ರೈಲ್ವೆ ಬೇಡಿಕೆಗಳ ಈಡೇರಿಕೆಗಾಗಿ ರೈಲ್ವೆ ಸಚಿವರಿಗೆ ನಳಿನ್ ಕುಮಾರ್ ಕಟೀಲ್ ಮನವಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಶ್ಣವ್ ರವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಿಸಿದ ಈ ಕೆಳಕಂಡ ವಿಷಯಗಳ ಕುರಿತು ಕ್ರಮಕೈಗೊಳ್ಳುವಂತೆ ಮನವಿ
ಫಾ. ಮುಲ್ಲರ್ ಸೇವಾ ಸಂಸ್ಥೆಯ ಘಟಕವಾಗಿರುವ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ 31ನೇ ಪದವಿ ಪ್ರದಾನ ಹಾಗೂ ಸ್ಪೆಷಾಲಿಟಿ ಕ್ಲಿನಿಕ್ ಉದ್ಘಾಟನೆ ಸಮಾರಂಭ ಆ. 6ರಂದು ನಡೆಯಲಿದೆ ಎಂದು ಫಾ. ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕ ವಂ. ಫಾ. ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಹೇಳಿದರು. ದೇರಳಕಟ್ಟೆಯ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ ಪತ್ರಿಕೋಷ್ಠಿಯಲ್ಲಿ ಮಾತನಾಡಿದ ಅವರು ಫಾ. ಮುಲ್ಲರ್
ಪುತ್ತೂರು : ಅಭಿವೃದ್ಧಿ ಹೊಂದುತ್ತಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಕೆದಿಲ ಗ್ರಾಮದಲ್ಲಿ ಹಲವು ರಸ್ತೆಗಳು ನಾದುರಸ್ತಿಯಲ್ಲಿದ್ದು, ಕೆದಿಲ ಗ್ರಾಪಂನವರು ಗ್ರಾಮದ ಹಲವು ರಸ್ತೆಗಳ ದುರಸ್ತಿಗೆ ಅನುದಾನ ಒದಗಿಸುವಂತೆ ಬೇಡಿಕೆಯಿಟ್ಟಿದ್ದಾರೆ. ಇದು ತಾಲೂಕಿನ ಇಡೀ ಗ್ರಾಮಸ್ಥರ ಬೇಡಿಕೆಯೂ ಆಗಿದೆ. ಎಲ್ಲಾ ಸಮುದಾಯದವರು ವಾಸಿಸುವ ಈ ಗ್ರಾಮದಲ್ಲಿ ಕೃಷಿಕರು ಅಧಿಕ ಸಂಖ್ಯೆಯಲ್ಲಿದ್ದಾರೆ. ಹಲವು ಶಾಲೆಗಳು ಕಾರ್ಯಾಚರಿಸುತ್ತಿವೆ. ಅಡಕೆ ಗಾರ್ಬಲ್‌ಗಳು ಇನ್ನಿತರ
ವ್ಯಾಕ್ಸಿನ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದ ಘಟನೆ ಕಾಸರಗೋಡಿನ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಮೊಗ್ರಾಲ್ ಪುತ್ತೂರು ಹೈಯರ್ ಸೆಕೆಂಡರಿ ಶಾಲೆಯಲ್ಲಿ ವ್ಯಾಕ್ಸಿನ್ ನೀಡಲಾಗುತ್ತಿತ್ತು ಪಂಚಾಯತ್ ನ ಮೊದಲ ಮತ್ತು ಎರಡನೇ ವಾರ್ಡಿನವರಿಗೆ ಶುಕ್ರವಾರ ವ್ಯಾಕ್ಸಿನ್ ನೀಡಲು ತೀರ್ಮಾನಿಸಲಾಗಿತ್ತು .ಈ ಮಧ್ಯೆ ಹೊರ ವಾರ್ಡಿನವರು ವ್ಯಾಕ್ಸಿನ್ ಪಡೆಯಲು ಬಂದಿದ್ದಾರೆ ಎಂಬ ವಿಚಾರದಲ್ಲಿ ಘರ್ಷಣೆ ನಡೆದಿದೆ.ಹೀಗಾಗಿ ಗಂಟೆಗಳ ಕಾಲ ವ್ಯಾಕ್ಸಿನ್ ನೀಡಿಕೆ ಸ್ಥಗಿತಗೊಂಡಿತ್ತು.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆದಿದೆ. ಪಾಲಿಕೆ ಕಮೀಷನರ್ ಅಕ್ಷಯ್ ಶ್ರೀಧರ್ ಅವರ ಸೂಚನೆ ಮೇರೆಗೆ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ನಡೆಸಲಾಯ್ತು. ಪಾರ್ಕ್ ಮುಂಭಾಗದಲ್ಲಿ ಸುಮಾರು 10ಕ್ಕೂ ಅಧಿಕ ಅಕ್ರಮ ಗೂಡಂಗಡಿಗಳ ತೆರವು ಮಾಡಲಾಗಿದೆ. ಇನ್ನು ಈ ಪ್ರದೇಶದಲ್ಲಿ ಸ್ಮಾಟ್ ಸಿಟಿ ಯೋಜನೆಯಲ್ಲಿ ರಸ್ತೆ ಕಾಮಗಾರಿ ಹಾಗೂ ಫುಡ್ ಕೋರ್ಟ್ ಗಳ ಕಾಮಗಾರಿ ನಡೆಸಲಾಗುತ್ತದೆ. ಈ
