Home Archive by category Uncategorized (Page 13)

ನವದೆಹಲಿ : ಲಾಲ್ ಗೋಯಲ್ ಅವರಿಗೆ ಪ್ರತಿಷ್ಠಿತ ಹಾರ್ಪ್ಸ್ ಪ್ರಶಸ್ತಿ

ಆರ್ಗನ್ ಡೊನೇಷನ್ ಇಂಡಿಯಾ ಫೌಂಡೇಶನ್‌ನ ಚೇರ್‌ಮೆನ್ ಲಾಲ್ ಗೋಯಲ್ ಅವರಿಗೆ ಮಾನವೀಯತೆಯ ಸೇವೆಗಾಗಿ ಪ್ರತಿಷ್ಠಿತ ಹಾರ್ಪ್ಸ್ ಪ್ರಶಸ್ತಿಯನ್ನು ನವದೆಹಲಿಯ ಇಂಡಿಯನ್ ಏವಿಯೇಷನ್ ಅಕಾಡೆಮಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಏರ್ ಇಂಡಿಯಾದ ಕಾರ್ಯನಿವಾರ್ಹಕ ನಿರ್ದೇಶಕರಾದ ಡಾ. ಹರ್‌ಪ್ರಿತ್ ಡಿ ಸಿಂಗ್ ಅವರು ಲಾಲ್ ಗೋಯಲ್ ಅವರಿಗೆ ಪ್ರಶಸ್ತಿ ಪ್ರದಾನ

ಮುಲ್ಕಿ ನಗರದ ಸಮೀಪ ರಾಷ್ಟ್ರೀಯ ಹೆದ್ದಾರಿ ಬಳಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿಗಳಾದ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಇದರ ಪ್ರಥಮ ಹಂತದ ಕಾಮಗಾರಿಯ ಆರಂಭ

ಮುಲ್ಕಿ ಅ7.ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ಮಹತ್ವಾಕಾಂಕ್ಷೆಯ ಯೋಜನೆಯ ಅಂಗವಾಗಿ ಮೂಲ್ಕಿಯ ನಗರಕ್ಕೆ ಸಮೀಪವಾಗಿ ರಾಷ್ಟ್ರೀಯ ಹೆದ್ದಾರಿ ಸಮೀಪ 65 ಸೆಂಟ್ಸ್ ನಿವೇಶನದಲ್ಲಿ ಅತ್ಯಾಧುನಿಕ ಸುಂದರವಾದ ವಿವಿಧ ಸ್ವರೂಪಗಳ ಭವನಗಳ ನಿರ್ಮಾಣದ ಅಂಗವಾಗಿ ಇಂದು ಮುಲ್ಕಿ ದುರ್ಗಾಪರಮೇಶ್ವರಿ ದೇವಳದ ಅರ್ಚಕರಾದ ಗೋಪಾಲಕೃಷ್ಣ ಉಪಾಧ್ಯಾಯ ಇವರ ಮೂಲಕ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜಾ ಕಾರ್ಯಕ್ರಮಗಳನ್ನು ನಡೆಸಿ ನಿತಿನ್ ಎಂಟರ್ಪ್ರೈಸಸ್ ಕಾವೂರು ಇದರ ಮಾಲಕರಾದ ನಿತಿನ್

ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ : ಶತಮಾನದ ಶಾರದೋತ್ಸವಕ್ಕೆ ವೈಭವದ ತೆರೆ

ಮಂಗಳೂರಿನ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ 100ನೇ ವರ್ಷದ ಶಾರದಾ ಮಹೋತ್ಸವದಲ್ಲಿ ಪೂಜಿಸಲ್ಪಟ್ಟ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಯಾತ್ರೆ ಗುರುವಾರ ರಾತ್ರಿ ಶ್ರದ್ಧಾಭಕ್ತಿಯಿಂದ ನೆರವೇರಿತು. ಸರಸ್ವತಿ ಕಲಾ ಮಂಟಪದಲ್ಲಿ ಬೆಳಗ್ಗಿನಿಂದ ಸೇವಾರೂಪದಲ್ಲಿ ಪ್ರತೀ ವರ್ಷದಂತೆ ಶಾರದಾ ಹುಲಿವೇಷಧಾರಿಗಳಿಂದ ಹುಲಿವೇಷ ಕುಣಿತ ನಡೆಯಿತು. ರಾತ್ರಿ ಮಹಾಮಂಗಳಾರತಿ ಆಗಿ ಶ್ರೀ ವೆಂಕಟರಮಣ ದೇವರ ಪ್ರದಕ್ಷಿಣೆ ನಡೆಯಿತು. ಬಳಿಕ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಯಾತ್ರೆಯೂ

ಉಡುಪಿ: ಅ.1ರಂದು ವಿಶ್ವ ಹೃದಯ ದಿನದ ಪ್ರಯುಕ್ತ ಬೃಹತ್ ಜಾಥಾ

ಉಡುಪಿಯ ಆದರ್ಶ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಇದರ ಆಶ್ರಯದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಅಕ್ಟೋಬರ್ 1, 2022 ರ ಶನಿವಾರದಂದು ಬೆಳಿಗ್ಗೆ 09:00 ರಿಂದ ಮಧ್ಯಾಹ್ನ 12:00 ರವರೆಗೆ ಬೃಹತ್ ಜಾಥಾವನ್ನು ಆಯೋಜಿಸಲಾಗಿದೆ. ಇದರ ಉದ್ಘಾಟನಾ ಸಮಾರಂಭವು ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ನಡೆಯಲಿದ್ದು, ಈ ಜಾಥಾವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಇಂಧನ ಸಚಿವರಾದ ವಿ

ಶಾರದಾ ಮಹೋತ್ಸವದ 100 ನೇ ವರ್ಷ : ಸಹಸ್ರ ಚಂಡಿಕಾ ಮಹಾಯಾಗ

ಲೋಕ ಕಂಟಕ ನಿವೃತ್ತಿಗಾಗಿ ಲೋಕದಲ್ಲಿ ಉಂಟಾದ ಕ್ಷೋಭೆ ಯ ನಿವಾರಣೆಗಾಗಿ ಸ್ಥಿರ ಲಕ್ಷ್ಮಿ ಪ್ರಾಪ್ತಿಗಾಗಿ ಒಂದು ಸಾವಿರ ಚಂಡಿಕಾ ಪಾರಾಯಣ ಹಾಗೂ ಹೋಮಗಳನ್ನು ಮಾಡಿದರೆ ನಮ್ಮ ವಿಶೇಷ ಕಾಮನೆಗಳು ಪರಿಪೂರ್ಣವಾಗುತ್ತದೆ ಎಂಬ ವಿಶ್ವಾಸದಿಂದ ಈ ಯಾಗವನ್ನು ಮಾಡಲಾಗುತ್ತಿದ್ದು . ಬ್ರಹ್ಮಾಂಡದ ಮೂಲಬಿಂದು ಕರುಣಾ ಸಿಂದು ಬ್ರಹ್ಮಾಂಡದ ಸಕಲ ಜೀವ ಕಂದಗಳ ತಾಯಿ ಮಾತ್ರವಲ್ಲ ಬ್ರಹ್ಮಾಂಡವೆಲ್ಲವನ್ನು ತನ್ನ ಗರ್ಭದಲ್ಲಿಟ್ಟುಕೊಂಡವಳು ಶ್ರೀ ಶಾರದಾ ಮಾತೆ ಆದುದರಿಂದ ಈ ಜೀವಗಳಿಗೆ

ಮಂಗಳೂರಿನ ಹಲವೆಡೆ ಎನ್‍ಐಎ ದಾಳಿ : ಎಸ್ ಡಿ ಪಿ ಐ , ಪಿಎಫ್‍ಐ ಕಚೇರಿ, ನಾಯಕರ ಮನೆಗಳಲ್ಲಿ ಶೋಧ

ಎನ್‍ಐಎ ಅಧಿಕಾರಿಗಳು ಮಂಗಳೂರು ನಗರದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಎಸ್ಡಿಪಿಐ- ಪಿಎಫ್‍ಐ ಕಚೇರಿ ಸೇರಿದಂತೆ ನಾಯಕರ ಮನೆಗಳಿಗೆ ದಾಳಿ ನಡೆಸಿದ್ದಾರೆ.ಇದೇ ವೇಳೆ, ಎನ್‍ಐಎ ದಾಳಿಯನ್ನು ಖಂಡಿಸಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್ಡಿಪಿಐ ಕಚೇರಿಗೆ ನಸುಕಿನಲ್ಲಿ ಮೂರು ಗಂಟೆ ವೇಳೆಗೆ ಮೀಸಲು ಪಡೆಯ ಭದ್ರತೆಯೊಂದಿಗೆ

ಸಾವಿಗೆ ಕಾರಣವಾಗಿ ಪರಾರಿಯಾಗಿದ್ದ ಲಾರಿ ಪತ್ತೆ : ಕಾಪು ಸರ್ಕಲ್ ಇನ್ಸ್‍ಪೆಕ್ಟರ್ ತಂಡದ ತ್ವರಿತ ಕಾರ್ಯಚರಣೆ

ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಸಮೀಪ ತಂದೆ ಮಗನಿಗೆ ಡಿಕ್ಕಿಯಾಗಿ ತಂದೆಯ ಸಾವಿಗೆ ಕಾರಣವಾಗಿ ಪರಾರಿಯಾಗಿದ್ದ ಲಾರಿಯನ್ನು ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪೂವಯ್ಯ ಹಾಗೂ ಪಡುಬಿದ್ರಿ ಎಸ್ಸೈ ಪುರುಷೋತ್ತಮ ತಂಡದ ತ್ವರಿತ ಕಾರ್ಯಚರಣೆಯಿಂದ ಮೂಡಬಿದರೆ ಬಳಿ ತಡೆದು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದು ಸಾರ್ವಜನಿಕ ವಲಯದಲ್ಲಿ ಬಾರೀ ಪ್ರಶಂಸೆಗೆ ಪಾತ್ರರಾಗಿದ್ದಾರೆ.ಬೆಳಗಾವಿಯಿಂದ ಬಸ್ಸಿನಲ್ಲಿ ಬಂದು ಬಸ್ಸಿಳಿದು ರಸ್ತೆ ಬದಿಯಲ್ಲಿ

ಮುಂಬೈ: ಐಕಳ ಹರೀಶ್ ಶೆಟ್ಟಿಯವರ ‘ಸಾರ್ವಭೌಮ’ ಗೌರವ ಗ್ರಂಥ ಲೋಕಾರ್ಪಣೆ

ಮುಂಬೈ: “ಐಕಳ ಹರೀಶ್ ಶೆಟ್ಟಿಯವರು ಹೊರನಾಡಿನ ಪ್ರತಿಸೂರ್ಯ.ಮುಂಬೈನ ತುಳು ಕನ್ನಡಿಗರ ಧೀಮಂತ ನಾಯಕ. ಅವರು ತಾರಾಮೌಲ್ಯ ಇರುವ ಕೆಲವೇ ಕೆಲವು ಸಂಘಟಕರಲ್ಲಿ ಒಬ್ಬರು. ಕ್ರಿಯಾಶೀಲ, ಚಿಂತನಶೀಲ , ಸಹನಶೀಲ ಮತ್ತು ಆಧ್ಯಾತ್ಮಶೀಲಗಳನ್ನು ಮೈಗೂಡಿಸಿಕೊಂಡ ಮಹಾನಾಯಕ. ಇಂತಹ ಅಪರೂಪದ ದಣಿವರಿಯದ ಚೇತನ, ಸಂಘಟನ ಸೀಮಾಪುರುಷ , ಸಾಹಸಪುರುಷನನ್ನು ಗೌರವಿಸುವುದು ವಿಶ್ಕವಿದ್ಯಾಲಯದ ಕರ್ತವ್ಯ ಎಂಬ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ” ಎಂಬುದಾಗಿ

ನಾಳೆ ಪ್ರಧಾನ ಮಂತ್ರಿಗಳಿಂದ ರೂ. 3,800 ಕೋಟಿ ಮೊತ್ತದ 8 ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ

ಮಂಗಳೂರು, ಸೆ.1(ಕ.ವಾ):-ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಸೆ.2ರ ಶುಕ್ರವಾರ ಮಂಗಳೂರಿಗೆ ಭೇಟಿ ನೀಡುತ್ತಿದ್ದು ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ ಎಂಟು ಯೋಜನೆಗಳ ಲೋಕಾರ್ಪಣೆ, ಶಿಲನ್ಯಾಸ ನೆರವೇರಿಸುವರು. ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ 1.30 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ 3,800 ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನಡೆಯಲಿದೆ. ಪ್ರಧಾನಿ ಲೋಕಾರ್ಪಣೆ ಮಾಡುವ ಯೋಜನೆಗಳಲ್ಲಿ,

ಬೆಳಪು ಅಂಬೇಡ್ಕರ್ ಭವನದ ಬಳಿ ಹೆಬ್ಬಾವು ಪ್ರತ್ಯಕ್ಷ

ಬೆಳಪು ಅಂಬೇಡ್ಕರ್ ಭವನದ ಬಳಿ ಸ್ಥಳೀಯರಲ್ಲಿ ಭಯ ಹುಟ್ಟಿಸಿದ ಬೃಹತ್ ಹೆಬ್ಬಾವನ್ನೂ ಶಿವಾನಂದ ಪೂಜಾರಿ ಹಾಗೂ ಪ್ರಶಾಂತ್ ಪೂಜಾರಿ ನೇತೃತ್ವದ ತಂಡ ಸೆರೆ ಹಿಡಿದು, ರಕ್ಷಿಸಿದ್ದಾರೆ.ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆ ಹಿಡಿದು ಬಳಿಕ ಅರಣ್ಯ ಇಲಾಖೆಯ ಸಿಬಂದಿಗಳ ಸುಪರ್ದಿಗೆ ಒಪ್ಪಿಸಲಾಗಿದೆ.