ಮೂಡುಬಿದಿರೆ : ದ.ಕ ಉಡುಪಿ ಮತ್ತು ಕೊಡಗು ಅಂತರ್ ಜಿಲ್ಲಾ ಮಟ್ಟದ 18ನೇ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕೇಮಾರಿನ ರಶ್ಮಿತಾ ಶೆಟ್ಟಿ ಯವರು ತ್ರಿವಿಧ ಜಿಗಿತ ಪ್ರಥಮ,ಈಟಿ ಎಸೆತದಲ್ಲಿ ಪ್ರಥಮ ಹಾಗೂ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಮಾಸ್ಟರ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಹಲವಾರು ರಾಜ್ಯ ರಾಷ್ಟ್ರ ಮಟ್ಟದ
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ವಾರ್ಷಿಕ (2025) ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು ಮೊಗಸಾಲೆ ಪ್ರತಿಷ್ಠಾನದಿಂದ ನೀಡುವ ‘ಸಾಹಿತ್ಯ ಪ್ರಶಸ್ತಿ’ಯನ್ನು ಕಾಸರಗೋಡಿನ ಸಾಹಿತಿ ರಾಧಾಕೃಷ್ಣ ಕೆ ಉಳಿಯತ್ತಡ್ಕ ಅವರಿಗೆ, ಶ್ರೀಪತಿ ಮಂಜನಬೈಲು ದತ್ತಿನಿಧಿಯ ‘ರಂಗಸನ್ಮಾನ ಪ್ರಶಸ್ತಿ’ಯನ್ನು ಮಂಗಳೂರಿನ ರಂಗಕರ್ಮಿ ಶ್ರೀ ಶಶಿರಾಜ ಕಾವೂರು ಅವರಿಗೆ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸರೋಜಿನಿ ನಾಗಪ್ಪಯ್ಯ ಈಶ್ವರ ಮಂಗಲ ಅವರ ದತ್ತಿನಿಧಿಯ ‘ಯಕ್ಷಗಾನ ಸಾಹಿತ್ಯ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ , ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗದಣದಲ್ಲಿ ಡಿ.25 ಮತ್ತು 26 ರಂದು ನೀನಾಸಂ ತಿರುಗಾಟದ ನಾಟಕಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ.ಡಿ.25 ಗುರುವಾರದಂದು ಖ್ಯಾತ ಲೇಖಕಿ ಬಾನು ಮುಷ್ತಾಕ್ ರವರ ಕತೆಯಾಧಾರಿಸಿ ಡಾ.ಎಂ.ಗಣೇಶ್ ನಿರ್ದೇಶಿಸಿದ ಹೃದಯದ ತೀರ್ಪು ಎಂಬ ನಾಟಕ ಪ್ರದರ್ಶನಗೊಳ್ಳಲಿದೆ. ಡಿ.26 ಶುಕ್ರವಾರದಂದು ಮಲೆಯಾಳ ಮೂಲ ಜಿ. ಶಂಕರ್ ಪಿಳ್ಳೈ ರಚಿಸಿದ ,
ಮೂಡುಬಿದಿರೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಮೂಡುಬಿದಿರೆ ತಾಲೂಕಿನ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗುರುವಾರ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ಮೂಡುಬಿದಿರೆ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಮೂಡುಬಿದಿರೆ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷೆ ಪ್ರಫುಲ್ಲ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲೂಕಿನ
ಮೂಡುಬಿದಿರೆ : ಯುವಕರ ತಂಡವೊಂದು ಪೆಟ್ರೋಲ್ ಬಂಕ್ ನ ಸಿಬಂದಿಗಳಿಗೆ ಹಲ್ಲೆ ನಡೆಸಿದ ಘಟನೆ ಗುರುವಾರ ಸಂಜೆ ಮೂಡುಬಿದಿರೆಯಲ್ಲಿ ನಡೆದಿದೆ. ಹಲ್ಲೆಗೊಳಗಾಗಿರುವ ಸಿಬಂದಿಗಳಾದ ಸುರೇಶ್, ಮೌನೇಶ್ ಮತ್ತು ಪ್ರವೀಣ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಎರಡು ದ್ವಿಚಕ್ರ ವಾಹನದಲ್ಲಿ ಬಂದ ನಾಲ್ವರು ಯುವಕರ ತಂಡವು ಸಿಬಂದಿ ಸುರೇಶ್ ಎಂಬಾತನ ಬಳಿ ಮಾತನಾಡಿ ಹಲ್ಲೆ ನಡೆಸಿದ್ದು ಈ ಸಂದಭ೯ ಅಲ್ಲೇ ಇದ್ದವರು ಹಿಂತಿರುಗಿ ಹೊಡೆದಿದ್ದಾರೆ. ಗಾಯಗೊಂಡಿರುವ
