ರಾಷ್ಟ್ರೀಯ ಹೆದ್ದಾರಿಗೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 14-10-2025 ರಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ
ಹೆಬ್ರಿ,ಅ,14: ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಸುದೀಪ್ ಭಂಡಾರಿಯವರು ಜೀವನ ನಿರ್ವಹಣೆಗೆ ಹೆಬ್ರಿಯಲ್ಲಿ ವೈನ್ಸ್ ಶಾಪ್ ನಡೆಸಿಕೊಂಡಿದ್ದರು. ಅತ್ಯಂತ ಸರಳ ವ್ಯಕ್ತಿತ್ವದ ಸುದೀಪ್ ಭಂಡಾರಿಯವರ ಆತ್ಮಹತ್ಯೆ ಸುದ್ದಿ ಕೇಳಿ ಹೆಬ್ರಿ ಪರಿಸರದ ಜನರ
ಉಡುಪಿ:ಉಡುಪಿಯ ನೇತ್ರ ಜ್ಯೋತಿ ಕಾಲೇಜಿನಲ್ಲಿ ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆಓರಿಯೆಂಟೇಶನ್ ಡೇ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ ನ ಡೀನ್ ಡಾ|ಅರುಣ್ ಮಯ್ಯ ಮಾತನಾಡಿ ಅರೋಗ್ಯ ಕ್ಷೇತ್ರ ಬಹಳಷ್ಟು ವಿಶಾಲವಾಗಿದ್ದು, ಇದಕ್ಕೆ ಜಗತ್ತಿನ ಎಲ್ಲಾ ಕಡೆ ಬೇಡಿಕೆಗಳಿದ್ದು ಶ್ರಮ, ಶ್ರದ್ದೆ ಇಂದ ಓದಿದರೆ ಶ್ರೇಯಸ್ಸು ಖಂಡಿತ ನಿಮ್ಮದಾಗುತ್ತದೆ ಎಂದು
ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎಮ್ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಭಾನುವಾರ, 5 ನೇ ಅಕ್ಟೋಬರ್ 2025ರಂದು ಜೆಎಸ್ ಸ್ಕೇರ್ನ ನೆಲಮಹಡಿಯಲ್ಲಿ ಉದ್ಘಾಟಿಸಲಾಯಿತು. ನೂತನ ಶಾಖೆಯನ್ನು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಉದ್ಘಾಟಿಸಿದರು. ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್ನ ಧರ್ಮಗುರು ರೆ.ಡಾ.ರೋಕ್ ಡಿಸೋಜ ನೂತನ ಶಾಖೆಯನ್ನು ಆಶೀರ್ವಚಿಸಿದರು. ಉಡುಪಿ ಧರ್ಮಪ್ರಾಂತ್ಯದ ಪಿಆರ್ಒ ಮತ್ತು ತೊಟ್ಟಂ ಚರ್ಚ್ನ ಧರ್ಮಗುರು
ಉಡುಪಿ ಜಿಲ್ಲಾ ಪಂಚಾಯತ್ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (DISHA) ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಬಗ್ಗೆ ಮತ್ತು ಪ್ರಸ್ತುತ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ
ತಾಲೂಕು ಆಡಳಿತ ಸೌಧ ಬೈಂದೂರು, ತಾಲೂಕು ಪಂಚಾಯತ್ ಬೈಂದೂರು ವತಿಯಿಂದ ವಿಶ್ವಕರ್ಮ ಜಯಂತಿ ಬುಧವಾರ ಬೈಂದೂರು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನಡೆಯಿತು. ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರ ಕಳಿ ಚಂದ್ರಯ್ಯ ಆಚಾರ್ಯ ವಿಶ್ವಕರ್ಮ ಜಯಂತಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಶ್ವಕರ್ಮ ಜಯಂತಿಯು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಇಡೀ ವಿಶ್ವಕ್ಕೆ ಗುರುವಾದ, ದೇವಲೋಕ, ಸ್ವರ್ಗಲೋಕವನ್ನು ಹಾಗೂ ದೇವತೆಗಳಿಗೆ ವಾಹನಗಳನ್ನು
ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಉಡುಪಿ ಬನ್ನಂಜೆಯ ನಾರಾಯಣಗುರು ವೃತ್ತವನ್ನು ತೆರವುಗೊಳಿಸಿರುವುದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ನಾರಾಯಣ ಗುರು ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮ ಫಲಕದ ವೃತ್ತ ರಚಿಸಿದ್ದು, ಇಲ್ಲಿದ್ದ ವೃತ್ತವನ್ನು ಪೊದೆಗಳಲ್ಲಿ ಬಿಸಾಡಿರುವುದು ಖಂಡನೀಯ. ಇದು ದಾರ್ಶನಿಕ ಮಹಾನ್ ಪುರುಷರಿಗೆ ಮಾಡಿದ ಮಹಾ ಅಪಮಾನವಾಗಿದೆ. ನಾನು ಶಾಸಕನಾಗಿದ್ದ ಅವಧಿಯಲ್ಲಿ ವಿಶೇಷವಾಗಿ ಪ್ರಯತ್ನಿಸಿದ ಫಲವಾಗಿ ಬನ್ನಂಜೆ ವೃತ್ತಕ್ಕೆ
ಪುತ್ತೂರು ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ .2024-25ನೇ ಸಾಲಿನ ಸಾಧನೆಗಾಗಿ ನೀಡಲ್ಪಡುವ ಪ್ರಶಸ್ತಿಯನ್ನು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು.ಸತತ ಏಳನೇ ಬಾರಿಗೆ ಪ್ರಶಸ್ತಿಗೆ ಭಾಜನರಾಗಿರುವ ಆರ್ಯಾಪು ಸಹಕಾರಿ ಸಂಘಕ್ಕ ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಹಾಗೂ ಮುಖ್ಯ ಕಾರ್ಯ ನಿರ್ವಾಣಾಧಿಕಾರಿಗಳಾದ ಶ್ರೀಮತಿ ಜಯಂತಿ ಭಾಸ್ಕರ್ ರವರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ
ಮಣಿಪಾಲ ಟೈಗರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ತೆಗೆಯುವುದು ಮತ್ತು ಸಾಗಾಣಿಕೆಗೆ ನಿರ್ಬಂಧ ಹೇರಿರುವ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಘಟಕದ ಅ ರಾ ಪ್ರಭಾಕರ ಪೂಜಾರಿ ಮುಂದಾಳತ್ವದಲ್ಲಿ ಇಂದು ಜಾಥಾ ಕಾರ್ಯಕ್ರಮ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಘಟಕದ ಜಿಲ್ಲಾಧ್ಯಕ್ಷರಾದ ಅ ರಾ ಪ್ರಭಾಕರ ಪೂಜಾರಿ ಜಾಥಾ ಕಾರ್ಯಕ್ರಮದಲ್ಲಿ
ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ಉಡುಪಿ ಇಲ್ಲಿ ಉಡುಪಿ ಡಿಸ್ಟ್ರಿಕ್ಟ್ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಉಡುಪಿ ಇದರ ವತಿಯಿಂದ ನಡೆದ “ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಅಂಡರ್ 23 ಅಥ್ಲೆಟಿಕ್ ಮೀಟ್ – 2025” ರ ಸಮಾರೋಪ ಸಮಾರಂಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು.