Home Archive by category mangaluru (Page 2)

ಸುಳ್ಯ ಶಾಸಕರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ

ಫೇಸ್‌ಬುಕ್ ಪೋಸ್ಟ್‌ಗೆ ಬಿಜೆಪಿ ತೀವ್ರ ಆಕ್ರೋಶ – ಮಂಡಲ ಬಿಜೆಪಿ ಖಂಡನೆ, ಉಗ್ರ ಪ್ರತಿಭಟನೆ ಎಚ್ಚರಿಕೆ ಸುಳ್ಯ : ಸುಳ್ಯದ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀರಾ ಅವಮಾನಕರ ಹಾಗೂ ಅಸಹ್ಯಕರ ಪೋಸ್ಟ್‌ ಹಾಕಿರುವ ಪ್ರಕರಣವನ್ನು ಸುಳ್ಯ ಮಂಡಲ ಬಿಜೆಪಿ ಅತ್ಯಂತ ಕಠಿಣ ಪದಗಳಲ್ಲಿ ಖಂಡಿಸಿದೆ. ಬಿಲ್ಲವ ಸಂದೇಶ್ ಎನ್ನುವ ಫೇಸ್‌ಬುಕ್

ಸಾರ್ವಜನಿಕ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಹಸ್ತಾಂತರ

ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ಹಿಂದೂ ರುದ್ರಭೂಮಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ವತಿಯಿಂದ ಮಂಜೂರಾದ ಸಿಲಿಕಾನ್ ಚೇಂಬರ್ ಅನ್ನು ದಿನಾಂಕ 05.01.2026 ರಂದು ಊರಿನ ಗಣ್ಯರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಯಶಸ್ವಿಯಾಗಿ ಹಸ್ತಾಂತರಿಸಲಾಯಿತು.ಕಾರ್ಯಕ್ರಮದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ ಎಲ್. ರೈ ಅವರು ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ

ಉಡುಪಿ ಜಿಲ್ಲೆಯಲ್ಲಿ ಆಯುಷ್ ಹಬ್ಬ 2026 ರ ಜನಜಾಗೃತಿ ಅಭಿಯಾನಕ್ಕೆ ಚಾಲನೆ

ಪಡುಬಿದ್ರಿ:ಮಂಗಳೂರು ನಗರದ ಟಿ ಎಂ ಎ ಪೈ ಇಂಟರ್ನ್ಯಾಷನಲ್ ಕನ್ವೆನ್ಶನ್ ಸೆಂಟರ್ ನಲ್ಲಿ ಜನವರಿ 31 ಮತ್ತು ಫೆಬ್ರವರಿ1 ರಂದು ಜರುಗಲಿರುವ ಭಾರತೀಯ ವೈದ್ಯ ಪದ್ಧತಿಗಳ ಮಹಾ ಸಂಭ್ರಮ- ಆಯುಷ್ ಹಬ್ಬದ ಬಗ್ಗೆ ಉಡುಪಿ ಜಿಲ್ಲೆಯಲ್ಲಿ ಜನಜಾಗೃತಿ ಅಭಿಯಾನಕ್ಕೆ ಭಾನುವಾರದಂದು ಚಾಲನೆ ನೀಡಲಾಯಿತು. ಆಯುಷ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ಜಿಲ್ಲೆಯ ವತಿಯಿಂದ ಆಯುಷ್ ವೃತ್ತಿನಿರತ ವೈದ್ಯರ ಉಪಸ್ಥಿತಿಯಲ್ಲಿ ಜರುಗಿದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಎ.ಎಫ್.ಐ

