Home Archive by category kundapura (Page 6)

ತೌಕ್ತೆ ಚಂಡಮಾರುತದಿಂದ ಆಗಿರುವ ಹಾನಿ ಪರಿಶೀಲನೆಗೆ ಕೇಂದ್ರದ ತಂಡ ಉಡುಪಿಗೆ ಆಗಮನ

ಕುಂದಾಪುರ: ತೌಕ್ತೆ ಚಂಡಮಾರುತದಿಂದ ಆಗಿರುವ ಅನಾಹುತಗಳ ಪರಿಶೀಲನೆಗೆ ಕೇಂದ್ರ ಸರಕಾರದ ಐಎಂಸಿ ಟಿ ತಂಡ ಉಡುಪಿ ಜಿಲ್ಲೆಯಾದ್ಯಂತ ಸರ್ವೇಕ್ಷಣೆ ಕಾರ್ಯವನ್ನು ಗುರುವಾರ ಆರಂಭಿಸಿದೆ. ತಿಂಗಳ ಹಿಂದೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವುಂಟಾಗಿ ತೌಕ್ತೆ ಚಂಡಮಾರುತ ಎದ್ದಿತ್ತು. ಸುಮಾರು ನಾಲ್ಕು ದಿನಗಳ ಕಾಲ ಉಡುಪಿ ಜಿಲ್ಲೆಯ ಉದ್ದಕ್ಕೂ ಭಾರಿ ಗಾಳಿ-ಮಳೆ

ಕುಂದಾಪುರ: ಒತ್ತಿನಣೆಯ ಗುಡ್ಡ ಕುಸಿತ

ಕುಂದಾಪುರ: ಬೈಂದೂರು-ಶಿರೂರು ಮಧ್ಯಭಾಗದ ಒತ್ತಿನಣೆ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಬುಧವಾರ ಗುಡ್ಡ ಕುಸಿದು ಕೆಲ‌ಕಾಲ‌ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಬೈಂದೂರು ಶಿರೂರು ನಡುವಿನ ರಾಷ್ಟೀಯ ಹೆದ್ದಾರಿ ಪಕ್ಕದ ಗುಡ್ಡದ ಕಾಲಿನಲ್ಲಿ ಚರಡಿ ಕಾಮಗಾರಿ ನಡೆಯುತ್ತಿದ್ದು ಅಲ್ಲಿಯೇ ಗುಡ್ಡ ಜರಿತ ಉಂಟಾಗಿದೆ. ಬೈಂದೂರು ತಹಶಿಲ್ದಾರರಾದ ಶೋಭಾಲಕ್ಷ್ಮೀ ಎಚ್. ಎಸ್ ಅವರು ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗಿಲ್ಲ.

ಉದಯ್ ಗಾಣಿಗ ಕೊಲೆ ಪ್ರಕರಣ: ಆರೋಪಿಗಳ ರಕ್ಷಣೆಗೆ ನಿಂತರೆ ನಾವು ಸಹಿಸುವುದಿಲ್ಲ: ವಿನಯಕುಮಾರ್ ಸೊರಕೆ

ಕುಂದಾಪುರ: ಸಾಮಾಜಿಕ ಕಾರ್ಯಕರ್ತ ಯಡಮೊಗೆ ಉದಯ್ ಗಾಣಿಗ ಕೊಲೆ ಆರೋಪಿಗಳಿಗೆ ಕೆಲ ಬಿಜೆಪಿ ಮುಖಂಡರು ರಕ್ಷಣೆ ಕೊಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿದ್ದು, ಅದು ಯಾರೇ ಆಗಿರಲಿ, ಆರೋಪಿಗಳ ರಕ್ಷಣೆಗೆ ನಿಂತರೆ ನಾವು ಸಹಿಸುವುದಿಲ್ಲ. ಮುಂಬರುವ ಅಧಿವೇಶನದಲ್ಲಿ ನಮ್ಮ ಪಕ್ಷದ ಶಾಸಕರು ನ್ಯಾಯಕ್ಕಾಗಿ ಈ ಬಗ್ಗೆ ಧ್ವನಿ ಎತ್ತುತ್ತಾರೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ವಾಗ್ದಾಳಿ ನಡೆಸಿದರು. ಅವರು ದುಷ್ಕರ್ಮಿಗಳಿಂದ ಹತ್ಯೆಯಾದ ಮೃತ ಯಡಮೊಗೆಯ ಉದಯ್

ದೇಗುಲ ದರ್ಶನಕ್ಕೆ ಸಭೆ ನಡೆಸಿ ತೀರ್ಮಾನ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ದೇವಾಲಯಗಳ ಪ್ರವೇಶಕ್ಕೆ ಒಂದೇ ಸಲ ಅವಕಾಶಗಳನ್ನು ಕೊಟ್ಟರೆ ಜನಜಂಗುಳಿ ಆಗುವ ಸಾಧ್ಯತೆಗಳಿರುವುದರಿಂದ ಸ್ವಲ್ಪ ದಿನಗಳ ಬಳಿಕ ತೆರೆಯಬಹುದಾ ಎಂದು ಸರ್ಕಾರ ಆಲೋಚನೆ ಮಾಡುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ನಮ ಅಹವಾಲುಗಳನ್ನು ಹೇಳಿ ಆದಷ್ಟು ಬೇಗ ಸಾಮಾಜಿಕ ಅಂತರಗಳನ್ನು ಕಾಯ್ದುಕೊಂಡು ದೇವಸ್ಥಾನಗಳನ್ನು ತೆರೆಯಬಹುದಾ ಎಂದು ಚರ್ಚೆ ನಡೆಸಿ ಮುಂದಿನ ತೀರ್ಮಾನಗಳನ್ನು ಕೈಗೊಳ್ಳುತ್ತೇವೆ ಎಂದು ರಾಜ್ಯ ಮುಜರಾಯಿ ಸಚಿವ

