Home Archive by category moodabidre (Page 6)

ಮೂಡುಬಿದಿರೆ : ಆಳ್ವಾಸ್ ನಲ್ಲಿ ಜಾಗೃತಿ ಕಾರ್ಯಕ್ರಮ

ಮೂಡುಬಿದಿರೆ : ಆಳ್ವಾಸ್ ಪದವಿ ಕಾಲೇಜಿನ ಆ್ಯಂಟಿ ರ‍್ಯಾಗಿಂಗ್ ಸೆಲ್, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯೂತ್ ರೆಡ್‌ಕ್ರಾಸ್ ಘಟಕಗಳ ಜಂಟಿ ಆಶ್ರಯದಲ್ಲಿ ಮೂಡುಬಿದಿರೆ ಪೋಲೀಸ್ ಇಲಾಖೆಯ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮವು ಕುವೆಂಪು ಸಭಾಂಗಣದಲ್ಲಿ ನಡೆಯಿತು. ಮೂಡುಬಿದಿರೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರ‍್ಯಾಗಿಂಗ್

ಮೂಡುಬಿದಿರೆ : ಬೆಳುವಾಯಿ ಪ್ಲೈ ಓವರ್ ಗೆ ಕಾರು ಢಿಕ್ಕಿ : ಓವ೯ ಬಲಿ, ಮೂವರು ಗಂಭೀರ

ಮೂಡುಬಿದಿರೆ: ಅತೀ ವೇಗದಿಂದ ಚಲಿಸುತ್ತಿದ್ದ ಕಾರೊಂದು ಬೆಳುವಾಯಿ ಪ್ಲೈ ಓವರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಓವ೯ ಸಾವನ್ನಪ್ಪಿದ್ದು, ಉಳಿದ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ವೇಣೂರು ಪೆಮು೯ಡ ನಿವಾಸಿ ಸುಮಿತ್ ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಮೂಡುಬಿದಿರೆ: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟ್ ಲಿ. ವತಿಯಿಂದ ಬೆಡ್‌ಶೀಟ್, ಟವಲ್, ಸಿಹಿತಿಂಡಿ ವಿತರಣೆ

ಮೂಡುಬಿದಿರೆ: 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟ್ ಲಿ. ಇದರ ವತಿಯಿಂದ ಪ್ರಜ್ಞಾ ಆಶ್ರಯ ಕೇಂದ್ರದ ವಿದ್ಯಾರ್ಥಿಗಳಿಗೆ ಬೆಡ್‌ಶೀಟ್, ಟವಲ್, ಸಿಹಿತಿಂಡಿ ವಿತರಣಾ ಕಾರ್ಯಕ್ರಮವು ನಡೆಯಿತು. ಮೂಡುಬಿದಿರೆ-ಮುಲ್ಕಿ ಕ್ಷೇತ್ರದ ಬಿಜೆಪಿ ಮಂಡಲ ಕಾರ್ಯದರ್ಶಿ ಹಾಗೂ ಪಂಚಶಕ್ತಿ ವಿವಿದೋದ್ದೇಶ ಸೇವಾ ಸಹಕಾರಿ ಸಂಘ ಇದರ ಅಧ್ಯಕ್ಷರಾದ ರಂಜಿತ್ ಕುಮಾರ್ ತೋಡಾರು ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಮೂಡುಬಿದಿರೆ : ಸ್ವಣೋ೯ದ್ಯಮಿ ಶ್ರೀಧರ್ ಆಚಾಯ೯ ನಿಧನ

ಮೂಡುಬಿದಿರೆ : ಸ್ವಣೋ೯ದ್ಯಮಿ ಮೂಡುಬಿದಿರೆಯ ಸುಧಾ ಜ್ಯುವೆಲ್ಲರ್ಸ್ ನ ಮಾಲಕ ಶ್ರೀಧರ ಆಚಾರ್ಯ (84) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ನಿಧನ ಹೊಂದಿದರು.ಅವರು ಮೂಡುಬಿದಿರೆಯಲ್ಲಿ ಸುಧಾ ಜ್ಯುವೆಲ್ಲರ್ಸ್, ಲಕ್ಷ್ಮೀ ಜ್ಯುವೆಲ್ಲರ್ಸ್ ನ ಸ್ಥಾಪಕರಾಗಿದ್ದರು.ಮೂಡುಬಿದಿರೆ ಗುರುಮಠ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ 1997- 2002 ರ ಅವಧಿಯಲ್ಲಿ ಎರಡನೇ ಮೊಕ್ತೇಸರರಾಗಿ ಸೇವೆ ಸಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು.ಮೃತರು ಪತ್ನಿ, ಐದು ಮಂದಿ

