Home Archive by category Manjeshwara

ಮಂಜೇಶ್ವರ: ಕುಂಬಳೆಯಲ್ಲಿ ಕಾರು ಅಪಘಾತ : ಮಹಿಳೆ ಸಾವು

ಮಂಜೇಶ್ವರ: ಸೋಮವಾರ ಮಧ್ಯಾಹ್ನ ಮಟ್ಟಂ ಶಿರಿಯಾ ಬಳಿ ನಡೆದ ವಾಹನ ಅಪಘಾತದಲ್ಲಿ ಗಾಯಗೊಂಡ 62 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಕಾಇಾಂಗಾಡಿನ ಕೊವ್ವಲ್ಪಳ್ಳಿ ಮಾನ್ಯಾಟ ವಿಷ್ಣುಮೂರ್ತಿ ದೇವಸ್ಥಾನದ ಬಳಿ ನಿವಾಸಿ ನಫೀಸ (62) ಸಾವನ್ನಪ್ಪಿದ ದುರ್ದೈವಿ. ಅಪಘಾತದಲ್ಲಿ ತೀವ್ರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ

ಮಂಜೇಶ್ವರ : ಜ.19ರಿಂದ ಜ.24ರವರೆಗೆ ಶ್ರೀ ಕ್ಷೇತ್ರ ಸಂತಡ್ಕ ಮಾಡದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವ

ಮಂಜೇಶ್ವರ ಕುಳೂರು ಸಂತಡ್ಕದ ಶ್ರೀ ಅರಸು ಸಂಕಲ ದೈವ ಕ್ಷೇತ್ರ ಶ್ರೀ ಕ್ಷೇತ್ರ ಸಂತಡ್ಕ ಮಾಡದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಜ.19ರಿಂದ ಜ.24ರವರೆಗೆ ನಡೆಯಲಿದೆ. ಜ.19ರಿಂದ ಜ.22ರವರೆಗೆ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಜ.23, 24ರಂದುವಾರ್ಷಿಕ ಜಾತ್ರಾ ಮಹೋತ್ಸವವು ನಡೆಯಲಿದೆ. ಜ.16ರಂದು ಗೊನೆಮುಹೂರ್ತ, ಜ.19ರಂದು ಹೊರೆಕಾಣೀಕೆ ಮೆರವಣಿಗೆ, ಧಾರ್ಮಿಕ ಸಭೆ, ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈಭವ

ಕಾಸರಗೋಡು: ಅನಾರೋಗ್ಯದಿಂದ ಬಳಲುತ್ತಿರುವ ಮೇಘಶ್ಯಾಮ್ ಚಿಕಿತ್ಸೆಗೆ ಬೇಕಾಗಿದೆ ದಾನಿಗಳ ಸಹಾಯಹಸ್ತ

ಕಾಸರಗೋಡಿನ ಬಳ್ಳೂರು ರಾಮಚಂದ್ರ ಅಚಾರ್ಯರ ಮಗ ಮೇಘಶ್ಯಾಮ ಎಂಬವರು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದರು. ಕುಟುಂಬಕ್ಕೆ ಆಧಾರವಾಗಿದ್ದ ಇವರು ಮಂಗಳೂರು ವಜ್ರಹಿಲ್ಸ್ ಕದ್ರಿ ರಸ್ತೆಯ ಮಂಗಳಾ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ.ಇವರಿಗೆ ತುರ್ತು ಶಸ್ತ್ರಕ್ರಿಯೆ ನಡೆಸಲು 8.5 ಲಕ್ಷ ರೂ. ಅಗತ್ಯವಿದೆಯೆಂದು ವೈದ್ಯರು ತಿಳಿಸಿದ್ದಾರೆ. ಈ ಮೊತ್ತವನ್ನು ಭರಿಸಲು ಕುಟುಂಬದ ಸದಸ್ಯರಿಗೆ ಸಾಧ್ಯವಾಗದ ಕಾರಣ

