Home Archive by category mangaluru (Page 20)

ಸೂರಜ್ ಪದವಿ ಪೂರ್ವ ಕಾಲೇಜು ಮತ್ತು ಜ್ಞಾನದೀಪ ಶಾಲೆ, ಮುಡಿಪು ಇಲ್ಲಿ ಕನ್ನಡ ರಾಜ್ಯೋತ್ಸವ

ದಿನಾಂಕ ಒಂದು 1-11-2024 ಶುಕ್ರವಾರದಂದು ಸೂರಜ್ ಪದವಿ ಪೂರ್ವ ಕಾಲೇಜು ಮತ್ತು ಜ್ಞಾನದೀಪ ಶಾಲೆ, ಮುಡಿಪು ಇಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು ಕನ್ನಡ ಭಾಷಾ ಉಪನ್ಯಾಸಕಿಯಾದ ಪ್ರತಿಕ್ಷ ಇವರು ಸ್ವಾಗತಿಸಿದರು ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು ನಂತರ ಧ್ವಜಾರೋಹಣವನ್ನು ಅಧ್ಯಕ್ಷರಾದ ಡಾ.ಮಂಜುನಾಥ್. ಎಸ್ .ರೇವಣ್ಕರ್ ನಡೆಸಿದರು

ಮಂಗಳೂರು : ಜಯರಾಮ ಆಚಾರ್ಯರ ಶ್ರದ್ಧಾಂಜಲಿ ಸಭೆ

ಮಂಗಳೂರು : ತನ್ನ ಕಲಾ ಶಿಸ್ತು ಹಾಗೂ ನೈಪುಣ್ಯತೆ ಮೂಲಕ ಬಂಟ್ವಾಳ ಜಯರಾಮ ಆಚಾರ್ಯ ಅವರು ಯಕ್ಷಗಾನದ ಹಾಸ್ಯ ಪಾತ್ರಕ್ಕೆ ಗೌರವ ತಂದವರು, ಸ್ವಾಭಿಮಾನಿಯಾಗಿದ್ದ ಜಯರಾಮ ಆಚಾರ್ಯ ಅವರ ಕುಟುಂಬದ ಜೊತೆಗೆ ಅಭಿಮಾನಿಗಳು ನಿಲ್ಲುವ ಅವಶ್ಯಕತೆ ಇದೆ ಎಂದು ಹಿರಿಯ ಯಕ್ಷಗಾನ ವಿಮರ್ಶಕ ಪ್ರಭಾಕರ ಜೋಶಿ ಅವರು ಹೇಳಿದರು.ಅವರು ಮಂಗಳೂರಿನ ಉರ್ವಾಸ್ಟೋರ್ ನ ತುಳು ಅಕಾಡೆಮಿಯ ತುಳು ಭವನದಲ್ಲಿ ಆಯೋಜಿಸಲಾದ ಜಯರಾಮ ಆಚಾರ್ಯರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು. ಜಯರಾಮ ಆಚಾರ್ಯ

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಮಂಗಳೂರು: ತರಂಗಿಣಿ ಖ್ಯಾತಿಯ ಕೆ.ಎಂ ಸಚ್ಚೀಂದ್ರನಾಥ್ ನಿಧನ

ಕೇರಳ ಸಮಾಜಂನ ಮಾಜಿ ಅಧ್ಯಕ್ಷ, ಹಿರಿಯ ಸಂಘಟಕ, ತರಂಗಿಣಿ ಖ್ಯಾತಿಯ ಕೆ.ಎಂ ಸಚ್ಚೀಂದ್ರನಾಥ್(89) ಅವರು ನಿಧನ ಹೊಂದಿದ್ದಾರೆ.ಮೂಲತಃ ಕೇರಳದವರಾಗಿರುವ ಅವರು ಕುದ್ರೋಳಿಯಲ್ಲಿ ವಾಸವಾಗಿದ್ದರು. ಭಾರತ್ ಫ್ಲೈವುಡ್‌ನಲ್ಲಿ ಜನರಲ್ ಮ್ಯಾನೇಜರ್ ಆಗಿದ್ದ ಅವರು ನಂತರ ಕುದ್ರೋಳಿಯಲ್ಲಿ ಮಂಗಳೂರು ಫ್ಲೈವುಡ್ ಉದ್ಯಮ ನಡೆಸುತ್ತಿದ್ದರು.ತರಂಗಿಣಿ ಎಂಬ ಸಂಸ್ಥೆಯ ಮೂಲಕ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳನ್ನು ಮಂಗಳೂರಿನಲ್ಲಿ ನಿರಂತರವಾಗಿ ಆಯೋಜಿಸುತ್ತಿದ್ದರು.

ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ: ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ

ಮಂಗಳೂರು: ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಕ್ಯಾ. ಚೌಟ ಅವರು, ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದು, ರಾಜ್ಯದಲ್ಲಿ ನಿವೃತ್ತ ಕೆಎಸ್‌ಆರ್‌ಟಿಸಿ ನೌಕರರ

ಮಂಗಳೂರು: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

ಮಂಗಳೂರು: ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಆಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್. ಆಯ್ಕೆಯಾಗಿದ್ದಾರೆ. ಗುರುವಾರ ಮಂಗಳೂರು ಪಾಲಿಕೆಯಲ್ಲಿ ಮೇಯರ್ ಉಪಮೇಯರ್ ಹುದ್ದೆಗೆ ಚುನಾವಣೆ ನಡೆಯಿತು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ/ವೈ.ಭರತ್

