ಮಂಜೇಶ್ವರ: ಕರ್ನಾಟಕ ನಿವಾಸಿಯಾದ ಕೂಲಿ ಕಾರ್ಮಿಕನೊಬ್ಬನನ್ನು ರಸ್ತೆ ಬದಿಯಲ್ಲಿ ಗಾಯಗಳೊಂದಿಗೆ ರಕ್ತಸಿಕ್ತವಾದ ಸ್ಥಿತಿಯಲ್ಲಿ ಪತ್ತೆ ಹಚ್ಚಲಾಗಿದೆ. ಕರ್ನಾಟಕ ಬೆಳ್ಗಾಂ ನಿವಾಸಿ ಬಸಪ್ಪ ರಾಜು ಸಾವನ್ನಪ್ಪಿದ ದುರ್ದೈವಿ. ಮಂಜೇಶ್ವರ ಪಾವೂರು ಸೂಪಿ ನಗರ ರಸ್ತೆ ಬದಿಯಲ್ಲಿ ದಾರಿಹೋಕನೊಬ್ಬ ಈ ದೃಶ್ಯವನ್ನು ಕಂಡು ಮಾಹಿತಿ ನೀಡಿದ್ದಾನೆ.ಎರಡು ದಿವಸಕ್ಕೆ ಮೊದಲು ಸೂಪಿ ನಗರ                         
        
              ಓಣಂ ಹಬ್ಬ ಕೇರಳದ ಜನರ ಪ್ರೀತಿಯ ಹಬ್ಬ,ಎಲ್ಲೆಡೆಯು ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕತೆಯ ಎಳೆಗಳೊಂದಿಗೆ ಬೆಸೆದುಕೊಂಡಿದ್ದು, ಮಂಜೇಶ್ವರದಲ್ಲಿರುವ ಓಷಿಯನ್ ಎಂಪೈರ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಹಬ್ಬದ ವಾತಾವರಣ ಮನೆಮಾಡಿದೆ. ಸಂಸ್ಕೃತಿ, ಸಂಪ್ರದಾಯದ ಪ್ರತಿರೂಪವೇ ಓಣಂ ಹಬ್ಬ. ಕೇರಳದ ಜನತೆ ಬಹಳ ಸಂಭ್ರಮದಿಂದ ಈ ಹಬ್ಬವನ್ನು ಆಚರಿಸುತ್ತಾರೆ. ಓಣಂ ಅನೇಕ ಆಸಕ್ತಿದಾಯಕ ಆಚರಣೆಗಳನ್ನು ಹೊಂದಿದೆ. ಅತ್ಯಂತ ವರ್ಣರಂಜಿತ ಓಣಂ ಆಚರಣೆಗಳಲ್ಲಿ ಒಂದು ಹೂವಿನ ರಂಗೋಲಿಗಳು                         
        
              ಮಂಜೇಶ್ವರ: ತಲಪಾಡಿ-ಚೆಂಗಳ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ ಸಾಗುತ್ತಿರುವ ಮಧ್ಯ ತಲಪ್ಪಾಡಿಯಿಂದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿರ್ಮಿಸಿರುವ ರಿಟರ್ನ್ ಹಾಲ್ ಬಿರುಕು ಬಿಟ್ಟಿರುವುರಾಗಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಯಾವುದೇ ಮಾಹಿತಿ ನೀಡದೆ ಕಾಮಗಾರಿ ಮುಂದುವರಿಸುತ್ತಿರುವ ಗುತ್ತಿಗೆದಾರರು ಬಿರುಕು ಬಿಟ್ಟಿರುವ ಬಗ್ಗೆ ಸ್ಥಳೀಯರ ಪ್ರಶ್ನೆಗಳಿಗೆ ಸ್ಪಂದಿಸದಿರುವುದು ಜನರ ಆತಂಕ ಹೆಚ್ಚಿಸಿದೆ. ರಾಷ್ಟ್ರೀಯ ಹೆದ್ದಾರಿ                         
        
              ಮಂಜೇಶ್ವರ: ಅಂಗಡಿಮೊಗರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಕನ್ನಡ ಮಾಧ್ಯಮಕ್ಕೆ ಮತ್ತೆ ಮಲಯಾಳ ಶಿಕ್ಷಕರ ನೇಮಕ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದೆ.ನೇಮಕಾತಿ ವಿರೋಧಿಸಿ ಶಾಲಾ ವಿದ್ಯಾರ್ಥಿಗಳು, , ಶಾಲಾ ರಕ್ಷಕ – ಶಿಕ್ಷಕ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕಳೆದ ವರ್ಷವೂ ಫಿಸಿಕಲ್ ಸಯನ್ಸ್ ಗೆ ಮಲಯಾಳಿ ಶಿಕ್ಷಕ ರನ್ನು ನೇಮಕ ಮಾಡಲಾಗಿತ್ತು.ಈ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಇದರಿಂದ ನೇಮಕಾತಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ                         
        
              ಮಂಜೇಶ್ವರ : ತಪಾಡಿಯಿಂದ ಕಾಸರಗೋಡು ತನಕದ ರಾ.ಹೆದ್ದಾರಿಯಲ್ಲಿ ಸೃಷ್ಟಿಯಾಗಿರುವ ಬೃಹತಕಾರದ ಹೊಂಡಗಳನ್ನು ಜಲ್ಲಿ ಕಲ್ಲು ಹಾಗೂ ಜಲ್ಲಿ ಹುಡಿಯನ್ನು ಹಾಕಿ ಮುಚ್ಚುತ್ತಿರುವುದು ಪ್ರಯಾಣಿಕರಿಗೂ ಸ್ಥಳೀಯರಿಗೂ ಶಾಪವಾಗಿ ಪರಿಣಮಿಸಿದೆ.ರಾಷ್ಟ್ರೀಯ ಹೆದ್ದಾರಿ ಪುನರ್ ನವೀಕರಣದ ಭಾಗವಾಗಿ ರಸ್ತೆ ನಿರ್ಮಾಣ ನಡೆಯುತ್ತಿರುವ ಭಾಗಗಳಲ್ಲಿ ಮಳೆಗಾಲದಲ್ಲಿ ಮಳೆ ನೀರು ಕಟ್ಟಿ ನಿಂತು ರಸ್ತೆ ಬಹುತೇಕ ಭಾಗಗಳಲ್ಲಿ ಕುಸಿದು ಹೋಗಿತ್ತು. ರಾ.ಹೆದ್ದಾರಿ ನಿರ್ಮಾಣದ ಕಾಮಗಾರಿಯಲ್ಲಿ ಹಲವು                         
        
              ಮಂಜೇಶ್ವರ: ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಬಂದೂಕು ಹಾಗೂ ಶಸ್ತ್ರಾಸ್ತ್ರದೊಂದಿಗೆ ಉಪ್ಪಳದಲ್ಲಿ ತಿರುಗಾಡುತಿದ್ದ ಮೂವರನ್ನು ಮಂಜೇಶ್ವರ ಎಸ್ಸೈ ಅನ್ಸಾರ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಈ ತಂಡದಲ್ಲಿದ್ದ ಪ್ರಮುಖ ಆರೋಪಿ ಅಯಾಝ್ ಎಂಬಾತನನ್ನು ಆತನ ಸಹೋದರ ಪೊಲೀಸರಲ್ಲಿ ಬಲ ಪ್ರಯೋಗಿಸಿ ಬಿಡಿಸಿರುವುದಾಗಿ ಆರೋಪಿಸಲಾಗಿದೆ. ಬಳಿಕ ಹೆಚ್ಚಿನ ಪೊಲೀಸರು ಸ್ಥಳಕ್ಕಾಗಮಿಸಿ ಆಟೋ ರಿಕ್ಷಾದಲ್ಲಿದ್ದ ಇಬ್ಬರನ್ನು ಹಾಗೂ ಆಯಾಝ್ ನ ಸಹೋದರನನ್ನು ಬಂಧಿಸಿದ್ದಾರೆ.                         
        
              ಮಂಜೇಶ್ವರ :ರಾಷ್ಟೀಯ ಹೆದ್ದಾರಿ ಅಭಿವೃದ್ಧಿಯಲ್ಲಿ ಅವೈಜ್ಞಾನಿಕ ನಿರ್ಮಾಣ ಸೇರಿದಂತೆ ಪ್ರತಿಯೊಂದು ವಿಷಯದಲ್ಲೂ ಮಂಜೇಶ್ವರದ ಕೂಗಿಗೆ ಕಿಂಚತ್ತೂ ಬೆಲೆಯನ್ನು ಕಲ್ಪಿಸದ ಅಧಿಕಾರಿಗಳ, ಜನಪ್ರತಿನಿಧಿಗಳ ಕಣ್ಣು ಮುಚ್ಚಾಲೆಯಾಟದಿಂದ ಬೇಸೆತ್ತಿರುವ ಮಂಜೇಶ್ವರದ ಸಮಾನ ಮನಸ್ಕರು ಸೇರಿ ಕೊಂಡು ಹೊಸಂಗಡಿಯ ವ್ಯಾಪಾರಿ ಭವಣದಲ್ಲಿ ಮಂಜೇಶ್ವರ ನಾಗರಿಕ ಹಿತರಕ್ಷಣಾ ವೇದಿಕೆ ಎಂಬ ಹೆಸರಿನಲ್ಲಿ ನೂತನ ಸಂಘಟನೆಯೊಂದಕ್ಕೆ ರೂಪು ನೀಡಿದ್ದಾರೆ. ಈಗಾಗಲೇ ಮಂಜೇಶ್ವರ ರೈಲು ನಿಲ್ದಾಣ                         
        
              ವಿದ್ಯೆಯೂ ಕಲೆಯೂ ಜೊತೆ ಜೊತೆಯಾಗಿ ಸಾಗಲಿ. ಇಂದು ಅವಕಾಶಗಳ ಆಕಾಶವೇ ನಮ್ಮ ಮುಂದಿದೆ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು’ಎಂಬುದಾಗಿ ರಂಗಭೂಮಿ ಕಲಾವಿದ,ಚಲನಚಿತ್ರ ನಟ ಶ್ರೀ ಪ್ರಕಾಶ್ ತೂಮಿನಾಡು ನುಡಿದರು.ಅವರು ಮಂಜೇಶ್ವರ ಉಪಜಿಲ್ಲಾಮಟ್ಟದ ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ 2022-23ನೇ ಶೈಕ್ಷಣಿಕ ವರ್ಷದ ಕಾರ್ಯ ಚಟುವಟಿಕೆಗಳನ್ನು ಜಿ.ವಿ.ಎಚ್.ಎಸ್.ಎಸ್.ಕುಂಜತ್ತೂರು ಶಾಲೆಯಲ್ಲಿ ಉದ್ಘಾಟಿಸಿ ಮಾತನಾಡುತ್ತಿದ್ದರು.ಶಾಲೆಯ ಹಳೆ ವಿದ್ಯಾರ್ಥಿಯೂ ಆಗಿರುವ                         
        
              ಕೇರಳದ ಕಾಸರಗೋಡು ಜಿಲ್ಲೆಯ ತಾಳಿಪಡ್ಪುವಿನ ಆರ್.ಎಸ್.ಎಸ್ ಕಾರ್ಯಕರ್ತ ರಮೇಶ್ ನಿವಾಸಕ್ಕೆ ಸಚಿವ ಎಸ್.ಅಂಗಾರ ಭೇಟಿ, ಮಾತುಕತೆ ನೀಡಿದರು.ಇನ್ನು ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಮೆರವಣಿಗೆ ವೇಳೆ ಪೊಲೀಸರು ಲಾಠಿ ಜಾರ್ಚ್ ನಡೆಸಿದ್ರು. ಈ ವೇಳೆ ಆರ್.ಎಸ್.ಎಸ್ ಕಾರ್ಯಕರ್ತ ರಮೇಶ್ ಪೊಲೀಸರ ನಡುವೆ ವಾಗ್ವಾದ ನಡೆಸಿದರು. ರಾಜ್ಯ ಸರ್ಕಾರ ತೀವ್ರ ಮುಖಭಂಗದ ಬೆನ್ನಲ್ಲೇ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದು, ರಮೇಶ್ ಮೇಲೆ ಲಾಠಿ ಚಾರ್ಜ್ ಬಗ್ಗೆ ಭಾರೀ ವಿವಾದ                         
        
              ಕ್ಷುಲ್ಲಕ ಕಾರಣಕ್ಕೆ ನಡೆದ ಹೊಡೆದಾಟದಲ್ಲಿ ಗಂಭೀರ ಗಾಯಗೊಂಡಿದ್ದ ಮಸೂದ್(19) ರಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.ಜು.19 ರಂದು ಕಾಸರಗೋಡು ತಾಲೂಕು ಮೊಗ್ರಾಲ್ ಪುತ್ತೂರು ವಾಸಿ ಮಸೂದ್ ಮೇಲೆ ಕ್ಷುಲ್ಲಕ ಕಾರಣಕ್ಕಾಗಿ ಎಂಟು ಮಂದಿಯ ತಂಡ ಹಲ್ಲೆ ನಡೆಸಿತ್ತು. ಈ ವೇಳೆ ಗಂಭೀರ ಗಾಯಗೊಂಡಿದ್ದ ಮಸೂದ್ ನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಇಂದು ಚಿಕಿತ್ಸೆ ಫಲಕಾರಿಯಾಗದೆ ಆತ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ                         
        
