ಮಂಜೇಶ್ವರ: ಪೆರಿಯ ಜೋಡಿ ಕೊಲೆ ಪ್ರಕರಣದಲ್ಲಿ ಸಿಪಿಐಎಂ ಮಾಜಿ ಶಾಸಕ ಸೇರಿದಂತೆ 14 ಆರೋಪಿಗಳು ತಪ್ಪಿತಸ್ಥರೆಂದು ತೀರ್ಪು

ಮಂಜೇಶ್ವರ: ಪೆರಿಯ ಜೋಡಿ ಕೊಲೆ ಪ್ರಕರಣದಲ್ಲಿ ಸಿಪಿಐಎಂ ಮಾಜಿ ಶಾಸಕ ಕೆವಿ ಕುಂಞಿರಾಮನ್ ಸೇರಿದಂತೆ 14 ಆರೋಪಿಗಳು ತಪ್ಪಿತಸ್ಥರೆಂದು ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ. ಮೊದಲನೇ ಆರೋಪಿಯಾಗಿ ಸಿಪಿಎಂ ನೇತಾರರಾದ ಎ. ಪೀತಾಂಬರನ್, ಎರಡನೇ ಆರೋಪಿಯಾಗಿ ಸಜಿ ಸಿ ಜಾರ್ಜ್ ಎಂಬ ಸಜಿ, ಮೂರನೇ ಆರೋಪಿಯಾಗಿ ಕೆ.ಎಂ. ಸುರೆಶ್, ನಾಲ್ಕನೇ ಆರೋಪಿಯಾಗಿ ಕೆ ಅನಿಲ್ ಕುಮಾರ್ ಎಂಬ ಅಬು, ಐದನೇ ಆರೋಪಿಯಾಗಿ ಜಿಜಿನ್, ಆರನೇ ಆರೋಪಿಯಾಗಿ ಶ್ರೀರಾಗ್ ಎಂಬ ಕೂಟು, ಏಳನೇ ಆರೋಪಿಯಾಗಿ

ಮಂಜೇಶ್ವರ : ಶಾಲು ಗ್ರೈಂಡರ್ ಗೆ ಸಿಲುಕಿ ಗೃಹಿಣಿಯ ದಾರುಣ ಸಾವು

ಮಂಜೇಶ್ವರ : ಗೃಹಿಣಿಯೊಬ್ಬಳು ಮಕ್ಕಳನ್ನು ಶಾಲೆಗೆ ಕಳಿಸಲು ತಿಂಡಿ ತಯಾರಿಸುವ ತರಾತುರಿಯಲ್ಲಿ ಶಾಲ್ ಗ್ರೈಂಡರ್ ಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾಳೆ. ಬುಧವಾರ ಮುಂಜಾನೆ 7 ಗಂಟೆಯ ಸುಮಾರಿಗೆ ಉಪ್ಪಳ ಗೇಟ್ ಅಪ್ನಾ ಗಲ್ಲಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.ಉಪ್ಪಳ ಗೇಟ್ ಅಪ್ನಾ ಗಲ್ಲಿ ನಿವಾಸಿ ಮುಂಬೈಯಲ್ಲಿ ಉದ್ಯಮಿಯಾಗಿರುವ ಇಬ್ರಾಹಿಂ ಎಂಬವರ ಪತ್ನಿ ಮೈಮೂನ (40) ಸಾವನ್ನಪ್ಪಿದ ದುರ್ದೈವಿ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಮಂಜೇಶ್ವರ : ತೋಡಿಗೆ ಮಗುಚಿದ ಶಾಲಾ ವಾಹನ – ಹಲವರಿಗೆ ಗಾಯ

