Home Archive by category mangaluru

ಅಲೋಶಿಯಸ್ ವಿವಿಯಲ್ಲಿ ಕೌನ್ಸೆಲಿಂಗ್ ಮತ್ತು ಮನೋವಿಜ್ಞಾನ ಡಿಪ್ಲೊಮಾ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ ಭಾರತೀಯ ಜೈಲು ಸಚಿವಾಲಯದ ಸ್ವಯಂಸೇವಕರಿಗಾಗಿ ವಿನ್ಯಾಸಗೊಳಿಸಲಾದ ‘ಕೌನ್ಸೆಲಿಂಗ್ ಮತ್ತು ಮನೋವಿಜ್ಞಾನ’ ದಲ್ಲಿ ನಾಲ್ಕು ತಿಂಗಳ ಆನ್‌ಲೈನ್ ಡಿಪ್ಲೊಮಾ ಕೋರ್ಸನ್ನು ಮಂಗಳೂರಿನ ಬಿಷಪ್ ರೆ. ಡಾ. ಪೀಟರ್ ಪೌಲ್ ಸಲ್ಡಾನಾ ಅವರು ಜನವರಿ 5, 2026 ರಂದು ವಿವಿಯ ಸಭಾಂಗಣದಲ್ಲಿ ಉದ್ಘಾಟಿಸಿದರು. ಈ ಕೋರ್ಸನ್ನು

ಅಡ್ಡಹೊಳೆ: ಪಿಕಪ್ ಡಿಕ್ಕಿ – ಮಹಿಳೆ ಮೃತ್ಯು

ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆ ಬಳಿ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವರಿಗೆ ಪಿಕಪ್ ವಾಹನ ಡಿಕ್ಕಿಯಾಗಿ ಅವರು ಮೃತಪಟ್ಟ ದುರ್ಘಟನೆ ಜ.8ರಂದು ಸಂಜೆ ಸಂಭವಿಸಿದೆ. ಶಿರಾಡಿ ಗ್ರಾಮದ ಅಡ್ಡಹೊಳೆ ಅಂಬೇಡ್ಕರ್ ಕಾಲೋನಿ ನಿವಾಸಿ ದಿ.ಬಾಬು ಅವರ ಪತ್ನಿ ಲೀಲಾ (59) ಮೃತ ಮಹಿಳೆಯಾಗಿದ್ದಾರೆ. ಲೀಲಾ ಅವರು ಕೂಲಿ ಕೆಲಸ ಮುಗಿಸಿಕೊಂಡು ರಾಷ್ಟ್ರೀಯ ಹೆದ್ದಾರಿ ಬದಿ ನಡೆದುಕೊಂಡು ಮನೆಗೆ

ಮೂಡುಬಿದಿರೆಯ ಯುವ ಲೇಖಕಿ ರೇಶಲ್ ಫೆರ್ನಾಂಡಿಸ್ ಗೆ ಅಂತರಾಷ್ಟ್ರೀಯ ಮನ್ನಣೆ

ಮೂಡುಬಿದಿರೆ: ಕರಾವಳಿಯ ಪ್ರತಿಭೆ, ಯುವ ಲೇಖಕಿ ಹಾಗೂ ವಾಗ್ಮಿ ರೇಶಲ್ ಫೆರ್ನಾಂಡಿಸ್ ಅವರು ಸಾಹಿತ್ಯ ಮತ್ತು ಸಾಮಾಜಿಕ ಚಿಂತನೆಗಳಲ್ಲಿ ನಡೆಸುತ್ತಿರುವ ನಿರಂತರ ಸಾಧನೆಗೆ ಈಗ ಅಂತರಾಷ್ಟ್ರೀಯ ಮಟ್ಟದ ಮನ್ನಣೆ ಲಭಿಸಿದೆ. ರಾಜ್ಯಮಟ್ಟದ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ ಪುರಸ್ಕೃತರಾದ ಇವರು, ತಮ್ಮ ಸಾಹಿತ್ಯಿಕ ಕೊಡುಗೆಗಳ ಮೂಲಕ ಜಾಗತಿಕ ಗಮನ ಸೆಳೆಯುತ್ತಿದ್ದಾರೆ. ಪ್ರತಿಷ್ಠಿತ ಅಂತರರಾಷ್ಟ್ರೀಯ ಸಾಹಿತ್ಯಿಕ ಮ್ಯಾಗಜೀನ್ ‘ಲಿಟರೇಚರ್

