ಪುತ್ತೂರು ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ .2024-25ನೇ ಸಾಲಿನ ಸಾಧನೆಗಾಗಿ ನೀಡಲ್ಪಡುವ ಪ್ರಶಸ್ತಿಯನ್ನು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು.ಸತತ ಏಳನೇ ಬಾರಿಗೆ ಪ್ರಶಸ್ತಿಗೆ ಭಾಜನರಾಗಿರುವ ಆರ್ಯಾಪು ಸಹಕಾರಿ ಸಂಘಕ್ಕ ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಹಾಗೂ ಮುಖ್ಯ ಕಾರ್ಯ
ಮಣಿಪಾಲ ಟೈಗರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ತೆಗೆಯುವುದು ಮತ್ತು ಸಾಗಾಣಿಕೆಗೆ ನಿರ್ಬಂಧ ಹೇರಿರುವ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಘಟಕದ ಅ ರಾ ಪ್ರಭಾಕರ ಪೂಜಾರಿ ಮುಂದಾಳತ್ವದಲ್ಲಿ ಇಂದು ಜಾಥಾ ಕಾರ್ಯಕ್ರಮ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಘಟಕದ ಜಿಲ್ಲಾಧ್ಯಕ್ಷರಾದ ಅ ರಾ ಪ್ರಭಾಕರ ಪೂಜಾರಿ ಜಾಥಾ ಕಾರ್ಯಕ್ರಮದಲ್ಲಿ
ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ಉಡುಪಿ ಇಲ್ಲಿ ಉಡುಪಿ ಡಿಸ್ಟ್ರಿಕ್ಟ್ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಉಡುಪಿ ಇದರ ವತಿಯಿಂದ ನಡೆದ “ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಅಂಡರ್ 23 ಅಥ್ಲೆಟಿಕ್ ಮೀಟ್ – 2025” ರ ಸಮಾರೋಪ ಸಮಾರಂಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು.
ನಿಡಂಬೂರು ಯುವಕ ಮಂಡಲ ರಿ. ಕಡೆಕಾರು ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಇಂದು ದಿನಾಂಕ 25-08-2025 ರಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್, ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ
ಕಾಪು ಪ್ರದೇಶದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಭಾರತದ ಪೂರ್ವ ಪ್ರಧಾನಮಂತ್ರಿ, “ಭಾರತದ ಆಧುನಿಕ ವಿಕಸನ ಶಿಲ್ಪಿ” ಎಂದು ಕರೆಯಲ್ಪಡುವ ರಾಜೀವ್ ಗಾಂಧಿ ಹಾಗೂ ಕರ್ನಾಟಕದ ದಿಗ್ಗಜ ನಾಯಕ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಹುಟ್ಟುಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, “ರಾಜೀವ್ ಗಾಂಧಿ ಅವರು ಭಾರತದ ತಂತ್ರಜ್ಞಾನ ಕ್ರಾಂತಿಯ ಮುಂಚೂಣಿಗರಾಗಿದ್ದು,
ಉಡುಪಿ: ನಗರದ ಹೆಸರಾಂತ ಆಭರಣ ಜ್ಯುವೆಲ್ಲರ್ಸ್ ನಿರ್ದೇಶಕ ಸುಭಾಶ್ ಎಂ.ಕಾಮತ್ ಕೀನ್ಯಾದ ಮಸೈಮಾರಾದಲ್ಲಿ ಸೆರೆಹಿಡಿದಿರುವ ಎರಡು ಚೀತಾಗಳು ತನ್ನ ಬೇಟೆಯನ್ನು ಬೆನ್ನು ಹತ್ತುವ “ಹಂಗರ್ ವರ್ಸಸ್ ಹೋಪ್” ಛಾಯಾಚಿತ್ರಕ್ಕೆ ಓರಾ ಡಿ ಫ್ರೇಮ್ ಸರ್ಕ್ಯುಟ್ ಆಯೋಜಿಸಿದ ಛಾಯಾಚಿತ್ರ ಸ್ಪರ್ಧೆಯ ವನ್ಯಜೀವಿ ವಿಭಾಗದಲ್ಲಿ ಕ್ಲಬ್ ಗೋಲ್ಡ್ ಅವಾರ್ಡ್ ಪಡೆದಿರುತ್ತಾರೆ. ಐವತ್ತಕ್ಕೂ ಹೆಚ್ಚು ದೇಶಗಳ ಛಾಯಾಗ್ರಾಹಕರು ಭಾಗವಹಿಸಿರುವ ಈ ಸ್ಪರ್ಧೆಯು ಪ್ರತಿಷ್ಟಿತ ಎಫ್. ಐ. ಎ. ಪಿ
