ಸಮುದಾಯ ಭವನಗಳಿಗೆ ಅಂಬೇಡ್ಕರ್ ಅವರ ಹೆಸರಿಡುವುದು ಮಾತ್ರ ಅಲ್ಲ, ಅವರ ತತ್ವ, ಆದರ್ಶಗಳನ್ನ ಯುವ ಪೀಳಿಗೆಗೂ ವರ್ಗಾಯಿಸುವ ಕಾರ್ಯ ಇಲ್ಲಿ ನಡೆಯಬೇಕು.ಅವರ ಅರ್ಧದಷ್ಟು ವ್ಯಕ್ತಿತ್ವವನ್ನಾದರೂ ನಾವು ಮೈಗೂಡಿಸಿ ಕೊಳ್ಳಬೇಕೆಂದು ಕರ್ನಾಟಕ ವಿದಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ,ದ.ಕ ಜಿಲ್ಲಾ ಪಂಚಾಯತ್
ಅಡ್ಯಾರು: ಕಾಲೇಜು ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿರ್ವಾಹಕ ಕರ್ತವ್ಯದಲ್ಲಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಅಡ್ಯಾರ್ ಸಮೀಪ ಇಂದು ಬೆಳಗ್ಗಿನ ವೇಳೆ ಸಂಭವಿಸಿದೆ.ಕುತ್ತಾರು ನಿವಾಸಿ ಸಂತೋಷ್ (40) ಮೃತರು. ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯಕ್ಕೆ ಸೇರಿದ ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಬೆಳಗ್ಗಿನ ವೇಳೆ ಶಾಲಾ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರಲು ತೆರಳುವ ಟ್ರಿಪ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ
ಉಳ್ಳಾಲ : ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಸ್ಕೂಟರೊಂದು ರಸ್ತೆ ಬದಿಯ ಮನೆಯ ಆವರಣ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆ ಎಂಬಲ್ಲಿ ನಡೆದಿದೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮೀ ಮಂದಿರ ಬಳಿಯ ನಿವಾಸಿ ರಾಘವೇಂದ್ರ ಸಾಲ್ಯಾನ್ (44)ಯಾನೆ ರಘು ಮೃತ ದುರ್ದೈವಿ. ಖಾಸಗಿ ಕಂಪನಿಯೊಂದರಲ್ಲಿ ಇಲೆಕ್ಟ್ರಿಕಲ್ ಗುತ್ತಿಗೆದಾರರಾಗಿದ್ದ
ಉಳ್ಳಾಲ: ಜು. 2 ರಂದು ರಾತ್ರಿ ಮಲಗುವ ಕೊಠಡಿ ಯಿಂದ ನಾಪತ್ತೆಯಾದ ಬೀರಿ ನಿವಾಸಿ ಯುವಕನ ಮೃತ ದೇಹ ಉಚ್ಚಿಲ ರೈಲ್ವೇ ಗೇಟ್ ಸಮೀಪ ಪತ್ತೆಯಾಗಿದೆ ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ತಿಳಿದು ಬಂದಿದೆ.ಕೋಟೆಕಾರು ಬೀರಿ ನಿವಾಸಿ ಮೋಹದಾಸ್ ಅಮೀನ್ ಎಂಬವರ ಪುತ್ರ ತೇಜಸ್(25) ಜು.2ರಂದು ರಾತ್ರಿ ಮಲಗುವ ಕೋಣೆಯಿಂದ ನಾಪತ್ತೆಯಾಗಿದ್ದನುಈ ಕುರಿತು ತಂದೆಯವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇಂದು ಬೆಳಿಗ್ಗೆ ರೈಲ್ವೇ
