Home Archive by category mangaluru (Page 5)

ವಿಶ್ವಬ್ರಾಹ್ಮಣ ಯುವ ಸಂಘಟನೆ (ರಿ.)ಚತುರ್ಥ ಬಾರಿಯ ಸಾಮೂಹಿಕ ವಿವಾಹ ಹಾಗೂ ಸಭಾ ಕಾರ್ಯಕ್ರಮ

ಕಾಪು: ವಿಶ್ವಬ್ರಾಹ್ಮಣ ಯುವ ಸಂಘಟನೆ (ರಿ.)ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿ, ಉಡುಪಿ ಜಿಲ್ಲೆ ದಶಮಾನೋತ್ಸವ ಸಂಭ್ರಮಹಾಗೂ ಚತುರ್ಥ ಬಾರಿಯ ಸಾಮೂಹಿಕ ವಿವಾಹ ಹಾಗೂ ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಸಂಗಮ ಡಿ.10ರಂದು ನಡೆಯಲಿದೆ. ಕಟಪಾಡಿ ಕಾಳಿಕಾಂಬ ವಿಶ್ವಕರ್ಮೇಶ್ವರ ದೇವಸ್ಥಾನದಲ್ಲಿ ವಿಶ್ವ ಬ್ರಾಹ್ಮಣ ಸಂಘಟನೆಯ ದಶಮಾನೋತ್ಸವ ಸಂಭ್ರಮ ಹಾಗೂ ಚತುರ್ಥ ಬಾರಿಯ

ಹಾಡುಗಳ ಮೂಲಕ ತುಳು ಅಭಿರುಚಿ ಮೂಡಿಸಲು ಸಾಧ್ಯ: ಭಾಸ್ಕರ್ ತೊಕ್ಕೊಟ್ಟು

ಮಂಗಳೂರು : ತುಳು ಭಾಷಾ ಕಲಿಕೆ ಮತ್ತು ಭಾಷಾಭಿಮಾನ ಮೂಡಿಸುವ ನಿಟ್ಟಿನಲ್ಲಿ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿ ಕೊಂಡಿರುವ “ಡೆನ್ನ ಡೆನ್ನಾನ-ಪದ ಪನ್ಕನ” ಅಭಿಯಾನವು ಮಹತ್ವಪೂರ್ಣವಾಗಿದೆಯೆಂದು ಏಕಲವ್ಯ ಪ್ರಶಸ್ತಿ ವಿಜೇತ ಅಂತರಾಷ್ಟ್ರೀಯ ದೇಹಧಾರ್ಡ್ಯ ಪಟು ಭಾಸ್ಕರ ತೊಕ್ಕೊಟ್ಟು ಅಭಿಪ್ರಾಯಪಟ್ಟರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಸರಕಾರಿ ಪ್ರೌಢಶಾಲೆ ಬಬ್ಬುಕಟ್ಟೆಯ ಜಂಟಿ ಆಶ್ರಯದಲ್ಲಿ ಬಬ್ಬುಕಟ್ಟೆ ಶಾಲೆಯಲ್ಲಿ ಗುರುವಾರದಂದು

ವಿಟ್ಲ ಪಟ್ಟಣ ಪಂಚಾಯತ್‌ ಸ್ಥಾಯಿ ಸಮಿತಿಯ ಎರಡನೇ ಅವಧಿಯ ಅಧ್ಯಕ್ಷ ಅಶೋಕ್‌ ಕುಮಾರ್‌ ಶೆಟ್ಟಿ ಆಯ್ಕೆ

ವಿಟ್ಲ ಪಟ್ಟಣ ಪಂಚಾಯತ್‌ ಸ್ಥಾಯಿ ಸಮಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್‌ ಕುಮಾರ್‌ ಶೆಟ್ಟಿಯವರ ಪದಗ್ರಹಣ ಕಾರ್ಯಕ್ರಮ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಪಾಧ್ಯಕ್ಷ ಪ್ರಸನ್ನ ಮಾರ್ತ ಮತ್ತು ಬಿಜೆಪಿ ಮುಖಂಡರು ಭಾಗಿ. ವಿಟ್ಲ ಪಟ್ಟಣ ಪಂಚಾಯತ್‌ ಸ್ಥಾಯಿ ಸಮಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್‌ ಕುಮಾರ್‌ ಶೆಟ್ಟಿಯವರ ಪದಗ್ರಹಣ ಕಾರ್ಯಕ್ರಮ ಪಟ್ಟಣ ಪಂಚಾಯತ್‌ನ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ

ಡಿ.4 : ಬಬ್ಬುಕಟ್ಟೆ ಸರಕಾರಿ ಶಾಲೆಯಲ್ಲಿ ಡೆನ್ನ ಡೆನ್ನಾನ – ಪದ ಪನ್ಕನ’ ಅಭಿಯಾನ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿಗಳಲ್ಲಿ ತುಳು ಹಾಡುಗಳ ಅಭಿರುಚಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಕಾರ್ಯಗಾರ ಹಾಗೂ ಪ್ರಸ್ತುತಿ ‘ಡೆನ್ನ ಡೆನ್ನಾನ – ಪದ ಪನ್ಕನ’ ಕಾರ್ಯಕ್ರಮ ಉಳ್ಳಾಲ ತಾಲೂಕಿನ ಬಬ್ಬುಕಟ್ಟೆಯ ಸರಕಾರಿ ಪ್ರೌಢಶಾಲೆಯಲ್ಲಿ ಡಿ. 4 ರ ಅಪರಾಹ್ನ 3.00 ಗಂಟೆಗೆ ನಡೆಯಲಿದೆ.ಅಂತರಾಷ್ಟ್ರೀಯ ಖ್ಯಾತಿಯ ದೇಹದಾರ್ಢ್ಯ ಪಟು, ಏಕಲವ್ಯ ಪ್ರಶಸ್ತಿ ವಿಜೇತ ಭಾಸ್ಕರ್ ತೊಕ್ಕೊಟ್ಟು ಅವರು ಕಾರ್ಯಕ್ರಮ

ಕೃಷಿ ಬೆಂಬಲ ಬೆಲೆ ಹೆಚ್ಚಿಸಿ : ಪ್ರಧಾನಿಗೆ ಪತ್ರ ನೀಡಿದ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು, ನ.28: (ಕರ್ನಾಟಕ ವಾರ್ತೆ): ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಪತ್ರ ನೀಡಿದ್ದಾರೆ. ಮುಖ್ಯಮಂತ್ರಿ ಗಳ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಧಾನಿಗೆ ಮನವಿ ಪತ್ರ ನೀಡಿದರು. ಪ್ರಧಾನಿಗಳ ಮಂಗಳೂರು ಭೇಟಿ ಸಂದರ್ಭದಲ್ಲಿ ಅವರಿಗಾಗಿ ಮಾನ್ಯ

ನಾರ್ಲಪಡೀಲ್ ದ.ಕ. ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲ ಮಕ್ಕಳಿಗೂ ದಂತ ಸಂರಕ್ಷಣಾ ಸಲಕರಣೆ ಮತ್ತು ಕ್ರೇಯನ್ಸ ವಿತರಣೆ

ಚೂಂತಾರು ಪ್ರತಿಷ್ಠಾನ ಮತ್ತು ಆರೋಗ್ಯ ಭಾರತಿಯ ಜಂಟಿ ಆಶ್ರಯದಲ್ಲಿ ಗುರುವಾರ ತಾ. 27.11.2025 ರಂದು ನಾರ್ಲಪಡೀಲ್ ದ.ಕ. ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ ಜರಗಿತು. ಚೂಂತಾರು ಪ್ರತಿಷ್ಠಾನದ ಟ್ರಸ್ಟಿಗಳೂ ಆರೋಗ್ಯ ಭಾರತಿಯ ಜಿಲ್ಲಾ ಗೌರವಾಧ್ಯಕ್ಷರೂ ಆದ ಡಾ. ಮುರಲೀ ಮೋಹನ ಚೂಂತಾರು ಅವರು ಮಕ್ಕಳಿಗೆ ದಂತ ಆರೋಗ್ಯ ಸಂರಕ್ಷಣೆಯ ಮಾಹಿತಿಯನ್ನು ನೀಡಿದರು ಹಾಗೂ ಚೂಂತಾರು ಪ್ರತಿಷ್ಠಾನದ ವತಿಯಿಂದ ಶಾಲೆಯ ಎಲ್ಲ