ಉಡುಪಿ ಜಿಲ್ಲಾ ಪೊಲೀಸ್ ಹಾಗೂ ಆರಕ್ಷಕ ಠಾಣೆ ಬೈಂದೂರು ಇದರ ವತಿಯಿಂದ ಪೊಲೀಸ್ ಇಲಾಖೆಯ ಮಹತ್ವಕಾಂಕ್ಷೆಯ ದೃಷ್ಟಿ ಯೋಜನೆ ಉದ್ಘಾಟನೆ ಬೈಂದೂರು ರೋಟರಿ ಭವನದಲ್ಲಿ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠ ಹರಿರಾಂ ಶಂಕರ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯದಲ್ಲಿ ಯೇ ಪ್ರಥಮ ಬಾರಿಗೆ ದೃಷ್ಟಿ ಎಂಬ ವಿನೂತನ ಕ್ರಮ ಅಳವಡಿಸುತ್ತಿದ್ದೇವೆ. ದೃಷ್ಟಿ ಯೋಜನೆಯನ್ನು
ಬೈಂದೂರು: ಶ್ರೀಗುರುರಾಘವೇಂದ್ರ ಸ್ವಾಮಿ ಮಠ ವತ್ತಿನೆಣೆ ಬೈಂದೂರು ಇದರ 354ನೇ ಆರಾಧನ ಮಹೋತ್ಸವ ನಡೆಯಿತು. ಬೆಳಿಗ್ಗೆ ಪಾದಪೂಜೆ, ಅರ್ಚನೆ, ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ, ಮಹಾಪೂಜೆ, ಮಹಾಮಂಗಳಾರತಿ,ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಸಾವಿರಾರು ಭಕ್ತರು ಆಗಮಿಸಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಗುರು ಸಾರ್ವಭೌಮರ ಆರಾಧನ ಮಹೋತ್ಸವದ ಪ್ರಯುಕ್ತ ಸೇವಾ ಸಂಗಮ ಶಿಶು ಮಂದಿರ
ಛತ್ತೀಸ್‌ಗಢದಲ್ಲಿ ಇಬ್ಬರು ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪದ ಆಧಾರದ ಮೇಲೆ ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಸಚಿವರು ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ತೀವ್ರವಾಗಿ ಖಂಡಿಸಿದ್ದಾರೆ. ಸಿಸ್ಟರ್ಸ್ ಆಫ್ ಮೇರಿ ಇಮ್ಯಾಕುಲೇಟ್ ಆಫ್ ಅಸಿಸ್ಸಿ ಸಂಸ್ಥೆಯ ಸದಸ್ಯರಾದ ಸಿಸ್ಟರ್ ವಂದನಾ ಫ್ರಾನ್ಸಿಸ್ ಮತ್ತು ಸಿಸ್ಟರ್ ಪ್ರೀತಿ ಮೇರಿ ಅವರನ್ನು ಮಾನವ ಕಳ್ಳಸಾಗಣೆ ಹಾಗೂ ಧಾರ್ಮಿಕ ಮತಾಂತರದ
ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜು ವಿದ್ಯಾರ್ಥಿಗಳಿಂದ ದಿನಾಂಕ 30 ನೇ ಬುಧವಾರದಂದುಕುಂದಾಪುರ ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ಸಿ ಪಿ ಆರ್ ಹಾಗೂ ರಕ್ತದ ಗುಂಪು ಪರೀಕ್ಷೆನಡೆಸಲಾಯಿತು. ಹೃದಯಸ್ತoಭನ ಅಥವಾ ಉಸಿರಾಟ ನಿಂತು ಹೋದಾಗ ರೋಗಿಯನ್ನು ಉಳಿಸಲು ಮಾಡುವ ತುರ್ತು ಚಿಕಿತ್ಸೆ ಹಾಗೂ ವಿದ್ಯಾರ್ಥಿಗಳ ರಕ್ತದ ಗುಂಪು ಪರೀಕ್ಷೆ ಕಾರ್ಯಕ್ರಮವನ್ನು ಯಶಸ್ವೀಯಾಗಿ ನಡೆಸಿ ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡರು.




























