Home Archive by category Uncategorized (Page 18)

ನಾಳೆ ಪ್ರಧಾನ ಮಂತ್ರಿಗಳಿಂದ ರೂ. 3,800 ಕೋಟಿ ಮೊತ್ತದ 8 ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ

ಮಂಗಳೂರು, ಸೆ.1(ಕ.ವಾ):-ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಸೆ.2ರ ಶುಕ್ರವಾರ ಮಂಗಳೂರಿಗೆ ಭೇಟಿ ನೀಡುತ್ತಿದ್ದು ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ ಎಂಟು ಯೋಜನೆಗಳ ಲೋಕಾರ್ಪಣೆ, ಶಿಲನ್ಯಾಸ ನೆರವೇರಿಸುವರು. ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ 1.30 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ 3,800 ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ

ಬೆಳಪು ಅಂಬೇಡ್ಕರ್ ಭವನದ ಬಳಿ ಹೆಬ್ಬಾವು ಪ್ರತ್ಯಕ್ಷ

ಬೆಳಪು ಅಂಬೇಡ್ಕರ್ ಭವನದ ಬಳಿ ಸ್ಥಳೀಯರಲ್ಲಿ ಭಯ ಹುಟ್ಟಿಸಿದ ಬೃಹತ್ ಹೆಬ್ಬಾವನ್ನೂ ಶಿವಾನಂದ ಪೂಜಾರಿ ಹಾಗೂ ಪ್ರಶಾಂತ್ ಪೂಜಾರಿ ನೇತೃತ್ವದ ತಂಡ ಸೆರೆ ಹಿಡಿದು, ರಕ್ಷಿಸಿದ್ದಾರೆ.ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆ ಹಿಡಿದು ಬಳಿಕ ಅರಣ್ಯ ಇಲಾಖೆಯ ಸಿಬಂದಿಗಳ ಸುಪರ್ದಿಗೆ ಒಪ್ಪಿಸಲಾಗಿದೆ.

ಡಿ. ದೇವರಾಜ ಅರಸರ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರ ಭವನದಲ್ಲಿ ಆ.20ರ ಶನಿವಾರ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸಚಿವರು ಹಿಂದುಳಿದ ವರ್ಗಗಳ ವೃತ್ತಿ ಕುಲಕಸುಬುಗಳ ವಿವಿಧ

ಮದರ್ ತೆರೇಸಾ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ದಾಖಲೆ ಮೆರೆದ ಜಿಲ್ಲಾ ಮಟ್ಟದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ

ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ 25ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಇಂದು(20-08-2022) ನಗರದ ಮಿಲಾಗ್ರಿಸ್ ಪ.ಪೂ.ಕಾಲೇಜ್ ನಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ನಿರೀಕ್ಷೆಗೂ ಮೀರಿ ಜಿಲ್ಲೆಯಾದ್ಯಂತ 78 ಶಿಕ್ಷಣ ಸಂಸ್ಥೆಗಳಿಂದ 480 ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ಸುಮಾರು 520ರಷ್ಟು ಸ್ಪರ್ಧಾಳುಗಳು ಭಾಗವಹಿಸುವ ಮೂಲಕ ದಾಖಲೆ ಮೆರೆದಿರುವುದು ವಿಶೇಷವಾಗಿತ್ತು. ಕಾರ್ಯಕ್ರಮವನ್ನು

ಡಾ.ಬಿ.ಯಶೋವರ್ಮ ಶಿಕ್ಷಣ ವಲಯದ ಪ್ರೇರಕ ಶಕ್ತಿ: ಡಾ. ಸತೀಶ್ಚಂದ್ರ ಎಸ್

ಉಜಿರೆ: ಕಲಾಭಿಮಾನಿಯಾಗಿ, ಕಲಾ ಪೋಷಕರಾಗಿದ್ದ ಡಾ.ಬಿ.ಯಶೋವರ್ಮ ಅವರು ಇಂದು ನಮ್ಮೊಂದಿಗೆ ಇಲ್ಲದಿದ್ದರೂ ಅವರ ಚಿಂತನೆಗಳು ನಮ್ಮೆಲ್ಲರ ಪ್ರೇರಕ ಶಕ್ತಿ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಹೇಳಿದರು.     ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್‍ನಲ್ಲಿ ಡಾ.ಬಿ.ಯಶೋವರ್ಮ ಅವರ ಸ್ಮರಣಾರ್ಥ ಕನ್ನಡ ವಿಭಾಗ ಆಯೋಜಿಸಿದ್ದ ‘ಅರಿವಿನ ದೀವಿಗೆ’ ಉಪನ್ಯಾಸ ಮಾಲಿಕೆ

ಸೋಲಿನ ಕಲಿಕೆಯಿಂದ ಗೆಲುವು ನಿಶ್ಚಿತ- ಮುರಳಿ ಕೃಷ್ಣ

ಉಜಿರೆ: ಜೀವನದಲ್ಲಿ ಎಲ್ಲಾ ರೀತಿಯ ಅನುಭವಗಳು ಅಗತ್ಯ. ಅನುಭವಗಳ ಕೊರತೆ ಇದ್ದಾಗ ಮಾತ್ರ ಸೋಲು ಎದುರಾಗುತ್ತದೆ. ಆದರೆ, ಅಂತಹ ಸೋಲುಗಳಿಂದ ಕಲಿತು ಜೀವನಕ್ಕೆ ಅಳವಡಿಸಿಕೊಳ್ಳುವುದು ಬಹಳಷ್ಟಿದೆ ಎಂದು, ಅಮೇಜಾನ್ ವೆಬ್ ಸರ್ವಿಸ್ ಸಂಸ್ಥೆಯ ಹಿರಿಯ ಪ್ರಧಾನ ಅಭಿಯಂತರ, ಮುರಳಿ ಕೃಷ್ಣ ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಸಭಾಂಗಣದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಬಿ.ವೋಕ್

