ಮೂಡುಬಿದಿರೆ : ಜೆಇಇ ಮೈನ್ಸ್ ಫೆಸ್-1 ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿಯೂ ಉತ್ತಮ ಸಾಧನೆ ಮಾಡಿದ್ದಾರೆ. 53 ವಿದ್ಯಾರ್ಥಿಗಳು 95 ಪರ್ಸಂಟೈಲ್‌ಗಿಂತ ಅಧಿಕ ಅಂಕ ಪಡೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು.ವಿದ್ಯಾರ್ಥಿ ಎಚ್.ಆರ್. ರಜತ್ 99.271023 ಪರ್ಸಂಟೈಲ್
ಮೂಡುಬಿದಿರೆ: ದ.ಕ.ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ಗ್ರಾಮಾಂತರ ಇವುಗಳ ಆಶ್ರಯದಲ್ಲಿ “ಬೇಟಿ ಬಚಾವೋ ಬೇಟಿ ಪಡಾವೋ” ಕಾರ್ಯಕ್ರಮದಡಿ ಜಾಗೃತಿ ಜಾಥಾ, ಅರಿವು ಕಾರ್ಯಕ್ರಮ ಹಾಗೂ ಸಾಧನೆ ಮಾಡಿದ ಹೆಣ್ಣು ಮಕ್ಕಳಿಗೆ ಸನ್ಮಾನ ಕಾರ್ಯಕ್ರಮ ಸಮಾಜ ಮಂದಿರದಲ್ಲಿ ನಡೆಯಿತು. ಮೂಡುಬಿದಿರೆ ತಾಲೂಕು ಉಪ ತಹಶೀಲ್ದಾರ್ ರಾಮ್ ಅವರು ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ನೋಟರಿ ವಕೀಲೆ ಶ್ವೇತಾ
ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ
ಮೂಡುಬಿದಿರೆಯ ಆರಕ್ಷಕರ ಠಾಣೆಯು ಸುಸಜ್ಜಿತವಾಗಿಲ್ಲ, ಪೊಲೀಸರಿಗೆ ಬೇಕಾಗುವ ಮೂಲಭೂತವಾದ ವ್ಯವಸ್ಥೆ ಸರಿಯಾಗಿಲ್ಲ, 60 ಸಿಬಂದಿಗಳ ಅವಶ್ಯಕತೆ ಇರುವ ಠಾಣೆಯಲ್ಲಿ ಕೇವಲ 40 ಸಿಬಂದಿಗಳಷ್ಟೇ ಇದ್ದಾರೆ, ಇದರಿಂದಾಗಿ ಸೂಕ್ತ ರೀತಿಯಲ್ಲಿ ಕರ್ತವ್ಯ ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಅವರು ಶಾಸಕರ ಗಮನಕ್ಕೆ ತಂದರು. ಶಾಸಕ ಉಮನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಸೌಧದಲ್ಲಿ ನಡೆದ ಮೊದಲ ತಾಲೂಕು ಕೆಡಿಪಿ
ಮೂಡುಬಿದಿರೆ: ಯಕ್ಷಗಾನವನ್ನು ಒಂದು ಪರಿಪೂರ್ಣ ಕಲೆಯನ್ನಾಗಿ ಮಾಡುವ ಮಹತ್ಕಾರ್ಯವನ್ನು ಕಲಾವಿದರು, ಭಾಗವತರು, ವೇಷಧಾರಿಗಳು ಮಾಡುತ್ತಿದ್ದಾರೆ. ಇವರ ಕೊಡುಗೆಯಿಂದ ಯಕ್ಷಗಾನ ಅತ್ಯುನ್ನತ ಸ್ಥಾನಕ್ಕೇರಿದೆ. ಸಂಗೀತ, ಭಾಗವತಿಗೆ, ಹಿಮ್ಮೇಳ, ವೇಷಭೂಷಣ, ನೃತ್ಯಗಳನ್ನು ಒಳಗೊಂಡ ಸರ್ವ ಗುಣ ಸಂಪನ್ನವಾದAತ ಕಲೆ ಯಕ್ಷಗಾನ. ಪಟ್ಲ ಸತೀಶ್ ಶೆಟ್ಟಿ ಕೇವಲ ಕಲಾವಿದ ಮಾತ್ರವಲ್ಲ. ಪಟ್ಲ ಫೌಂಡೇಶನ್ ಸ್ಥಾಪಿಸಿ ಅನೇಕ ಕಲಾವಿದರಿಗೆ ಬದುಕು ಕೊಡುತ್ತಿದ್ದಾರೆ ಎಂದು ಯಕ್ಷಧ್ರುವ ಪಟ್ಲ
ಮೂಡುಬಿದಿರೆ: ಸಂವಿಧಾನ ಪೀಠಿಕೆ, ಜವಾಬ್ದಾರಿ ಮತ್ತು ಅದರ ಮಹತ್ವ ಸಾರುವ ಅಂಬೇಡ್ಕರ್ ಪ್ರತಿಮೆಯ ಸ್ತಬ್ಧ ಚಿತ್ರವನ್ನೊಳಗೊಂಡ ಸಂವಿಧಾನ ಜಾಗೃತಿ ಜಾಥಾ ರಥವು ಮೂಡುಬಿದಿರೆ ಪುರಸಭಾ ವ್ಯಾಪ್ತಿಗೆ ಆಗಮಿಸಿದ್ದು ತಾಲೂಕು ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಮತ್ತು ಪುರಸಭಾ ಮುಖ್ಯಾಧಿಕಾರಿ ಇಂದು ಎಂ.ಅವರು ತಾಲೂಕು ಆಡಳಿತ ಸೌಧದ ಮುಂಭಾಗ ಬರಮಾಡಿಕೊಂಡರು. ನಂತರ ತಹಶೀಲ್ದಾರ್ ಅವರು ಅಂಬೇಡ್ಕರ್ ಅವರ ಸ್ತಬ್ಧ ಚಿತ್ರಕ್ಕೆ ಹಾರಾರ್ಪಣೆಗೈದರು.ಪುರಸಭಾ ಸದಸ್ಯರಾದ
ಮೂಡುಬಿದಿರೆ: ಆಳ್ವಾಸ್ ಸೆಂಟ್ರಲ್ ಸ್ಕೂಲ್‌ನ 9ನೇ ತರಗತಿಯ ವಿದ್ಯಾರ್ಥಿ ಅಮೋಘ್ ಎ.ಹೆಬ್ಬಾರ್ ಮಾರ್ಚ್ ತಿಂಗಳಲ್ಲಿ ಉತ್ತರ ಆಫ್ರಿಕಾದ ಟ್ಯುನೀಶಿಯಾದಲ್ಲಿ ನಡೆಯುವ ಅಂತರರಾಷ್ಟ್ರೀಯ ವಾರ್ಷಿಕ ಮೆಗಾ ಸೈನ್ಸ್ ಫೆಸ್ಟಿವಲ್, `ಕೀಟ ಮತ್ತು ಕಳೆಗಳನ್ನು ನಿಯಂತ್ರಿಸಲು ನೈಸರ್ಗಿಕ ವಿಧಾನ’ ಶೀರ್ಷಿಕೆಯ ಸಂಶೋಧನಾ ಯೋಜನೆಯನ್ನು ಪ್ರಸ್ತುತಪಡಿಸಲು ಅರ್ಹತೆ ಪಡೆದಿದ್ದಾರೆ.ಗುಜರಾತ್‌ನ ರಾಜಕೋಟ್‌ನಲ್ಲಿ ನಡೆದ ರಾಷ್ಟೀಯ ಮಟ್ಟದ ಭಾರತೀಯ ವಿಜ್ಞಾನ ಮತ್ತು ಇಂಜಿನಿಯರಿಂಗ್
ಮೂಡುಬಿದಿರೆ: ಇಂಟರ್‌ನ್ಯಾಷನಲ್ ಫ್ಲೋರ್ ಬಾಲ್ ಫೆಡರೇಶನ್ ಹಾಗೂ ಫ್ಲೋರ್ ಬಾಲ್ ಅಸೋಸಿಯೇಷನ್ ತಮಿಳುನಾಡು ಮತ್ತು ಫಿಟ್ ಇಂಡಿಯಾ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಜ.25-28 ವರೆಗೆ ನಡೆದ 17ನೇ ರಾಷ್ಟ್ರೀಯ ಫ್ಲೋರ್ ಬಾಲ್ ಚಾಂಪಿಯನ್ ಶಿಫ್ 2023-24ರಲ್ಲಿ ಕರ್ನಾಟಕ ತಂಡವು ಜಯಗಳಿಸಿದ್ದು, ಈ ತಂಡದಲ್ಲಿ ಎಡಪದವು ಸ್ವಾಮಿ ವಿವೇಕಾನಂದ ಪ.ಪೂ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಆಟವಾಡಿದ್ದು ಅವರನ್ನು ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಿ
ಮೂಡುಬಿದಿರೆ: ಗುಜರಾತಿನ ಆಲಹಾಬಾದ್ ನಲ್ಲಿ ಫೆ. 16-18 ರಿಂದ ನಡೆಯುವ ರಾಷ್ಟ್ರೀಯ ಜ್ಯೂನಿಯರ್ ಅಥ್ಲೆಟಿಕ್ಸ್ ಗೆ ಎಡಪದವು ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ರಕ್ಷಿತಾ ಆಯ್ಕೆಯಾಗಿದ್ದಾರೆ.2023-24 ನೇ ಸಾಲಿನಲ್ಲಿ ಪುತ್ತೂರಿನಲ್ಲಿ ನಡೆದ ರಾಜ್ಯಮಟ್ಟದ 17ವರ್ಷ ವಯೋಮಿತಿ ಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಅವರು ಆಯ್ಕೆಯಾಗಿದ್ದಾರೆ.ರಕ್ಷಿತಾ ಅವರು 2022-23
ಮೂಡುಬಿದಿರೆಯ ಪುರಸಭೆಯಲ್ಲಿ ಶಾಸಕ ಉಮಾನಾಥ ಎ.ಕೋಟ್ಯಾನ್ ಧ್ವಜವನ್ನು ಅರಳಿಸಿ 75ನೇ ವರ್ಷದ ಗಣರಾಜ್ಯದ ಸಂದೇಶವನ್ನು ನೀಡಿದರು . ಈ ಸಂದರ್ಭದಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಸದಸ್ಯ ಕೊರಗಪ್ಪ, ಮುಖ್ಯಾಧಿಕಾರಿ ಇಂದು ಎಂ, ಸಿಬಂದಿಗಳಾದ ಸುಧೀಶ್ ಹೆಗ್ಡೆ, ಮೂಡುಬಿದಿರೆ ಲೇಬರ್ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.




























