Home Archive by category mangaluru (Page 21)

ಮಂಗಳೂರು:ಆ.02ರಂದು ‘ಆಟಿದ ಬೂತಾರಾದನೆ’ ಸಾಕ್ಷ್ಯ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ‘ಆಟಿದ ಬೂತಾರಾದನೆ’ ಬಗ್ಗೆ ಸಾಕ್ಷ್ಯ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ ಆ.02 ರ ಶನಿವಾರ ಅಪರಾಹ್ನ 2 ಗಂಟೆಗೆ ಮಂಗಳೂರಿನ ತುಳು ಭವನದಲ್ಲಿ ನಡೆಯಲಿದೆ.ಪತ್ರಕರ್ತ ರಮೇಶ್ ಮಂಜೇಶ್ವರ ಅವರು ದಾಖಲೀಕರಣ ಮಾಡಿರುವ ಆಟಿಯ ಭೂತಾರಾಧನೆಯ ಸಾಕ್ಷ್ಯ ಚಿತ್ರವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ

ಬಂಟ್ವಾಳ : ಹಿರಿಯ ರಂಗಭೂಮಿ ಕಲಾವಿದ ಚಿ. ರಮೇಶ್ ಕಲ್ಲಡ್ಕ ನಿಧನ

ಕಲ್ಲಡ್ಕ ಕೊಳಕೀರು ನಿವಾಸಿ, ಹಿರಿಯ ರಂಗಭೂಮಿ ಕಲಾವಿದ, ತುಳು ರಂಗಭೂಮಿಯ ಕಲಾವಿದ, ಚಿತ್ರನಟ ಚಿ.ರಮೇಶ್ ಕಲ್ಲಡ್ಕ (68) ಅವರು ಜು.23ರ ಬುಧವಾರ ಮುಂಜಾನೆ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.ಕಳೆದ ಹಲವು ದಶಕಗಳಿಂದ ರಂಗಭೂಮಿಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ ಅವರು ಮಂಗಳೂರಿನ ಹೆಸರಾಂತ ನಾಟಕ ತಂಡ ಕಲಾಸಂಗಮದಲ್ಲಿ ಕಳೆದ 20 ವರ್ಷಗಳಿಂದ ಹತ್ತಾರು ನಾಟಕಗಳಲ್ಲಿ ಅಭಿನಯ ಮಾಡುತ್ತಿದ್ದರು.

ಮಂಗಳೂರು : ಕುಸಿದುಬಿದ್ದ ಆವರಣ ಗೋಡೆ – ಹಲವು ದ್ವಿಚಕ್ರ ವಾಹನಗಳು ಜಖಂ

ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಹಿನ್ನೆಲೆಯಲ್ಲಿ ಮಂಗಳೂರು ನಗರದ ಅಲ್ಲಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸರ್ಕ್ಯೂಟ್ ಹೌಸ್ – ಬಿಜೈ ಬಳಿ ತಡರಾತ್ರಿ ಗುಡ್ಡ ಕುಸಿದು ರಸ್ತೆಗೆ ಬಿದ್ದು ಸಂಚಾರ ವ್ಯವಸ್ಥೆಗೆ ತೊಂದರೆ ಆಗಿದೆ. ನಗರದ ಮೇರಿಹಿಲ್ ಸಮೀಪದಲ್ಲಿ ತಡೆಗೋಡೆ ಕುಸಿದ ಪರಿಣಾಮ ಪಕ್ಕದಲ್ಲಿದ್ದ ಬೈಕ್ ಹಾಗೂ ಕಾರು ಜಖಂಗೊಂಡಿದೆ. ಸಮೀಪದಲ್ಲಿಯೇ ಗ್ಯಾರೇಜ್ ನ ವಾಹನಗಳನ್ನ ತಡೆಗೋಡೆ ಪಕ್ಕದಲ್ಲಿಯೇ ನಿಲ್ಲಿಸಲಾಗಿದ್ದು, ಮಳೆ ಪರಿಣಾಮ ತಡೆಗೋಡೆ

ಸೌಹಾರ್ದತೆ ಬದುಕಿನ ಧ್ಯೇಯವಾಗಲಿ: ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ

ಮಂಗಳೂರು: ಸೌಹಾರ್ದತೆ ನಮ್ಮ ಬದುಕಿನ ಮೂಲ ಧ್ಯೇಯವಾಗಬೇಕು, ವಿದ್ಯಾರ್ಥಿಗಳು ತಮ್ಮ ಬದುಕನ್ನು ರೂಪಿಸಿಕೊಳ್ಳುವ ಸಂದರ್ಭದಲ್ಲಿ ಜಾತಿ, ಮತ ತಾರತಮ್ಯವನ್ನು ಮೀರಿ ನಿಂತು ಸಾಧನೆಯನ್ನು ಮಾಡಬೇಕು. ಸೌಹಾರ್ದತೆ ಅನ್ನುವುದು ನಮ್ಮ ನಾಡಿನ ಪರಂಪರೆಯಾಗಿದೆ, ಈ ಆಶಯದಂತೆ ಬದುಕು ರೂಪಿಸಿಕೊಳ್ಳುವುದು ಪ್ರತಿಯೊಬ್ಬರ ಜವಬ್ದಾರಿ ಆಗಿದೆ ಎಂದು ಖ್ಯಾತ ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ ಅವರು ಹೇಳಿದರು. ಅವರು ಮಂಗಳೂರಿನ ಸಂತ ಅಲೋಶಿಯಸ್ ಪ್ರೌಢಶಾಲೆಯಲ್ಲಿ ಕರ್ನಾಟಕ ತುಳು ಸಾಹಿತ್ಯ

ಪತ್ರಿಕಾ ದಿನಾಚರಣೆ :ಮೋಗ್ಲಿಂಗ್ ಸ್ಮಾರಕ ನಿರ್ಮಾಣವಾಗಲಿ – ಸದಾಶಿವ ಉಳ್ಳಾಲ್

ಮಂಗಳೂರು : ಕನ್ನಡದ ಪ್ರಥಮ ಪತ್ರಿಕೆ ‘ಮಂಗಳೂರ ಸಮಾಚಾರ’ ಮಂಗಳೂರಿನಲ್ಲಿ ಆರಂಭಗೊಂಡ ಹಿನ್ನೆಲೆಯಲ್ಲಿ ಪತ್ರಿಕೆಯ ಸ್ಥಾಪಕ ಸಂಪಾದಕ ಹರ್ಮನ್ ಮೋಗ್ಲಿಂಗ್ ಅವರ ಸ್ಮಾರಕ ಮಂಗಳೂರಿನಲ್ಲಿ ನಿರ್ಮಾಣವಾಗುವುದು ಅಗತ್ಯ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಅವರು ಅಭಿಪ್ರಾಯಪಟ್ಟರು.ಪತ್ರಿಕಾ ದಿನಾಚರಣೆ ಅಂಗವಾಗಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಮಂಗಳೂರಿನ ಬಲ್ಮಠದ ಥೀಯೊಲಾಜಿಕಲ್ ಕಾಲೇಜು ಆವರಣದಲ್ಲಿ ಏರ್ಪಡಿಸಿದ ಸಂಪಾದಕ

ಡಾ|ತುಂಬೆ ಮೊಯ್ದಿನ್ ಅವರಿಗೆ ಪೋಲಂಡ್‌ನ ಲ್ಯುಬ್ಲಿನ್ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್

ತುಂಬೆ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಡಾ|ತುಂಬೆ ಮೊಯ್ದಿನ್ ಅವರಿಗೆ ಪೋಲಂಡ್‌ನ ಲ್ಯುಬ್ಲಿನ್ ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿದೆ. ಜಾಗತಿಕ ಆರೋಗ್ಯ ಸೇವೆ, ವ್ಯೆದ್ಯಕೀಯ ಶಿಕ್ಷಣ ಹಾಗೂ ಸಮುದಾಯ ಅಭಿವೃದ್ಧಿ ಉದ್ದೇಶದ ಸಂಶೋಧನಾ ಕ್ಷೇತ್ರಕ್ಕೆ ಅವರ ಕೊಡುಗೆಯನ್ನು ಆಧರಿಸಿ ಈ ಗೌರವ ನೀಡಲಾಗಿದೆ. ಇದು ಅವರಿಗೆ ಲಭಿಸುತ್ತಿರುವ ಐದನೇ ಗೌರವ ಡಾಕ್ಟರೇಟ್. ಸಮುದಾಯ ಪ್ರಗತಿಗೆ ಡಾ|ಮೊಯ್ದಿನ್ ಅವರ ಪ್ರಯತ್ನ ಮತ್ತು ಅದಕ್ಕಾಗಿ ತುಂಬೆ ಇಂಟರ್‌ನ್ಯಾಷನಲ್

