Home Archive by category mangaluru (Page 23)

ದ್ವಿತೀಯ ಪಿಯುಸಿ ಫಲಿತಾಂಶ – ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜಿನ ಮಿಸಾಂ ಆತೀರ ಖಾನ್ ವಿಜ್ಞಾನ ವಿಭಾಗದಲ್ಲಿ ರಾಜ್ಯದಲ್ಲಿ 8ನೇ ರ್‍ಯಾಂಕ್

ಕಣಚೂರು ಮಹಿಳಾ ಪದವಿಪೂರ್ವ ಕಾಲೇಜು ದೇರಳಕಟ್ಟೆ ಇದರ 2024-25 ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 97 ಫಲಿತಾಂಶ ಲಭಿಸಿದ್ದು, ಪರೀಕ್ಷೆಗೆ ಹಾಜರಾದ ಒಟ್ಟು 198 ವಿದ್ಯಾರ್ಥಿನಿಯರಲ್ಲಿ 45 ವಿದ್ಯಾರ್ಥಿನಿಯರು ಅತ್ಯುತ್ತಮ ಶ್ರೇಣಿಯಲ್ಲಿ, 133 ವಿದ್ಯಾರ್ಥಿನಿಯರು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ

2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ – ದ.ಕ ಜಿಲ್ಲೆಯ ಅಮೂಲ್ಯ ಕಾಮತ್, ದೀಪಶ್ರೀ ರಾಜ್ಯಕ್ಕೆ ಪ್ರಥಮ

2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಆದರಂತೆ ದಕ್ಷಿಣಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಆ ಮೂಲಕ ಜಿಲ್ಲೆಗೆ ಕೀರ್ತಿಯನ್ನು ತಂದುಕೊಟ್ಟಿದ್ದಾರೆ. ವಿದ್ಯಾರ್ಥಿ ಜೀವನದ ಟರ್ನಿಂಗ್ ಪಾಯಿಂಟ್ ಎಂದೇ ಹೇಳಲ್ಪಡುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕೆ ಪ್ರಕಟವಾಗಿದೆ. ಬೆಂಗಳೂರಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ 2024-25ನೇ ಸಾಲಿನ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು

ಮಂಗಳೂರು : ದ್ವಿತೀಯ ಪಿಯು ಫಲಿತಾಂಶ ಪ್ರಕಟ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ

ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆದ ದ್ವಿತೀಯ ಪಿಯು (ಪೂರ್ವ ವಿಶ್ವವಿದ್ಯಾಲಯ) ಪರೀಕ್ಷೆಗಳ ಫಲಿತಾಂಶಗಳನ್ನು ಮಂಗಳವಾರ, ಏಪ್ರಿಲ್ 8 ರಂದು ಪ್ರಕಟಿಸಲಾಯಿತು. ಕರ್ನಾಟಕ ಶಿಕ್ಷಣ ಇಲಾಖೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶಗಳನ್ನು ಪ್ರಕಟಿಸಿತು. ಉಡುಪಿ ಜಿಲ್ಲೆ ಶೇ. 93.90 ರಷ್ಟು ಉತ್ತೀರ್ಣತೆಯೊಂದಿಗೆ ರಾಜ್ಯದಲ್ಲಿ ಅಗ್ರಸ್ಥಾನ ಪಡೆದಿದೆ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಶೇ. 93.57 ರಷ್ಟು ಉತ್ತೀರ್ಣತೆಯೊಂದಿಗೆ ಎರಡನೇ ಸ್ಥಾನದಲ್ಲಿದೆ.