ಕೋರೋನಾ ಭೀತಿಯ ನಡುವೆಯೂ ಮತ್ತೆ ಎಸೆಸೆಲ್ಸಿ ಪರೀಕ್ಷೆ ಕರ್ನಾಟಕದಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಈ ಯಶಸ್ವಿನ ಹಿಂದೆ ಶಿಕ್ಷಣ ಇಲಾಖೆ ಜೊತೆ ಹಲವು ಸಂಘ ಸಂಸ್ಥೆಗಳು ಕೈಜೋಡಿಸಿದೆ. ಈ ಪೈಕಿ ಪ್ರಮುಖ ಪಾತ್ರ ವಹಿಸಿ, ಪರೀಕ್ಷೆ ಸುಸೂತ್ರವಾಗಿ ನಡೆಯಲು ಕಾರಣವಾದವರ ಪೈಕಿ ಈ ತಂಡದ ಪ್ರಯತ್ನ ಕೂಡಾ ಪ್ರಶಂಸಾರ್ಹ. ಅಷ್ಟಕ್ಕೂ ಆ ತಂಡ ಯಾವುದು? ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಅವರು ಮಾಡಿದ ಸೇವೆ ಏನು? ಬನ್ನಿ ನೋಡೋಣ ನೀಲಿ ಬಣ್ಣದ ಸಮವಸ್ತ್ರ, ತಲೆಗೊಂದು ಟೋಪಿ
ಕುಂದಾಪುರ: ಸೈಕಲ್ ನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಕಾರೊಂದು ಢಿಕ್ಕಿಯಾದ ಪರಿಣಾಮ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡು ಸಾವನ್ನಪ್ಪಿದ ದಾರುಣ ಘಟನೆ ಇಲ್ಲಿನ ಹೆಮ್ಮಾಡಿ ಸಮೀಪದ ಜಾಲಾಡಿಯಲ್ಲಿ ನಡೆದಿದೆ. ಹೆಮ್ಮಾಡಿಯ ಸಂತೋಷನಗರ ನಿವಾಸಿ ರಾಮ ಕುಲಾಲ್(60) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ.ರಾಮ ಕುಲಾಲ್ ಅವರು ಹೆಮ್ಮಾಡಿಯಿಂದ ತಮ್ಮ ಸೈಕಲ್ ನಲ್ಲಿ ತಲ್ಲೂರಿಗೆ ತೆರಳುತ್ತಿರುವ ಹೊತ್ತಿಗೆ ಈ ಅಪಘಾತ ನಡೆದಿದೆ. ಸೈಕಲ್ ಡಿವೈಡರ್
ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್ ಮೂಲಕ ನೂತನ ಸಿಎಂಗೆ ಅಭಿನಂದನೆ ಸಲ್ಲಿಸಿದ್ರು. ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಕೆಲಸ ಮಾಡ್ತಾರೆ ಎನ್ನುವ ವಿಶ್ವಾಸವಿದೆ ಎಂದು ಮೋದಿ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಬಿಎಸ್‌ವೈ ಅವರನ್ನು ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಡಿ ಹೊಗಳಿದ್ದಾರೆ. ಬಿಎಸ್‌ವೈಗೆ ಪಕ್ಷ ಮೇಲಿನ ಬದ್ಧತೆ ಅವರ್ಣನೀಯವಾಗಿದೆ. ಸಾಮಾಜಿಕ ನ್ಯಾಯ,
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಜ ಬೊಮ್ಮಾಯಿ ಅವರಿಗೆ ಪ್ರಮಾಣ ಬೋಧಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆ ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಕಾರ್ಯಕ್ರಮ
ಪೊಲೀಸ್ ತಪಸಾಣೆ ವೇಳೆ ತಪ್ಪಿಸಿಕೊಳ್ಳಲು ಹೋಗಿ ರಿಕ್ಷಾವೊಂದು ಪಲ್ಟಿಯಾಗಿದ್ದು, ವಿಚಾರಣೆ ನಡೆಸಿದಾಗ ರಿಕ್ಷಾದಲ್ಲಿದ್ದ ಗಾಂಜಾ ಜೊತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸಜಿಪಮೂಡ ಗ್ರಾಮದ ಸುಭಾಶ್ ನಗರ ನಿವಾಸಿ ಅಸೀಫ್ ಯಾನೆ ಅಚಿ (28) ಸವಣೂರು ಗ್ರಾಮದ ಚಾಪಳ್ಳ ನಿವಾಸಿ ಫರಾಝ್ (23) ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ ಉಕ್ಕುಡ ಕಡೆಯಿಂದ ವಿಟ್ಲ