ಮೂಡುಬಿದಿರೆ : ಮೈಸೂರು ವಿಶ್ವವಿದ್ಯಾನಿಲಯವು 2024 – 25 ನೇ ಸಾಲಿನಲ್ಲಿ ನಡೆಸಿದ ಅಂತಿಮ ವರ್ಷದ ಎಮ್. ಎ ಪರೀಕ್ಷೆಯಲ್ಲಿ ಮೂಡುಬಿದಿರೆಯ ಅಯನಾ.ವಿ.ರಮಣ್ ಚಿನ್ನದ ಪದಕದೊಂದಿಗೆ ತೇರ್ಗಡೆಯಾಗಿದ್ದಾರೆ.ಮಾನಸ ಗಂಗೋತ್ರಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಈ ಉನ್ನತ ವ್ಯಾಸಂಗ ನಡೆಸಿದ ಅಯನಾ. ವಿ. ರಮಣ್ ‘ ಅಮೆರಿಕನ್ ಲಿಟರೇಚರ್ ‘ವಿಷಯದಲ್ಲಿ ಗೋಲ್ಡ್ ಮೆಡಲ್ ಗೆದ್ದ ಸಾಧನೆ ಮಾಡಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಂಗ್ಲ
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ ಅವರ ಅಧ್ಯಕ್ಷತೆಯಲ್ಲಿ ೨೦೨೫ರ ಸಾಲಿನ ನಾಲ್ಕು ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಸರಸ್ವತಿ ಬಲ್ಲಾಳ್ ಮತ್ತು ಡಾ.ಸಿ.ಕೆ.ಬಲ್ಲಾಳ್ ದಂಪತಿ ಪ್ರತಿಷ್ಠಾನದಿಂದ ನೀಡುವ ‘ಕರ್ನಾಟಕ ಏಕೀಕರಣದ ನೇತಾರ ಕೆ.ಬಿ.ಜಿನರಾಜ ಹೆಗ್ಡೆ ಸ್ಮಾರಕ ಸಾಂಸ್ಕೃತಿಕ ಪ್ರಶಸ್ತಿ’ಯನ್ನು ಬಳ್ಳಾರಿಯ ಲೋಹಿಯಾ ಪ್ರಕಾಶನದ ಚೆನ್ನಬಸವಣ್ಣ ಅವರಿಗೆ, ಧಾರವಾಡದ ಹಿರಿಯ ಸಾಹಿತಿ ಡಾ.ಜಿ.ಎಂ. ಹೆಗಡೆ ಅವರ ದತ್ತಿನಿಧಿಯ
ಮೂಡುಬಿದಿರೆ: ಮಹಾರಾಷ್ಟ್ರದ ಅಂಧೇರಿಯಲ್ಲಿರುವ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಕಾಂಬ್ಯಾಕ್ಟ್ ಮಾರ್ಷಲ್ ಆರ್ಟ್ಸ್ ಅಕಾಡೆಮಿಯು ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಮೂಡುಬಿದಿರೆಯ ಕರಾಟೆಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಮೂಡುಬಿದಿರೆಯ ಪ್ರಶಾಂತ್ ಬಿ. ಶೆಟ್ಟಿ ಅವರು ಸೀನಿಯರ್ ಬ್ಲಾಕ್ ಬೆಲ್ಟ್ ವಯೋಮಿತಿಯ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿಯ ಪದಕವನ್ನು ಗಳಿಸಿದ್ದಾರೆ. ಮೂಡುಬಿದಿರೆಯ
ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಕರ್ನಾಟಕ ಸಿರಿಗನ್ನಡ ಸಿರಿ ರಾಜ್ಯಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ ಎಂದು ದಾವಣಗೆರೆಯ ಕರ್ನಾಟಕ ರಾಜ್ಯ ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆಯ ರಾಜ್ಯಾಧ್ಯಕ್ಷರಾದ ಸಾಲಿಗ್ರಾಮ ಗಣೇಶ್ ಶೆಣೈ ಅವರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ. 2025 ನವಂಬರ್ 23 ರಂದು ದಾವಣಗೆರೆಯಲ್ಲಿ ಇರುವ ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಕಲ್ಯಾಣ ಮಂಟಪದಲ್ಲಿ ನಡೆಯುವ ರಾಜ್ಯ ಮಟ್ಟದ ಸಮಾರಂಭದಲ್ಲಿ
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾವೇರಿ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರು ತಂಡ ಪ್ರಶಸ್ತಿಯನ್ನು ಪಡೆದುಕೊಂಡು ಒಟ್ಟು 09 ಪದಕಗಳೊಂದಿಗೆ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.ಸ್ಪರ್ಧೆಯ ಫಲಿತಾಂಶ :ಆರ್ಟಿಸ್ಟಿಕ್ ಪೇರ್ : ಬಾಲಕರ ವಿಭಾಗದಲ್ಲಿ ಚಂದ್ರಶೇಖರ ಮತ್ತು ಪೃಥ್ವಿಚಾರ್




