ವಿದ್ಯಾರ್ಥಿಗಳೊಂದಿಗೆ ಬೆರೆತರೆ ಧನಾತ್ಮಕ ಚಿಂತನೆ; ಸಂಸದ ಬ್ರಿಜೇಶ್ ಚೌಟ

ನಾವು ಮಕ್ಕಳು ಅಥವಾ ವಿದ್ಯಾರ್ಥಿಗಳ ನಡುವೆ ಬೆರೆತರೆ ಯುವಕರಾಗಿ, ಯುವ ಮನಸ್ಸುಗಳಾಗಿ ಚಿಂತನೆ ಮಾಡಲು ಸಾಧ್ಯ ಮತ್ತು ನಮ್ಮಲ್ಲಿ ಧನಾತ್ಮಕ ಚಿಂತನೆ ಹೆಚ್ಚಾಗುತ್ತದೆ. ನವೋದಯ ಅಥವಾ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಕಲಿತ ವಿದ್ಯಾರ್ಥಿಗಳು ಸಹ ಶಿಕ್ಷಣದೊಂದಿಗೆ ಸಹಬಾಳ್ವೆಯ ಮಹತ್ವ ಬಹುಬೇಗನೆ ಅರಿತುಕೊಳ್ಳುತ್ತಾರೆ. ಭಾರತೀಯ ಸೇನೆಗಳಲ್ಲಿ ವಸತಿ ಶಾಲೆಗಳಲ್ಲಿ ಕಲಿತ ಯುವಕರೇ ಹೆಚ್ಚು ಇದ್ದಾರೆ ಎಂದು ಸಂಸದ ಬ್ರಿಜೇಶ್ ಚೌಟ ಅವರು ಹೇಳಿದರು. ಅವರು ಮುಡಿಪುವಿನ ಪಿ.ಎಂ.ಶ್ರೀ

ಅಪ್ಪಟ ತುಳುವ, ಅಜ್ಜನ ಭಕ್ತನಾಗಿ ಅಪಪ್ರಚಾರಕ್ಕೆ ಇಳಿಯಲು ಸಾಧ್ಯವೇ?’: ನಟ ಅರ್ಜುನ್ ಕಾಪಿಕಾಡ್ – ಕಲ್ಲಾರ್ಪು ಬುರ್ದುಗೋಳಿ ಕೊರಗಜ್ಜ ಆದಿಸ್ಥಳಕ್ಕೆ ಭೇಟಿ

ಮಂಗಳೂರು: ಅಪ್ಪಟ ತುಳುವನಾಗಿ, ಅಜ್ಜನ ಭಕ್ತನಾಗಿ ತುಳು ಭಾಷೆ ಮಣ್ಣಿಗಾಗಿ ದುಡಿದವನು ಎಂದಿಗೂ ಅಜ್ಜನ ಕಾರಣಿಕವನ್ನಷ್ಟೇ ತೋರಿಸುವ ಪ್ರಯತ್ನ ಮಾಡಿದ್ದೇವೆ. ಮನಸ್ಸಿಗೆ ಹಗುರವಾಗುವ ಭಾವನೆಯನ್ನು ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳ ನೀಡುತ್ತದೆ. ಒಮ್ಮೆ ಬಂದಲ್ಲಿ ಇಲ್ಲಿಂದ ಹೋಗುವ ಮನಸ್ಸಾಗುವುದಿಲ್ಲ. ಮನಸ್ಸಲ್ಲಿ ಏನು ಬೇಸರವಿದ್ದರೂ ಇಲ್ಲಿಗೆ ಬಂದಾಗ ಅದನ್ನು ಕಳೆಯುತ್ತೇವೆ ಎಂದು ರಾಜ್ಯಾದ್ಯಂತ ತೆರೆಕಾಣುತ್ತಿರುವ ಕನ್ನಡ ಚಲನಚಿತ್ರ

ಮಂಗಳೂರು: ಸೆ.12ಕ್ಕೆ “ರಾನಿ” ಕನ್ನಡ ಸಿನಿಮಾ ಬಿಡುಗಡೆ

ಮಂಗಳೂರು: “ಸೆ.12ಕ್ಕೆ ಬಹು ನಿರೀಕ್ಷಿತ ರಾನಿ ಕನ್ನಡ ಸಿನಿಮಾ ಬಿಡುಗಡೆಗೊಳ್ಳಲಿದೆ. ಆಕ್ಷನ್ ಜೊತೆಗೆ ಫ್ಯಾಮಿಲಿ ಒರಿಯೆಂಟೆಡ್ ಕಥಾನಕ ಇದರಲ್ಲಿದ್ದು ಪ್ರೇಕ್ಷಕರು ಸಿನಿಮಾ ಇಷ್ಟಪಡಲು ಬೇಕಾದ ಎಲ್ಲಾ ಅಂಶಗಳು ಸಿನಿಮಾದಲ್ಲಿ ಇರಲಿದೆ” ಎಂದು ಚಿತ್ರ ನಿರ್ದೇಶಕ ಗುರುತೇಜ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. “ಸಿನಿಮಾದಲ್ಲಿ ಕನ್ನಡದ ಖ್ಯಾತ ನಟರಾದ ರವಿಶಂಕರ್, ಬಿ.ಸುರೇಶ್, ಯಶ್ ಶೆಟ್ಟಿ, ಉಗ್ರಂ ಮಂಜು ಮತ್ತಿತರರು ತಾರಾಗಣದಲ್ಲಿದ್ದಾರೆ. ಚಿತ್ರದಲ್ಲಿ