Home Archive by category mangaluru (Page 3)

ರಿಶಲ್ ಫೆರ್ನಾಂಡಿಸ್‌ಗೆ `ದೇಶ್ ರತ್ನಾ ಪ್ರಶಸ್ತಿ

ಮೂಡುಬಿದಿರೆ: ಯುವ ಲೇಖಕಿ, ವಾಗ್ಮಿ ಹಾಗೂ ಎಬಿವಿಪಿ ಕಾರ್ಯಕರ್ತೆ ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ಅವರು 2025ನೇ ಸಾಲಿನದೇಶ್ ರತ್ನಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ದೆಹಲಿಯಭಾರತ ಮಂಟಪದಲ್ಲಿ ನಡೆಯುವ ಸಮಾರಂಭದಲ್ಲಿ ವಿವಿಧ ಕೇಂದ್ರ ಹಾಗೂ ರಾಜ್ಯ ಸಚಿವರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ರಿಶಲ್ ಬ್ರಿಟ್ನಿ ಅವರು ಸಾಹಿತ್ಯ

ಕೆಯ್ಯೂರು: ಪ್ರಗತಿ ಬಂಧು ಒಕ್ಕೂಟಗಳ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ಕೆಯ್ಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಮತ್ತೂರು ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕೆಯ್ಯೂರು ಇವರ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಹಾಗೂ ಸ್ವ-ಸಹಾಯ ಸಂಘಗಳಿಗೆ 1001 ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮ ಕೆಯ್ಯೂರು ಜಯಕರ್ನಾಟಕ ಸಭಾಭವನದಲ್ಲಿ ನಡೆಯಿತು. ಬೆಳಗ್ಗೆ ಭಜನಾ ಸೇವೆ ನಡೆದು ಬಳಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಪ್ರಾರಂಭಗೊಂಡಿತು. ಬಳಿಕ ಕೇಂದ್ರ ಒಕ್ಕೂಟದ

ಹಿರಿಯ ಪತ್ರಕರ್ತ ದೊಡ್ಡಬೊಮಯ್ಯ ಇನ್ನಿಲ್ಲ

ಬೆಂಗಳೂರು, ಡಿ.20- ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷ ದೊಡ್ಡ ಬೊಮಯ್ಯ ಅವರು ಇಂದು ನಿಧನರಾಗಿದ್ದಾರೆ.ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದ ದೊಡ್ಡಯ್ಯ ಮತ್ತು ಚಿಕ್ಕಮ ದಂಪತಿಯ ಪುತ್ರರಾದ ದೊಡ್ಡಬೊಮಯ್ಯ ಅವರು ಈ ಮೊದಲು ಸಂಜೆವಾಣಿ ಮತ್ತು ಪ್ರಸ್ತುತ ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ

ಸರಸ್ವತೀ ವಿದ್ಯಾಲಯ ಸಮೂಹ ಸಂಸ್ಥೆಗಳು ಕಡಬ

ಸರಸ್ವತೀ ವಿದ್ಯಾಲಯ ಸಮೂಹ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವು ಡಿಸೆಂಬರ್ ೧೬ರಂದು ಹನುಮಾನ್ ನಗರದ ಮೈದಾನದಲ್ಲಿ ನಡೆಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ನಿಕಟಪೂರ್ವ ಸಂಚಾಲಕರು, ಪ್ರಸ್ತುತ ವಿವೇಕಾನಂದ ವಿದ್ಯಾವರ್ಧಕ ಸಂಘದ ಪುತ್ತೂರು (ರಿ.) ಇದರ ಸಹಕಾರ್ಯನಿರ್ವಹಣಾಧಿಕಾರಿಯಾಗಿರುವ ಶ್ರೀ ವೆಂಕಟ್ರಮಣರಾವ್ ಮಂಕುಡೆ ವಹಿಸಿ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು.ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿದ

