Home Archive by category Puttur (Page 8)

ಉಪ್ಪಿನಂಗಡಿ : ರಾತ್ರೋ ರಾತ್ರಿ ಮಹಿಳೆಯ ಕತ್ತು ಹಿಸುಕಿ ಕೊಲೆ

ಮಹಿಳೆಯೋರ್ವರನ್ನು ಕತ್ತು ಹಿಸುಕಿ ಕೊಲೆಗೈದ ಘಟನೆ ಪೆರ್ನೆ ಗ್ರಾ.ಪಂ ವ್ಯಾಪ್ತಿಯ ಬಿಳಿಯೂರಿನ ದರ್ಖಾಸ್ ನಲ್ಲಿ ನಡೆದಿದೆ. ಕೊಲೆಯ ಬಗ್ಗೆ ಅಕ್ಕನ ಮಗನಾದ ಅಪ್ರಾಪ್ತ ಬಾಲಕನ ಮೇಲೆ ತೀವ್ರ ಸಂಶಯ ವ್ಯಕ್ತವಾಗಿದೆ. ದರ್ಖಾಸ್ ನ ಹೇಮಾವತಿ ಮೃತ ಮಹಿಳೆಯಾಗಿದ್ದು, ಜೂನ್ 16 ರಂದು ಮಧ್ಯರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದ್ರೆ ಅವರ

ಪುತ್ತೂರು: ಕಳೆದುಹೋಗಿದ್ದ ಚಿನ್ನದ ಸರ ವಾರಸುದಾರರಿಗೆ ಹಸ್ತಾಂತರ

ಪುತ್ತೂರು ತಾಲೂಕು ಕುಂಬ್ರ ನಿವಾಸಿ ವಿದ್ಯಾ ರೈ ಎಂಬವರ ಸುಮಾರು 27 ಗ್ರಾಂ ತೂಕದ ಚಿನ್ನದ ಸರ ಪುತ್ತೂರು ಗಾಂಧಿ ಕಟ್ಟೆ ಬಳಿ ಕಳೆದುಕೊಂಡಿದ್ದರು. ಈ ಬಂಗಾರದ ಸರ ಕೊಡಿಪಾಡಿ ನಿವಾಸಿ ದಿನೇಶ್ ಭವನ ಲಾಡ್ಜ್ ನೌಕರರಿಗೆ ಸಿಕ್ಕಿದ್ದು ಅದನ್ನು ಪ್ರಾಮಾಣಿಕತೆಯಿಂದ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದು ಬಳಿಕ ವಿದ್ಯಾ ರೈ ಅವರನ್ನು ಠಾಣೆಗೆ ಕರೆಯಿಸಿ ಅವರಿಗೆ ಹಸ್ತಾಂತರಿಸಿದ್ದಾರೆ.

ಪುತ್ತೂರು: ರೈ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಕೊಡೆ ವಿತರಣೆ

ಪುತ್ತೂರು: ಸಮಾಜದಲ್ಲಿ ನೊಂದವರ ಮತ್ತು ಬಡವರ ಸೇವೆಯೇ ನಮ್ಮ ಟ್ರಸ್ಟ್ ನ ಮೂಲ ಧ್ಯೇಯವಾಗಿದೆ ಎಂದು ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹೇಳಿದರು. ಅವರು ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಅರ್ಕ ಸ.ಹಿ .ಪ್ರಾ . ಶಾಲೆ ಯ ವಿದ್ಯಾರ್ಥಿ ಗಳಿಗೆ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಾದ ಇಬ್ರಾಹಿಂ , ಖಾದರ್ ಕಲ್ಲಂದಡ್ಕ ಮತ್ತು ಬಾಲಕೃಷ್ಣ ಇವರು ಕೊಡೆಗಳನ್ನು ಕೊಡುಗೆಯಾಗಿ

ಪುತ್ತೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಖಚಿತ – ಪ್ರತಾಪ ಸಿಂಹ ನಾಯಕ್ ವಿಶ್ವಾಸ

