Home Archive by category moodabidre (Page 11)

ಮೂಡುಬಿದಿರೆ ತಾಲೂಕು ಮಟ್ಟದ ಖೋ ಖೋ ಪಂದ್ಯಾಟ : ಆಳ್ವಾಸ್‌ಗೆ ಅವಳಿ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ಜರುಗಿದ ಮೂಡುಬಿದಿರೆ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಮಹಾವೀರ ಪದವಿ ಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜು ಗ್ರಂಥಾಲಯ ಸಹಾಯಕಿಯಾಗಿದ್ದ ಹೇಮಲತಾ ನಿಧನ

ಮೂಡುಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು, ಗ್ರಂಥಾಲಯ ಸಹಾಯಕಿಯಾಗಿದ್ದ ಶ್ರೀಮತಿ ಹೇಮಲತಾ (49) ಅಲ್ಪ ಕಾಲದ ಅಸ್ವಾಸ್ಥ್ಯದಿಂದ ಸೆ 2ರಂದು ನಿಧನ ಹೊಂದಿದರು. ಅವರು ಪತಿಯನ್ನು ಅಗಲಿದ್ದಾರೆ. ಕಳೆದ 10 ವರ್ಷಗಳಿಂದ ಅವರು ಕಾಲೇಜಿನ ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ನಿಧನಕ್ಕೆ ಮಹಾವೀರ ಕಾಲೇಜು ಆಡಳಿತ ಮಂಡಳಿ ಸಂತಾಪ ವ್ಯಕ್ತಪಡಿಸಿದೆ.

ಮೂಡುಬಿದಿರೆ: ವೃದ್ಧೆಯ ಕುತ್ತಿಗೆಯಿಂದ ಚೈನ್ ಎಳೆದು ಪರಾರಿಯಾದ ಖದೀಮರು

ಮೂಡುಬಿದಿರೆ : ದ್ವಿಚಕ್ರ ವಾಹನ ಸವಾರರಿಬ್ಬರು ವೃದ್ಧೆಯೋರ್ವರ ಬಳಿ ದಾರಿ ಕೇಳುವ ನೆಪದಲ್ಲಿ ಮಾತನಾಡಿ ಆಕೆಯ ಕುತ್ತಿಗೆಯಲ್ಲಿದ್ದ 3 ಪವನಿನ ಚಿನ್ನದ ಸರವನ್ನು ಎಗರಿಸಿ ಪರಾರಿಯಾದ ಘಟನೆ ತಾಲೂಕಿನ ಪಡುಮಾರ್ನಾಡು ಗ್ರಾ.ಪಂ.ನ ಮಾರ್ನಾಡಿನಲ್ಲಿಸೋಮವಾರ ಮಧ್ಯಾಹ್ನ ನಡೆದಿದೆ. ಮಾರ್ನಾಡು ವರ್ಧಮಾನ ಬಸದಿ ಬಳಿಯ 82 ರ ವಯಸ್ಸಿನ ವೃದ್ಧೆ ಪ್ರೇಮಾ ಅವರು ತಮ್ಮ ಮನೆಯ ಸಮೀಪದ ಅಂಗಡಿಯಿಂದ ಹಾಲು ಹಾಲು ತರುತ್ತಿದ್ದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಸವಾರರಿಬ್ಬರು

ಮೂಡುಬಿದಿರೆ: ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ದಿನೇಶ್ ಜಿ.ಡಿ ಭಡ್ತಿ

ಮೂಡುಬಿದಿರೆ: ಇಲ್ಲಿ ವಲಯ ಅರಣ್ಯಾಧಿಕಾರಿಯಾಗಿರುವ ದಿನೇಶ್ ಜಿ.ಡಿ.ಅವರು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಭಡ್ತಿ ಹೊಂದಿದ್ದು ಸಿದ್ಧಾಪುರ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ‌.ದಿನೇಶ್ ಅವರು ಮೂಡುಬಿದಿರೆ ವಲಯ ಅರಣ್ಯಾಧಿಕಾರಿಯಾಗಿದ್ದು ಈ ಹಿಂದೆ ಕೂಡಾ ಮೂಡುಬಿದಿರೆಯಲ್ಲಿ ವಲಯಾರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡಿದ್ದರು.ಅಲ್ಲಿಂದ ಕಾರ್ಕಳ ವನ್ಯಜೀವಿ ವಿಭಾಗದ ವಲಯ

