ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಮಂಗಳೂರು ತಾಲೂಕಿನ ಬಜ್ಪೆ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಶಿವರಾಮ್ ಪೂಜಾರಿಯವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಜೊತೆ
ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ
ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೋಪೇಂದ್ರ ಯಾದವ್ ರವರನ್ನು ಇಂದು ನಳಿನ್ ಕುಮಾರ್ ಕಟೀಲ್ ರವರು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ, ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಅತ್ಯಾದುನಿಕ ವೈದ್ಯಕೀಯ ಉಪಕರಣಗಳು, ಎಂ.ಆರ್.ಐ. ಘಟಕ, ಸಿ.ಟಿ. ಸ್ಕಾನಿಂಗ್ ಯಂತ್ರಗಳ ಅಳವಡಿಕೆ, ತಜ್ಞ ವೈದ್ಯರ ಹಾಗೂ ಇತರೆ
ನಗರದ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.11ರಿಂದ 18ರವರೆಗೆ ಭಾರೀ ವಿಜೃಂಭಣೆಯ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಅದರ ಪೂರ್ವಸಿದ್ಧತೆಯ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಮಹಾನಗರ ಪಾಲಿಕೆ, ಆರೋಗ್ಯ, ಪೊಲೀಸ್ ಹಾಗೂ ಮೆಸ್ಕಾಂ ಅಧಿಕಾರಿಗಳ ಸಭೆ ನಡೆಸಿದರು. ಈ ಬಾರಿ ಬ್ರಹ್ಮಕಲಶೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಆಗಮಿಸಲಿದ್ದಾರೆ. ಅದರಲ್ಲೂ ವಿಶೇಷವಾಗಿ ನಡೆಯಲಿರುವ ನೂತನ ಬ್ರಹ್ಮರಥದ
ದ. ಕ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಜನವರಿ 11ರಂದು ಮಧ್ಯಾಹ್ನ ಸುಮಾರು ೧-೦೦ ಗಂಟೆಯ ಸಮಯಕ್ಕೆ ಮಹಿಳೆಯೊಬ್ಬರಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಬಗ್ಗೆ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ ಪತ್ತೆಯ ಬಗ್ಗೆ ರಚಿಸಲಾದ ವಿಶೇಷ ತನಿಖಾ ತಂಡವು ಸುಲಿಗೆ ಮಾಡಿದ ನೌಶಾದ್ ಬಿ ಎ ನರಿಮೊಗರು, ಸುಲಿಗೆಗೆ ಸಹಕರಿಸಿದ ಚಂದ್ರಮೋಹನ್ ಉದ್ಯಾವರ, ಎಂಬವರನ್ನು
ಬಂಟ್ವಾಳದ ಅಮ್ಟೂರು ಗ್ರಾಮದ ಕರಿಂಗಾಣದಲ್ಲಿರುವ ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯದಲ್ಲಿ ಶ್ರೀ ಮಂತ್ರದೇವತೆ, ಸ್ವಾಮಿ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ ವಾರ್ಷಿಕ ಕೋಲೋತ್ಸವವು ಫೆ.10 ಮತ್ತು 11 ರಂದು ನಡೆಯಲಿದೆ. ಕಟ್ಟೆಮಾರು ಶ್ರೀ ಮಂತ್ರದೇವತಾ ಸಾನಿಧ್ಯ.. ಬೇಡಿ ಬಂದ ಭಕ್ತರ ಇಷ್ಟರ್ಥಗಳನ್ನು ಈಡೇರಿಸೋ ಪುಣ್ಯ ಕ್ಷೇತ್ರ.. ಕ್ಷೇತ್ರದಲ್ಲಿ ಇದೇ ಬರುವ ಫೆ.೧೦ರಂದು ದೊಂದಿ ಬೆಳಕಿನಲ್ಲಿ ಶ್ರೀ ಮಂತ್ರದೇವತೆ ದೈವದ ವೈಭವದ ವಾರ್ಷಿಕ ಕೋಲೋತ್ಸವಹಾಗೂ ೧೧ರಂದು
