Home Archive by category mangaluru (Page 29)

ರಾಜ್ಯ ಸರಕಾರ ದ.ಕ. ಜಿಲ್ಲೆಗೆ 300 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು“ – ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದ್ದು ಅಪಾರ ಪ್ರಮಾಣದ ಸೊತ್ತು ನಷ್ಟ ಉಂಟಾಗಿದೆ. ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ರಾಜ್ಯ ಸರಕಾರ 300 ಕೋಟಿ ರೂ. ವಿಶೇಷ ಪರಿಹಾರ ಘೋಷಣೆ ಮಾಡಬೇಕೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದರು.ಮಂಗಳೂರು

ಮಂಗಳೂರು: ಮಾನವೀಯತೆ ಮೆರೆದ ಬಸ್ ಸಿಬ್ಬಂದಿಗೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘದಿಂದ ಅಭಿನಂದನೆ

ಮಂಗಳೂರು: ಬಸ್‌ನಲ್ಲಿ ಅನಾರೋಗ್ಯಕ್ಕೀಡಾದ ವಿದ್ಯಾರ್ಥಿನಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕೃಷ್ಣ ಪ್ರಸಾದ್ ಟ್ರಾವೆಲ್ಸ್ ಬಸ್ ಚಾಲಕ ಗಜೇಂದ್ರ ಕುಂದ‌ರ್, ನಿರ್ವಾಹಕರಾದ ಸುರೇಶ್, ಮಹೇಶ್‌ರನ್ನು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ಬಂಟ್ಸ್ ಹಾಸ್ಟೇಲ್ ಬಳಿಯ ಹೊಟೇಲ್ ವುಡ್ ಲ್ಯಾಂಡ್ ನ‌ ಸಭಾಂಗಣದಲ್ಲಿ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಅಭಿನಂದಿಸಲಾಯಿತು.ಸಂಘದ ಅಧ್ಯಕ್ಷ ಆರ್ ಧನರಾಜ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.ನಿರ್ದೇಶಕ

ದೇರಳಕಟ್ಟೆ : ಪ್ರಾಕೃತಿಕ ವಿಕೋಪಗಳ ಕುರಿತು ತುರ್ತು ಸಭೆ

ಉಳ್ಳಾಲ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳನ್ನು ಸೇರಿಸಿಕೊಂಡು ಪ್ರಾಕೃತಿಕ ವಿಕೋಪಗಳ ಕುರಿತು ತುರ್ತು ಸಭೆ ದೇರಳಕಟ್ಟೆಯ ಬಿಸಿಸಿ ಸಭಾಂಗಣದಲ್ಲಿ ನಡೆಯಿತು‌. ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್‌ ಫರೀದ್ ಸಭೆ ಉದ್ದೇಶಿಸಿ ಮಾತನಾಡಿ, ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಎಲ್ಲಾ ಗ್ರಾಮಗಳಿಗೆ ಭೇಟಿಯಾಗಿ ಸಮಸ್ಯೆಗಳನ್ನು ಆಲಿಸಬೇಕು. ಸ್ಥಳೀಯ ಜನಪ್ರತಿನಿಧಿಗಳ ಜೊತೆಗೆ ಅಧಿಕಾರಿಗಳಿಗೆ ಇರುವ ಸಮನ್ವಯ

ವಿದ್ಯಾರ್ಥಿನಿಗೆ ಹೃದಯಾಘಾತ : ಸಮಯಪ್ರಜ್ಞೆ ಮೆರೆದ ಚಾಲಕ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಚಾಲಕ ಹಾಗು ನಿರ್ವಾಹಕ ಬಸ್ಸನ್ನು ಆಂಬುಲೆನ್ಸ್ ಮಾದರಿಯಲ್ಲಿ ಚಲಾಯಿಸಿ ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. 13ಈ ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ಸು ಎಂದಿನಂತೆ ಕುಳೂರು ಮಾರ್ಗವಾಗಿ ಚಲಿಸುತಿತ್ತು. ಅದರಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕರೊಬ್ಬರಲ್ಲಿ ಕಾಲೇಜು ವಿದ್ಯಾರ್ಥಿ ತಟ್ಟನೆ