65 ಲಕ್ಷ ರೂಪಾಯಿ ವೆಚ್ಚದ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಶಾಸಕರಿಂದ ಗುದ್ದಲಿ ಪೂಜೆ

ಕಾಪು:ಕಾಪು ವಿಧಾನಸಭಾ ಕ್ಷೇತ್ರದ ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 65 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ದಿನಾಂಕ 07-01-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಮಲ್ಯ, ಸದಸ್ಯರಾದ ಜೀಯಾನಂದ ಹೆಗಡೆ, ಸತೀಶ್ ಶೆಟ್ಟಿ, ಸುಮಿತಾ ಹಾಗೂ ಸತೀಶ್ ಶೆಟ್ಟಿ, ಶಿವರಾಮ್

ಅಸಹಾಯಕ ಕುಟುಂಬಕ್ಕೆ ಸೂರು: ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯ ಮಾನವೀಯ ಕಾರ್ಯಕ್ಕೆ ಶ್ಲಾಘನೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಉಪ್ಪಿನಂಗಡಿ ಕಜೆಕ್ಕಾರ್ ವ್ಯಾಪ್ತಿಯಲ್ಲಿ ಟಾರ್ಪಲ್ ಶೀಟಿನ ಗುಡಿಸಲಿನಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದ ಶ್ರೀಮತಿ ಭಾಗಿರ ಅವರಿಗೆ, ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಿರ್ಮಿಸಲಾಗುತ್ತಿರುವ ನೂತನ ಮನೆಯ ನಿರ್ಮಾಣ ಕಾರ್ಯಕ್ಕೆ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಹಲವು ವರ್ಷಗಳಿಂದ ಟಾರ್ಪಲ್

ಪತಿ ಜೀವನ್ಮರಣ ಹೋರಾಟ: ಪತ್ನಿ ಮಗ ನಾಪತ್ತೆ

ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ನಿರಾಜೆ ಎಂಬಲ್ಲಿ ಪತಿ ಆತ್ಮ ಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟದಲ್ಲಿದ್ದರೆ ಇತ್ತ ಪತ್ನಿ ಮತ್ತು ಮಗ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕೊಹಿಲ ಗ್ರಾಮದ ಜನತ ಕಾಲೋನಿ ನಿವಾಸಿ ಮುನಿರ್ ಎಂಬವರ ಆತ್ಮಹತ್ಯೆಗೆ ಯತ್ನಿಸಿ ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟದಲ್ಲಿದ್ದರೆ ಇತ್ತ ಆತನ ಪತ್ನಿ ನೇಹಾ(೩೬) ಹಾಗೂ ಇವರ ಪುತ್ರ ಮಹಮ್ಮದ್ ನಿಹಾಲ್(೩.೫)

ಗ್ರಾಮ ಪಂಚಾಯತ್‌ಗಳಿಗೆ ಅಧಿಕಾರ, ಅನುದಾನ ಮತ್ತು ಸಿಬ್ಬಂದಿ ಒದಗಿಸಿದರೆ ಮಾತ್ರ ಸಂವಿಧಾನಾತ್ಮಕ ವಿಕೇಂದ್ರೀಕರಣ: ಎಂಎಲ್‌ಸಿ ಕಿಶೋರ್ ಕುಮಾರ್

ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಮಾನ್ಯ ಉಪಾಧ್ಯಕ್ಷರಾದ ಶ್ರೀ ಡಿ.ಆರ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನ ಕುಮಾರ ಪಾರ್ಕ್‌ನ ಗಾಂಧಿ ಭವನದಲ್ಲಿ ಆಯೋಜಿಸಲಾದ “ಗ್ರಾಮಸಭೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಸಂವಿಧಾನ ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಕಾನೂನಿನ ಆಶಯದಂತೆ ಕಾರ್ಯನಿರ್ವಹಿಸಲು ಅನುಕೂಲವಾಗುವ ವಾತಾವರಣ ಸೃಷ್ಟಿಸುವುದು” ಎಂಬ ವಿಷಯದ ಕುರಿತು ನಡೆದ ಮಹತ್ವದ ಸಭೆಯಲ್ಲಿ, ವಿಧಾನ

