ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಹಾಗೂ ಕೃಷಿಬಿಂಬ ಪತ್ರಿಕೆಯ ಸಂಪಾದಕರಾದ ರಾಧಾಕೃಷ್ಣ ತೋಡಿಕಾನ ಅವರು ಆಗಮಿಸಿದ್ದು, ಅವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು “ಪತ್ರಿಕೆ ಹಾಗೂ ಸುದ್ದಿ
ಕಾರ್ಕಳ ಪುರಸಭಾ ವ್ಯಾಪ್ತಿಯ ಕರಿಯಕಲ್ಲು ಎಂಬಲ್ಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಶವಸಂಸ್ಕಾರದ ವೇಳೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಉರುಳಿ ರುದ್ರಭೂಮಿಯ ಮೇಲ್ಟಾವಣಿಗೆ ಬಿದ್ದಿರುವ ಘಟನೆ ನಡೆದಿದೆ. ಮರ ಉರುಳಿ ಬಿದ್ದ ಪರಿಣಾಮವಾಗಿ ಅಂದಾಜು 50 ಸಾ. ರೂ. ನಷ್ಟ ಸಂಭವಿಸಿದೆ. ರೆಂಜಾಳ ಮತ್ತು ಸಾಣೂರು ಗ್ರಾಮದ ಮೃತದೇಹಗಳನ್ನು ಸುಡುವ ವೇಳೆ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ರುದ್ರಭೂಮಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಕಾಶ್ ರಾವ್,
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಡೆಂಗ್ಯೂ ಬಾದಿಸದಂತೆ ಎಚ್ಚರಿಕೆ ವಹಿಸಬೇಕಾಗಿರುವುದನ್ನು ಗಮನಿಸಿ ಮೇಯರ್ ಸುಧೀರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ಡೆಂಗ್ಯೂ ನಿಮೂ೯ಲನೆ ಸಮಿತಿಯ ಸಭೆ ಜರಗಿತು. ಸಭೆಯಲ್ಲಿ ಮಾತನಾಡಿದ ಮೇಯರ್ ರವರು ಡೆಂಗ್ಯೂಯನ್ನು ತಡೆಗಟ್ಟಲು ಮೊತ್ತ ಮೊದಲನೇಯದಾಗಿ ಸೊಳ್ಳೆ ಉತ್ಪತ್ತಿಯಾಗುವುದನ್ನು ತಡೆಯಬೇಕು. ಪಾಲಿಕೆಯ ಎಂ.ಪಿ.ಡಬ್ಲ್ಯೂ ಕಾಯ೯ಕತ೯ರು ಮನೆ ಮನೆ ಭೇಟಿ ನೀಡಿ ಮನೆಯ ಸುತ್ತ ಮುತ್ತಲುನಲ್ಲಿರುವ
ಮಂಗಳೂರಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ಕಣಿಯ ಮನೆಯೊಂದರಲ್ಲಿ ಸೋಮವಾರ ರಾತ್ರಿ ಕಳವು ನಡೆದಿದೆ. ಮನೆಮಂದಿ ಮಲಗಿದ್ದಾಗ ಕಿಟಕಿ ಮುರಿದು ಚಿನ್ನಾಭರಣ ಕಳವು ಮಾಡಲಾಗಿದೆ. ಅಲ್ಲದೆ ಕಳ್ಳರು ಕಾರನ್ನು ಕೂಡ ಕಳವು ಮಾಡಿದ್ದಾರೆಂದು ತಿಳಿದುಬಂದಿದೆ. ಕಳೆದ ಶನಿವಾರ ನಗರದ ಕೋಡಿಕಲ್ ಬಳಿ ಕಳ್ಳತನ ನಡೆದಿತ್ತು. ಚಡ್ಡಿಗ್ಯಾಂಗ್ ಆ ಕೃತ್ಯ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಅದೇ ತಂಡ ಕೋಟೆಕಣಿಯಲ್ಲಿಯೂ ಕೃತ್ಯ ಎಸಗಿದೆ ಎಂದು ಅಂದಾಜಿಸಲಾಗಿದೆ.
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯ ಹಲವೆಡೆ ಮನೆಗಳು ಜಲಾವೃತಗೊಂಡಿದೆ.ಕರಂಬಳ್ಳಿ, ಮೂಡುನಿಡಂಬೂರು, ಕೊಡವೂರು ಭಾಗದಲ್ಲಿ ನೆರೆ ಸೃಷ್ಟಿಯಾಗಿದೆ. ಕರಂಬಳ್ಳಿ ಭಾಗದಲ್ಲಿ, ಬನ್ನಂಜೆ ಮೂಡನಿಡಂಬೂರು ಕೆಲವು ಮನೆಗಳು ಜಲಾವೃತಗೊಂಡಿದೆ. ಇಂದ್ರಾಣಿ ನದಿ ಹರಿಯುವ ಪಾತ್ರದಲ್ಲಿ ಗುಂಡಿಭಾಗದಲ್ಲಿ ತೋಟ, ಗದ್ದೆಗಳು ಜಲಾವೃತಗೊಂಡಿದೆ. ಭಾರಿ ಮಳೆಯಿಂದ ನಗರದಲ್ಲಿನ ಮಳೆನೀರು ತೋಡು ತುಂಬಿ ಹರಿಯುತ್ತಿದ್ದು ಇದರಿಂದ ಈ ಪರಿಸರದ
ಪುತ್ತೂರು: ಮನೆ ಕಟ್ಟುವಾಗ ಅಗತ್ಯವಾಗಿ ಬೇಕಾದ 9/11 ಪತ್ರ ಗ್ರಾಪಂ ಕಚೇರುಯಲ್ಲೇ ನೀಡುವಂತೆ ಹಿಂದಿನ ಸಿದ್ದರಾಮಯ್ಯ ಸರಕಾರ ಆದೇಶ ಮಾಡಿತ್ತು ಆದರೆ ಹಿಂದಿನ ಬೊಮ್ಮಾಯಿ ನೇತೃತ್ಬದ ಬಿಜೆಪಿ ಸರಕಾರ ಅದನ್ನು ಮುಡಾಗೆ ಶಿಫ್ಟ್ ಮಾಡಿ ಜನರಿಗೆ ತೊಂದರೆ ಕೊಟ್ಟಿದ್ದಾರೆ ಎಂದು ಶಾಸಕ ಅಶೋಕ್ ರೈ ಹೇಳಿದರು.ಅವರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಕಾಂಗ್ರೆಸ್ ಸರಕಾರ ಎಂದಿಗೂ ಜನರಿಗೆ ತೊಂದರೆ ಕೊಡುವುದೇ ಇಲ್ಲ. ಬಿಜೆಪಿ ಸರಕಾರ
ಪುತ್ತೂರು: ನೂತನ ಆಧಾರ್ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಪುತ್ತೂರು ತಾಲೂಕು ಕಚೇರಿಯಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ನೂತನ ಆಧಾರ್ ಕೇಂದ್ರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪುತ್ತೂರು ತಾಲೂಕು ಕಚೇರಿಯಲ್ಲಿ ಆಧಾರ್ ಕೇಂದ್ರವನ್ನು ತೆರೆಯಲಾಗಿದೆ. ಆಧಾರ್ ಕಾರ್ಡ್ ಮಾಡಿಸಲು ಬೆಳಿಗ್ಗೆ 5 ಗಂಟೆಗೆ ಎದ್ದು ಅಂಚೆ ಕಚೇರಿ ಮುಂದೆ ಇನ್ನು ಕ್ಯೂ ನಿಲ್ಲುವ ಅಗತ್ಯವಿಲ್ಲ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ನೂತನ ಕೇಂದ್ರದಲ್ಲಿ 18 ವರ್ಷ
ಮಂಗಳೂರು: ಖ್ಯಾತ ವಕೀಲರು ಮತ್ತು ನೋಟರಿ ಆಗಿರುವ ಮೂಡಬಿದಿರೆ ಚೌಟರ ಅರಮನೆಯ ಡಾ.ಅಕ್ಷತಾ ಆದರ್ಶ್ ಅವರು ಬರೆದ ಸರಳ ಕಾನೂನುಗಳ ಅರಿವಿಲ್ಲದೆ ಮೋಸ ಹೋಗದಿರಿ ಎಂಬ ಕಾನೂನು ಮಾಹಿತಿ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮವು ಜುಲೈ 7ರಂದು ನಗರದ ಎಂ.ಜಿ ರಸ್ತೆಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ಜುಲೈ 7ರಂದು ಬೆಳಿಗ್ಗೆ 10.15ಕ್ಕೆ ಸರಿಯಾಗಿ ನಡೆಯಲಿರುವ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ
ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿ 2024 2025 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭವು ಶಾಲಾ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪುತ್ತೂರು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ರವರು ಮಾತನಾಡಿ ಇಂದಿನ ಎಳೆಯರು ನಾಡಿನ ನಾಳಿನ ನಾಯಕರು. ಆ ನಿಟ್ಟಿನಲ್ಲಿ ಬಾಲ್ಯದಲ್ಲಿಯೇ ಅವರಿಗೆ ಪ್ರಜಾಪ್ರಭುತ್ವದ ನೈಜ
ವಿದ್ಯರ‍್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವನಹೋತ್ಸವವನ್ನು ಆಚರಿಸಲಾಯಿತು . ಗಿಡಗಳನ್ನು ನೆಟ್ಟು ಬೆಳೆಸುವುದು ಇಂದಿನ ಯುವ ಜನಾಂಗದ ಆದ್ಯ ರ‍್ತವ್ಯ ಆಗಿರುತ್ತದೆ. ಕರ‍್ಯಕ್ರಮದಲ್ಲಿ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ, ನರ‍್ದೇಶಕಿಯಾದ ಶ್ರೀಮತಿ ಮಮತಾ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀಮತಿ ಸುಜಾತ ಹಾಗೂ ಸಂಸ್ಥೆಯ ಉಪನ್ಯಾಸಕರು, ಉಪನ್ಯಾಸಕೇತರರು, ವಿದ್ಯರ‍್ಥಿಗಳು ಉಪಸ್ಥಿತರಿದ್ದರು.