ಮಂಜೇಶ್ವರ : ಶಾಲಾ ವಿದ್ಯಾರ್ಥಿ ಹಾಗೂ ಅದ್ಯಾಪಿಕೆಯರನ್ನು ಹೇರಿ ಕೊಂಡು ಹೋಗುತ್ತಿದ್ದ ಶಾಲಾ ವಾಹನ ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಮಗುಚಿ ಬಿದ್ದು 6 ವಿದ್ಯಾರ್ಥಿಗಳು ಹಾಗೂ ಒಬ್ಬಳು ಅಧ್ಯಾಪಿಕೆ ಗಾಯಗೊಂಡಿದ್ದಾರೆ. ಮಂಜೇಶ್ವರ ಪಾವೂರಿನಲ್ಲಿ ಕಾರ್ಯಾಚರಿಸುತ್ತಿರುವ ಫಾತಿಮಾ ಆಂಗ್ಲ ಮಾಧ್ಯಮ ಶಾಲೆಯ ವಾಹನ ಶಾಲಾ ವಿದ್ಯಾರ್ಥಿಗಳನ್ನು ಮರಳಿ ಮನೆಗೆ ಕೊಂಡೊಯ್ಯುತ್ತಿರುವ ಮಧ್ಯೆ ಶನಿವಾರ ಸಂಜೆ ಆರ್ವಾರ್ – ಅಂಬುತ್ತಡಿ ರಸ್ತೆಯ ಸೇತುವೆ ಸಮೀಪ ಚಾಲಕನ ನಿಯಂತ್ರಣ

ಖಾಲಿಯ ರಫೀಕ್ ಕೊಲೆ ಪ್ರಕರಣ: ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಮಂಜೇಶ್ವರ : ಉಪ್ಪಳ ಹಿದಾಯತ್ ನಗರದಲ್ಲಿ 2017ರ ಫೆಬ್ರವರಿ 14ರಂದು ನಡೆದ ಶಾಲಿಯ ರಫೀಕ್‌ ಕೊಲೆ ಪ್ರಕರಣದಲ್ಲಿ ಎಲ್ಲಾ ಆರೋಪಿಗಳನ್ನು ಮಂಗಳೂರು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆ ಗೊಳಿಸಿ ತೀರ್ಪಿತ್ತಿದೆ. ಅಂದಿನ ದಿನ ಹಿದಾಯತ್ ನಗರದ ಕ್ಲಬ್‌ವೊಂದರಲ್ಲಿ 1ರಿಂದ 9ನೇ ಆರೋಪಿಗಳು ಒಟ್ಟಾಗಿ ಒಳಸಂಚು ರೂಪಿಸಿಕೊಂಡು, ಟಿಪ್ಪರ್ ಲಾರಿ ಬಳಸಿ ರಫೀಕ್ ಮತ್ತು ಅವನ ಸ್ನೇಹಿತರು ಸಂಚರಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು, ಬಳಿಕ ಪೆಟ್ರೋಲ್ ಪಂಪ್

ಮಂಜೇಶ್ವರದ ಹೆದ್ದಾರಿಯಲ್ಲಿ ವಿದ್ಯುತ್ ಕಂಬ ಅಳವಡಿಕೆ ಅವ್ಯವಹಾರ ಆರೋಪ

ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಗೆ ಅಡ್ಡಲಾಗಿ ಇತ್ತೀಚೆಗೆ ಸ್ಥಾಪಿತವಾಗಿದ್ದ ವಿದ್ಯುತ್ ಕಂಬ ಅಳವಡಿಕೆಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಸ್ಥಳೀಯರಿಂದ ವ್ಯಾಪಕ ಆರೋಪಗಳು ಕೇಳಿ ಬರುತ್ತಿದೆ. ಸರ್ವೀಸ್ ರಸ್ತೆ ನಿರ್ಮಾಣ ಪೂರ್ಣಗೊಂಡ ನಂತರ, ಈ ಪೋಸ್ಟ್‌ಗಳನ್ನು ಕಾಂಕ್ರೀಟೀಕರಣಗೊಳಿಸಿ ಅಳವಡಿಸಲಾಗುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳೀಯರಿಗೆ ಭರವಸೆ ನೀಡಿದ್ದರು. ಆದರೆ ಸೋಮವಾರ ಸಂಜೆ ಏಳು ಗಂಟೆ ಸುಮಾರಿಗೆ ತಲಪಾಡಿಯಿಂದ ಉದ್ಯಾವರ ತನಕ