ಉಳ್ಳಾಲ: ಯುವತಿಯೋರ್ವಳು ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಉಳ್ಳಾಲ ಠಾಣಾ ವ್ಯಾಪ್ತಿಯ ಸರಹದ್ದಿನಲ್ಲಿ ಪತ್ತೆಯಾಗಿದ್ದು, ಮೈಪೂರ್ತಿ ಗಾಯದ ಗುರುತು ಪತ್ತೆ ಆಗಿದ್ದು, ಸಾಮೂಹಿಕ ಅತ್ಯಾಚಾರದ ಶಂಕೆ ಮೇಲೆ ಉಳ್ಳಾಲ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.ತಡರಾತ್ರಿ ವೇಳೆ ಹೊರರಾಜ್ಯದ ಯುವತಿ ನಶೆಯಿಂದ ಸ್ಥಳೀಯ ಮನೆಬಾಗಿಲು ಬಡಿದಿದ್ದಾಳೆ. ನೀರು ಕೇಳುತ್ತಿದ್ದಂತೆ ಅಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಈ ಕುರಿತು 112 ಗೆ ಮನೆಮಂದಿ ಫೋನಾಯಿಸಿ ಮಾಹಿತಿ
ಉಳ್ಳಾಲ: ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ಇಲ್ಲಿನ ಬಸ್ತಿಪಡ್ಪು ಎಂಬಲ್ಲಿ ಮನೆ ಆವರಣದಲ್ಲಿದ್ದ ತೆಂಗಿನ ಮರ ಉರುಳಿಬಿದ್ದು ಮನೆಗೆ ಹಾನಿಯುಂಟಾಗಿದೆ. ಬಸ್ತಿಪಡ್ಪುವಿನಲ್ಲಿರುವ ಯು.ಪಿ ಮಲ್ಯ ರಸ್ತೆಯಲ್ಲಿರುವ ವಿಶ್ವನಾಥ್ ತೇವುಲ ಎಂಬವರಿಗೆ ಸೇರಿದ ಮನೆಗೆ ಹಾನಿಯುಂಟಾಗಿದೆ. ಬುಧವಾರ ಸಂಜೆಯಿಂದ ಭಾರೀ ಮಳೆಯಾಗಿದ್ದು, ಜೋರಾಗಿ ಬೀಸಿದ ಗಾಳಿಯಿಂದ ಆವಾಂತರ ಉಂಟಾಗಿದೆ. ಮನೆಯೊಳಗೆ ಮನೆಮಂದಿಯಿದ್ದರೂ ಯಾವುದೇ ಜೀವಹಾನಿಯಿಲ್ಲದೇ ಪಾರಾಗಿದ್ದಾರೆ. ಮರ ನೇರವಾಗಿ ಛಾವಣಿ
ಮುಡಿಪು: ಕೊಣಾಜೆ ಅಸೈಗೋಳಿ ನಿವಾಸಿ ನಾರಾಯಣ(54) ಎಂಬುವವರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.ಅಸೈಗೋಳಿಯಲ್ಲಿ ರಿಕ್ಷಾಚಾಲಕರಾಗಿದ್ದ ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಅವರು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಇವರು ಕೆಲವು ತಿಂಗಳಷ್ಟೇ ಹೊಸ ರಿಕ್ಷಾ ಖರೀದಿಸಿದ್ದರು.ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 4ರ ಹರೆಯದ ವಿದ್ಯಾಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಸಂಭವಿಸಿದೆ. ಬಡಕಬೈಲು ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (4) ಮೃತ ವಿದ್ಯಾರ್ಥಿನಿ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ
ನಾಟೆಕಲ್ : ಬಸ್ -ಕಾರು ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಕಲ್ಕಟ್ಟ ಸಮೀಪದ ತಿರುವಿನಲ್ಲಿ ಇಂದು ಸಂಜೆ ವೇಳೆ ಸಂಭವಿಸಿದೆ. ಆಸೀಫ್ ಕಲ್ಕಟ್ಟ ಇವರ ಬಲಗೈ, ಭುಜದ ಮೂಲೆಗಳು ಮುರಿತಕ್ಕೊಳಗಾಗಿದ್ದರೆ, ಅರಾಫತ್ ಇನೋಳಿ ಎಂಬವರ ಕಾಲಿನ ಮೂಳೆಗಳು ಮುರಿತಕ್ಕೊಳಗಾಗಿದೆ. ಉಳಿದಂತೆ ಚಾಲಕ ಅಝ್ಮಾನ್, ಹ್ಯಾರೀಸ್ ಕಲ್ಕಟ್ಟ ಗಾಯಗೊಂಡಿದ್ದಾರೆ. ಮುಡಿಪುವಿನಿಂದ ಮಂಗಳೂರಿಗೆ ತೆರಳುವ ಎನ್ .ಎಸ್ ಟ್ರಾವೆಲ್ಸ್ ಬಸ್ಸು ವಿರುದ್ಧ
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