ಆಟಿಡು ಒಂಜಿ ದಿನ ಕಾರ್ಯಕ್ರಮ:ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ

ಬಿಲ್ಲವ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಮುಂಡ್ಕೂರು, ಮುಲ್ಲಡ್ಕ, ಇನ್ನಾ, ಇದರ ವತಿಯಿಂದ ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ, ಆಟಿಡು ಒಂಜಿ ದಿನ ಕಾರ್ಯಕ್ರಮ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆಯಿತು. ತೋಟ ಮನೆ ಉಷಾ ವಾಸು ಅಂಚನ್ ದೀಪ ಬೆಳಗಿಸಿ ಕಾರ್ಯಕ್ರಮನ್ನು ಉದ್ಘಾಟಿಸಿದರು. ವಿದ್ಯಾ ವರ್ಧಕ ಪದವಿ ಪೂರ್ವ ಕಾಲೇಜಿನ ಮುಖ್ಯ ಶಿಕ್ಷಕಿ ಸವಿತಾ ಸದಾನಂದ ಪೂಜಾರಿ ಮುಖ್ಯ ಅತಿಥಿಯಾಗಿ ಮಾತನಾಡಿ ತುಳುನಾಡಿನಲ್ಲಿ ಆಷಾಡ

ಬೆಳ್ಳಂಬೆಳಗ್ಗೆ ಮಂಗಳೂರು ಕಾರಾಗೃಹಕ್ಕೆ ಪೊಲೀಸರ ದಾಳಿ – ಮೊಬೈಲ್‌ಗಳ ಸಹಿತ ಗಾಂಜಾ, ಡ್ರಗ್ಸ್ ವಶ

ಮಂಗಳೂರು: ಮಂಗಳೂರು ನಗರದಲ್ಲಿರುವ ಜೈಲಿಗೆ ಗುರುವಾರ ಬೆಳ್ಳಂಬೆಳಗ್ಗೆ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಮಾಡಿದ ದಾಳಿ ನಡೆಸಿ ಅಪಾರ ಪ್ರಮಾಣದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೈಲಿಗೆ ಸುಮಾರು 150 ಸಿಬಂದಿಗಳ ಜೊತೆ ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ ವೇಳೆ ಖೈದಿಗಳಿಂದ 25 ಮೊಬೈಲ್ ಫೋನ್‌ಗಳು, 1 ಬ್ಲೂಟೂತ್ ಸಾಧನ, 5 ಇಯರ್‌ಫೋನ್‌ಗಳು, 1 ಪೆನ್ ಡ್ರೈವ್, 5 ಚಾರ್ಜರ್‌ಗಳು, 1 ಜೊತೆ ಕತ್ತರಿ, 3ಕೇಬಲ್‌ಗಳು ಸೇರಿದಂತೆ ಗಾಂಜಾ ಅಮಲು ಪದಾರ್ಥಗಳು

ಆಷಾಢಮಾಸದಲ್ಲಿ ಮನೆ ಮನೆಗೆ ಭೇಟಿ ನೀಡುತ್ತಿರುವ ಆಟಿಕಳಂಜ

ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ತುಳುನಾಡಿನಲ್ಲಿ ಅಷಾಢಮಾಸ ಬಂತೆಂದರೆ ಆಟಿಕಳಂಜ ಮನೆಮನೆ ಬಾಗಿಲಲ್ಲಿ ಪ್ರತ್ಯಕ್ಷನಾಗುತ್ತಾನೆ. ಆಟಿ ಕಳಂಜ ಮನೆ ಮನೆಗೆ ಬಂದು ಮಾರಿಯನ್ನು ನಿವಾರಿಸುತ್ತಾನೆ. ಮೂಡಣದ ಮಾರಿಯನ್ನು ಮೂಡಣದೂರಿಗೆ ಸಾಗಿಸುತ್ತಾನೆ. ಮನುಷ್ಯರಿಗಾಗಲಿ, ಪ್ರಾಣಿಗಳಿಗಾಗಲೀ ಬರುವ ಕಾಯಿಲೆಯನ್ನು ನಿವಾರಣೆ ಮಾಡುವ ಮಾಂತ್ರಿಕನಂತೆ ಕಳಂಜ ಎನ್ನುವುದು ಇಲ್ಲಿನ ಜನರ ನಂಬಿಕೆ. ತುಳುನಾಡಿನಲ್ಲಿ ಆಷಾಡ ಮಾಸವನ್ನು ‘ಆಟಿ’ ಎಂದು