ಪುತ್ತೂರು: ರಾಜ್ಯ ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ಜೂನ್ 3ರಂದು ನಡೆಯುವ ಚುನಾವಣೆಯಲ್ಲಿ ಎಲ್ಲ ಆರು ಸ್ಥಾನಗಳಲ್ಲೂ ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಗೆಲುವು ಸಾಧಿಸಲಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಬಂಡಾಯವಿದ್ದರೂ, ಬಿಜೆಪಿಯಂಥ ರಾಷ್ಟ್ರೀಯ ಪಕ್ಷದ ಸಂಘಟನಾ ಸಾಮರ್ಥ್ಯದ ಎದುರು ಬಂಡಾಯ ಅಭ್ಯರ್ಥಿ ಗೆಲುವು ಸಾಧಿಸಲು ಸಾಧ್ಯವೇ ಇಲ್ಲ ಎಂದು ಹಿರಿಯ ಬಿಜೆಪಿ ಮುಖಂಡರೂ, ವಿಧಾನ ಪರಿಷತ್ ಸದಸ್ಯರೂ ಆದ ಪ್ರತಾಪ ಸಿಂಹ ನಾಯಕ್ ಹೇಳಿದರು.

ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಮಹಾಸಭೆ

ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರಕ್ಕೆ ಮುಂದಿನ ಎರಡು ವರ್ಷ ಅವಧಿಗೆ ನೂತನ ಅದ್ಯಕ್ಷ ಕಾರ್ಯದರ್ಶಿ ಕಾರ್ಯಕಾರಿ ಸಮೀತಿ ರಚಿಸಲಾಯಿತು. ಶಿಕ್ಷಣ ಸಂಪನ್ಮೂಲ ಒಕ್ಕೂಟದ ಪ್ರತಿನಿಧಿಯಾಗಿ ನಾರಾಯಣ ಕಿಲಂಗೊಡಿ ಆಗಮಿಸಿದ್ದರು. ಸಲಹಾ ಸಮೀತಿಗೆ ಕಸ್ತೂರಿ ಬೊಳುವಾರ್ ಮತ್ತು ನಯನಾ ರೈ, ಪತ್ರಕರ್ತ ಸಂಶುದ್ದೀನ್ ಸಂಪ್ಯ, ನೋಟರಿ ಸಾಹಿರಾ ಜುಬೈರ್ ಇವರನ್ನು ಆಯ್ಕೆ ಮಾಡಲಾಯಿತು. ನೂತನ ಅದ್ಯಕ್ಷರಾಗಿ ಮೊಹಮ್ಮದ್ ರಫೀಕ್ ದರ್ಬೆ, ಉಪಾದ್ಯಕ್ಷರಾಗಿ ರೋಹಿಣಿ ರಾಘವ,

ಸವಣೂರು : ಮಾ.ಧನ್ವಿತ್ ಚಿಕಿತ್ಸೆಗೆ ಮನವಿ

ಎಲ್ಲಾ ಮಕ್ಕಳಂತೆ ಆಟದಲ್ಲೂ ಪಾಠದಲ್ಲೂ ಸದಾ ಚಟುವಟಿಕೆಯಿಂದ್ದಿದ್ದ 13 ವರ್ಷದ ಬಾಲಕ ಸವಣೂರಿನ ಧನ್ವಿತ್ ಈಗ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮಲಗಿದ್ದಾನೆ. ಎರಡು ತಿಂಗಳ ಹಿಂದೆ ವಾಂತಿ ಕಾಣಿಸಿಕೊಂಡ ಈತನಿಗೆ ಸಾವಿರಾರು ರೂಪಾಯಿ ಖರ್ಚು ಮಾಡಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿದರೂ ಫಲಕಾರಿ ಆಗಲಿಲ್ಲ. ಬಳಿಕ ಮಂಗಳೂರಿನ ಕೆ. ಎಂ.ಸಿಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸಿದೇ ಮಂಗಳೂರಿನ ಫಸ್ಟ್ ನ್ಯೂರೊಗೆ ದಾಖಲಿಸಲಾಯಿತು. ಇಲ್ಲಿ ಈತನಿಗೆ ಮೆದುಳು

ಪುತ್ತೂರು : ವೈದ್ಯರ ಎಡವಟ್ಟಿನಿಂದ ವ್ಯಕ್ತಿ ಸಾವು

ಪುತ್ತೂರು : ವೈದ್ಯರ ಎಡವಟ್ಟಿಗೆ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ರಾತ್ರೋರಾತ್ರಿ ರೋಗಿಯ ಸಂಬಂಧಿಕರು ಮತ್ತು ಸಾರ್ವಜನಿಕರು ಆಸ್ಪತ್ರೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ ಕೃಷ್ಣಪ್ಪ ಗೌಡ ಎಂಬವರು ಜ್ವರದ ಕಾರಣ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ ಪರೀಕ್ಷಿಸಿದ ವೈದ್ಯರು ನಾಲಿಗೆಯ ಕೆಳ ಭಾಗದಲ್ಲಿ ಗೆಡ್ಡೆಯ ಬಗ್ಗೆ ಸೂಚನೆ ನೀಡಿದ್ದರು. ಬಳಿಕ ಗೆಡ್ಡೆಯನ್ನ

