Home Archive by category moodabidre

ಮೂಡುಬಿದಿರೆ: ಶಿವರಾಮ ಕಾರಂತ ಪ್ರಶಸ್ತಿ ಪ್ರಕಟ

ಮೂಡುಬಿದಿರೆ: ಶಿವರಾಮ ಕಾರಂತ ಪ್ರತಿಷ್ಠಾನ ಕೊಡಮಾಡುವ ಶಿವರಾಮ ಕಾರಂತ ಪ್ರಶಸ್ತಿಗೆ ಕವಿ ಡಾ. ಚಿನ್ನಸ್ವಾಮಿ ಮೂಡ್ನಾಕೂಡು ಬೆಂಗಳೂರು, ಜಾನಪದ ವಿದ್ವಾಂಸ ಪ್ರೊ.ಕೃಷ್ಣಮೂರ್ತಿ ಹನೂರ, ಕನ್ನಡದ ಕೀಲಿಮಣೆ ವಿನ್ಯಾಸಕಾರ ಉಡುಪಿಯ ಕೆ.ಪಿ ರಾವ್ ಹಾಗೂ ಹೆಗ್ಗೋಡಿನ ನಿನಾಸಂ ಸಂಸ್ಥೆಗೆ ನೀಡಲು ಪ್ರತಿಷ್ಠಾನ ನಿರ್ಧರಿಸಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷೆ ಜಯಶ್ರೀ ಅಮರನಾಥ

ಮೂಡುಬಿದಿರೆ: ಧರ್ಮಸ್ಥಳ ಮ್ಯೂಸಿಯಂಗೆ ಮೂಡುಬಿದಿರೆ ಶ್ರೀಗಳ ಕಾರು

ಮೂಡುಬಿದಿರೆ: ಇಲ್ಲಿನ‌ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು 2003 ರಲ್ಲಿ ಖರೀದಿಸಿದ ಟೊಯೋಟಾ ಕ್ವಾಲಿಸ್ ವಾಹನವನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಕಾರ್ ಮ್ಯೂಸಿಯಂಗೆ ಸ್ವಾಮೀಜಿ ವಾಹನ ವರ್ಗಾವಣೆ ಸಹಿ ವರ್ಗಾಹಿಸಿದರು. 108 ಶಾಂತಿ ಸಾಗರ ಆಚಾರ್ಯ ಪಾದರೋಹಣ ಶತಾಬ್ದಿ ಮಹೋತ್ಸವ ಶ್ರೀ ಮಠದ ವತಿಯಿಂದ ವೇಣೂರು ಮಹಾ ಮಸ್ತಕಾಭಿಷೇಕ ಸಂಧರ್ಭ ನೆರವೇರಿಸಿದ ನೆನಪಿನಲ್ಲಿ ಶ್ರೀ ಡಿ ವೀರೇಂದ್ರ ಹೆಗ್ಗಡೆ

ಮೂಡುಬಿದಿರೆ: ರಾಸಾಯನಿಕ ಬಳಸಿದ ಹಣ್ಣುಗಳ ಮಾರಾಟ: ಅಧಿಕಾರಿಗಳಿಂದ ತಪಾಸಣೆ

ಮೂಡುಬಿದಿರೆ: ರಾಸಾಯನಿಕ ಬಳಸಿದ ಹಣ್ಣುಗಳನ್ನು ವಾಹನಗಳಲ್ಲಿ ತಂದು ಮಾರಾಟ ಮಾಡುತ್ತಿದ್ದುದ್ದನ್ನು ಸಾರ್ವಜನಿಕರ ದೂರಿನ ಮೇರೆಗೆ ಸಂಬಂಧಪಟ್ಟ ಅಧಿಕಾರಿಗಳ ತಂಡವು ಶುಕ್ರವಾರ ಮೂಡುಬಿದಿರೆಯಲ್ಲಿ ತಪಾಸಣೆ ನಡೆಸಿ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಕಳೆದ ಕೆಲವು ಸಮಯಗಳಿಂದ ವಿವಿಧ ಹಣ್ಣುಗಳ ಸೀಸನ್ ಸಮಯದಲ್ಲಿ ವಾಹನದಲ್ಲಿ ತಂದು ಮೂಡುಬಿದಿರೆ ಪೇಟೆಯ ರಸ್ತೆ ಬದಿಗಳಲ್ಲಿ ನಿಲ್ಲಿಸಿ ಹಾಗೂ ಮಾರ್ಕೆಟ್ ನಲ್ಲಿ ಮಾರಾಟ ಮಾಡುತ್ತಿದ್ದರು. ರಾಸಾಯನಿಕ

