ಮಂಗಳೂರು: ಕೇರಳ ರಾಜ್ಯದಲ್ಲಿ ಖೋಟಾನೋಟು ಮುದ್ರಿಸಿ ಮಂಗಳೂರು ನಗರದಲ್ಲಿ ಚಲಾವಣೆ ಮಾಡುತ್ತಿದ್ದ ನಾಲ್ವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 500 ರೂ. ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದರು. ಕಾಸರಗೋಡು ಜಿಲ್ಲೆಯ ಕರಿಚೇರಿ ಪೆರ್ಲಂ ವೀಡು, ಕೊಳತ್ತೂರು ನಿವಾಸಿ ವಿ.ಪ್ರಿಯೇಶ್(38), ಮುಳಿಯಾರು
ಪವರ್ ಫ್ರೆಂಡ್ಸ್ ಬೆದ್ರ ಮಹಿಳಾ ಘಟಕ ಮತ್ತು ಇನ್ನರ್ ವ್ಹೀಲ್ ಕ್ಲಬ್ ಆಫ್ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಮಂಗಳೂರಿನ ಎ.ಜೆ.ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಕನ್ನಡ ಭವನದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಇನ್ನರ್ ವ್ಹೀಲ್ ಕ್ಲಬ್ ಅದ್ಯಕ್ಷ ಬಿಂದಿಯಾ ಎಸ್.ಶೆಟ್ಟಿ ಅಧ್ಯಕ್ಷತೆ ವಹಿಸಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ನಮಗೆ ಆರೋಗ್ಯ ಮುಖ್ಯವಾಗಿ ಬೇಕು. ಒಂದೊಂದು ಅಂಗವೂ
ಮಂಗಳೂರು: ನಾಗರಾಧನೆ, ದೈವಾರಾಧನೆ, ದೇವತಾರಾಧನೆಯ ಮುಖೇನ ಪ್ರಕೃತಿಯನ್ನು ಆರಾಧಿಸುವ ಪುಣ್ಯ ನೆಲ ತುಳುನಾಡು. ಈ ನೆಲದಲ್ಲಿ 12 ತಿಂಗಳಿಗೂ ಮಹತ್ವವಿದೆ, ವಿಶೇಷ ಆಚರಣೆ ಇದೆ. ಆಟಿ ತಿಂಗಳು ಅದರಲ್ಲೂ ಆಟಿ ಅಮಾವಾಸ್ಯೆಯ ದಿವಸ ಸಮಸ್ತ ತುಳುನಾಡಿನ ಜನರು ಜಾತಿ ಮತ ಭೇದವಿಲ್ಲದೆ, ಈ ಔಷಧೀಯ ಗುಣವುಳ್ಳ ಹಾಳೆ ಮರದ ಕೆತ್ತೆ ಕಷಾಯವನ್ನು ವರ್ಷ ಪೂರ್ತಿ ತನ್ನ ರೋಗ ನಿರೋಧಕ ಶಕ್ತಿಯ ವೃದ್ಧಿಗಾಗಿ ಸೇವಿಸುತ್ತಾರೆ. ಆದ್ದರಿಂದ ತುಳುನಾಡು ವಿಶೇಷ ಪರಂಪರೆಗಳ ನಾಡು ಈ ಹಾಳೆ ಮರದ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದ್ದು ಅಪಾರ ಪ್ರಮಾಣದ ಸೊತ್ತು ನಷ್ಟ ಉಂಟಾಗಿದೆ. ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ರಾಜ್ಯ ಸರಕಾರ 300 ಕೋಟಿ ರೂ. ವಿಶೇಷ ಪರಿಹಾರ ಘೋಷಣೆ ಮಾಡಬೇಕೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದರು.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದಾಗಿ ಹಲವು ಮನೆಗಳು ಕುಸಿದಿದ್ದು ಮನೆಗಳ ಮೇಲೆ
ಮಂಗಳೂರು: ಬಸ್‌ನಲ್ಲಿ ಅನಾರೋಗ್ಯಕ್ಕೀಡಾದ ವಿದ್ಯಾರ್ಥಿನಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕೃಷ್ಣ ಪ್ರಸಾದ್ ಟ್ರಾವೆಲ್ಸ್ ಬಸ್ ಚಾಲಕ ಗಜೇಂದ್ರ ಕುಂದರ್, ನಿರ್ವಾಹಕರಾದ ಸುರೇಶ್, ಮಹೇಶ್‌ರನ್ನು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ಬಂಟ್ಸ್ ಹಾಸ್ಟೇಲ್ ಬಳಿಯ ಹೊಟೇಲ್ ವುಡ್ ಲ್ಯಾಂಡ್ ನ ಸಭಾಂಗಣದಲ್ಲಿ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಅಭಿನಂದಿಸಲಾಯಿತು.ಸಂಘದ ಅಧ್ಯಕ್ಷ ಆರ್ ಧನರಾಜ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.ನಿರ್ದೇಶಕ
