ಗಾಯತ್ರಿ ಫಿಲ್ಮ್ ಮೇಕರ್ಸ್ ಬ್ಯಾನರ್‌ನಡಿಯಲ್ಲಿ ತಯಾರಾದ ಎಂಡೋ ಸಂತ್ರಸ್ತರ ನೋವು ಹಾಗೂ ತುಳುನಾಡಿನ ದೈವ ದೇವರ ಕಥೆಯನ್ನೊಳಗೊಂಡು ಸಿದ್ಧಗೊಂಡಿರುವ ಬಲಿಪೆ ತುಳುಚಿತ್ರವು ಮೇ.24ರಂದು ಬಿಡುಗಡೆಗೊಳ್ಳಲಿದೆ. ಬಲಿಪೆ ಎಂದರೆ ದೈವದ ವಾಹನವಾಗಿದ್ದು, ನೂರು ಹುಲಿಯ ಶಕ್ತಿಯನ್ನು ಹೊಂದಿರುವ ಒಂದು ಹುಲಿ ಎಂದರ್ಥ. ಬಲಿಪ ಚಿತ್ರದಲ್ಲಿ ತುಳುವ ಮಾಣಿಕ್ಯ ಅರವಿಂದ್ ಬೋಳಾರ್,
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಗೆ ಸಾಗಿಬಂತು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಮಹಿಳೆಯರು, ತಾಯಂದಿರ ಬೆಂಬಲದ ಸಂಕೇತವಾಗಿ ಚುನಾವಣಾ ಠೇವಣಿಯ ಮೊತ್ತಕ್ಕೆ ಕಿರು ದೇಣಿಗೆಗಳನ್ನು ಸಲ್ಲಿಸಲಾಯಿತು. ಪಕ್ಷದ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭ್ಯರ್ಥಿ ಕ್ಯಾ. ಚೌಟರಿಗೆ ಮಹಿಳೆಯರು ಆರತಿ ಎತ್ತಿ, ತಿಲಕವಿಟ್ಟು, ದೇಣಿಗೆ ನೀಡಿ ಗೆದ್ದು ಬರುವಂತೆ ಹರಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು,
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಇಂದು ನಾಮಪತ್ರ ಸಲ್ಲಿಸಿದ್ದು, ಅದಕ್ಕೂ ಮುಂಚಿತವಾಗಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾಮಪತ್ರಕ್ಕೆ ಪೂಜೆಯನ್ನು ಸಲ್ಲಿಸಿದರು. ನಂತರ ನಗರದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ
ಲೋಕಸಭಾ ಚುನಾವಣೆಯಲ್ಲಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯದಂತೆ ಬಿಲ್ಲವ ಸಮಾಜಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದ.ಕ., ಉಡುಪಿ- ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಬಿಲ್ಲವ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದು ಎಸ್‌ಎನ್‌ಜಿವಿ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ, ಟೀಂ ಸತ್ಯಜಿತ್ ಸುರತ್ಕಲ್‌ನಲ್ಲಿ
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಎ.3ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿ ಬಿ.ರಮಾನಾಥ ರೈ ತಿಳಿಸಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಸುವ ಮೊದಲು ಚರ್ಚ್, ಮಸೀದಿ, ದೇವಸ್ಥಾನ ಸೇರಿದಂತೆ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ
ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಬಹಳಷ್ಟು ಜನ ಪರ ಯೋಜನೆಗಳನ್ನು ದಕ್ಷಿಣ ಕನ್ನಡ ಜಿಲ್ಲೆಗೆ ನೀಡಿದೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದೆ ಅಭಿವೃದ್ಧಿ, ಬಡತನ ನಿರ್ಮೂಲನೆಗೆ ಪ್ರಾಶಸ್ತ್ಯವಿತ್ತು. ಆದ್ದರಿಂದಲೇ ಬಿಜೆಪಿ ಕಾಲಘಟ್ಟದಲ್ಲಿ ಯಾವ ಯೋಜನೆಗಳೂ ಬಾರದಿದ್ದರೂ, ಭಾವನಾತ್ಮಕವಾಗಿ ಅವರು ಜನರನ್ನು ಕೆರಳಿಸಿ ಚುನಾವಣೆಯಲ್ಲಿ ಗೆಲ್ಲುತ್ತಿದ್ದಾರೆ. ಆದ್ದರಿಂದ ಈ ಬಾರಿ ಹುರುಪಿನಿಂದ
ಖ್ಯಾತ ನಟ, ನಾಟಕ ಕಲಾವಿದ, ಹಾಡುಗಾರ ಪ್ರಸಾಧನಕಾರ ಎಸ್. ರಾಮದಾಸ್ (86) ಇಲ್ಲಿನ ಟಿ. ಟಿ. ರಸ್ತೆ ನಿವಾಸಿ ಅಲ್ಪ ಕಾಲದ ಅಸೌಖ್ಯದಿಂದಾಗಿ 27.03.2024 ರಂದು ಮಧ್ಯಾಹ್ನ ನಗರದ ಸ್ವಗ್ರಹದಲ್ಲಿ ನಿಧನ ಹೊಂದಿದರು. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ಯಲ್ಲಿ 32 ವರ್ಷ ಸೇವೆ ಸಲ್ಲಿಸಿದ ಇವರು ಕಲ್ಕೂರ ಜಾಹಿರಾತು ಸಂಸ್ಥೆಯಲ್ಲಿ ಕೆಲವು ವರ್ಷ ಕೆಲಸ ಮಾಡಿದ್ದರು .ದಶಕಗಳ ಕಾಲದ ಹಿಂದೆ ಪ್ರಾಥಮಿಕ ನವೋದಯ ಕಲಾವೃoದದಲ್ಲಿ ಮಸಣಕ್ಕೆ, ತರಂಗ ತರಂಗ ಅಂತರಂಗ, ಹೆಗಲಿಗೆ
ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಕೋಳಿ, ಮೀನಿನ ಆಹಾರ ತಯಾರಿಕಾ ಘಟಕವೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಕೋಟ್ಯಂತರ ರೂ. ನಷ್ಟ ಸಂಭವಿಸಿದೆ. ಶಿಹಾರ್ ಎಂಟರ್ ಪ್ರೈಸಸ್ ಎಂಬ ಈ ಫ್ಯಾಕ್ಟರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಫ್ಯಾಕ್ಟರಿಯನ್ನು ಆವರಿಸಿದೆ. ಸ್ಥಳಕ್ಕೆ ಆಗಮಿಸಿದ ಎಂಆರ್ ಪಿಎಲ್, ಎನ್ ಎಂಪಿಟಿನಿಂದ ಸುಮಾರು 8 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟವು. ನಿರಂತರ ಮೂರೂವರೆ ಗಂಟೆಗಳ
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಈಗಾಗಲೇ ಕುದ್ರೋಳಿ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಗಿದೆ. ಚುನಾವಣಾ ಕಚೇರಿಯೂ ಉದ್ಘಾಟನೆಗೊಂಡಿದೆ. ಮುಂದೆ ಲೋಕಸಭಾ ಕ್ಷೇತ್ರದ




