ಮೂಡುಬಿದಿರೆ: SSLC ಫಲಿತಾಂಶ -ರೋಟರಿ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ

ಮೂಡುಬಿದಿರೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರೋಟರಿ ಎಜುಕೇಶನ್ ಸೊಸೈಟಿ ಆಡಳಿತಕ್ಕೊಳಪಟ್ಟ ರೋಟರಿ ಆಂಗ್ಲ ಮಾಧ್ಯಮ ಶಾಲೆಯು ಶೇ.100 ಫಲಿತಾಂಶವನ್ನು ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ 112 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 41 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 67 ವಿದ್ಯಾರ್ಥಿಗಳು ಪ್ರಥಮ ದರ್ಜೆ, ಮೂವರು ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂ ಒರ್ವ ವಿದ್ಯಾರ್ಥಿ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸಂಚಿತಾ ಎಸ್. ಸುವರ್ಣ 613

ಮೇ 9ರಂದು ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟ

2023-24ನೇ ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ 9ರಂದು ಪ್ರಕಟಗೊಳ್ಳಲಿದೆ. ಮಾರ್ಚ್ 25 ರಿಂದ ಎಪ್ರಿಲ್ 06ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶಕ್ಕೆ ಗ್ಯಾರಂಟಿ ಯೋಜನೆ ವಿಸ್ತರಣೆ : ಪದ್ಮಪ್ರಸಾದ್ ಜೈನ್

ಮೂಡುಬಿದಿರೆ: 2004 ರ ಲೋಕಸಭಾ ಚುನಾವಣೆಯಲ್ಲಿ ಯಾವ ಫಲಿತಾಂಶ ಕಾಂಗ್ರೆಸ್ ಗೆ ಸಿಕ್ಕಿತ್ತೋ ಅದೇ ರೀತಿಯ ಫಲಿತಾಂಶ ಈಬಾರಿ ಕಾಂಗ್ರೆಸ್ ನೇತೃತ್ವದ ಐ.ಎನ್.ಡಿ.ಐ.ಎ ಗೆ ಸಿಗಲಿದ್ದು ಸ್ಪಷ್ಟ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಅನುಷ್ಠಾನ ಮಾಡಿರುವ ಎಲ್ಲ ಗ್ಯಾರಂಟಿಗಳನ್ನು ದೇಶದಲ್ಲಿ ಅನುಷ್ಠಾನ ಮಾಡಲಾಗುವುದು ಎಂದು ತರಲಾಗುವುದೆಂದು ಕೆಪಿಸಿಸಿ ರಾಜ್ಯ ವಕ್ತಾರ ಪದ್ಮಪ್ರಸಾದ್ ಜೈನ್ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಮಂಗಳವಾರ

ಮೂಡುಬಿದಿರೆ: ಪಂಜಿನ ಮೆರವಣಿಗೆಯೊಂದಿಗೆ ಮತದಾನದ ಜಾಗೃತಿ

ಮೂಡುಬಿದಿರೆ: ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಮತದಾನ ಮಾಡುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭಾರತ್ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲೆ ಸ್ವೀಪ್ ಸಮಿತಿ ಮೂಡುಬಿದಿರೆ ತಾಲೂಕು ಪಂಚಾಯತ್ ಹಾಗೂ ತಾಲೂಕು ಕಛೇರಿ ನೇತೃತ್ವದಲ್ಲಿ ಮೂಡುಬಿದಿರೆ ಪೇಟೆಯಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಸಹಾಯಕ ಚುನಾವಣಾಧಿಕಾರಿ ರಾಜು ಕೆ., ಮೂಡುಬಿದಿರೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್. ವೆಂಕಟಾಚಲಪತಿ, ಮೂಡುಬಿದಿರೆ ತಹಶೀಲ್ದಾರ್

