Home Archive by category udupi (Page 5)

ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ತಡೆಗಟ್ಟುವ ಉದ್ದೇಶದಿಂದ ಆರೋಪಿಗಳ ಬಂಧನ

ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿರುವ ಆರೋಪಿಗಳ ಬಗ್ಗೆ ಕಡಿವಾಣ ಹಾಕಲು ಹಾಗೂ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ತಡೆಗಟ್ಟುವ ಉದ್ದೇಶದಿಂದ ಪದೇ ಪದೇ ಪ್ರಕರಣಗಳಲ್ಲಿ ಭಾಗಿಯಾಗಿರುವ ಜಿಲ್ಲೆಯ ಹಲವು ಠಾಣೆಯಲ್ಲಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ವಿರುದ್ದ ಪಿಟ್ ಎನ್.ಡಿ.ಪಿ.ಎಸ್ ಕಾಯಿದೆ ಅಡಿಯಲ್ಲಿ ಕೃಷ್ಣ ಆಚಾರಿ @

ಉಡುಪಿ: ಜೂಬ್ಲಿಯೆಂಟ್ ಮೋಟಾರ್‌ವರ್ಕ್ಸ್‌ನಲ್ಲಿ ನೂತನ ವಿಂಡ್ಸರ್ ಇವಿ ಪ್ರೋ ಕಾರನ್ನು ಲೋಕಾರ್ಪಣೆ

ನೂತನ ವಿಂಡ್ಸರ್ ಇವಿ ಪ್ರೋ ಕಾರನ್ನು ಗಣ್ಯರು ಮಾರುಕಟ್ಟೆಗೆ ಲೋಕಾರ್ಪಣೆ ಮಾಡಿದರು. ಈ ಹೊಸ ’ವಿಂಡ್ಸರ್ ಇವಿ ಪ್ರೊ’ ನಲ್ಲಿ, ಗ್ರಾಹಕರು ಬಿಗ್ ಬ್ಯಾಟರಿ ಮತ್ತು ಲಾಂಗ್ ರೇಂಜ್ ಅನ್ನು ಪಡೆಯುತ್ತಾರೆ. ಈ ಹೊಸ ಇವಿ ಬ್ಯಾಟರಿಯು ಒಮ್ಮೆ ಪೂರ್ಣ ಚಾರ್ಜ್ ಮಾಡಿದರೆ 449 ಕಿ.ಮೀ ವರೆಗೆ ಪ್ರಯಾಣಿಸಬಹುದು. ಒಉ ಈ ಹೊಸ ಕಾರನ್ನು ಹಲವು ವಿಶಿಷ್ಟ, ಅಪ್‌ಡೇಟ್ಡ್ ಫೀಚರ್ಸ್‌ಗಳೊಂದಿಗೆ ಬಿಡುಗಡೆ ಮಾಡಿದೆ. ಸಾಮಾನ್ಯ ವಿಂಡ್ಸರ್‌ಗೆ ಹೋಲಿಸಿದರೆ ಇದು ಹಲವು ಹೊಸ, ಸುಧಾರಿತ

ಜಿಲ್ಲಾಡಳಿತಕ್ಕೆ ಮೂರು ದಿನಗಳ ಗಡುವು : ಕೊಲ್ಲೂರಿನ ಸಂತ್ರಸ್ತ ಕೊರಗ ಸಮುದಾಯದ ಮಹಿಳೆಗೆ ಪರಿಹಾರ ಹಾಗೂ ನ್ಯಾಯ ಒದಗಿಸಬೇಕು.ಇಲ್ಲವಾದಲ್ಲಿ ಅನಿರ್ದಿಷ್ಟಾವಧಿ ಧರಣಿ: ಬೈಂದೂರು ಶಾಸಕ ಗಂಟಿಹೊಳೆ

ಕೊಲ್ಲೂರಿನಲ್ಲಿ ಕಾನೂನು ಕೋರ್ಟು ಆದೇಶ ನೆಪದಲ್ಲಿ ಒಂಚೂರು ಮಾನವೀಯತೆ ಇಲ್ಲದೇ ಕಳೆದ ಹಲವಾರು ವರ್ಷಗಳಿಂದ ವಾಸ ಮಾಡುತ್ತಿದ್ದ ಸಮಾಜದಲ್ಲಿ ಅತೀ ನಿರ್ಲಕ್ಷಿತ ಹಾಗೂ ಸೂಕ್ಷ್ಮ ಸಮುದಾಯವಾದ ಕೊರಗ ಕುಟುಂಬದ ವಾಸ್ತವ್ಯದ ಮನೆಯನ್ನು ನಾಶ ಪಡಿಸಿರುವುದು ತೀರಾ ದುಃಖಕರ ಹಾಗೂ ದುರದೃಷ್ಟಕರ ಸಂಗತಿಯಾಗಿದೆ.ಈ ಪ್ರಕ್ರಿಯೆಯಲ್ಲಿ ಪೊಲೀಸ್ ಇಲಾಖೆಯೂ ಸೇರಿದಂತೆ ಈ ಪ್ರಕರಣವು ಈ ಹಂತದವರೆಗೆ ಬರುವಲ್ಲಿ ಜಿಲ್ಲಾಡಳಿತ ನಡೆದು ಕೊಂಡ ರೀತಿ ತೀರಾ ಖಂಡನೀಯ. ಹಲವು ವರ್ಷಗಳಿಂದ ಆ