ವಿಟ್ಲ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅವರಣದಿಂದ ದನ ಕಳ್ಳತನ ಪ್ರಕರಣ

ವಿಶ್ವ ಹಿಂದೂ ಪರಿಷದ್‌ ವತಿಯಿಂದ ಭೇಟಿ, ಶೀಘ್ರ ಆರೋಪಿಗಳನ್ನು ಪತ್ತೆ ಹಚ್ಚುವಂತೆ ಪೋಲಿಸ್ ಇಲಾಖೆಗೆ ಮನವಿ ಕೇರಳ ಗಡಿ ಪ್ರದೇಶವಾಗಿರುವ ವಿಟ್ಲದ ಪೆರುವಾಯಿ ಗ್ರಾಮದ ಅಶ್ವಥನಗರ ಬಳಿಯಿರುವ ವ್ಯವಸಾಯ ಸೇವಾ ಸಹಕಾರಿ ಸಂಘದ ಅವರಣದಿಂದ ನಾಲ್ಕು ಗೋವುಗಳ ಕಳ್ಳತನವಾಗಿ ಇಂದಿಗೆ ಆರು ದಿನವಾಗಿದ್ದು ಎಫ್ ಐ ಆರ್ ದಾಖಲಿಸಿ ಇಂದಿಗೆ ನಾಲ್ಕು ದಿನ ಕಳೆದರು ಇಂದಿಗೂ ಗೋವು ಪತ್ತೆಯಾಗಿಲ್ಲ ಈ ನಿಟ್ಟಿನಲ್ಲಿ ಇಂದು ವಿಶ್ವ ಹಿಂದೂ ಪರಿಷದ್‌ ಪುತ್ತೂರು ಜಿಲ್ಲೆಯ ವತಿಯಿಂದ ಗೋವು

2025ರ ಕರ್ನಾಟಕ ಸಿರಿಗನ್ನಡ ಸಿರಿ ರಾಜ್ಯ ಪ್ರಶಸ್ತಿಗೆ ಡಾ.ರಾ.ಶಿರೂರು ಆಯ್ಕೆ

ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಕರ್ನಾಟಕ ಸಿರಿಗನ್ನಡ ಸಿರಿ ರಾಜ್ಯಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ ಎಂದು ದಾವಣಗೆರೆಯ ಕರ್ನಾಟಕ ರಾಜ್ಯ ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆಯ ರಾಜ್ಯಾಧ್ಯಕ್ಷರಾದ ಸಾಲಿಗ್ರಾಮ ಗಣೇಶ್ ಶೆಣೈ ಅವರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ. 2025 ನವಂಬರ್ 23 ರಂದು ದಾವಣಗೆರೆಯಲ್ಲಿ ಇರುವ ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಕಲ್ಯಾಣ ಮಂಟಪದಲ್ಲಿ ನಡೆಯುವ ರಾಜ್ಯ ಮಟ್ಟದ ಸಮಾರಂಭದಲ್ಲಿ

ಹಲವೆಡೆ ಸಂವಿಧಾನ ಪೀಠಿಕೆಯ ತುಳು ಓದು ಅಭಿಯಾನ

ಮಂಗಳೂರು : ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಪೀಠಿಕೆಯನ್ನು ತುಳುವಿನಲ್ಲಿ ಓದುವ ಕಾರ್ಯಕ್ರಮ ಮಂಗಳೂರಿನಲ್ಲಿ ಈ ದಿನ ಹಲವೆಡೆ ನಡೆಯಿತು. ಸಂವಿಧಾನ ಪೀಠಿಕೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭಾಷೆಗೆ ಅನುವಾದಿಸಿ ಫಲಕದ ರೂಪದಲ್ಲಿ ಬಿಡುಗಡೆ ಮಾಡಿತ್ತು. ಮಂಗಳೂರಿನ ತುಳು ಭವನ, ಮಂಗಳೂರು ರಥಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರು ಬಲ್ಮಠ ಸರಕಾರಿ ಪ್ರಥಮ ದರ್ಜೆ ‌ಮಹಿಳಾ ಕಾಲೇಜು, ತುಳು ಪರಿಷತ್ ಮಂಗಳೂರು ಘಟಕ , ಹಂಪನಕಟ್ಟೆ