ಕ್ಯಾನ್‌ಕೋಸ್ ಗೀವ್‌ಅವೇ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಮೂಲ್ಕಿಯ ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್ ಸೋಶಿಯಲ್ ಮೀಡಿಯಾದಲ್ಲಿ ಆಯೋಜಿಸಿದ ಸ್ಪರ್ಧೆ ಕ್ಯಾನ್‌ಕೋಸ್ ಗೀವ್‌ಅವೇಯಲ್ಲಿ ಸುರೇಶ್ ಪೂಜಾರಿ ಬೈಲೂರುರವರು ವಿಜೇತರಾದರು. ಬಹುಮಾನವನ್ನು ಮೂಲ್ಕಿಯ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಹರ್ಷರಾಜ್ ಶೆಟ್ಟಿ ಜಿ.ಎಂ ಹಾಗೂ ಮೂಲ್ಕಿ ನಾಲ್ಕು ಪಟ್ಣ ಮೊಗವೀರ ಸಭಾ ಅಧ್ಯಕ್ಷರಾದ ಚಂದ್ರಕಾಂತ ಶ್ರಿಯಾನ್ ವಿತರಿಸಿದರು.ಈ ಸಂದರ್ಭದಲ್ಲಿ ಹೊಸಅಂಗಣ ಪತ್ರಿಕೆಯ ಸಂಪಾದಕರಾದ ಹರೀಶ್ಚಂದ್ರ ಸಾಲ್ಯನ್, ಉದಯ ಅಮೀನ್ ಮಟ್ಟು, ಹೆಜಮಾಡಿ ಪಂಚಾಯತ್

ಪುತ್ತೂರಿನಲ್ಲಿ ಡಿ.20 ರಂದು ‘ಕಲಾರ್ಣವ-2025’ ಗಡಿ-ಸಂಸ್ಕೃತಿ ಉತ್ಸವ

ಪುತ್ತೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ದ.ಕ. ಜಿಲ್ಲಾಡಳಿತ ವತಿಯಿಂದ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.) ಪುತ್ತೂರು ಇದರ ಸಹಯೋಗದಲ್ಲಿ ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇವರ ಸಹಕಾರದಲ್ಲಿ ಗಡಿ-ಸಂಸ್ಕೃತಿ- ಉತ್ಸವದ ಅಂಗವಾಗಿ ‘ಕಲಾರ್ಣವ-2025’ ಭಾವ-ರಾಗ-ತಾಳ ಕಾರ್ಯಕ್ರಮ ಡಿಸೆಂಬರ್‌ 20 ರಂದು ಸಂಜೆ 4.30 ಗಂಟೆಯಿಂದ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ಸಂಜೆ

ರೋಟರಿ ಕ್ಲಬ್ ಪುತ್ತೂರು ಯುವದಿಂದ ಒಂಟಿ ಮಹಿಳೆಯ ರಕ್ಷಣೆ – ಪುನರ್ವಸತಿ

ಪುತ್ತೂರು:ಕಳೆದ ಎರಡು ದಿನಗಳಿಂದ ಪುತ್ತೂರಿನ ಬಸ್‌ ನಿಲ್ದಾಣ ಹಾಗೂ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಆಶ್ರಯವಿಲ್ಲದೆ ತಂಗುತ್ತಿದ್ದ ಒಂಟಿ ಮಹಿಳೆಯೊಬ್ಬರನ್ನು ರೋಟರಿ ಕ್ಲಬ್ ಪುತ್ತೂರು ಯುವದ ಮಾನವೀಯ ಕಾರ್ಯಚಟುವಟಿಕೆಯ ಮೂಲಕ ರಕ್ಷಿಸಿ, ಸೂಕ್ತ ಪುನರ್ವಸತಿ ಕಲ್ಪಿಸಿದ ಘಟನೆ ಸಮಾಜಕ್ಕೆ ಆಶಾಕಿರಣವಾಗಿ ಪರಿಣಮಿಸಿದೆ. ರೋಟರಿ ಕ್ಲಬ್ ಪುತ್ತೂರು ಯುವದ ಮಾಜಿ ಅಧ್ಯಕ್ಷರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದರೂ ಈಗಾಗಲೇ ಸುಮಾರು 150ಕ್ಕೂ ಅಧಿಕ

