ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 42 ಪದಕ . ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ
ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದ 17ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಅಳಿಯೂರಿನ ಸರ್ಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ ಭಾಸ್ಕರ ಪಾಲಡ್ಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.
ಮೂಡುಬಿದಿರೆ ಹಳೆಯಂಗಡಿಯ ಡಾ. ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಆಳ್ವಾಸ್ ಸೆಂಟ್ರಲ್ ಶಾಲೆಯ 14 ವರ್ಷ ವಯೋಮಿತಿಯ ಬಾಲಕರ ವಿಭಾಗದ 4ಕಿಮೀ ಓಟದಲ್ಲಿ ಓಂಕಾರ್ ಪ್ರಥಮ ಸ್ಥಾನ ಮತ್ತು ಪುನೀತ್ ಕುಮಾರ್ ತೃತೀಯ ಸ್ಥಾನ ಹಾಗೂ 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದ 4ಕಿಮೀ ಓಟದಲ್ಲಿ ದಿಶಾ ಆರನೇ ಸ್ಥಾನ ಪಡೆದರು.ಆ ಮೂಲಕ 14 ಹಾಗೂ 17 ವರ್ಷ
ಸಂಸ್ಕೃತ ಭಾಷೆಯು ಸಮುದ್ರದ ಆಳದಿಂದ ಹುಟ್ಟುವ ಮುತ್ತಿನಂತೆ. ಮುತ್ತನ್ನು ಪಡೆಯಲು ಚಿಪ್ಪನ್ನು ಒಡೆದು ನೋಡುವ ಅಗತ್ಯವಿದ್ದಂತೆ ಸಂಸ್ಕೃತವನ್ನು ಅರಿಯಲು ಅದರ ಪಾಠಪುಸ್ತಕದ ಚಿಪ್ಪುಗಳನ್ನು ಮೀರಿ ಒಳನೋಟ ಬೀರಿದರೆ ಅದರ ನಿಜವಾದ ಮೌಲ್ಯವು ನಮ್ಮ ಜೀವನವನ್ನು ಅಂದಗೊಳಿಸುತ್ತದೆ.ಭಾಷೆಯು ವ್ಯಕ್ತಿಗೆ ಆತ್ಮವಿಶ್ವಾಸ ತುಂಬಿ ನೈತಿಕ ನೆಲೆಯಲ್ಲಿ ಬದುಕಿಗೆ ಪ್ರೇರಣೆಯಾಗಿ ಜೀವನದ ಎಲ್ಲಬಾಗಿಲುಗಳನ್ನು ತೆರೆಯುವ ಕೀಲಿಕೈ ಇದ್ದಂತೆ. ಭಾರತೀಯ ಜ್ಞಾನ ಪರಂಪರೆಗಳ ಮೂಲಾಧಾರವಾದ
ಮೂಡುಬಿದಿರೆ: ದೊಡ್ಮನೆ ಫ್ರೆಂಡ್ಸ್ ಬೆದ್ರ ಇವರ ಹೊಸ ಲೋಗೋ ಬಿಡುಗಡೆ ಕಾರ್ಯಕ್ರಮ ಮೂಡಬಿದಿರೆಯ ಶ್ರೀ ಗೌರಿ ದೇವಸ್ಥಾನದಲ್ಲಿ ನಡೆಯಿತು. ತಂಡದ ಹೊಸ ಲೋಗೋವನ್ನು ಮೂಡುಬಿದಿರೆ ಸಾರ್ವಜನಿಕ ಗಣೇಶೋತ್ಸವ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರಾದ ಸುದರ್ಶನ ಮೂಡುಬಿದರೆ ಇವರು ಅನಾವರಣಗೊಳಿಸಿದರು. ನಂತರ ಮಾತನಾಡಿದ ಅವರು, 9 ವರ್ಷಗಳಿಂದ ದೊಡ್ಮನೆ ಫ್ರೆಂಡ್ಸ್ ತಂಡವು ಸ್ವಚ್ಛತಾ ಕಾರ್ಯಕ್ರಮ, ಚಂದ್ರಶೇಖರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಇದರ ಜನ ಮಂಗಳ ಕಾರ್ಯಕ್ರಮ ದಡಿಯಲ್ಲಿ ಕಡಂದಲೆ ಗ್ರಾಮದ ವಿಕಲಚೇತನ ಕೀರ್ತಿಕಾ ಅವರಿಗೆ ವಾಟರ್ ಬೆಡ್ ನ್ನು ತಾಲೂಕಿನ ಯೋಜನಾಧಿಕಾರಿ ಧನಂಜಯ ಅವರು ವಿತರಿಸಿದರು.ಒಕ್ಕೂಟದ ಪದಾಧಿಕಾರಿ ಸುಶೀಲ ಹಾಗೂ ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿ ವಿದ್ಯಾ ಹಾಗೂ ಸೇವಾಪ್ರತಿನಿಧಿ ವಸಂತಿ ಈ ಸಂದಭ೯ದಲ್ಲಿ ಉಪಸ್ಥಿತರಿದ್ದರು
ಮೂಡುಬಿದಿರೆ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಗುವಿನ ನೆರವು ಕೋರಿ ಬ್ಯಾಂಕ್ ಖಾತೆಯ ಮಾಹಿತಿ ಪತ್ರವನ್ನು ಚರ್ಚ್ ನ ವಾಟ್ಸಾಪ್ ಗ್ರೂಪ್ ನಲ್ಲಿ ಹಾಕಿದ್ದು ಆಗ್ರೂಪ್ ನ ಅಡ್ಮಿನ್ ಅಕೌಂಟ್ ನಂಬರ್ ಅನ್ನು ಬದಲಾಯಿಸಿ ಹಣ ವಸೂಲಿ ಮಾಡಿದ್ದು, ಆತನ್ನು ಮೂಡುಬಿದಿರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿಯನ್ನು ವಿನೋದ್ ವಾಲ್ಟರ್ ಪಿಂಟೋ ಎಂದು ಗುರುತಿಸಲಾಗಿದೆ.ಪ್ರಕರಣದ ವಿವರ:ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆ.18 ರಂದು ತಾಕೋಡೆಯ ಹೋಲಿ
ಮೂಡುಬಿದಿರೆ : ಆಳ್ವಾಸ್ ಪದವಿ ಕಾಲೇಜಿನ ಆ್ಯಂಟಿ ರ‍್ಯಾಗಿಂಗ್ ಸೆಲ್, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯೂತ್ ರೆಡ್‌ಕ್ರಾಸ್ ಘಟಕಗಳ ಜಂಟಿ ಆಶ್ರಯದಲ್ಲಿ ಮೂಡುಬಿದಿರೆ ಪೋಲೀಸ್ ಇಲಾಖೆಯ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮವು ಕುವೆಂಪು ಸಭಾಂಗಣದಲ್ಲಿ ನಡೆಯಿತು. ಮೂಡುಬಿದಿರೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರ‍್ಯಾಗಿಂಗ್ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಗೌರವಕ್ಕೆ ದಕ್ಕೆ ತರುವ ಗಂಭೀರ ಸಾಮಾಜಿಕ ಸಮಸ್ಯೆ. ಆ ಹಿನ್ನಲೆಯಲ್ಲಿ
ಮೂಡುಬಿದಿರೆ: ಅತೀ ವೇಗದಿಂದ ಚಲಿಸುತ್ತಿದ್ದ ಕಾರೊಂದು ಬೆಳುವಾಯಿ ಪ್ಲೈ ಓವರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಓವ೯ ಸಾವನ್ನಪ್ಪಿದ್ದು, ಉಳಿದ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ವೇಣೂರು ಪೆಮು೯ಡ ನಿವಾಸಿ ಸುಮಿತ್ ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಮೂಡುಬಿದಿರೆ: 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟ್ ಲಿ. ಇದರ ವತಿಯಿಂದ ಪ್ರಜ್ಞಾ ಆಶ್ರಯ ಕೇಂದ್ರದ ವಿದ್ಯಾರ್ಥಿಗಳಿಗೆ ಬೆಡ್‌ಶೀಟ್, ಟವಲ್, ಸಿಹಿತಿಂಡಿ ವಿತರಣಾ ಕಾರ್ಯಕ್ರಮವು ನಡೆಯಿತು. ಮೂಡುಬಿದಿರೆ-ಮುಲ್ಕಿ ಕ್ಷೇತ್ರದ ಬಿಜೆಪಿ ಮಂಡಲ ಕಾರ್ಯದರ್ಶಿ ಹಾಗೂ ಪಂಚಶಕ್ತಿ ವಿವಿದೋದ್ದೇಶ ಸೇವಾ ಸಹಕಾರಿ ಸಂಘ ಇದರ ಅಧ್ಯಕ್ಷರಾದ ರಂಜಿತ್ ಕುಮಾರ್ ತೋಡಾರು ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.




