ಬಾಲ ಯೇಸುವಿನ ವಾರ್ಷಿಕ ಮಹೋತ್ಸವದ ಸಂಭ್ರಮದ ಹೊರೆ ಕಾಣಿಕೆ ಮೆರವಣಿಗೆ

ಬಾಲ ಯೇಸುವಿನ ವಾರ್ಷಿಕ ಮಹೋತ್ಸವಕ್ಕೆ ಸಿದ್ಧತೆಯಾಗಿ ಜನವರಿ 3, 2026 ಶನಿವಾರ, ಕೊರ್ಡೆಲ್ ಚರ್ಚ್ ನಿಂದ ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವರೆಗೆ ಭಕ್ತಿಭಾವಪೂರ್ಣ ಹೊರೆ ಕಾಣಿಕೆ ಮೆರವಣಿಗೆ ನಡೆಯಿತು. ಅನೇಕ ಭಕ್ತರು ಕೃತಜ್ಞತೆ, ನಂಬಿಕೆ ಮತ್ತು ಆಶಯದೊಂದಿಗೆ ಕಾಣಿಕೆಗಳನ್ನು ಸಮರ್ಪಿಸಿದರು. ವಂ. ವಿಜಯ್ ಮೊಂತೆರೋ, (ಸಹಾಯಕ ಧರ್ಮಗುರು , ಕೊರ್ಡೆಲ್ ಚರ್ಚ್) ಆಶೀರ್ವಾದ ನೀಡಿ, ಶ್ರೀಮತಿ ರೂತ್ ಕ್ಯಾಸ್ಟೆಲಿನೊ, (ಉಪಾಧ್ಯಕ್ಷೆ, ಕೊರ್ಡೆಲ್ ಚರ್ಚ್)

ಶ್ರೀಮಾಧವ ಮಂಗಲ ಪೂಜಾರ್ಯರ ಬ್ರಹತ್ ಕಂಚಿನ ಪುತ್ಥಳಿ ನಿರ್ಮಾಣದ ಮನವಿ ಪತ್ರ ಹಾಗೂ ರಶೀದಿ ಪುಸ್ತಕ ಬಿಡುಗಡೆ

ಉಚ್ಚಿಲ:ಮೊಗವೀರ ಸಮಾಜದ ಮೂಲ ಧಾರ್ಮಿಕ ಕೇಂದ್ರವಾದ ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದಲ್ಲಿ ಲಭ್ಯವಿರುವ ಲಿಖಿತ ಮಾಹಿತಿಯಂತೆ, ಸುಮಾರು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಗುರು ಪರಂಪರೆಯ 9ನೇ ಹಾಗೂ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಬ್ರಹತ್ ಕಂಚಿನ ಪುತ್ಥಳಿಯನ್ನು ಅಂದಾಜು 3 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣ ಮಾಡುವ ಸಲುವಾಗಿ ರೂಪಿಸಿದ ಮನವಿ ಪತ್ರ ಹಾಗೂ ರಶೀದಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಇಂದು ಶ್ರೀ

ಪದ್ಮಾ ಆರ್. ಶೇಟ್ ನಿಧನ

ಮಂಗಳೂರಿನ ಲೇಡಿಹಿಲ್‌ನ ಎಸ್.ಎಲ್ ಡೈಮಂಡ್ ಹೌಸ್ ಮಾಲಕರಾದ ರವೀಂದ್ರ ಶೇಟ್ ಅವರ ಅಣ್ಣ ದಿ| ಎಂ.ರಘುನಾಥ ಶೇಟ್ ಅವರ ಪತ್ನಿ ಪದ್ಮಾ ಆರ್. ಶೇಟ್(75) ನಿಧನರಾಗಿದ್ದಾರೆ. ಪದ್ಮಾ ಆರ್. ಶೇಟ್ ಅಲ್ಪಕಾಲದ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಪದ್ಮಾ ಅವರು ದೈವಜ್ಞ ಬ್ರಾಹ್ಮಣ ಸಮುದಾಯದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಮೃತರಿಗೆ ಪ್ರಸಿದ್ಧ ಉದ್ಯಮಿಗಳಾದ ಎಂ.ಪ್ರಶಾಂತ್ ಶೇಟ್, ಎಂ. ಹೇಮಂತ್ ಶೇಟ್,

