ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿಗಳ ಸುಪುತ್ರಿ ಹಾಗೂ ಸುರೇಶ್ ಅಬೀರ ಮತ್ತು ಪುತ್ತೂರಿನಲ್ಲಿ ಪೊಲೀಸ್
ಪುತ್ತೂರು: ಎವಿಜಿ ಅಸೋಸಿಯೇಷನ್ ನ ಬೆಳ್ಳಿ ಹಬ್ಬದ ಪ್ರಯುಕ್ತ ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನವರಿ 19 ಆದಿತ್ಯವಾರದಂದು ತಾಲೂಕು ಮಟ್ಟದ ಚಿತ್ರೋತ್ಸವ ಸ್ಪರ್ಧೆಯು ನಡೆಯಿತು. ಸಮಾರೋಪ ಸಮಾರಂಭದ ಮೊದಲಿಗೆ ಒಂದು ಗಂಟೆಯ ಕಾಲಾವಧಿಯೊಂದಿಗೆ ವಿವಿಧ ಶಾಲೆಗಳಿಂದ ಪಾಲ್ಗೊಂಡಂತಹ ವಿದ್ಯಾರ್ಥಿ ವಿದ್ಯಾರ್ಥಿನಿಯರ 5 ವಿಭಾಗಗಳ ಚಿತ್ರರಚನಾ ಸ್ಪರ್ಧೆಯು ನಡೆಯಿತು. ಸ್ಪರ್ಧೆಯಲ್ಲಿ ಪೂರ್ವ ಪ್ರಾಥಮಿಕದಿಂದ 10 ನೇ ತರಗತಿವರೆಗಿನ 175 ಮಂದಿ ವಿದ್ಯಾರ್ಥಿ
ಕಡಬ ಸಿ.ಎ.ಕಡಬ, ಜ. 19 ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಮುಂದಿನ 5 ವರ್ಷಗಳ ಅವಧಿಗೆ 12 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಜಯಭೇರಿ ಬಾರಿಸುವ ಮೂಲಕ ಮತ್ತೆ ಆಡಳಿತದ ಅಧಿಕಾರದ ಉಳಿಸಿಕೊಂಡಿದ್ದಾರೆ. ಸಾಲಗಾರರಲ್ಲದ ಕ್ಷೇತ್ರದಲ್ಲಿ ಸ್ಪರ್ಧಿಸಿದ ಸಂಘದ ನಿಕಟಪೂರ್ವ ಅಧ್ಯಕ್ಷ ರಮೇಶ್ ಕಲ್ಪುರೆ, ಸಾಲಗಾರ ಕ್ಷೇತ್ರದ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಿದ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ ‘ಇಲ್ಲಗೊಂಜಿ ಗೇನೊದ ಬಂಡಾರ’ ( ಮನೆಗೊಂದು ತುಳು ಗ್ರಂಥಾಲಯ) ಅಭಿಯಾನಕ್ಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಕೋಡಿಂಬಾಡಿಯ ಮನೆಯಲ್ಲಿ ಶನಿವಾರ ಚಾಲನೆ ನೀಡಲಾಯಿತು. ಅಕಾಡೆಮಿ ಪ್ರಕಟಿಸಿದ ಹಾಗೂ ಇತರ ತುಳು ಪುಸ್ತಕಗಳು ಸೇರಿದಂತೆ ಹತ್ತು ಸಾವಿರ ರೂಪಾಯಿ ಮೌಲ್ಯದ 150 ಕೃತಿಗಳನ್ನು ಖರೀದಿಸುವ ಮೂಲಕ ಅಶೋಕ್ ರೈ ಅವರು ‘ಇಲ್ಲಗೊಂಜಿ ಗೇನೊದ ಬಂಡಾರ’ ಅಭಿಯಾನಕ್ಕೆ
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು, ತಾಲೂಕು ಯುವಜನ ಒಕ್ಕೂಟ ಪುತ್ತೂರು ಇವುಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಕೊಡಮಾಡುವ ಪುತ್ತೂರು ತಾಲೂಕು ಯುವ ಪ್ರಶಸ್ತಿಗೆ ಖ್ಯಾತ ನಿರೂಪಕರಾದ ಬಾಲಕೃಷ್ಣ ರೈ ಪೊರ್ದಾಲ್ ಆಯ್ಕೆಯಾಗಿದ್ದಾರೆ. ಪುತ್ತೂರು ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಸಹಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಇವರು ಬಹುಮುಖ ಪ್ರತಿಭಾವಂತ ಯುವ ಸಾಧಕರು.ರಂಗ
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ ವನ್ನು ಪಡೆದುಕೊಂಡಿರುತ್ತಾರೆ. ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ , ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನ ವನ್ನು ನೀಡಿ ಗೆಲುವಿಗೆ ಪಾತ್ರರಾದರು. ಹಿಬಾ ಉತ್ತಮ
