು ನಾಶವಾಗಿ, ಪರಿಸರದ ಸಮತೋಲನ ತಪ್ಪಿ ಹೋಗುತ್ತಿದೆ. ಜೈವಿಕ ಸರಪಳಿ ನಾಶವಾಗಿ ಹಲವಾರು ವಿರಳ ಗಿಡ ಸಸ್ಯಗಳು ಮತ್ತು ಪ್ರಾಣಿ ಸಂಕುಲಗಳು ನಾಶವಾಗಿ ಹೋಗುತ್ತಿದೆ. ಈ ನಿಟ್ಟಿನಲ್ಲಿ ನಾವೆಲ್ಲಾ ಕೂಡಲೇ ಎಚ್ಚೆತ್ತುಕೊಂಡು ಗಿಡಗಳನ್ನು ನೆಟ್ಟು ಮರಗಳನ್ನು ಪೋಷಿಸಿ ಪರಿಸರವನ್ನು ರಕ್ಷಿಸಬೇಕು. ಹಾಗಾದರೆ ಮಾತ್ರ ನಾಡು ಸಮೃದ್ಧವಾಗಿ ಕಾಲ ಕಾಲಕ್ಕೆ ಮಳೆ,
ಮಳೆಯಿಂದ ಹಾನಿಗೊಳಗಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಉಪ್ಪುಕಳ ಗ್ರಾಮಕ್ಕೆ ಬಂದರು ಹಾಗೂ ಮೀನುಗಾರಿಕೆ ಸಚಿವ ಅಂಗಾರ ಭೇಟಿ ನೀಡಿದ್ದು, ಶೀಘ್ರದಲ್ಲೇ ಸೇತುವೆ ನಿರ್ಮಾಣದ ಭರವಸೆ ನೀಡಿದರು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 124 ಸೇತುವೆಗಳು ನಿರ್ಮಾಣವಾಗಿವೆ. ವಿಶೇಷ ಪ್ರಾಶಸ್ತ್ಯ ನೀಡಿ ಗ್ರಾಮಗಳನ್ನು ಬೆಸೆಯುವ ಸಂಪರ್ಕ ಸೇತುವೆ ನಿರ್ಮಿಸಲಾಗುತ್ತದೆ. ಉಪ್ಪುಕಳದಲ್ಲೂ ಅತೀ ಶೀಘ್ರದಲ್ಲೇ ಸೇತುವೆ ರಚನೆಯಾಗಲಿದ್ದು, ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಲಾಗುವುದು
Mangalore: Srinivas University, Mangalore, is a Private State University in Karnataka established in 2013 by Karnataka State Act. Srinivas University is the flagship of 18 Srinivas Group of Institutions started by A. Shama Rao Foundation, Mangalore, India, a private Charitable Trust founded in 1988 by an eminent senior Chartered Accountant Dr. CA A. Raghavendra Rao. […]
ಎಸ್‍ಸಿಎಸ್ ಶಿಕ್ಷಣ ಸಮೂಹ ಸಂಸ್ಥೆಗಳಲ್ಲಿ ಒಂದಾದ ಕರ್ನಾಟಕ ಅಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗದ ವತಿಯಿಂದ ವೈದ್ಯರ ದಿನಾಚರಣೆ ಹಮ್ಮಿಕೊಂಡರು. ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ. ಮೊಹಮ್ಮದ್ ಇಕ್ಬಾಲ್ ಮುಖ್ಯ ಅತಿಥಿಯಾಗಿದ್ದರು. ಪ್ರಾಂಶುಪಾಲರಾದ ಡಾ.ರವಿರಾವ್ ಎಸ್. ವೈದ್ಯರ ದಿನದ ಮಹತ್ವ ವಿವರಿಸಿದರು. ಎಸ್.ಸಿಎಸ್ ಆಯುರ್ವೇದ ಆಸ್ಪತ್ರೆಯಲ್ಲಿ ಉತ್ತಮ ಸೇವೆ ನೀಡಿದ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗದ
ಲಾರಿಯೊಂದು ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿ ಜಂಕ್ಷನ್ ನಲ್ಲಿ ನಡೆದಿದೆ.ಮೃತರನ್ನು ಕಂಚಿನಡ್ಕ ನಿವಾಸಿ ಶಂಸುದ್ದೀನ್ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಲಾರಿ ಪಡುಬಿದ್ರಿ ಜಂಕ್ಷನ್‍ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದ ಮೇಲೆ ಮಗುಚಿಬಿತ್ತು. ಸ್ಥಳದಲ್ಲೇ ಮೃತಪಟ್ಟ ಶಂಶುದ್ದೀನ್ ಅವರ ಮೃತದೇಹವನ್ನು ಪೋಲಿಸರು ಸ್ಥಳೀಯರ
ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ ಪತ್ತೆ ಹಚ್ಚಿ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ತಕ್ಷೀರು ದಾಖಲಿಸಿದ್ದಾರೆ. ಆರೋಪಿಗಳಾದ ಕೊಳ್ತಿಗೆ ಗ್ರಾಮದ ಶೇಡಿಗುರಿ ವಾಸಿ ಧನಂಜಯ(38 ವರ್ಷ) ಮತ್ತು ಜಯ(38 ವರ್ಷ) ರವರನ್ನು ಅರಣ್ಯ ಇಲಾಖೆ ಅಧಿಕಾರಿ ಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ ಜುಲೈ 15 ರವರೆಗೆ
ಮಂಗಳೂರಿನ ಪ್ರಸಿದ್ಧ ತಂದೂರ್ ರೆಸ್ಟೋರೆಂಟ್‍ನ ಮಾಲಕರಾದ ಜಿ. ಆನಂದ್ ರಾಯ ಶೆಣೈ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ಪ್ರಾಯವಾಗಿತ್ತು. ಮಂಗಳೂರಿನ ಗುರುಪುರದವರಾದ ಇವರು ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಜನಮನ್ನಣೆ ಗಳಿಸಿದ್ದರು. ಇವರು ಪತ್ನಿ ಸುಜಾತ ಆನಂದ ರಾಯಿ, ಪುತ್ರ ವರದರಾಜ್ ಶೆಣೈ, ಪುತ್ರಿ ಶಾರದಾ ದಿಲೀಪ್ ಆಚಾರ್ಯ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಬೆಂಗಳೂರು, ಜು, 5; ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನಿಂದ ಭಾರತದ ಅತಿ ಎತ್ತರದ “ಭೀಮಾ” ರೋಬೋಟ್ ಅನ್ನು ಅನಾವರಣಗೊಳಿಸಲಾಗಿದೆ. ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನ ಸಂಸ್ಥಾಪಕ ಹರ್ಷ ಕಿಕ್ಕೇರಿ ಅವರು ದೇಶೀಯ ರೊಬೋಟ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. “ಭೀಮಾ” 7.7 ಅಡಿ ಎತ್ತರದ ರೋಬೋಟ್ ಆಗಿದ್ದು, ಇದರ ದೇಹಕ್ಕೆ ಎಲ್.ಇ.ಡಿ ತಂತ್ರಜ್ಞಾನದ ಸ್ಪರ್ಷ ನೀಡಲಾಗಿದೆ. ಈ ರೋಬೋಟ್ ಬಹುಪಯೋಗಿಯಾಗಿದ್ದು, ವಿಶೇಷವಾಗಿ ಸ್ವಾಗತಕಾರನ



