ಉಳ್ಳಾಲ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳನ್ನು ಸೇರಿಸಿಕೊಂಡು ಪ್ರಾಕೃತಿಕ ವಿಕೋಪಗಳ ಕುರಿತು ತುರ್ತು ಸಭೆ ದೇರಳಕಟ್ಟೆಯ ಬಿಸಿಸಿ ಸಭಾಂಗಣದಲ್ಲಿ ನಡೆಯಿತು. ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಫರೀದ್ ಸಭೆ ಉದ್ದೇಶಿಸಿ ಮಾತನಾಡಿ, ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಎಲ್ಲಾ ಗ್ರಾಮಗಳಿಗೆ ಭೇಟಿಯಾಗಿ ಸಮಸ್ಯೆಗಳನ್ನು ಆಲಿಸಬೇಕು. ಸ್ಥಳೀಯ ಜನಪ್ರತಿನಿಧಿಗಳ ಜೊತೆಗೆ ಅಧಿಕಾರಿಗಳಿಗೆ ಇರುವ ಸಮನ್ವಯ
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಚಾಲಕ ಹಾಗು ನಿರ್ವಾಹಕ ಬಸ್ಸನ್ನು ಆಂಬುಲೆನ್ಸ್ ಮಾದರಿಯಲ್ಲಿ ಚಲಾಯಿಸಿ ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. 13ಈ ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ಸು ಎಂದಿನಂತೆ ಕುಳೂರು ಮಾರ್ಗವಾಗಿ ಚಲಿಸುತಿತ್ತು. ಅದರಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕರೊಬ್ಬರಲ್ಲಿ ಕಾಲೇಜು ವಿದ್ಯಾರ್ಥಿ ತಟ್ಟನೆ
ಬಿಲ್ಲವ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಮುಂಡ್ಕೂರು, ಮುಲ್ಲಡ್ಕ, ಇನ್ನಾ, ಇದರ ವತಿಯಿಂದ ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ, ಆಟಿಡು ಒಂಜಿ ದಿನ ಕಾರ್ಯಕ್ರಮ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆಯಿತು. ತೋಟ ಮನೆ ಉಷಾ ವಾಸು ಅಂಚನ್ ದೀಪ ಬೆಳಗಿಸಿ ಕಾರ್ಯಕ್ರಮನ್ನು ಉದ್ಘಾಟಿಸಿದರು. ವಿದ್ಯಾ ವರ್ಧಕ ಪದವಿ ಪೂರ್ವ ಕಾಲೇಜಿನ ಮುಖ್ಯ ಶಿಕ್ಷಕಿ ಸವಿತಾ ಸದಾನಂದ ಪೂಜಾರಿ ಮುಖ್ಯ ಅತಿಥಿಯಾಗಿ ಮಾತನಾಡಿ ತುಳುನಾಡಿನಲ್ಲಿ ಆಷಾಡ
ಮಂಗಳೂರು: ಮಂಗಳೂರು ನಗರದಲ್ಲಿರುವ ಜೈಲಿಗೆ ಗುರುವಾರ ಬೆಳ್ಳಂಬೆಳಗ್ಗೆ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಮಾಡಿದ ದಾಳಿ ನಡೆಸಿ ಅಪಾರ ಪ್ರಮಾಣದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೈಲಿಗೆ ಸುಮಾರು 150 ಸಿಬಂದಿಗಳ ಜೊತೆ ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ ವೇಳೆ ಖೈದಿಗಳಿಂದ 25 ಮೊಬೈಲ್ ಫೋನ್‌ಗಳು, 1 ಬ್ಲೂಟೂತ್ ಸಾಧನ, 5 ಇಯರ್‌ಫೋನ್‌ಗಳು, 1 ಪೆನ್ ಡ್ರೈವ್, 5 ಚಾರ್ಜರ್‌ಗಳು, 1 ಜೊತೆ ಕತ್ತರಿ, 3ಕೇಬಲ್‌ಗಳು ಸೇರಿದಂತೆ ಗಾಂಜಾ ಅಮಲು ಪದಾರ್ಥಗಳು
ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ತುಳುನಾಡಿನಲ್ಲಿ ಅಷಾಢಮಾಸ ಬಂತೆಂದರೆ ಆಟಿಕಳಂಜ ಮನೆಮನೆ ಬಾಗಿಲಲ್ಲಿ ಪ್ರತ್ಯಕ್ಷನಾಗುತ್ತಾನೆ. ಆಟಿ ಕಳಂಜ ಮನೆ ಮನೆಗೆ ಬಂದು ಮಾರಿಯನ್ನು ನಿವಾರಿಸುತ್ತಾನೆ. ಮೂಡಣದ ಮಾರಿಯನ್ನು ಮೂಡಣದೂರಿಗೆ ಸಾಗಿಸುತ್ತಾನೆ. ಮನುಷ್ಯರಿಗಾಗಲಿ, ಪ್ರಾಣಿಗಳಿಗಾಗಲೀ ಬರುವ ಕಾಯಿಲೆಯನ್ನು ನಿವಾರಣೆ ಮಾಡುವ ಮಾಂತ್ರಿಕನಂತೆ ಕಳಂಜ ಎನ್ನುವುದು ಇಲ್ಲಿನ ಜನರ ನಂಬಿಕೆ. ತುಳುನಾಡಿನಲ್ಲಿ ಆಷಾಡ ಮಾಸವನ್ನು ‘ಆಟಿ’ ಎಂದು