ತುಳು ಭಾಷೆ ಸಂಸ್ಕೃತಿ ಉತ್ತೇಜನಕ್ಕೆ ಎಲ್ಲರ ಪ್ರಯತ್ನ ಅಗತ್ಯ :
ಕಿಶೋರ್ ಆಳ್ವ

ಮಂಗಳೂರು : ಪುರಾತನ ಹಿನ್ನೆಲೆ ಹೊಂದಿರುವ ತುಳು ಭಾಷೆ ಹಾಗೂ ತುಳುನಾಡಿನ ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರಕಾರ, ಸಮುದಾಯ ಹಾಗೂ ಖಾಸಗಿ ರಂಗ ಜೊತೆಯಾಗಿ ಕೈಜೋಡಿಸಬೇಕಾಗಿದೆ ಎಂದು ಅದಾನಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಅಧ್ಯಕ್ಷ ಕಿಶೋರ್ ಆಳ್ವ ಅವರು ಹೇಳಿದರು. ಅವರು ಮಂಗಳೂರಿನ ತುಳು ಭವನದಲ್ಲಿ ‘ಎಸ್ .ಯು. ಪಣಿಯಾಡಿ ತುಳುನಾಡ ಚಾವಡಿ’ಯಲ್ಲಿ ಹಿರಿಯ ಛಾಯಾಗ್ರಾಹಕ ಯಜ್ಞ ಅವರು ಕ್ಲಿಕ್ಕಿಸಿದ ಹಳೆಯ ಮಂಗಳೂರಿನ

ಉಪ್ಪಿನಂಗಡಿ ಪಾದಚಾರಿಯೋರ್ವರಿಗೆ ಟೆಂಪೋ ಡಿಕ್ಕಿ

ಉಪ್ಪಿನಂಗಡಿ ಪಾದಚಾರಿಯೋರ್ವರಿಗೆ ಟೆಂಪೋ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕೊಯಿಲದ ಅತೂರ್ ನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತಪಟ್ಟವರನ್ನು ಕಡಬದ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ ಎಂದು ಗುರುತಿಸಲಾಗಿದೆ. ಇವರು ಕಾಸರಗೋಡಿನ ಮೈಮಾತ್ ಸಂಸ್ಥೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಬಂಧಿಕರ ಮದರಂಗಿ ಕಾರ್ಯಕ್ರಮಕ್ಕೆ ಮನೆಯವರ ಜೊತೆ ಬಂದಿದ್ದರು. ಆತೂರಿನಲ್ಲಿ ಬಸ್ಸಿನಿಂದ ಇಳಿದು, ಮನೆಯವರನ್ನು ರಿಕ್ಷಾದಲ್ಲಿ ಕಳುಹಿಸಿದ್ದರು. ಬಳಿಕ

ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ 2025-26 ಉದ್ಘಾಟನಾ ಸಮಾರಂಭ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ, ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಹಾಗೂ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು, ಕಟಪಾಡಿ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 22-12-2025 ರಂದು ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ “ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ 2025-26″ರ

ಬೈಂದೂರು : ಹಳ್ಳಿಹೊಳೆ ಗ್ರಾ.ಪಂ. ಸಂಯುಕ್ತ ಆಶ್ರಯದಲ್ಲಿ ನೂತನ ಕಟ್ಟಡ, ಸಭಾಭವನ ಉದ್ಘಾಟನಾ

ಕುಂದಾಪುರ :ಉಡುಪಿ ಜಿ.ಪಂ., ಬೈಂದೂರು ತಾ.ಪಂ. ಹಾಗೂ ಹಳ್ಳಿಹೊಳೆ ಗ್ರಾ.ಪಂ. ಸಂಯುಕ್ತ ಆಶ್ರಯದಲ್ಲಿ ಹಳ್ಳಿಹೊಳೆ ಗ್ರಾ.ಪಂ.ನ ನೂತನ ಕಟ್ಟಡ, ಸಭಾಭವನ, ಗ್ರಾಮ ಆಡಳಿತ ಅಧಿಕಾರಿಗಳ ಕಚೇರಿ, ಅರಿವು ಕೇಂದ್ರದ ಕಚೇರಿ ಉದ್ಘಾಟನಾ ಸಮಾರಂಭ ಸೋಮವಾರ ಸಂಭ್ರಮದಲ್ಲಿ ನಡೆಯಿತು. ಕಮಲಶಿಲೆ ದೇವಸ್ಥಾನದ ಆಡಳಿತ ಧರ್ಮದರ್ಶಿ ಸಚ್ಚಿದಾನಂದ ಚಾತ್ರ ಮಾತನಾಡಿ, ಇದು ಊರಿನ ಒಳ್ಳೆಯ ಕಾರ್ಯ. ಹಳ್ಳಿಹೊಳೆ ಒಳ್ಳೆಯ ಪಂಚಾಯತ್ ಆಗಿ ಮೂಡಿ ಬರುತ್ತಿದ್ದು, ಎಲ್ಲರ ಸಂಘನಾತ್ಮಕ ಕೆಲಸದಿಂದ ಇದು