ಪುತ್ತೂರು ಭಾರತೀಯ ಜನತಾ ಪಾರ್ಟಿ ಶಾಂತಿಗೋಡಿನ 142 ನೇ ಬೂತ್ ನ ನೂತನ ಅಧ್ಯಕ್ಷರಾಗಿ ವಿನೋದ್ ಕರ್ಪುತಮೂಳೆ, ಕಾರ್ಯದರ್ಶಿಯಾಗಿ ಗಣೇಶ್ ಪೇರಡ್ಕ ಆಯ್ಕೆಯಾದರು. ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ದೇವಪ್ಪ ಗೌಡ ಓಲಾಡಿಯವರ ಮನೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಮಹಿಳಾ ಮೋರ್ಚಾದ ಸದಸ್ಯೆ ಯಶೋಧ ಗೌಡ ಪ್ರಭಾರಿಯಾಗಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಬೂತ್ ಸದಸ್ಯರಾಗಿ ಪ್ರವೀಣ್ ಕಲ್ಕಾರ್, ರೂಪ
ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ನ ೪ನೇ ವಾರ್ಡ್ನ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನ.೨೩ ರಂದು ನಡೆಯಲಿದ್ದು ಎಸ್ಡಿಪಿಐ ಬೆಂಬಲಿತ ಅಭ್ಯರ್ಥಿಯಾಗಿ ಅಬ್ದುಲ್ ರಫೀಕ್ ನಂಜೆ ನ.೧೧ರಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಾಶಿರ್ ಹಾಜಿ ನಂಜೆ, ತಾಜುದ್ದೀನ್ ತಿಂಗಳಾಡಿ, ಅಲ್ತಾಫ್ ಟಿ, ನಾರಾಯಣ, ಲತೀಫ್, ಜುನೈದ್ ಮತ್ತಿತರರು ಉಪಸ್ಥಿತರಿದ್ದರು.
ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ನ ೪ನೇ ವಾರ್ಡ್ನ ತೆರವಾದ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯು ನ.23 ರಂದು ನಡೆಯಲಿದ್ದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮೆಲ್ವಿನ್ ಮೊಂತೆರೋರವರು ನ.11 ರಂದು ಬೆಳಿಗ್ಗೆ ಸಹಾಯಕ ಚುನಾವಣಾ ಅಧಿಕಾರಿ ಕೃಷ್ಣಪ್ರಸಾದ್ರವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಅಭಿವೃದ್ದಿ ಅಧಿಕಾರಿ ಅಜಿತ್ ಜಿ.ಕೆ ಉಪಸ್ಥಿತರಿದ್ದರು. ತಿಂಗಳಾಡಿ ನಿವಾಸಿಯಾಗಿರುವ ಮೆಲ್ವಿನ್ ಮೊಂತೆರೋರವರು ಕುಂಬ್ರದಲ್ಲಿ ಮೊಂತೆರೋ
ಪುತ್ತೂರು : ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮ ಪಂಚಾಯತ್ ನ ಮಾಡೂರು 2 ನೇ ವಾರ್ಡ್ ನಲ್ಲಿ ಪ.ಜಾತಿಗೆ ಮೀಸಲಿರಿಸಿದ ಸ್ಥಾನದಿಂದ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದ ಶಂಕರ ಮಾಡಂದೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ನ.11ರಂದು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಹರೀಶ್ ಎ.ಕೆ ಮಾಡ್ಯೂರು ನಾಮಪತ್ರ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಉಪಾಧ್ಯಕ್ಷ ಪ್ರಸನ್ನ ಮಾರ್ತಾ, ಜಿಲ್ಲಾ




























