ಮಂಗಳೂರು, ನ.28: (ಕರ್ನಾಟಕ ವಾರ್ತೆ): ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಪತ್ರ ನೀಡಿದ್ದಾರೆ. ಮುಖ್ಯಮಂತ್ರಿ ಗಳ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು
ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ನ. 25ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡಿನಲ್ಲಿ ಡಿ. 25ರಿಂದ ನಡೆಯಲಿರುವ 4 ದಿನದ ಎರಡನೇ ವಿಶ್ವ ಆಯುರ್ವೇದ ಸಮ್ಮಿಲನದ ಅಂಗವಾಗಿ ಕಾಲೇಜಿನಲ್ಲಿ ಆಯುರ್ವೇದ ರಥವನ್ನು ಅದ್ಧೂರಿಯಾಗಿ ಸ್ವಾಗತ ಮಾಡಲಾಯಿತು. ಕಾಲೇಜಿನ ಅಕಾಡೆಮಿಕ್ ಕೋ ಆರ್ಡಿನೇಟರ್ ಡಾ. ಕವಿತಾ ಬಿ.ಎಂ ಇವರು ರಥಕ್ಕೆ ಹಾರ ಹಾಕುವ ಮೂಲಕ ಸ್ವಾಗತಿಸಿದರು. ಈ ಸಂಧರ್ಭದಲ್ಲಿ ಕಾಲೇಜಿನ ಎಲ್ಲಾ ವೈದ್ಯರುಗಳನ್ನು ಸನ್ಮಾನಿಸಿ
ಚೂಂತಾರು ಪ್ರತಿಷ್ಠಾನ ಮತ್ತು ಆರೋಗ್ಯ ಭಾರತಿಯ ಜಂಟಿ ಆಶ್ರಯದಲ್ಲಿ ಗುರುವಾರ ತಾ. 27.11.2025 ರಂದು ನಾರ್ಲಪಡೀಲ್ ದ.ಕ. ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ ಜರಗಿತು. ಚೂಂತಾರು ಪ್ರತಿಷ್ಠಾನದ ಟ್ರಸ್ಟಿಗಳೂ ಆರೋಗ್ಯ ಭಾರತಿಯ ಜಿಲ್ಲಾ ಗೌರವಾಧ್ಯಕ್ಷರೂ ಆದ ಡಾ. ಮುರಲೀ ಮೋಹನ ಚೂಂತಾರು ಅವರು ಮಕ್ಕಳಿಗೆ ದಂತ ಆರೋಗ್ಯ ಸಂರಕ್ಷಣೆಯ ಮಾಹಿತಿಯನ್ನು ನೀಡಿದರು ಹಾಗೂ ಚೂಂತಾರು ಪ್ರತಿಷ್ಠಾನದ ವತಿಯಿಂದ ಶಾಲೆಯ ಎಲ್ಲ
ವಿಶ್ವ ಹಿಂದೂ ಪರಿಷದ್ ವತಿಯಿಂದ ಭೇಟಿ, ಶೀಘ್ರ ಆರೋಪಿಗಳನ್ನು ಪತ್ತೆ ಹಚ್ಚುವಂತೆ ಪೋಲಿಸ್ ಇಲಾಖೆಗೆ ಮನವಿ ಕೇರಳ ಗಡಿ ಪ್ರದೇಶವಾಗಿರುವ ವಿಟ್ಲದ ಪೆರುವಾಯಿ ಗ್ರಾಮದ ಅಶ್ವಥನಗರ ಬಳಿಯಿರುವ ವ್ಯವಸಾಯ ಸೇವಾ ಸಹಕಾರಿ ಸಂಘದ ಅವರಣದಿಂದ ನಾಲ್ಕು ಗೋವುಗಳ ಕಳ್ಳತನವಾಗಿ ಇಂದಿಗೆ ಆರು ದಿನವಾಗಿದ್ದು ಎಫ್ ಐ ಆರ್ ದಾಖಲಿಸಿ ಇಂದಿಗೆ ನಾಲ್ಕು ದಿನ ಕಳೆದರು ಇಂದಿಗೂ ಗೋವು ಪತ್ತೆಯಾಗಿಲ್ಲ ಈ ನಿಟ್ಟಿನಲ್ಲಿ ಇಂದು ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲೆಯ ವತಿಯಿಂದ ಗೋವು
ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹಿನ್ನೆಲೆ-ಈಶಾನ್ಯ ಬದಿಯ ಕಟ್ಟೆ ನಿರ್ಮಾಣಕ್ಕೆ ಬೆಂಗಳೂರಿನ ಉದ್ಯಮಿ ನಾಗೇಶ್ ರಾವ್ ಅತ್ತಾಳ ಸುಜಾತ ದಂಪತಿಯಿಂದ ರೂ.25ಲಕ್ಷ ದೇಣಿಗೆ ಸಮರ್ಪಣೆ. ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಬಗ್ಗೆ ದೇವಳದ ಈಶಾನ್ಯ ಬದಿಯ ಕಟ್ಟೆ ನಿರ್ಮಾಣಕ್ಕಾಗಿ ನಾಗೇಶ್ ರಾವ್ ಅತ್ತಾಳ ಮತ್ತು ಸುಜಾತ ರಾವ್ ಅವರು ರೂ.25 ಲಕ್ಷ