ಮಂಗಳೂರು: ಆವಿಷ್ಕಾರ ಯೋಗ ಚಿಕಿತ್ಸಾ ಕೇಂದ್ರದಲ್ಲಿ ಯೋಗ ತರಬೇತಿ ಶಿಬಿರ

ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆ ಹಾಗೂ ಆವಿಷ್ಕಾರ ಯೋಗ ಮಂಗಳೂರು ಇದರ ಸಹಯೋಗದಲ್ಲಿ ಜೂನ್ 17 ರಿಂದ 21ರ ವರೆಗೆ ಆವಿಷ್ಕಾರ ಯೋಗ ಚಿಕಿತ್ಸಾ ಕೇಂದ್ರ ಬಿಜೈ ಮತ್ತು ಬಂಟ್ಸ್ ಹಾಸ್ಟೆಲ್‌ನಲ್ಲಿ ಯೋಗ ದಿನದ ಸಾಮಾನ್ಯ ಪ್ರೊಟೋಕಾಲ್‌ನ ಯೋಗ ತರಬೇತಿಯು ನಡೆಯಲಿದೆ. ಈ ಶಿಬಿರ ಉಚಿತವಾಗಿದ್ದು ಸಾರ್ವಜನಿಕರು ತರಬೇತಿಗೆ ಭಾಗವಹಿಸಬಹುದು. ತರಬೇತಿ ಸಿಗುವ ಸಮಯ ಬೆಳಿಗ್ಗೆ 6 ರಿಂದ 7 ಕ್ಕೆ, 11ರಿಂದ 12ರವರೆಗೆ ಹಾಗೂ ಸಂಜೆ 6 ರಿಂದ 7ಕ್ಕೆ. ಹೆಸರು ನೊಂದಾಯಿಸಲು ಸಂಪರ್ಕಿಸಿ

ಯಕ್ಷ ಧ್ರುವ ಪಟ್ಲ ಫೌಂಡೇಷನ್ ದಶಮಾನೋತ್ಸವ ಸಂಭ್ರಮ – ಒಂದೇ ದಿನದಲ್ಲಿ 2158 ಕಲಾವಿದರಿಗೆ ಅಂಚೆ ಅಪಘಾತ ವಿಮಾ ಸುರಕ್ಷೆ : ಪಟ್ಲ ಫೌಂಡೇಷನ್ ವತಿಯಿಂದ ಪ್ರಾಯೋಜಕತ್ವ

ಕಳೆದ ಜೂನ್ 1 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಯಕ್ಷ ಧ್ರುವ ಪಟ್ಲ ಫೌಂಡೇಷನ್ ನ ದಶಮಾನೋತ್ಸವದ ಅಂಗವಾಗಿ 2158 ಯಕ್ಷಗಾನ, ರಂಗಭೂಮಿ, ದೈವಾರಾಧನೆ ಮತ್ತು ಕಂಬಳ ಕಲಾವಿದರಿಗೆ ಅಂಚೆ ಅಪಘಾತ ವಿಮೆಯನ್ನು ಮಾಡಿಸುವ ಮೂಲಕ ಅವರ ಕುಟುಂಬಕ್ಕೆ ತಲಾ 10 ಲಕ್ಷದ ಸುರಕ್ಷತೆಯನ್ನು ಒದಗಿಸಲಾಯಿತು. ವಿಮಾ ಪ್ರೀಮಿಯಂ ನ್ನು ಪಟ್ಲ ಫೌಂಡೇಷನ್ ಪ್ರಾಯೋಜಿಸಿದ್ದು ಮಂಗಳೂರು ಅಂಚೆ ವಿಭಾಗದ ಸುಮಾರು 150 ಸಿಬ್ಬಂದಿಗಳು ಈ ಕಾರ್ಯಕ್ರಮವನ್ನು ಅತ್ಯಂತ ಶಿಸ್ತು ಮತ್ತು ಸಂಯಮದಿಂದ

ರಾಷ್ಟ್ರೀಯ ಮಟ್ಟದ ವುಶು ಸ್ಪರ್ಧೆ: ಸಾನ್ವಿ ಶರಣ್ ಶೆಟ್ಟಿಗೆ ರಜತ ಪದಕ

ಮಂಗಳೂರು: ತಮಿಳುನಾಡಿನ ಕೆಎಸ್‌ಆರ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವುಶು ಸ್ಪರ್ಧೆಯಲ್ಲಿ ಸಾನ್ವಿ ಶರಣ್ ಶೆಟ್ಟಿ ೪ ಅವರು ಅತ್ಯುತ್ತಮ ಪ್ರದರ್ಶನದೊಂ ದಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ. ಸಾನ್ವಿ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಜಾರ್ಖಂಡ್, ಉತ್ತರ ಪ್ರದೇಶ, ಪಂಜಾಬ್, ಮಣಿಪುರ ಮತ್ತು ಚಂಡೀಗಢದ ಪ್ರಬಲ ಸ್ಪರ್ಧಿಗಳ ವಿರುದ್ದ ಪ್ರಬಲ ಸ್ಪರ್ಧೆಯೊಡ್ಡಿ ಉತ್ತಮ ಸಾಧನೆ ಮೆರೆದಿದ್ದಾರೆ.