ಕಾರ್ಕಳದ ಕ್ರೈಸ್ಟ್‌ಕಿಂಗ್ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ-v4 ನ್ಯೂಸ್ ವಾಹಿನಿಯ ಪತ್ರಕರ್ತ ಖಲೀಲ್ ಅವರಿಗೆ ಸನ್ಮಾನ

ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಹಾಗೂ ಕೃಷಿಬಿಂಬ ಪತ್ರಿಕೆಯ ಸಂಪಾದಕರಾದ ರಾಧಾಕೃಷ್ಣ ತೋಡಿಕಾನ ಅವರು ಆಗಮಿಸಿದ್ದು, ಅವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು “ಪತ್ರಿಕೆ ಹಾಗೂ ಸುದ್ದಿ ಮಾಧ್ಯಮಗಳಿಂದಾಗಿ ಇಂದು ಸಮಾಜದಲ್ಲಿ ಜಾಗೃತಿ ಮೂಡಲು ಸಾಧ್ಯವಾಗಿದೆ. ಪತ್ರಿಕೆಗಳು ಸಮಾಜ, ಆಡಳಿತ ವ್ಯವಸ್ಥೆ

ಕಾರ್ಕಳದ ಹಿಂದೂ ರುದ್ರಭೂಮಿಯ ಮೇಲ್ಚಾವಣಿಗೆ ಬಿದ್ದ ಮರ

ಕಾರ್ಕಳ ಪುರಸಭಾ ವ್ಯಾಪ್ತಿಯ ಕರಿಯಕಲ್ಲು ಎಂಬಲ್ಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಶವಸಂಸ್ಕಾರದ ವೇಳೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಉರುಳಿ ರುದ್ರಭೂಮಿಯ ಮೇಲ್ಟಾವಣಿಗೆ ಬಿದ್ದಿರುವ ಘಟನೆ ನಡೆದಿದೆ. ಮರ ಉರುಳಿ ಬಿದ್ದ ಪರಿಣಾಮವಾಗಿ ಅಂದಾಜು 50 ಸಾ. ರೂ. ನಷ್ಟ ಸಂಭವಿಸಿದೆ. ರೆಂಜಾಳ ಮತ್ತು ಸಾಣೂರು ಗ್ರಾಮದ ಮೃತದೇಹಗಳನ್ನು ಸುಡುವ ವೇಳೆ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ರುದ್ರಭೂಮಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಕಾಶ್ ರಾವ್,

ಮಂಗಳೂರು : ಡೆಂಗ್ಯೂ ಬಾದಿಸದಂತೆ ಎಚ್ಚರ ವಹಿಸಿ- ಡೆಂಗ್ಯೂ ನಿರ್ಮೂಲನೆ ಸಮಿತಿಯ ಸಭೆಯಲ್ಲಿ ಅಧಿಕಾರಿಗಳಿಗೆ ಮೇಯರ್ ಸೂಚನೆ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಡೆಂಗ್ಯೂ ಬಾದಿಸದಂತೆ ಎಚ್ಚರಿಕೆ ವಹಿಸಬೇಕಾಗಿರುವುದನ್ನು ಗಮನಿಸಿ ಮೇಯರ್ ಸುಧೀರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ಡೆಂಗ್ಯೂ ನಿಮೂ೯ಲನೆ ಸಮಿತಿಯ ಸಭೆ ಜರಗಿತು. ಸಭೆಯಲ್ಲಿ ಮಾತನಾಡಿದ ಮೇಯರ್ ರವರು ಡೆಂಗ್ಯೂಯನ್ನು ತಡೆಗಟ್ಟಲು ಮೊತ್ತ ಮೊದಲನೇಯದಾಗಿ ಸೊಳ್ಳೆ ಉತ್ಪತ್ತಿಯಾಗುವುದನ್ನು ತಡೆಯಬೇಕು. ಪಾಲಿಕೆಯ ಎಂ.ಪಿ.ಡಬ್ಲ್ಯೂ ಕಾಯ೯ಕತ೯ರು ಮನೆ ಮನೆ ಭೇಟಿ ನೀಡಿ ಮನೆಯ ಸುತ್ತ ಮುತ್ತಲುನಲ್ಲಿರುವ