ಅಂತರ್‌ಜಿಲ್ಲಾ ಮಾಸ್ಟರ್ಸ್ ಕ್ರೀಡಾಕೂಟ: ಪುತ್ತೂರಿನ ಧೀರಜ್ ಕೆಮ್ಮಿಂಜೆರವರಿಗೆ 1 ಚಿನ್ನ, 1 ಬೆಳ್ಳಿಪದಕ

ಪುತ್ತೂರು: ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದ.ಕ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನೊಳಗೊಂಡ ಅಂತರ್ ಜಿಲ್ಲಾ ಮಾಸ್ಟರ್ಸ್ ಕ್ರೀಡಾ ಕೂಟದಲ್ಲಿ ಪುತ್ತೂರಿನ ಧೀರಜ್ ಕೆಮ್ಮಿಂಜೆಯವರು ಶಾಟ್‌ಪುಟ್ ಮತ್ತು 100 ಮೀ ಓಟದಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ. ಇವರು ಜಯಪ್ರಕಾಶ್ ಮರೀಲ್ ಮತ್ತು ಉಷಾರಾಣಿ ದಂಪತಿಯ ಪುತ್ರ. ಇವರು ರಾಮಕ್ಷತ್ರಿಯ ಸೇವಾ ಸಂಘ ಪುತ್ತೂರಿನ ಸದಸ್ಯ ಹಾಗೂ ರಾಮಕ್ಷತ್ರಿಯ ಯುವ ವೃoದದ ಸದಸ್ಯರು ಆಗಿರುತ್ತಾರೆ.

ಶಾಸಕ ಅಶೋಕ್ ರೈ ಬ್ಯಾನರ್ ಗೆ ಹಾನಿ
ಆರೋಪಿಗಳ ಬಂಧಿಸಿ: ಯುವಕಾಂಗ್ರೆಸ್ ನಿಂದ ಮನವಿ

ಪುತ್ತೂರು; ನರಿಮೊಗರು ಗ್ರಾಮದ ಶಿಬರ ನಡುವಾಲ್ ಎಂಬಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಅಭಿನಂದನೆ ಕೋರಿ ಹಾಕಲಾದ ಬ್ಯಾನರ್ ಗೆ ಕಿಡಿಗೇಡಿಗಳು ಹಾನಿ ಮಾಡಿದ್ದು ಆರೋಪಿಗಳನ್ನು ತಕ್ಷಣ ಬಂಧಿಸುವAತೆ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಖಿಲ್ ಕಲ್ಲಾರೆ ಪೊಲೀಸರಿಗೆ ಮನವಿ ನೀಡಿದ್ದಾರೆ.ಆ ಭಾಗದಲ್ಲಿ ಬಹು ವರ್ಷಗಳಿಂದ ರಸ್ತೆ ಬೇಡಿಕೆ ಇತ್ಗು.ಇಷ್ಟು ವರ್ಷ ಯಾರಿಂದಲೂ ಆ ಭಾಗದ ರಸ್ತೆ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗಿರಲಿಲ್ಲ. ಶಾಸಕರು ಮುತುವರ್ಜಿ

ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾಗಿ ನಾಗೇಶ್ ಟಿ.ಎಸ್, ಮಚ್ಚಿಮಲೆ ವಿರೂಪಾಕ್ಷ ಭಟ್ ನೇಮಕ

ಪುತ್ತೂರು:ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಸ್ಥಾನಕ್ಕೆ ಮತ್ತಿಬ್ಬರಿಗೆ ಅವಕಾಶ ನೀಡಲಾಗಿದೆ. ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ನಾಗೇಶ್ ಟಿ.ಎಸ್ ಮತ್ತು ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿರುವ ಮಚ್ಚಿಮಲೆ ವಿರೂಪಾಕ್ಷ ಭಟ್ ಅವರನ್ನು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾಗಿ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಅವರು ನೇಮಕ ಮಾಡಿದ್ದಾರೆ. ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾಗಿದ್ದ ಸುನಿಲ್ ದಡ್ಡು ಅವರು ಗ್ರಾಮಾಂತರ ಮಂಡಲದ ಪ್ರಧಾನ