ಕಾರ್ಕಳ: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆಗೆ ಹೈಕೋರ್ಟ್ ಜಾಮೀನು ಮಂಜೂರು

ಕಾರ್ಕಳ: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ(44) ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28)ಗೆ ರಾಜ್ಯ ಹೈಕೋರ್ಟ್ ಜಾಮೀನು ನೀಡಿ ಆದೇಶಿಸಿದೆ. ದಿಲೀಪ್ ಹೆಗ್ಡೆ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳ ಮಾರ್ಚ್ 4ರಂದು ತಿರಸ್ಕರಿಸಿದ್ದು, ಈ ಹಿನ್ನೆಲೆಯಲ್ಲಿ ಆರೋಪಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ

ಮುನಿಯಾಲಿನ ಆಪ್ತಿ ಆಚಾರ್ಯ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ

ಮುನಿಯಾಲಿನ ಅಪ್ತಿ ಆಚಾರ್ಯ ಕಳೆದ ಮಾರ್ಚ್ 01 ರಂದು ಜಿಮ್ನಾಸ್ಟಿಕ್ ನ ಮಾದರಿಯಲ್ಲೊಂದಾದ ಹೆಡ್ರೋಲ್ ನಲ್ಲಿ ಗರಿಷ್ಠ 4 ನಿಮಿಷ 40 ಸೆಕೆಂಡ್ ನಲ್ಲಿ ಸತತ 65 ರೌಂಡ್ ಗಳನ್ನು ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾಳೆ. ಮುನಿಯಲಿನ ಶಿವಾನಂದ ಆಚಾರ್ಯ ಮತ್ತು ಲತಾ ಆಚಾರ್ಯ ದಂಪತಿಯ ಪುತ್ರಿಯಾಗಿರುವ ಆಪ್ತಿ ಆಚಾರ್ಯ ಹೆಬ್ರಿಯ ಎಸ್. ಆರ್ ಪಬ್ಲಿಕ್ ಸ್ಕೂಲಿನ 4ನೇ ತರಗತಿಯ ವಿದ್ಯಾರ್ಥಿಯಾಗಿದ್ದು ಕಳೆದ ಎರಡು ವರ್ಷಗಳಿಂದ ಅವಿನಾಶ್ ಪೆರ್ಡೂರು ರ ವರಿಂದ

ಹೆಮ್ಮಾಡಿ : ಸ್ಕೂಟಿಗೆ ಕಾರು ಡಿಕ್ಕಿ- ಮಕ್ಕಳಿಬ್ಬರು ಪಾರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆರಾಟೆ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಹೆಮ್ಮಾಡಿ ಹೇಮಾಪುರ ಮಠದ ಸಮಿಪ ಅದೆ ಮಾರ್ಗದಲ್ಲಿಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದು ಕೊಂಡ ಸ್ಕೂಟಿ ಪಲ್ಟಿಯಾಗಿ ಹೆದ್ದಾರಿ ಬದಿಯಲ್ಲಿ ನಿಂತು ಕೊಂಡಿದ್ದ ಲಾರಿ ಅಡಿಗೆ ಸಿಲುಕಿದ ಘಟನೆ ನಡೆದಿದೆ. ಅಪಘಾತದಲ್ಲಿ ಸ್ಕೂಟಿಯಲ್ಲಿ ಚಲಿಸುತ್ತಿದ್ದ ಮಹಿಳೆ ಸಹಿತ ಮಕ್ಕಳಿಬ್ಬರಿಗೆ ಗಾಯವಾಗಿದ್ದು ಪಾರಾಗಿದ್ದಾರೆ.

ಉಡುಪಿ ಶ್ರೀ ಕೃಷ್ಣ ಮಠಕ್ಕೆ ನಟ ಪ್ರೇಮ್ ಹಾಗೂ ನಟಿ ಶರಣ್ಯ ಶೆಟ್ಟಿ ಭೇಟಿ

ಖ್ಯಾತ ನಟ ನೆನಪಿರಲಿ ಖ್ಯಾತಿಯ ಪ್ರೇಮ್ ಹಾಗೂ ನಟಿ ಶರಣ್ಯಶೆಟ್ಟಿ ಅವರು ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಪ್ರಾತ:ಕಾಲದಿ ಉಡುಪಿ ಶ್ರೀ ಕೃಷ್ಣನ ವಿಶ್ವರೂಪದರ್ಶನ ಪಡೆದು ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥರಿಂದ ಕೋಟಿಗೀತಾಲೇಖನ ಯಜ್ಞ ದೀಕ್ಷೆ ಸ್ವೀಕರಿಸಿ ತೆರಳಿದರು.