ಮೂಡುಬಿದಿರೆ : ಕಳಕೊಂಡ ಚಿನ್ನವನ್ನು 65 ಗಂಟೆಯಲ್ಲಿ ಪತ್ತೆ ಮಾಡಿದ ಮೂಡುಬಿದಿರೆ ಪೊಲೀಸರು

ಮೂಡುಬಿದಿರೆ : ಆ. 8 ರಂದು ಮಹಿಳೆಯೋವ೯ರು ಪಸ್ ೯ ಸಹಿತ 72 ಗ್ರಾಂ ಚಿನ್ನವನ್ನು ಕಳೆದುಕೊಂಡಿದ್ದು ಅದನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ. ನೇತೃತ್ವದ ತಂಡವು 65 ಗಂಟೆಯಲ್ಲಿ ಪತ್ತೆ ಹಚ್ಚಿ ಸಂಬಂಧಪಟ್ಟವರಿಗೆ ಸೋಮವಾರ ಹಸ್ತಾಂತರಿಸಿ ಮೆಚ್ಚುಗೆಗೆ ಪಾತ್ರವಾಗಿದೆ.ಪಡುಮಾನಾ೯ಡಿನ ದಿ. ಧಮ೯ಪಾಲ ಬಲ್ಲಾಳ್ ಅವರ ಪತ್ನಿ ವಿಜಯ ಅವರು ಆ. 8ರಂದು ಕುಪ್ಪೆಪದವಿನಲ್ಲಿ ಅವರ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಹಿಂತಿರುಗುವ ಸಂದಭ೯ ಮಧ್ಯಾಹ್ನ 2 ಗಂಟೆ

ಮೂಡುಬಿದಿರೆ: ಆಳ್ವಾಸ್‌ನ ಹಿರಿಯ ವಿದ್ಯಾರ್ಥಿನಿ ಕಿನ್ಯಾದ ನೈರೋಬಿಯಲ್ಲಿ ನಡೆಯುತ್ತಿರುವ ವಿಕಿಮೇನಿಯಾ 2025 ಸಮ್ಮೇಳನಕ್ಕೆ ಆಯ್ಕೆ

ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಾಲೇಜಿನ ವಿಕಿಪೀಡಿಯಾ ಕ್ಲಬ್‌ನ ಕ್ರಿಯಾಶೀಲ ಸದಸ್ಯೆಯಾಗಿದ್ದ ಯಕ್ಷಿತಾ ಕೀನ್ಯಾದ ನೈರೋಬಿಯಲ್ಲಿ ಆಗಸ್ಟ್ 6ರಿಂದ 9ರವರೆಗೆ ನಡೆಯಲಿರುವ “ವಿಕಿಮೇನಿಯಾ 2025” ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾರೆ. ಕರ್ನಾಟಕದಿಂದ ಆಯ್ಕೆಯಾದ ಮೂವರಲ್ಲಿ ಇವರು ಒಬ್ಬರಾಗಿದ್ದಾರೆ. ವಿಕಿಮೇಡಿಯಾ ಫೌಂಡೇಶನ್‌ನ ಆಹ್ವಾನಿತರಿಂದ ಯಕ್ಷಿತಾ ಭಾರತ ದೇಶದ ಪ್ರತಿನಿಧಿಯಾಗಿ ಸಮ್ಮೇಳನದಲ್ಲಿ