ಸುಳ್ಯ: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ-ಪ್ರಮುಖ ಆರೋಪಿ ಮುಸ್ತಾಫ ಪೈಚಾರ್ NIA ಬಲೆಗೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ತಂಡ ಮೂವರನ್ನು ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸುಳ್ಯ ಮೂಲದ ಮುಸ್ತಫಾ ಪೈಚಾರ್, ಸೋಮವಾರಪೇಟೆ ಮೂಲದ ಇಲ್ಯಾಸ್ ಹಾಗೂ ಸಿರಾಜ್ ಎಂದು ಗುರುತಿಸಲಾಗಿದೆ. ಪ್ರವೀಣ್ ನೆಟ್ಟಾರು ಪ್ರಕರಣದ ನಾಲ್ಕನೇ ಆರೋಪಿ ಎಂದು ಗುರುತಿಸಲಾಗಿದ್ದ ಮುಸ್ತಫಾ ಪೈಚಾರ್ ಹಾಗೂ ಇಲ್ಯಾಸ್ ಆನೆಮಹಲ್‌ನ ಸಿರಾಜ್ ಬಳಿ ಕೆಲಸಕ್ಕೆ ಸೇರಿದ್ದರು ಎನ್ನಲಾಗಿದ್ದು, ಆರೋಪಿಗಳಿಗೆ ಆಶ್ರಯ ನೀಡಿದ್ದ

ಚುನಾವಣಾ ಆಯೋಗದ ನಿಯಮ ಮೀರಿದ್ದಲ್ಲಿ ಕಟ್ಟುನಿಟ್ಟಿನ ಕ್ರಮ : ಜುಬಿನ್

ಪುತ್ತೂರು: ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನ ಸಂದರ್ಭದಲ್ಲಿ ಪ್ರತೀ ಮತಗಟ್ಟೆಯ ಹೊರಗೆ ರಾಜಕೀಯ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ತಮ್ಮದೇ ಆದ ಬೂತ್ ತೆರೆಯಲು ಅವಕಾಶವಿದ್ದರೂ ಇದಕ್ಕೆ ಕಟ್ಟುನಿಟ್ಟಿನ ನಿಯಮಗಳು ಅನ್ವಯವಾಗುತ್ತವೆ ಎಂದು ಪುತ್ತೂರು ಸಹಾಯಕ ಆಯುಕ್ತರೂ, ಸಹಾಯಕ ಚುನಾವಣಾ ಅಧಿಕಾರಿಗಳೂ ಆಗಿರುವ ಜುಬಿನ್ ಮೊಹಾಪಾತ್ರ ಹೇಳಿದರು. ಈ ಬಗ್ಗೆ ಮಾಹಿತಿ ನೀಡಿದ ಅವರು, ಮತಗಟ್ಟೆಯ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ

ಪುತ್ತೂರು: ದಿ. ಬೆಳ್ಯಪ್ಪ ಗೌಡ ಪೆರ್ಲಂಪಾಡಿ ಅವರಿಗೆ ನುಡಿನಮನ

ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿ ಹೊಟೇಲ್ ಉದ್ಯಮಿಯಾಗಿದ್ದ ಬೆಳ್ಯಪ್ಪ ಗೌಡ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವು ಪೆರ್ಲಂಪಾಡಿಯ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಬೆಳ್ಯಪ್ಪ ಗೌಡರು ಕಳೆದ 50 ವರ್ಷಗಳಿಂದ ಹೊಟೇಲ್ ಉದ್ಯಮದಲ್ಲಿ ತೊಡಗಿಕೊಂಡಿದ್ದು, ಹಸಿವಿನಿಂದ ಬಂದವರಿಗೆ ಅನ್ನದಾತರಾಗಿದ್ದರು. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಎಪ್ರಿಲ್ 7ರಂದು ನಿಧನರಾಗಿದ್ದರು.