Home Archive by category moodabidre (Page 6)

* ಮೂಡುಬಿದಿರೆ: ಶ್ರೀ ರಾಮನ ಮಂದಿರ ನಿರ್ಮಾಣಕ್ಕಾಗಿ ಬೆಳುವಾಯಿಯಲ್ಲಿ ನಿರಂತರ ಬೆಳಗಿದ ನಂದಾದೀಪ

ಮೂಡುಬಿದಿರೆ : ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಶ್ರೀರಾಮನ ಮಂದಿರವು ಯಾವುದೇ ಅಡೆತಡೆಯಿಲ್ಲದೆ ನಿರ್ಮಾಣವಾಗಬೇಕೆಂಬ ಸಂಕಲ್ಪದೊಂದಿಗೆ ಬೆಳುವಾಯಿಯ ಮನೆಯೊಂದರ ದೇವರ ಕೋಣೆಯಲ್ಲಿ ಕಳೆದ ಮೂರೂವರೆ ವರ್ಷಗಳಿಂದ “ನಂದಾದೀಪ” ನಿರಂತರ ಬೆಳಗುತ್ತಿದೆ. 2020 ರ ಆಗಸ್ಟ್ 4ರಂದು ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವಾಯಿತು. ಆ

ಮೂಡುಬಿದಿರೆ: ಜ.21ರಂದು ಸ್ಫೂರ್ತಿ ಕಲಾ ಸಂಭ್ರಮ

ಮೂಡುಬಿದಿರೆ: ರಿಜ್ಯುವನೇಟ್ ಚೈಲ್ಡ್ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಹಾಗೂ ತರಬೇತಿ ಕೇಂದ್ರದ ಆಶ್ರಯದಲ್ಲಿ ಸ್ಫೂರ್ತಿ ಕಲಾ ಸಂಭ್ರಮ 2024 ಕಾರ್ಯಕ್ರಮವು ಜ.21ರಂದು ಅರಮನೆಬಾಗಿಲು ಬಳಿಯಿರುವ ಶಾಲೆಯ ಆವರಣದಲ್ಲಿ ನಡೆಯಲಿದೆ ಎಂದು ಶಾಲೆಯ ಸಂಸ್ಥಾಪಕ ಪ್ರಕಾಶ್ ಜೆ.ಶೆಟ್ಟಿಗಾರ್ ತಿಳಿಸಿದರು.ಅವರು ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಕಲಾಮೇಳದಲ್ಲಿ ಆಹಾರಮೇಳದ

ಮೂಡುಬಿದಿರೆ : ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ವಾಹನಗಳಿಗೆ ಲಾಕ್ ಹಾಕಿದ ಪೊಲೀಸರು

ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ವಾಹನಗಳಿಗೆ ಲಾಕ್ ಹಾಕಿದ ಪೊಲೀಸರು ಮೂಡುಬಿದಿರೆ : ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಆವರಣದ ನೋ-ಪಾರ್ಕಿಂಗ್ ಸ್ಥಳದಲ್ಲಿ ವಾಹನಗಳನ್ನು ನಿಲುಗಡೆ ಮಾಡಿರುವ ವಾಹನಗಳಿಗೆ ಮೂಡುಬಿದಿರೆ ಪೊಲೀಸರು ಗುರುವಾರ ಸಂಜೆ ಲಾಕ್ ಮಾಡಿ ಎಚ್ಚರಿಕೆ ನೀಡಿದ ಘಟನೆ ನಡೆಯಿತು.ಮೂಡುಬಿದಿರೆಯ ಬಸ್ ನಿಲ್ದಾಣದ ಆವರಣದಲ್ಲಿ ಖಾಸಗಿ ವ್ಯಕ್ತಿಗಳು ಕಾರು, ಆಟೋ, ಓಮ್ನಿ ಹಾಗೂ ದ್ವಿಚಕ್ರ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸಿ ಎಲ್ಲೆಲ್ಲಿಗೋ ಹೋಗಿ ಎಷ್ಟೋ

ಮೂಡುಬಿದರೆ: ಆಳ್ವಾಸ್ ವಿರಾಸತ್ – ಸಪ್ತ ಮೇಳಗಳನ್ನು ಉದ್ಘಾಟಿಸಿದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ

ಮೂಡುಬಿದಿರೆ : ಲಕ್ಷಾಂತರ ಮಕ್ಕಳನ್ನು ಸತ್ಪ್ರಜೆ ಮಾಡುವ ಆಳ್ವಾಸ್, ವಿರಾಸತ್ ಹಾಗೂ ವಿವಿಧ ಮೇಳಗಳ ಮೂಲಕ ಎಲ್ಲರ ಹೃದಯದ ಕಣ್ಣು ತೆರೆಸುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ಭಾರತ್ ಸ್ಕೌಟ್ಸ್-ಗೈಡ್ಸ್ ಮುಖ್ಯ ಆಯುಕ್ತ, ಮಾಜಿ ಸಚಿವ ಪಿ. ಜಿ. ಆರ್. ಸಿಂಧ್ಯಾ ಶ್ಲಾಘಿಸಿದರು. ವಿದ್ಯಾಗಿರಿಯಲ್ಲಿ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’೨೯ನೇ ಆಳ್ವಾಸ್ ವಿರಾಸತ್’ ಅಂಗವಾಗಿ ಕೃಷಿಸಿರಿ ಆವರಣದಲ್ಲಿ ಅನ್ವೇಷಣಾತ್ಮಕ ಕೃಷಿಕ,

ಮೂಡುಬಿದಿರೆ: ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಮೂಡುಬಿದಿರೆ: ನಿಟ್ಟೆಯ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಲಂಗಾರಿನಲ್ಲಿ ಭಾನುವಾರ ನಡೆದಿದೆ. ಪುರಸಭಾ ವ್ಯಾಪ್ತಿಯ ಅಲಂಗಾರು ಆಶ್ರಯ ಕಾಲನಿಯ ನಿವಾಸಿ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್ (೨೧) ಆತ್ಮಹತ್ಯೆ ಮಾಡಿಕೊಂಡಾತ.ಹೆತ್ತವರು ಮನೆಯಲ್ಲಿ ಚನ್ನಾಗಿ ಓದುವಂತೆ ಬುದ್ಧಿಮಾತು ಹೇಳಿದ್ದು, ಅದರಂತೆ ಸಾತ್ವಿಕ್

ಹಗ್ಗಜಗ್ಗಾಟ: ಆಳ್ವಾಸ್ ಮಹಿಳೆಯರು ಚಾಂಪಿಯನ್, ಪುರುಷರ ತಂಡ ರನ್ನರ್ ಅಪ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನಡೆದ ಅಂತರ ಕಾಲೇಜು ಹಗ್ಗ ಜಗ್ಗಾಟದ ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಚಾಂಪಿಯನ್ ಹಾಗೂ ಪುರುಷರ ತಂಡವು ರನ್ನರ್ ಅಪ್ ಸ್ಥಾನ ಪಡೆದುಕೊಂಡಿದೆ.ಮಹಿಳೆಯರ ಫೈನಲ್‌ನಲ್ಲಿ ಆಳ್ವಾಸ್ ಕಾಲೇಜು ತಂಡವು ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿದ್ದರೆ, ಸೆಮಿಫೈನಲ್‌ನಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ವಿರುದ್ಧ ಜಯ

ಚುನಾವಣೆಗೆ ಮೂಡುಬಿದಿರೆ ಕ್ಷೇತ್ರದಲ್ಲಿ ಸಿದ್ಧತೆ ಪೂರ್ಣ: ಚುನಾವಣಾಧಿಕಾರಿ ಮಹೇಶ್ಚಂದ್ರ

ಮೂಡುಬಿದಿರೆ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಮೇ.10ರಂದು ನಡೆಯುವ ವಿಧಾನಸಭೆಗೆ ಸಕಲ ಸಿದ್ಧತೆಯನ್ನು ಮಾಡಲಾಗಿದೆ. ಕ್ಷೇತ್ರದಲ್ಲಿ ಒಟ್ಟು 221 ಮತಗಟ್ಟೆಗಳಲ್ಲಿ 103 ಮತಗಟ್ಟೆಗಳಿಗೆ ವೆಬ್‌ಕಾಸ್ಟ್ ಅಳವಡಿಸಲಾಗಿದೆ. ಚುನಾವಣಾ ಸಿಬ್ಬಂದಿಗಳಿಗೆ ಸಹಿತ 62 ವಾಹನಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಚುನಾವಣಾಧಿಕಾರಿ ಮಹೇಶ್ಚಂದ್ರ ಹೇಳಿದರು. ಶನಿವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಈ ಕ್ಷೇತ್ರದಲ್ಲಿ ಮತಗಟ್ಟೆ 166ರ ಪೆರ್ಮುದೆ