ಬೈಂದೂರು ತಾಲೂಕಿನ ಗಂಗೊಳ್ಳಿ, ಮ್ಯಾಂಗನೀಸ್ ರೋಡ್ ಬಳಿ ಲಕ್ಷಾಂತರ ರೂಪಾಯಿ ಸೀಸ ಕಳ್ಳತನ ಮಾಡಿದ ಘಟನೆ ನಡೆದಿದೆ. ಅಕ್ಷಯ ಖಾರ್ವಿ ಎಂಬವರಿಗೆ ಸೇರಿದ ಅಂಗಡಿಯಾಗಿದ್ದು, ಕಳ್ಳಲು ನುಗ್ಗಿ ಲಕ್ಷಾಂತ ರೂಪಾಯಿ ಮೌಲ್ಯದ ಸೀಸ ಎಗರಿಸಿ ಪರಾರಿಯಾಗಿದ್ದರು. ಕಳ್ಳರ ಕೈಚಳಕದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಪೊಲೀಸ್ ಕಾರ್ಯಾಚರಣೆಯಲ್ಲಿ ಓರ್ವನನ್ನು ಬಂಧಿಸಲಾಗಿದೆ. ಕಳ್ಳತನದಲ್ಲಿ ಭಾಗಿಯಾಗಿದ್ದ ಅಶ್ಫಕ್ ನನ್ನು ಗಂಗೊಳ್ಳಿ ಪೋಲಿಸರು
ಬಜಪೆ: ಗುರುಪುರ ಫಲ್ಗುಣಿ ನದಿಯ ಸೇತುವೆ ಸಮೀಪದಿಂದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಳಲಿ ಮಟ್ಟಿ ತಿಮ್ಮೊಟ್ಟು ನಿವಾಸಿ ಚೇತನ್ ಪೂಜಾರಿ ( 27) ಎಂದು ತಿಳಿದು ಬಂದಿದೆ. ಗುರುವಾರ ಸಂಜೆಯಿಂದ ಗುರುಪುರ ಫಲ್ಗುಣಿ ನದಿ ಸೇತುವೆಯಲ್ಲಿ ಬೈಕ್ ವೊಂದು ನಿಲ್ಲಿಸಿವ ಕುರಿತು ಬಜ್ಪೆ ಪೊಲೀಸರಿಗೆ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಬೈಕ್ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದಾಗ
ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಚಿಕ್ಕಮಂಗಳೂರು ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಗುಣಶೇಖರ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 22ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ ಸದಸ್ಯರಾದ ರತ್ನಾಕರ್ ಸಾಲ್ಯಾನ್ ಗೋವಾ,ಗಣೇಶ್ ಪೂಜಾರಿ,ವಾಸು ಪೂಜಾರಿ,ಮಹಿಳಾ ಘಟಕದ ಅಧ್ಯಕ್ಷರಾದ
ಮೂಲ್ಕಿಯ ಹಳೆಯಂಗಡಿಯ ಬಳಿ ರಕ್ತೇಶ್ವರ ಕೋಲ ಕಟ್ಟುವ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡು ದೈವನರ್ತಕ ಸಾವನ್ನಪ್ಪಿದ ಘಟನೆ ನಡೆದಿದೆ. ದೈವನರ್ತಕ ಪದವಿನಂಗಡಿಯ ನಿವಾಸಿಯಾಗಿದ್ದು, ಅಶೋಕ್ ಬಂಗೇರಾ ಎಂದು ತಿಳಿದುಬಂದಿದೆ. ಪದವಿನಂಗಡಿಯ ಕೊರಗಜ್ಜ ದೈವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಾತ್ರವಲ್ಲದೆ ದೈವಾರಾಧನೆಯಲ್ಲಿ ಅದ್ಭುತ ಸೇವೆಯನ್ನು ಮಾಡುತ್ತಾ, ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಇದ್ದು ಅನೇಕ ಯುವ ಸಮೂಹಕ್ಕೆ ಮಾದರಿಯಾಗಿದ್ದರು.




