ಫೋಟೋಗ್ರಾಫರ್ಸ್ ಅಸೋಸಿಯೇಷನ್ ಮೂಡುಬಿದಿರೆ ವಲಯ- ನೂತನ ಅಧ್ಯಕ್ಷರಾಗಿ ನಿತಿನ್ ಬೆಳುವಾಯಿ, ಪ್ರಧಾನ ಕಾರ್ಯದರ್ಶಿಯಾಗಿ ನಮಿತ್ ಬಂಗೇರಾ

ಮೂಡುಬಿದಿರೆ :ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಮೂಡುಬಿದಿರೆ ವಲಯದ 15ನೇ ವಾರ್ಷಿಕ ಸಭೆಯು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ 2025/27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.ನೂತನ ಅಧ್ಯಕ್ಷರಾಗಿ ನಿತಿನ್ ಬೆಳುವಾಯಿ , ಪ್ರಧಾನ ಕಾರ್ಯದರ್ಶಿಯಾಗಿ ನಮಿತ್ ಬಂಗೇರಾ, ಉಪಾಧ್ಯಕ್ಷರಾಗಿ ರಂಜಿತ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಪದ್ಮನಾಭ ಮಿಜಾರು,

ಮೂಡುಬಿದಿರೆ: ದ. ಕ. ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಕಾರ್ಯಾಗಾರ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಸಂಘ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ದ. ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಾಭಾಗಿತ್ವದಲ್ಲಿ ಒಂದು ದಿನದ ಕಾರ್ಯಾಗಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಎಂ. ಆಳ್ವ ಗಣಿತವು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಎಲ್ಲಾ ತಾರ್ಕಿಕ ವಿಜ್ಞಾನಗಳಿಗೆ ಹೇಗೆ

ಮೂಡುಬಿದಿರೆ: ಆಳ್ವಾಸ್ ಕೃಷಿ ಇಂಜಿನಿಯರಿಂಗ್ ವಿಭಾಗಕ್ಕೆ 4 ರ‍್ಯಾಂಕ್

ಮೂಡುಬಿದಿರೆ: ಕಳೆದ ಮೇ ತಿಂಗಳನಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಅಂತಿಮ ಬಿಇ ಪರೀಕ್ಷೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ರ‍್ಯಾಂಕ್‌ಗಳನ್ನು ಪಡೆದಿದ್ದಾರೆ.ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ಇಂಜಿನಿಯರಿಂಗ್ ವಿಭಾಗದ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳಾದ ಸಂತೋಷ ಎಂ. ದ್ವಿತೀಯ ರ‍್ಯಾಂಕ್, ತೇಜಸ್ ತೃತೀಯ ರ‍್ಯಾಂಕ್, ಮೋನಿಷಾ 8ನೇ ರ‍್ಯಾಂಕ್, ಕಿರಣ್

ಮೂಡುಬಿದಿರೆ : ಎಸ್. ಎನ್. ಮೂಡುಬಿದಿರೆ ಪಾಲಿಟೆಕ್ನಿಕ್ : ಅಂತಾರಾಷ್ಟ್ರೀಯ ಗ್ಲೋಬಲ್ ಯೂಥ್ ಸಮ್ಮಿಟ್ ಗೆ ಆಯ್ಕೆ

ಮೂಡುಬಿದಿರೆ : ಎಸ್.ಎನ್. ಮೂಡುಬಿದಿರೆ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಐದು ವಿದ್ಯಾರ್ಥಿಗಳು ಜೂನ್ 4 ರಿಂದ 7ರ ತನಕ ಮಂಗಳೂರಿನ ಯೆನಪೋಯ ವಿಶ್ವ ವಿದ್ಯಾಲಯದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಗ್ಲೋಬಲ್ ಯೂಥ್ ಸಮ್ಮಿಟ್ 2025 ಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲೆ ನೊರೊನ್ಹಾ ತರೀನಾ ರೀಟಾ ತಿಳಿಸಿದ್ದಾರೆ. ಈ ಸಮ್ಮೇಳನದಲ್ಲಿ ಭಾರತದ 20 ರಾಜ್ಯಗಳಿಂದ ಹಾಗು 10 ಇತರ ದೇಶಗಳನ್ನು ಒಳಗೊಂಡಂತೆ ಸುಮಾರು 500ಕ್ಕೂ ಹೆಚ್ಚು ಯುವ