ಈ ವಿಶೇಷ ಪ್ರದರ್ಶನಕ್ಕೆ MG Motors Mangalore ಪ್ರಾಯೋಜಕತ್ವ ವಹಿಸಿಕೊಂಡಿದ್ದು, ಬಂಟ್ವಾಳ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ಹಾಗೂ ಮಡಿಕೇರಿ ಸೇರಿದಂತೆ ವಿವಿಧ ಪ್ರದೇಶಗಳಿಂದ ಆಗಮಿಸಿದ್ದ ಮಾಧ್ಯಮ ಮತ್ತು ಪತ್ರಿಕಾ ಪ್ರತಿನಿಧಿಗಳನ್ನು ಮಾತ್ರ ಗುರಿಯಾಗಿಸಿಕೊಂಡು ಈ ಶೋ ನಿಗದಿಪಡಿಸಲಾಯಿತು. ಪತ್ರಕರ್ತರ ಸೇವೆಯನ್ನು ಗೌರವಿಸುವ ಉದ್ದೇಶದಿಂದ, ಮಾಧ್ಯಮ ಪ್ರತಿನಿಧಿಗಳು ಹಾಗೂ ಅವರ ಕುಟುಂಬ ಸದಸ್ಯರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು,
ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಕರ್ನಾಟಕ ಸಿರಿಗನ್ನಡ ಸಿರಿ ರಾಜ್ಯಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ ಎಂದು ದಾವಣಗೆರೆಯ ಕರ್ನಾಟಕ ರಾಜ್ಯ ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆಯ ರಾಜ್ಯಾಧ್ಯಕ್ಷರಾದ ಸಾಲಿಗ್ರಾಮ ಗಣೇಶ್ ಶೆಣೈ ಅವರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ. 2025 ನವಂಬರ್ 23 ರಂದು ದಾವಣಗೆರೆಯಲ್ಲಿ ಇರುವ ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಕಲ್ಯಾಣ ಮಂಟಪದಲ್ಲಿ ನಡೆಯುವ ರಾಜ್ಯ ಮಟ್ಟದ ಸಮಾರಂಭದಲ್ಲಿ
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾವೇರಿ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರು ತಂಡ ಪ್ರಶಸ್ತಿಯನ್ನು ಪಡೆದುಕೊಂಡು ಒಟ್ಟು 09 ಪದಕಗಳೊಂದಿಗೆ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.ಸ್ಪರ್ಧೆಯ ಫಲಿತಾಂಶ :ಆರ್ಟಿಸ್ಟಿಕ್ ಪೇರ್ : ಬಾಲಕರ ವಿಭಾಗದಲ್ಲಿ ಚಂದ್ರಶೇಖರ ಮತ್ತು ಪೃಥ್ವಿಚಾರ್
ಮಂಗಳೂರು : ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಪೀಠಿಕೆಯನ್ನು ತುಳುವಿನಲ್ಲಿ ಓದುವ ಕಾರ್ಯಕ್ರಮ ಮಂಗಳೂರಿನಲ್ಲಿ ಈ ದಿನ ಹಲವೆಡೆ ನಡೆಯಿತು. ಸಂವಿಧಾನ ಪೀಠಿಕೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭಾಷೆಗೆ ಅನುವಾದಿಸಿ ಫಲಕದ ರೂಪದಲ್ಲಿ ಬಿಡುಗಡೆ ಮಾಡಿತ್ತು. ಮಂಗಳೂರಿನ ತುಳು ಭವನ, ಮಂಗಳೂರು ರಥಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರು ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ತುಳು ಪರಿಷತ್ ಮಂಗಳೂರು ಘಟಕ , ಹಂಪನಕಟ್ಟೆ
ಕಡಬ ಪೊಲೀಸರಿಂದ ಯುಡಿಆರ್ ಪ್ರಕರಣ ದಾಖಲು ಕಡಬ: ಕುಟ್ರುಪ್ಪಾಡಿ ನಿವಾಸಿ ಸೊಲೊಮೊನ್ (54) ಅವರು ನೀಡಿದ ದೂರಿನ ಮೇರೆಗೆ, ಅವರ ಪುತ್ರ ರಾಕೇಶ್ (36) ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ರಾಕೇಶ್ ಅವರು ಕಡಬದ ಕಳಾರದಲ್ಲಿ ದ್ವಿಚಕ್ರ ವಾಹನ ಗ್ಯಾರೇಜ್ ನಡೆಸುತ್ತಿದ್ದು, ತನ್ನ ಪತ್ನಿ ಹಾಗೂ ಸ್ನೇಹಿತನ ನಡುವೆ ಮೊಬೈಲ್ ಸಂಪರ್ಕವಿರುವ ವಿಚಾರ ತಿಳಿದ ಹಿನ್ನೆಲೆ ತೀವ್ರ




