ಹತ್ತು ಸಾವಿರ ಮನೆಗಳ ಪೈಕಿ ಒಂದೂ ಮತ್ಸ್ಯಾಶ್ರಯ ಮನೆ ಹಂಚಿಕೆಯಾಗಿಲ್ಲ, ಗಂಟಿಹೊಳೆ ಪ್ರಶ್ನೆಗೆ ಸರ್ಕಾರದ ಉತ್ತರ

ಬಜೆಟ್ ಅಧಿವೇಶನದಲ್ಲಿ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಮೀನುಗಾರರ ಪರವಾಗಿ ಧ್ವನಿ ಎತ್ತಿದ್ದು, ಸರ್ಕಾರದ ಉತ್ತರಕ್ಕೆ ಶಾಸಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸದನದಲ್ಲಿ, 2023-24 ಹಾಗೂ 2024-25 ನೇ ಸಾಲಿನಲ್ಲಿ ಮೀನುಗಾರಿಕೆ ಮತ್ಸ್ಯಾಶ್ರಯ ವಸತಿ ಯೋಜನೆಯಡಿ ಮಂಜೂರಾದ ಮನೆಗಳ ಪೈಕಿ ಎಷ್ಟು ಮನೆಗಳ ಕಾಮಗಾರಿ ಪ್ರಗತಿಯಲ್ಲಿವೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಶಾಸಕರ ಪ್ರಶ್ನೆಗೆ ಉತ್ತರಿಸಿರುವ ಮೀನುಗಾರಿಕ ಸಚಿವ ಮಾಂಕಾಳ್ ವೈದ್ಯ, 2023-24

ಕುಖ್ಯಾತ ದನಕಳ್ಳ ಮೊಹಮ್ಮದ್‌ ಯೂನಸ್‌ ಬಂಧನ

ಕುಖ್ಯಾತ ದನಕಳ್ಳ ಮೊಹಮ್ಮದ್‌ ಯೂನಸ್‌ ಬಂಧನವಾಗಿದೆ.ವಿವಿಧ ಠಾಣೆಗಳ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್‌ ದನಕಳ್ಳ ಮೊಹಮ್ಮದ್‌ ಯೂನಸ್‌ನನ್ನು ಮಾ. 7ರಂದು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಲ್ಲೂರು ಗ್ರಾಮದ ಬೋರ್ಕಟ್ಟೆ ದೊಡ್ಡಕಜೆಯ ಮೊಹಮ್ಮದ್‌ ಯೂನಸ್‌ (30) ಕಾರ್ಕಳ ತಾಲೂಕು ರೆಂಜಾಳದಲ್ಲಿ ಶುಕ್ರವಾರ ಬಂಧಿಸಲ್ಪಟಿದ್ದಾನೆ. ಈತನ ಮೇಲೆ ದನಕಳ್ಳತನಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ, ಅಜೆಕಾರು, ಹೆಬ್ರಿ, ಶಿರ್ವ, ಮೂಡುಬಿದಿರೆ ಮಾತ್ರವಲ್ಲದೇ

ಉಡುಪಿ: ಹೆದ್ದಾರಿ ಮಧ್ಯದಲ್ಲೇ ತ್ಯಾಜ್ಯ ಮೂಟೆ – ಸೂಕ್ತ ಕ್ರಮ ಕೈಗೊಳ್ಳುವಂತೆ ಮಣೂರು ಜನರ ಆಗ್ರಹ

ಉಡುಪಿ:-ಮಣೂರು ರಾಷ್ಟ್ರೀಯ ಹೆದ್ದಾರಿ 66ರ ಮಧ್ಯದಲ್ಲಿ ಕಿಡಿಗೇಡಿಗಳು ಮೂಟೆ ಗಟ್ಟಲೆ ತ್ಯಾಜ್ಯ ಎಸೆದು ಹೋಗುತ್ತಿರುವ ಘಟನೆ ಕಳೆದ ಎರಡು ದಿನಗಳಿಂದ ಸತತವಾಗಿ ನಡೆಯುತ್ತಿದೆ. ಸೋಮವಾರ ರಾತ್ರಿ ಬೆಳಗಾಗುವದರೊಳಗೆ ಒಂದು ಬಾರಿ ಗಾತ್ರದ ತ್ಯಾಜ್ಯದ ಚೀಲ ಕಾಣಿಸಿಕೊಂಡಿತ್ತು. ನಂತರ ಮಂಗಳವಾರ ಮುಂಜಾನೆಯೊಳಗೆ ಮತ್ತೆ ಮೂರು ಬಾರಿ ಗಾತ್ರದ ತ್ಯಾಜ್ಯದ ಚೀಲ ಅದೇ ಡಿವೈಡರ್ ಮಧ್ಯದಲ್ಲಿ ಕಿಡಿ ಗೇಡಿಗಳು ಎಸೆದು ಹೋಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಾರೀ ಆಕ್ರೋಶ