ಮೂಡುಬಿದಿರೆ: ಈಕೋ- ಮ್ಯಾಸ್ಟ್ರೋ ಢಿಕ್ಕಿ: ಮರಿಯಾಡಿ ನಿವಾಸಿ ಮೃತ್ಯು

ಮೂಡುಬಿದಿರೆ: ತಾಲೂಕಿನ ಕೋಟೆಬಾಗಿಲು ಬಳಿ ಸೋಮವಾರ ಮಧ್ಯಾಹ್ನ ಈಕೋ-ಮ್ಯಾಸ್ಟ್ರೋ ಢಿಕ್ಕಿಯಾಗಿ ಮರಿಯಾಡಿಯ ನಿವಾಸಿ ಅಹಮದ್ ಬಾವ (50) ಅವರು ಮೃತಪಟ್ಟಿದ್ದಾರೆ.ಮೂಡುಬಿದಿರೆ ಕಡೆಗೆ ಬರುತ್ತಿದ್ದ ಈಕೋ ಕಾರು ಮೂಡುಬಿದಿರೆಯಿಂದ ಮರಿಯಾಡಿ ಕಡೆಗೆ ಹೋಗುತ್ತಿದ್ದ ಮ್ಯಾಸ್ಟ್ರೊ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಮ್ಯಾಸ್ಟ್ರೋ ಸವಾರ ಅಹಮದ್ ಬಾವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ

ಮೂಡುಬಿದಿರೆ : ಗುಡ್ಡ ಕುಸಿದ ಸ್ಥಳಕ್ಕೆ ಮಾಜಿ ಸಚಿವ ಅಭಯಚಂದ್ರ ಜೈನ್ ಭೇಟಿ

ಮೂಡುಬಿದಿರೆ: ಪಾಲಡ್ಕ – ಕಲ್ಲಮುಂಡ್ಕೂರು ಕೂಡು ರಸ್ತೆಯ ಗುಂಡ್ಯಡ್ಕ ಎಂಬಲ್ಲಿ ವಿಪರೀತ ಮಳೆಯಿಂದಾಗಿ ಶನಿವಾರ ರಸ್ತೆಯ ಬದಿಯಲ್ಲಿದ್ದ ಗುಡ್ಡ ಜರಿದು ಬಿದ್ದು, ಜನರು ನಡೆದಾಡುವ ಹಾಗೂ ವಾಹನ ಸಂಚರಿಸುವ ರಸ್ತೆಯು ಸಂಪೂರ್ಣ ಹಾಳಾಗಿದ್ದ ಸ್ಥಳಕ್ಕೆ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಭಾನುವಾರ ಭೇಟಿ ನೀಡಿದರು.ಗುಂಡ್ಯಡ್ಕದಲ್ಲಿ ಎಲ್ಲಾ ಮನೆ ವಿದ್ಯುತ್ ಸಂಪರ್ಕ ಕಡಿದು ಹೋಗಿರುವ ಬಗ್ಗೆ ಮಾಹಿತಿಯನ್ನು ಪಡೆದ ಜೈನ್ ತಕ್ಷಣವೇ ಸಂಬಂಧಪಟ್ಟ ಮೆಸ್ಕಾಂ ಹಾಗೂ

ಮೂಡುಬಿದಿರೆ: ಮಳೆ ಹಾನಿ – ನೀರಿನಲ್ಲಿ ಕೊಚ್ಚಿ ಹೋದ ದನಗಳು

ಮೂಡುಬಿದಿರೆ: ಬುಧವಾರ ರಾತ್ರಿ ಸುರಿದ ವಿಪರೀತ ಮಳೆಗೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಡೆಂಜಾರುವಿನ ಪ್ರಕಾಶ್ ಎಂಬವರ ಮನೆಯ ಕೊಟ್ಟಿಗೆಯಲ್ಲಿದ್ದ 5 ದನಗಳು ನೀರಿನಲ್ಲಿ ಕೊಚ್ಚಿಹೋಗಿದ್ದು ಅದರಲ್ಲಿ 1 ದನ ಅಸುನೀಗಿದೆ.2 ದನಗಳು ವಾಪಾಸು ಬಂದಿದ್ದು ಇನ್ನೆರಡು ದನಗಳು ಕಾಣೆಯಾಗಿರುತ್ತದೆ.ಸ್ಥಳಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲೊಕೇಶ್ ಬಿ., ಸಹಾಯಕ ನಿರ್ದೇಶಕರು(ಗ್ರಾ.ಉ), ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ, ಉಪಾಧ್ಯಕ್ಷೆ ಸುಶೀಲಾ

ಮೂಡುಬಿದಿರೆ : ಅರ್ಚಕ ಅಡಿಗಳ್ ಶ್ರೀನಿವಾಸ ಭಟ್ ನಿಧನ

ಮೂಡುಬಿದಿರೆ : ಪುತ್ತಿಗೆ ಗ್ರಾಮದ ಹಿರಿಯ ಅರ್ಚಕ, ಶತಾಯುಷಿ ಅಡಿಗಳ್ ಶ್ರೀನಿವಾಸ ಭಟ್ (100) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ಮೂವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸುಮಾರು 65 ವರ್ಷಗಳ ಕಾಲ ಸೋಮನಾಥೇಶ್ವರ ಹಾಗೂ ಸಪರಿವಾರ ದೇವರುಗಳ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು.

ಮೂಡುಬಿದಿರೆ: ಕಾಲು ಜಾರಿ ಬಿದ್ದು ಸಮಾಜ ಮಂದಿರ ಸಭಾದ ವಾಚ್ ಮೆನ್ ಸಾವು

ಮೂಡುಬಿದಿರೆಯ ಸಮಾಜ ಮಂದಿರ ಸಭಾದಲ್ಲಿ ವಾಚ್ ಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಕುಮಾರ್ ಹೆಗ್ಡೆ (56 ವ) ಅವರು ಬಿಪಿ ಹೈ ಆಗಿ ಸೋಮವಾರ ಬೆಳಿಗ್ಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕೊಕ್ರಾಡಿಯ ನಿವಾಸಿ ಸುಕುಮಾರ್ ಹೆಗ್ಡೆ ಅವರು ಕಳೆದ 5 ವರ್ಷಗಳಿಂದ ಸಮಾಜ ಮಂದಿರದಲ್ಲಿ ವಾಚ್ ಮೆನ್ ಆಗಿ ರಾತ್ರಿ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದು, ಹಗಲಿನಲ್ಲಿ ಬೇರೆ ಕಡೆಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಅವರಿಗೆ ಉಳಿದುಕೊಳ್ಳಲು ಸಮಾಜ ಮಂದಿರದ ವತಿಯಿಂದಲೇ

ಡಾ. ರಾಮಕೃಷ್ಣ ಶಿರೂರು ಅವರಿಗೆ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿ ಗೌರವ

ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಇವರನ್ನು ಶ್ರೀ ಸಿದ್ದರಾಮೇಶ್ವರ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಿಶ್ವಕನ್ನಡ ಕಲಾ ಸಂಸ್ಥೆ ಮತ್ತು ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ.ರವೀಶ್ (ಅಕ್ಕರ) ಅವರು ತಿಳಿಸಿರುತ್ತಾರೆ. ಶಿಕ್ಷಣ ಕ್ಷೇತ್ರ, ಶಿಕ್ಷಕ ಸಂಘಟನಾ ಕ್ಷೇತ್ರ ಮತ್ತು ಸಾಹಿತ್ಯ ಸಂಘಟನಾ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಸೇವೆಯನ್ನು ಗುರುತಿಸಿ ಈ