ಮಂಗಳೂರು: ತುಳು ಮತ್ತು ಕನ್ನಡ ರಂಗಭೂಮಿ ಕಲಾವಿದ ಸುರೇಶ್ ವಿಟ್ಲ ನಿಧನ

ತುಳು ರಂಗ ಭೂಮಿ ಹಾಗೂ ಶಾರದಾ ಆರ್ಟ್ಸ್ ಮಂಜೇಶ್ವರದ ಕಲಾವಿದ ಸುರೇಶ್ ವಿಟ್ಲ ನಿಧನ ಹೊಂದಿದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪ್ರಸ್ತುತ ಶಾರದ ಆರ್ಟ್ಸ್ ಮಂಜೇಶ್ವರ ತಂಡದ ಬಹು ಬೇಡಿಕೆಯ ಕಲಾವಿದರಾದ ಇವರು ತುಳು ಕನ್ನಡ ರಂಗಭೂಮಿಯ ಮೂಲಕ ತನ್ನ ಅಭಿನಯ

ಮಂಗಳೂರು : ಕಣಚೂರು ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಂದ ಆರ್‌ಜಿಯುಎಚ್‌ಎಸ್ ವಿಶ್ವವಿದ್ಯಾಲಯದ ಪರೀಕ್ಷೆಗಳಲ್ಲಿ ಸಾಧನೆ

ಮಂಗಳೂರು : ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (ಆರ್‌ಜಿಯುಎಚ್‌ಎಸ್) ಪರೀಕ್ಷೆಗಳಲ್ಲಿ ಗಮನಾರ್ಹ ಯಶಸ್ಸನ್ನು ಸಾಧಿಸಿದ್ದಾರೆ, ಈ ಸಾಧನೆಯು ಅವರ ಕಠಿಣ ಪರಿಶ್ರಮ, ದೃಢನಿಶ್ಚಯ ಮತ್ತು ಅವರ ಸಮರ್ಥ ಅಧ್ಯಾಪಕರ ಮಾರ್ಗದರ್ಶನದಿಂದ ಸಾಧ್ಯವಾಗಿದ್ದು, ಇದು ಸಂಸ್ಥೆಗೆ ಮತ್ತೊಂದು ಗೌರವವನ್ನು ತಂದಿದೆ. ಸ್ನಾತಕೋತ್ತರ ವಿಭಾಗದ ಸಾಧಕರು: 1. ಡಾ. ಬಿ.ಆರ್. ಚೇತನ್

ಮಂಗಳೂರು: ಹಿರಿಯ ವಿದ್ವಾಂಸ ಡಾ. ವಾಮನ ನಂದಾವರ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಕರಾವಳಿ ಲೇಖಕಿಯರ ವಾಚಕಿಯರ ಸಂಘ, ಹೇಮಾಂಶು ಪ್ರಕಾಶನ, ಆಕೃತಿ ಆಶಯ ಪಬ್ಲಿಕೇಶನ್ಸ್ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ವಿದ್ವಾಂಸರಾದ ಡಾ. ವಾಮನ ನಂದಾವರ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ನಗರದ ತುಳು ಅಕಾಡೆಮಿಯ ಸಿರಿ ಚಾವಡಿಯಲ್ಲಿ ನಡೆಯಿತು. ಆರದ ಎಣ್ಣೆ, ಮಾಸದ ಬತ್ತಿ, ಆರದ ದೀಪ ಎಂಬ ಹೆಸರಿನಲ್ಲಿ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಕಾರ್ಯಕ್ರಮದ ಮೊದಲಿಗೆ ವಾಮನ ನಂದಾವರ ಅವರ ಭಾವ ಚಿತ್ರಕ್ಕೆ ಪುಷ್ಪ