ತಲ್ಲೂರು ಕೊರೋನಾ ಮುಕ್ತ ಗ್ರಾಮವಾಗಬೇಕು:ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ಮಹಾಮಾರಿ ಕೊರೋನಾ ಹೊಡೆದುರುಳಿಸಲು ಸರ್ಕಾರ ಇಷ್ಟೊಂದು ಪ್ರಮಾಣದಲ್ಲಿ ಗಟ್ಟಿಯಾಗಿ ನಿಂತಿದೆ. ಕಾರ್ಯಪಡೆಯವರು ಮನೆಮನೆಗೆ ಭೇಟಿ ನೀಡಿ, ಸಭೆ ನಡೆಸಿ ಶ್ರಮ ಹಾಕಿದ್ದರಿಂದಾಗಿ ನಿಮ್ಮ ವ್ಯಾಪ್ತಿಯಲ್ಲಿ 80ರಷ್ಟಿದ್ದ ಪಾಸಿಟಿವ್ ಪ್ರಕರಣ ಈಗ 8ಕ್ಕೆ ಬಂದು ತಲುಪಿದೆ. ಈ ಸಂಖ್ಯೆ ಶೂನ್ಯಕ್ಕಿಳಿದು ತಲ್ಲೂರು ಗ್ರಾಮಪಂಚಾಯತ್ ಶೀಘ್ರವೇ ಕೊರೋನಾ ಮುಕ್ತವಾಗಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಲ್ಲಿಗೆ ಸಮೀಪದ ತಲ್ಲೂರಿನ ಅಂಬೇಡ್ಕರ್

ವ್ಯಾಕ್ಸಿನ್ ಕೇಂದ್ರಗಳಲ್ಲಿ ನಿಯಮ ಉಲ್ಲಂಘನೆಯಾಗಲ್ಲ: ಉಡುಪಿ ಡಿಸಿ ಜಿ. ಜಗದೀಶ್

ಕುಂದಾಪುರ: ತಾಲೂಕಿನಲ್ಲಿರುವ ವ್ಯಾಕ್ಸಿನ್ ಕೇಂದ್ರಗಳಲ್ಲಿ ಕೆಲ ಗೊಂದಲಗಳಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು ಯಾರಿಂದಲೂ ನಿಯಮ ಉಲ್ಲಂಘನೆಯಾಗದಂತೆ ಕುಂದಾಪುರ, ಕಾರ್ಕಳ ಹಾಗೂ ಮಲ್ಪೆಯ ವ್ಯಾಕ್ಸಿನ್ ಕೇಂದ್ರಗಳಿಗೆ ನೋಡಲ್ ಅಧಿಕಾರಿ ನೇಮಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಕುಂದಾಪುರದ ಬೋರ್ಡ್ ಹೈಸ್ಕೂಲಿನಲ್ಲಿರುವ ವ್ಯಾಕ್ಸಿನ್ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಜಿಲ್ಲಾಧಿಕಾರಿ ಜಿ. ಜಗದೀಶ್ ಮಾಧ್ಯಮಗಳ ಜೊತೆ

ಅವೈಜ್ಞಾನಿಕ ಚರಂಡಿ ಅವ್ಯವಸ್ಥೆಯ ಬಗ್ಗೆ ದೂರು:ಸೂಕ್ತ ಕ್ರಮಕ್ಕೆ ಕುಂದಾಪರ ಎಸಿ ಸೂಚನೆ

  ಕುಂದಾಪುರ : ರಾಷ್ಟ್ರೀಯ ಹೆದ್ದಾರಿ-66 ಚತುಷ್ಪತ ಕಾಮಗಾರಿಯ ವೇಳೆ ನಡೆಸಲಾದ ಅವೈಜಾÐನಿಕ ಚರಂಡಿ ಅವ್ಯವಸ್ಥೆಯಿಂದಾಗಿ ಹೆದ್ದಾರಿಗೆ ತಾಗಿಕೊಂಡಿರುವ ಮನೆಗಳಿಗೆ ನೀರು ನುಗ್ಗುತ್ತಿರುವ ಹಿನ್ನೆಲೆ ಸಾರ್ವಜನಿಕ ದೂರಿನ ಮೇರೆಗೆ ಕುಂದಾಪುರ ಸಹಾಯಕ ಆಯುಕ್ತ ಕೆ.ರಾಜು ಭೇಟಿ ನೀಡಿ ಸಮೀಪದ ನಿವಾಸಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಹೆದ್ದಾರಿ ಗುತ್ತಿಗೆ ಕಂಪೆನಿಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.ಕುಂದಾಪುರದ ಸಹಾಯಕ ಆಯುಕ್ತರ ಕಚೇರಿಯಲ್ಲಿ