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಹಿನ್ನಲೆ

ನಗರದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ – ಡ್ರೋನ್ ಹಾಗೂ ಸಿಸಿ ಕ್ಯಾಮರಾ ಮೂಲಕ ನಿಗಾ ಸುಳ್ಯ: ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಹಿನ್ನಲೆಯಲ್ಲಿ ಸುಳ್ಯ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಶಾಂತಿಯುತ ಜಾತ್ರೋತ್ಸವ ನಡೆಸುವ ಉದ್ದೇಶದಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.ಸೂಕ್ಷ್ಮ ಕಣ್ಗಾವಲು ವ್ಯವಸ್ಥೆಯ ಭಾಗವಾಗಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಈ ಬಾರಿ

ವಿಶ್ವದಾಖಲೆ ಸಾಧಕಿ ಕುಮಾರಿ ಶ್ರದ್ದಾ ಶೆಟ್ಟಿ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಭೇಟಿ

ಕೊಕ್ಕಡ:ಲಾಯಿಲ ಗ್ರಾಮದ ಎಣಿಂಜೆ ನಿವಾಸಿ ಶಾರದ ಹಾಗೂ ಶೇಖರ ಶೆಟ್ಟಿ ದಂಪತಿಗಳ ಪುತ್ರಿ, ವಿಶ್ವದಾಖಲೆ ಸಾಧಕಿ ಕುಮಾರಿ ಶ್ರದ್ದಾ ಶೆಟ್ಟಿಯವರು ಜ.06ರಂದು ಶ್ರೀ ಕ್ಷೇತ್ರ ಸೌತಡ್ಕಕ್ಕೆ ಭೇಟಿ ನೀಡಿ, ತನಗೆ ಲಭಿಸಿದ ಪ್ರಶಸ್ತಿಯೊಂದಿಗೆ ದೇವರಿಗೆ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಪ್ರಸ್ತುತ ಉಜಿರೆಯ ಎಸ್.ಡಿ.ಎಂ.ಕಾಲೇಜಿನಲ್ಲಿ ಬಿ.ಇಡಿ ವಿದ್ಯಾಭ್ಯಾಸ ಮಾಡುತ್ತಿರುವ ಶ್ರದ್ದಾ ಶೆಟ್ಟಿಯವರು, ಹವ್ಯಾಸವಾಗಿ ಹೂವಿನ ರಂಗೋಲಿಗಳನ್ನು ಬಿಡಿಸುವ ಕಲೆಯಲ್ಲಿ

ಸುಳ್ಯ ಶಾಸಕರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ

ಫೇಸ್‌ಬುಕ್ ಪೋಸ್ಟ್‌ಗೆ ಬಿಜೆಪಿ ತೀವ್ರ ಆಕ್ರೋಶ – ಮಂಡಲ ಬಿಜೆಪಿ ಖಂಡನೆ, ಉಗ್ರ ಪ್ರತಿಭಟನೆ ಎಚ್ಚರಿಕೆ ಸುಳ್ಯ : ಸುಳ್ಯದ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀರಾ ಅವಮಾನಕರ ಹಾಗೂ ಅಸಹ್ಯಕರ ಪೋಸ್ಟ್‌ ಹಾಕಿರುವ ಪ್ರಕರಣವನ್ನು ಸುಳ್ಯ ಮಂಡಲ ಬಿಜೆಪಿ ಅತ್ಯಂತ ಕಠಿಣ ಪದಗಳಲ್ಲಿ ಖಂಡಿಸಿದೆ. ಬಿಲ್ಲವ ಸಂದೇಶ್ ಎನ್ನುವ ಫೇಸ್‌ಬುಕ್ ಖಾತೆಯಲ್ಲಿ ಶಾಸಕರಿಗೆ ಶ್ರದ್ಧಾಂಜಲಿ ಸಲ್ಲಿಸಿರುವ ರೀತಿಯಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿರುವುದು