ಬಂಟ್ವಾಳ: ರೋಟರಿಕ್ಲಬ್ ಬಂಟ್ವಾಳ ಬಿ.ಸಿ.ರೋಡಿಗೆ ಸಮೀಪದ ಗೂಡಿನಬಳಿಯಲ್ಲಿರುವ ಕ್ಲಬ್‌ನ ಕಟ್ಟಡದಲ್ಲಿ ಸುಮಾರು ೮೫ ಲಕ್ಷ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ತಂದಿರುವ ರಕ್ತನಿಧಿ ಸೆಂಟರ್ ಲೋಕಾರ್ಪಣೆ ಗೊಂಡಿತು.ಬಂಟ್ವಾಳ ತಾಲೂಕಿನ ಬಹು ಕಾಲದ ಬೇಡಿಕೆಯೊಂದು ಈಡೇರಿದೆ. ರೋಟರಿ ಜಿಲ್ಲಾ ೩೧೮೧ ರ ಗವರ್ನರ್ ಎಚ್. ಆರ್.ಕೇಶವ ಅವರು ಉದ್ಘಾಟಿಸಿ, ಬಂಟ್ವಾಳ ರೋಟರಿ ಕ್ಲಬ್‌ನ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಚಿಲಿಂಬಿಯ ೩ನೇ ಕ್ರಾಸ್ ರಸ್ತೆಯಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಬೃಹತ್ತಾಕಾರದ ಮರಗಳು ಧರೆಗುರುಳು ಭೀತಿ ಹೆಚ್ಚಾಗಿದ್ದು, ಸಂಬಂಧಪಟ್ಟವರು ಕೂಡಲೇ ಎಚ್ಚೆತ್ತು ಅಪಾಯ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.ಮಳೆಗಾಲದ ಈ ಸಂದರ್ಭದಲ್ಲಿ ಮಂಗಳೂರಿನ ವಿವಿಧೆಡೆಯ ಪ್ರದೇಶಗಳು ಅಪಾಯದ ಭೀತಿಯಲ್ಲಿದೆ. ನಗರದ ಚಿಲಿಂಬಿ ಪ್ರದೇಶದ ೩ನೇ ಅಡ್ಡ ರಸ್ತೆಯಲ್ಲಿ ಗುಡ್ಡ ಕುಸಿತದ ಆತಂಕ ಎದುರಾಗಿದ್ದು, ಅಲ್ಲಲ್ಲಿ ಗುಡ್ಡ ಬಿರುಕು
ಕೊಣಾಜೆ : ವಿದ್ಯಾರ್ಥಿಗಳು ಜೀವನದಲ್ಲಿ ಇತಿಹಾಸ ನಿರ್ಮಿಸುವಂತಹ ಮನೋಭಾವನೆ ಬೆಳೆಸಿಕೊಳ್ಳಿ ಎಂದು ಬಗರ್ ಹುಕುಂ ಸಮಿತಿ ಮಂಗಳೂರು ವಿಧಾನಾಭಾ ಕ್ಷೇತ್ರ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ಹೇಳಿದರು. ಉಳ್ಳಾಲ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಉಳ್ಳಾಲ ಇವರ ಸಂಯುಕ್ತ ಆಶ್ರಯದಲ್ಲಿ ಮುಡಿಪು ಗೋಪಾಲಕೃಷ್ಣ ಸಭಾಂಗಣದಲ್ಲಿ ಜರಗಿದ ನಾಡಪ್ರಭು ಕೆಂಪೇಗೌಡ ಜಯಂತಿ ಉದ್ಘಾಟಿಸಿ ಮಾತನಾಡಿದರು. ಇತಿಹಾಸವನ್ನು ಓದಿಕೊಳ್ಳುವ ಅಭ್ಯಾಸ ಇಟ್ಟುಕೊಳ್ಳಿ. 500
ನಗರದ ಕಾವೂರು ಸೂಜಿಕಲ್ ಗುಡ್ಡೆ ಎಂಬಲ್ಲಿ ಭೂಕುಸಿತದಿಂದ ಕೆಲವು ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಕ್ಷಣವೇ ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.ಅವರು ಗುರುವಾರ ಮಂಗಳೂರು ತಾಲೂಕಿನ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಕಾವೂರು ಸೂಜಿಕಲ್ ಗುಡ್ಡೆಯಲ್ಲಿ ಖಾಸಗಿ ಮನೆ ಕಟ್ಟಡ ನಿರ್ಮಿಸಲು ಅಗೆಯಲಾದ ಮಣ್ಣಿನಿಂದ ಎತ್ತರದ ಪ್ರದೇಶದಲ್ಲಿರುವ ಮನೆಗಳು ಕೆಳಗೆ ಬೀಳುವ ಸ್ಥಿತಿಯಲ್ಲಿವೆ. ಈ
ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ಖಾಸಗಿ ವೈಟ್ ಬೋರ್ಡ್ ವಾಹನಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಗೌರವ ಅಧ್ಯಕ್ಷ ಸುನೀಲ್ ಕುಮಾರ್ ಬಜಾಲ್ , ಪೊಲೀಸ್ ಇಲಾಖೆ ಹಾಗೂ ಆರ್ ಟಿ ಓ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕು, ಇಲ್ಲದ್ರೆ ಆರ್ ಟಿಓ ಕಚೇರಿ ಮುತ್ತಿಗೆ ಹಾಕುವ ಅನಿವಾರ್ಯ ಬರುತ್ತೆ ಎಂದು ಎಚ್ಚರಿಕೆ ನೀಡಿದ್ರು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿ
ಭಾರತೀಯ ಗ್ರಾಹಕರ ವಿವಿಧ ಬೇಡಿಕೆಗಳಿಗೆ ಅನುಗುಣವಾಗಿ ದ್ವಿಚಕ್ರವಾಹನಗಳ ಮಾರಾಟ ಮತ್ತು ಸೇವೆಯಲ್ಲಿ ಮುಂಚೂಣಿಯಲ್ಲಿರುವ ಹೀರೋ ಮೋಟೋಕಾರ್ಪ್‌ನ ವಿಡಾ ಹಬ್ ಎಕ್ಸ್‌ಕ್ಲೂಸಿವ್ ನೂತನ ಎಲೆಕ್ಟ್ರಿಕ್ ಶೋರೂಂ ಮಂಗಳೂರಿನ ವೆಲೆನ್ಸಿಯಾದಲ್ಲಿ ಲೋಕಾರ್ಪಣೆಗೊಂಡಿತು. ದೇಶದ ಅತ್ಯುನ್ನತ ದ್ವಿಚಕ್ರವಾಹನಗಳ ಉತ್ಪಾದನಾ ಕ್ಷೇತ್ರದಲ್ಲಿ ಮೈಲಿಗಲ್ಲು ಸಾಧಿಸಿರುವ ಹೀರೋ ಮೋಟೋಕಾರ್ಪ್ ಗ್ರಾಹಕರ ಮನೆಮಾತಾಗಿದೆ. ಪರಿಸರ ಸ್ನೇಹಿ ಹಾಗೂ ಇಂದಿನ ಗ್ರಾಹಕರಿಗೆ ಅಗತ್ಯವಾಗಿರುವ
ಕಡಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ರಿಕ್ಷಾ ಚಾಲಕರು ದುರಂತ ಸಾವನ್ನಪ್ಪಿದ ಘಟನೆ ನಗರದ ಪಾಂಡೇಶ್ವರದ ರೊಸಾರಿಯೋ ಸ್ಕೂಲ್ ಬಳಿ ನಡೆದಿದೆ. ಪುತ್ತೂರು ರಾಮಕುಂಜ ನಿವಾಸಿ ದೇವರಾಜ್ ಗೌಡ(46), ಹಾಸನ ಜಿಲ್ಲೆಯ ಆಲೂರು ಮೂಲದ ರಾಜು (50) ಮೃತರು. ಇವರು ರೊಸಾರಿಯೋ ಸ್ಕೂಲ್ ಬಳಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಇವರ ಮನೆ ಬಳಿಯಲ್ಲಿ ವಿದ್ಯುತ್ ಕಂಬ ಮುರಿದು ಬಿದ್ದಿತ್ತು. ಎಂದಿನಂತೆ ನಸುಕಿನಲ್ಲಿ ನಾಲ್ಕು ಗಂಟೆ ವೇಳೆಗೆ ಚಾಲಕ ರಾಜು
ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪಿವಿಎಸ್ ಸರ್ಕಲ್ ಬಳಿಯ ವೈಶ್ಯ ಎಜುಕೇಶನ್ ಸೊಸೈಟಿ ಸಭಾಂಗಣದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಭಾರತದ ಸನಾತನ ಪರಂಪರೆಯನ್ನು ಇಡೀ ವಿಶ್ವವೇ ಗೌರವಿಸುವ ದಿನವೇ ಅಂತಾರಾಷ್ಟ್ರೀಯ ಯೋಗ ದಿನ. ಮನುಷ್ಯನ ದೇಹದ ಸಮತೋಲನಕ್ಕಾಗಿ ಯೋಗದ ಕೊಡುಗೆ ಅನನ್ಯವಾಗಿದ್ದು ದೇಹದ ಜೊತೆಗೆ ಮನಸ್ಸಿಗೂ
ಕರ್ನಾಟಕ ಕೊಂಕಣಿ ಅಕಾಡೆಮಿಯ ಅಧ್ಯಕ್ಷ ಮತ್ತು ಸದಸ್ಯರ ಅಧಿಕಾರ ಸ್ವೀಕಾರ ಸಮಾರಂಭ ಮಂಗಳೂರಿನ ಲಾಲ್‌ಭಾಗ್‌ನ ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಕೊಂಕಣಿ ಸಾಹಿತ್ಯ ಅಕಾಡೆಮಿಯ ಕಚೇರಿ ಆವರಣದಲ್ಲಿ ನಡೆಯಿತು. ಕರ್ನಾಟಕ ಕೊಂಕಣಿ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಮತ್ತು ಸದಸ್ಯರ ಅಧಿಕಾರ ಸ್ವೀಕಾರ ಸಮಾರಂಭ ಜರುಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು, ಅಕಾಡೆಮಿಗಳು ರಾಜಕೀಯ
ಮಂಗಳೂರಿನ ಅಮೃತ ವಿದ್ಯಾಲಯಂ ಶಾಲೆಯಲ್ಲಿ ನೂತನವಾಗಿ ರಚನೆಗೊಂಡ ವಿದ್ಯಾರ್ಥಿ ಮಂತ್ರಿ ಮಂಡಲದ ಪದಗ್ರಹಣ ಸಮಾರಂಭ ಮತ್ತು ವಿವಿಧ ಸಂಘಗಳ ಉದ್ಘಾಟನೆ ಕಾರ್ಯಕ್ರಮವು ನಡೆಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಲೆಫ್ಟಿನೆಂಟ್ ಕರ್ನಲ್ ವಿವೇಕ್ ಬಿಂದ್ರ, ಅಮೃತ ಕ್ಯಾಂಪಸ್ಸಿನ ನಿರ್ದೇಶಕರಾದ ಶ್ರೀಯುತ ಯತೀಶ್ ಬೈಕಂಪಾಡಿ, ಶಾಲಾ ಪ್ರಾಂಶುಪಾಲೆ ಶ್ರೀಮತಿ ಅಕ್ಷತಾ ಆರ್ ಶೆಣೈ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ನಂತರ ವಿದ್ಯಾರ್ಥಿ ಮಂತ್ರಿಮಂಡಲಕ್ಕೆ



