ಏ.8ರಂದು ಪಣಪಿಲದಲ್ಲಿ ಜಯ ವಿಜಯ ಜೋಡುಕರೆ ಕಂಬಳ

ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ಹದಿಮೂರನೇ ವರುಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಏಪ್ರಿಲ್ 8ರಂದು ಸಂಜೆ ನಡೆಯಲಿದೆ ಎಂದು ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಅಶ್ವತ್ಥ್ ಪಣಪಿಲ ಗುರುವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. 4 ಎಕರೆ ಜಾಗದಲ್ಲಿ ಕಂಬಳ ನಡೆಯಲಿದ್ದು, ನೂತನವಾಗಿ 133.5 ಮೀ ಉದ್ದದ ಕರೆ ನಿರ್ಮಾಣಗೊಂಡಿದೆ. ಕೋಣಗಳನ್ನು ಕಟ್ಟಲು ತಂಪಾದ ಜಾಗ, ಉತ್ತಮ ನೀರಿನ ವ್ಯವಸ್ಥೆ,

ಮೂಡುಬಿದಿರೆ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆ

ಡಿಸಿ ಮನ್ನಾ ಜಾಗಗಳು ಇತರರ ಪಾಲಾಗುತ್ತಿದೆ. ಆದರೆ ಎಸ್. ಸಿ, ಎಸ್. ಟಿ ಸಮುದಾಯದ ಜನರು ಡಿಸಿ ಮನ್ನಾ ಜಾಗದಲ್ಲಿ ಬಿಡಾರ ಹೂಡಿದರೆ ಕೂಡಲೇ ಅಲ್ಲಿಂದ ಎತ್ತಂಗಡಿ ಮಾಡಲು ಇಲಾಖೆಯಿಂದ ಅಧಿಕಾರಿಗಳು ಬರುತ್ತಾರೆ. ಇನ್ನು ಮುಂದೆ ಡಿಸಿ ಮನ್ನಾ ಜಮೀನಿನಲ್ಲಿ ಎಸ್.ಸಿ, ಎಸ್.ಟಿ ಸಮುದಾಯದ ಜನರು ಸಣ್ಣ ಗುಡಿಸಲು ಮಾಡಿ ಮನೆ ಮಾಡಿಕೊಂಡಿದ್ದಾರೆ. ಅವರನ್ನು ಅಲ್ಲಿಂದ ಓಡಿಸದೇ ಅಸಹಾಯಕ ಜನರಿಗೆ ವಾಸ ಮಾಡಲು ಅವಕಾಶ ಮಾಡಿಕೊಡಬೇಕೆಂದು ರಾಮಚಂದ್ರ ಕೆಂಬಾರೆ ಆಗ್ರಹಿಸಿದರು ಅವರು ಎಸ್

ಕಾರ್ಕಳದಲ್ಲಿ ಪರಶುರಾಮ ಥೀಮ್ ಪಾರ್ಕ್‍ನ ಸಮಾರೋಪ ಸಮಾರಂಭ

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್‍ನ ಸಮಾರೋಪ ಹಾಗು ಉಡುಪಿ ಜಿಲ್ಲಾ ರಜತಮಹೋತ್ಸವದ ಸಮಾರೋಪ ಏಕಕಾಲದಲ್ಲಿಯೆ ನಡೆಯುತ್ತಿರುವುದು ಖುಷಿಯ ವಿಚಾರವಾಗಿದೆ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಖಾತೆ ಸಚಿವ ವಿ ಸುನೀಲ್ ಕುಮಾರ್ ಹೇಳಿದರು. ಅವರು ಪರಶುರಾಮ ಥೀಂ ಪಾರ್ಕ್‍ನ ಸಮಾರೋಪ ಸಮಾರಂಭ ಸಭೆಯಲ್ಲಿ ಅದ್ಯಕ್ಷತೆ ವಹಿಸಿ ಮಾತನಾಡಿದರು. ಉತ್ಸವಗಳು ಅರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸಲು ಸಹಕಾರಿಯಾಗಬೇಕು. ಕಾರ್ಕಳ ಉತ್ಸಾವವು ರಾಜ್ಯದಲ್ಲೆಲ್ಲ