ಮಂಗಳೂರು : ತುಳು, ಕನ್ನಡ ವಿದ್ವಾಂಸ ಡಾ. ವಾಮನ ನಂದಾವರ ವಿಧಿವಶ

ಹಿರಿಯ ವಿದ್ವಾಂಸ ಡಾ.ವಾಮನ ನಂದಾವರ (81) ಅವರು ಮಾ.15ರ ಶನಿವಾರ ನಿಧನ ಹೊಂದಿದ್ದಾರೆ. ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯಪೀಡಿತರಾಗಿದ್ದರು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ಕನ್ನಡ ಹಾಗೂ ತುಳು ಭಾಷಾ ವಿದ್ವಾಂಸ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದರು. ಹೆಸರಾಂತ ಜಾನಪದ ವಿದ್ವಾಂಸರಾಗಿದ್ದರು. ಹೇಮಾಂಶು ಪ್ರಕಾಶನದ ಮೂಲಕ ಅನೇಕ ಬರಹಗಾರರನ್ನು, ಕಲಾವಿದರನ್ನು ರೂಪಿಸಿದ ಇವರು ಹಲವಾರು

ಕುದ್ರೋಳಿ ಗಣೇಶ್ ಅವರಿಗೆ ಗೋಲ್ಡನ್ ಮ್ಯಾಜಿಷಿಯನ್ ರಾಷ್ಟ್ರೀಯ ಜಾದೂ ಪ್ರಶಸ್ತಿ

ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಶಿಯೇಶನ್ ಸಂಸ್ಥೆಯು ಕರ್ನಾಟಕದ ಜಾದೂ ಕಲಾವಿದ ಕುದ್ರೋಳಿ ಗಣೇಶ್ ರವರಿಗೆ ಪ್ರತಿಷ್ಟಿತ ” ಗೋಲ್ಡನ್ ಮ್ಯಾಜಿಷಿಯನ್ ” ರಾಷ್ಟ್ರೀಯ ಜಾದೂ ಪ್ರಶಸ್ತಿ ನೀಡಿ ಗೌರವಿಸಿದೆ. ಕುದ್ರೋಳಿ ಗಣೇಶ್ ರವರು ಜಾದೂ ರಂಗದಲ್ಲಿ ಮಾಡಿರುವ ಸೃಜನಾತ್ಮಕ ಪ್ರಯೋಗಗಳನ್ನು ಗುರುತಿಸಿ ಜೀವಿತಾವಧಿಯ ಸಾಧನೆಗಾಗಿ ಈ ಪ್ರಶಸ್ತಿ ಸಂದಾಯವಾಗಿದೆ. ಆಂಧ್ರಪದೇಶದ ವಿಶಾಖಪಟ್ಟಣದಲ್ಲಿ ರಾಷ್ಟ್ರೀಯ ಜಾದೂ ದಿನಾಚರಣೆಯ ನೆನಪಿಗಾಗಿ ನಡೆದ ಅದ್ದೂರಿ

ಮಂಗಳೂರು : ತುಳು ರಂಗಭೂಮಿ, ತುಳು ಚಿತ್ರ ನಟ ವಿವೇಕ್ ಮಾಡೂರು ನಿಧನ

ಕಳೆದ ಕೆಲ ದಶಕಗಳಿಂದ ತುಳು ರಂಗಭೂಮಿಯಲ್ಲದೆ, ತುಳು ಚಿತ್ರರಂಗದಲ್ಲೂ ಕಲಾರಸಿಕರನ್ನ ತನ್ನ ಕುಬ್ಜ ದೇಹದಿಂದಲೇ ರಂಜಿಸುತ್ತಿದ್ದ ವಿವೇಕ್ ಮಾಡೂರು(52) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಗುರುವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಅವರನ್ನು ಇಂದು ಬೆಳಿಗ್ಗೆ ಮನೆ ಮಂದಿ ಎಬ್ಬಿಸಲು ಹೋದಾಗ ಮೃತಪಟ್ಟಿರುವುದು ತಿಳಿದು ಬಂದಿದೆ. ಮೃತ ವಿವೇಕ್ ಅವರು ಪತ್ನಿ ವೇದಾವತಿ ಜೊತೆ ಮಾಡೂರಿನ ಸಹೋದರನ ಮನೆಯಲ್ಲಿ ವಾಸವಾಗಿದ್ದರು. ಈ ಹಿಂದೆ