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ನಡೆದ ಚರ್ಚಾ ಸ್ಪರ್ಧೆ : ಪುತ್ತೂರಿನ ವಿವೇಕಾನಂದ ಕಾಲೇಜಿಗೆ ಪ್ರಥಮ

ಅ. 17ರಂದು ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ನಡೆದ ಪೂಜ್ಯ ಶ್ರೀ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯ ಪರ – ವಿರೋಧ ವಿಭಾಗದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜು ಪ್ರಥಮ ಸ್ಥಾನಪಡೆದುಕೊಂಡಿದೆ. ದ್ವೀತಿಯ ಸ್ಥಾನವನ್ನು ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜು ಗಳಿಸಿಕೊಂಡಿದೆ. ವೈಯಕ್ತಿಕ ವಿಭಾಗದಲ್ಲಿ ಸೆಂಟ್ಫಿಲೋಮಿನಾ ಕಾಲೇಜಿನ ಶ್ರೀದೇವಿ ಕೆ ಪಡೆದುಕೊಂಡರು.ಸ್ಪರ್ಧೆಯು ಆಕರ್ಷಕ ಬಹುಮಾನವನ್ನು ಒಳಗೊಂಡಿದ್ದು,

“ಅಬತರ” ತುಳು ಸಿನಿಮಾ ಬಿಡುಗಡೆ

ಮಂಗಳೂರು: ಬೊಳ್ಳಿ ಮೂವೀಸ್ ಮತ್ತು ಅವಿಕ ಪ್ರೊಡಕ್ಷನ್ ನಡಿಯಲ್ಲಿ ಅರ್ಜುನ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ ಬಹುನಿರೀಕ್ಷಿತ “ಅಬತರ” ತುಳು ಸಿನಿಮಾ ಗುರುವಾರ ನಗರದ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಚಿತ್ರ ನಿರ್ಮಾಪಕನಿಖಿಲ್ ಕೀರ್ತಿ ಸಾಲ್ಯಾನ್ ಹಾಗೂ ಸಹ ನಿರ್ಮಾಪಕರಾದ ವೀರಾಜ್ ಅತ್ತಾವರ ಅವರು ದೀಪ ಬೆಳಗಿಸಿ, ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ, “ತುಳು ರಂಗಭೂಮಿ ಇಂದು

ಸಹಯೋಗದ ಸ್ವಾತಂತ್ರ್ಯವಾಗಿ ಶತಕದತ್ತ ಸಾಗೋಣ : ಡಾ ನೆಗಳಗುಳಿ

ಮಂಗಳೂರು ನಂತೂರಿನಲ್ಲಿರುವ ಸಂದೇಶ ಪ್ರತಿಷ್ಠಾನ ದಲ್ಲಿ ಸ್ವಾತಂತ್ರ್ಯ ದ ಅಮೃತ ಮಹೋತ್ಸವದ ಆಚರಣೆಯ ಶುಭಾವಸರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂದೇಶ ಪ್ರತಿಷ್ಠಾನದ ಟ್ರಸ್ಟಿ ರೋಯ್ ಕಾಸ್ತೆಲಿನೊ ಧ್ವಜವನ್ನು ಅರಳಿಸಿದರು.ಪತ್ರಕರ್ತರಾದ ರೇಮಂಡ್ ಡಿಕೂನಾ ತಾಕೊಡೆ ಧ್ವಜ ವಂದನೆ ನೆರವೇರಿಸಿದರು ಸಂದೇಶ ಪ್ರತಿಷ್ಠಾನ ನಿರ್ದೇಶಕರಾದ ಫಾ ಸುದೀಪ್ ಪೌಲ್ ಎಲ್ಲರನ್ನೂ ಸ್ವಾಗತಿಸಿದರು.ರಾಷ್ಟ್ರ ಗೀತೆಯ ನಂತರಮುಖ್ಯ ಅತಿಥಿ ಮಂಗಳೂರಿನ ಮಂಗಳಾ ಆಸ್ಪತ್ರೆಯ

ಕಾವ್ಯವನ್ನು ಅನುಭವಿಸಿ ಬರೆದರೆ ಉತ್ತಮ ಕವನ ಬರುತ್ತೆ – ರೇಮಂಡ್ ಡಿ.ಕುನ್ಹ ತಾಕೊಡೆ

ಪ್ರೇರಣಾತ್ಮಕವಾಗಿ ಬರೆಯುವ ಸಾಹಿತಿಗಳು ನಡು ನಡುವೆ ವಿರಾಮ ತೆಗೆದು ಕೊಂಡು ಅಭ್ಯಸಿಸಿ ಬರೆಯುವ ಹವ್ಯಾಸ ಇಟ್ಟುಕೊಳ್ಳಬೇಕು ಆ ಮೂಲಕ ಒಂದು ಸೃಜನಾತ್ಮಕ ಸಾಹಿತ್ಯ ರಚಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತ ರೇಮಂಡ್ ಡಿ.ಕುನ್ಹ ತಾಕೋಡೆ ಹೇಳಿದರು . ಅವರು ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ದಿನಾಂಕ 14-08-2022 ರಂದು ಮಂಗಳೂರಿನ ಕದ್ರಿ ಬಾಲಭವನದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ ಭಾರತಾಂಬೆಗೆ ಕನ್ನಡದಾರತಿ