ಮೂಡುಬಿದಿರೆ: ಗೋವಿಂದ ಭಟ್ ಅವರಿಗೆ ಬಲಿಪ ಭಾಗವತ ಪ್ರಶಸ್ತಿ ಪ್ರದಾನ

ಮೂಡುಬಿದಿರೆ: ಯಕ್ಷಗಾನ ಲೋಕದ ಮೇರು ಭಾಗವತ ದಿ. ಬಲಿಪ ನಾರಾಯಣ ಭಾಗವತ ಅವರ ಮೊದಲ ವರ್ಷದ ಸಂಸ್ಮರಣೆಯ ಅಂಗವಾಗಿ ಹಿರಿಯ ಕಲಾವಿದ ಗೋವಿಂದ ಭಟ್ ಅವರಿಗೆ ಬಲಿಪ ಭಾಗವತ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಾರೂರಿನ ನೂಯಿಯಲ್ಲಿರುವ ಬಲಿಪರ ನಿವಾಸದ ಆವರಣದಲ್ಲಿ ಜರಗಿದ ಕಟೀಲು ಮೇಳದ ಹರಿಕೆ ಬಯಲಾಟದ ರಂಗಸ್ಥಳದಲ್ಲಿ ಮಾನಪತ್ರ, ನಗದು ಗೌರವದೊಂದಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಗೋವಿಂದ ಭಟ್‌ ಅವರು ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ಬಲಿಪರು ಎಂದರೆ ಯಕ್ಷಗಾನ ಯಕ್ಷಗಾನ

ಮೂಡುಬಿದಿರೆ: ವಾಲ್ಪಾಡಿಯಲ್ಲಿ ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ

ಮೂಡುಬಿದಿರೆ: ಭಾರತ ಚುನಾವಣಾ ಆಯೋಗ,‌ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ ಹಾಗೂ ಮೂಡುಬಿದಿರೆ ತಾಲೂಕು ಪಂಚಾಯತ್ ವತಿಯಿಂದ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಳಿಯೂರು ಸುಮಂಗಲಿ ಕ್ಯಾಶ್ಯು ಇಂಡಸ್ಟ್ರೀಸ್ ನಲ್ಲಿ ದುಡಿಯುತ್ತಿರುವ ಕೂಲಿಕಾರ್ಮಿಕರಿಗೆ ಗುರುವಾರ ಸಂಜೆ ಮತದಾನ ಜಾಗೃತಿ ಮೂಡಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್.‌ವೆಂಕಟಾಚಲಪತಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಮತದಾನ‌ದ ಮಹತ್ವವನ್ನು ತಿಳಿಸಿ

ಮೂಡುಬಿದಿರೆ : ಪಿಯುಸಿ ಫಲಿತಾಂಶ : ಆಳ್ವಾಸ್ ಸಾರ್ವತ್ರಿಕ ದಾಖಲೆ

ಮೂಡುಬಿದಿರೆ : ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 682 ವಿದ್ಯಾರ್ಥಿಗಳು 95% ಶೇಕಡಾಕ್ಕಿಂತ ಅಧಿಕ ಅಂಕವನ್ನು ಪಡೆದು ಹೊಸ ದಾಖಲೆ ನಿರ್ಮಿಸಿದ್ದಲ್ಲದೆ ರಾಜ್ಯದ ಟಾಪ್ ಟೆನ್ ರ್ಯಾಂಕ್ನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಒಟ್ಟು 45 ವಿದ್ಯಾರ್ಥಿಗಳು ಸ್ಥಾನವನ್ನು ಪಡೆಯುವ ಮೂಲಕ ಆಳ್ವಾಸ್ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಸಾರ್ವತ್ರಿಕ ದಾಖಲೆಯನ್ನು ನಿರ್ಮಿಸಿದೆ.ಪಿಯುಸಿಯಲ್ಲಿ ಫಲಿತಾಂಶದಲ್ಲಿ