Home Archive by category Uncategorized (Page 7)

ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮತದಾನ

ಕೋಟ:ಉಡುಪಿ ಜಿಲ್ಲೆಯ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಕೋಟತಟ್ಟು ಗ್ರಾಮ ಪಂಚಾಯಿತಿನ ಬೂತ್ ನಂಬರ್ 165 ರಲ್ಲಿ ಸರತಿ ಸಾಲಿನಲ್ಲಿ ನಿಂತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮತದಾನ ಮಾಡಿದರು.

ಕಾಪು : ಮಣಿಪಾಲ್ ಟೆಕ್ನಾಲಜೀಸ್  ಲಿಮಿಟೆಡ್ ಯೂನಿಟ್  ನಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಮತಯಾಚನೆ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಮಣಿಪಾಲ್ ನಗರ ವ್ಯಾಪ್ತಿಯ  ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ಯೂನಿಟ್ lV ಗೆ ಭೇಟಿ ನೀಡಿ ಮಾತಾಯಾಚನೆ ಮಾಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಶ್ರೀ ಲಾಲಾಜಿ ಮೆಂಡನ್ ರವರು ನನ್ನ ಅಧಿಕಾರದ ಅವಧಿಯಲ್ಲಿ ಕಾಪು ಕ್ಷೇತ್ರಕ್ಕಾಗಿ ಹಗಲಿರುಳು ದುಡಿದಿದ್ದೇನೆ ಇನ್ನು ಈ ಜವಾಬ್ದಾರಿಯನ್ನು ಗುರ್ಮೆ ಸುರೇಶ್ ಶೆಟ್ಟಿಯವರು ಚೆನ್ನಾಗಿ ನಿಭಾಯಿಸಲಿದ್ದಾರೆ

ಮೇ.6ರಂದು ಬಿ.ಸಿ.ರೋಡಿನಲ್ಲಿ ಯೋಗಿ ಆದಿತ್ಯನಾಥ್ ರೋಡ್ ಶೋ

ಬಂಟ್ವಾಳ: ಇಲ್ಲಿನ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರ ಪರವಾಗಿ ಚುನಾವಣಾ ಪ್ರಚಾರ ಮಾಡಲು ಉತ್ತರ ಪ್ರದೇಶದ ಮುಖ್ಯಮಂತ್ರಿ, ಸ್ಟಾರ್ ಪ್ರಚಾರಕ್ ಆಗಿರುವ ಯೋಗಿ ಆದಿತ್ಯನಾಥ್ ಅವರು ಮೇ.6ರಂದು ಶನಿವಾರ ಬಿ.ಸಿ.ರೋಡಿಗೆ ಆಗಮಿಸಲಿದ್ದು ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ತಿಳಿಸಿದರು. ಅವರು ಗುರುವಾರ ಬಿಜೆಪಿ ಕಚೇರಿಯುಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು ಸಂಜೆ 4ಗಂಟೆಗೆ ಯೋಗಿಜೀ

ಸಿದ್ದಾಪುರದಲ್ಲಿ ಅಮಿತ್ ಷಾ ರೋಡ್ ಶೋ : ಗುರುರಾಜ್ ಗಂಟಿಹೊಳೆ ಪರ ಭರ್ಜರಿ ಪ್ರಚಾರ

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಪರ ಭರ್ಜರಿಯಾಗಿ ಪ್ರಚಾರ ನಡೆಸಿದರು. ಸಿದ್ದಾಪುರದಲ್ಲಿ ಬೃಹತ್ ರೋಡ್ ಶೋ ನಡೆಸಿದ ಅಮಿತ್ ಶಾ, ಗುರುರಾಜ್ ಗಂಟಿಹೊಳೆ ಅವರನ್ನು ಗೆಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದರು. ಅದರಲ್ಲೂ, “ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಬೈಂದೂರು ಅಭ್ಯರ್ಥಿಯನ್ನು ಗೆಲ್ಲಿಸಿ” ಎಂದು ಹೇಳಿದರು.

ಕಾರ್ಕಳ : ಕಾಂಗ್ರೆಸ್‍ ಮುಖಂಡರು ಬಿಜೆಪಿಗೆ ಸೇರ್ಪಡೆ

ಕಾರ್ಕಳ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ದಿವಂಗತ ನರಸಿಂಹ ನಾಯಕ್ ಅವರ ಪುತ್ರ ಕನ್ಯಾನ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಲಕ್ಷ್ಮಿ ನಾರಾಯಣ ನಾಯಕ್ ಅವರು ಸುನಿಲ್ ಕುಮಾರ್ ರವರ ವಿಕಾಸ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.ಅವರ ಜೊತೆ ಹಲವರು ಕಾಂಗ್ರೆಸಿನ ಮುಖಂಡರು ಬಿಜೆಪಿ ಪಕ್ಷಕ್ಕೆ ಸೇರ್ಪಡಿಕೊಂಡರು. ಸುನಿಲ್ ಕುಮಾರ್ ಅವರು ಬಿಜೆಪಿ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಪ್ರತಾಪ್ ಸಿಂಹ

ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮಾಮ್ ಪ್ರಶಸ್ತಿಯ ಗರಿ

ಉಜಿರೆ, ಏ.25: ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ಪದವಿ ಮತ್ತು ಸ್ನಾತಕೋತ್ತರ ವಿಭಾಗಗಳ ಒಟ್ಟುನಾಲ್ವರು ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾಲಯದ ಮಾಧ್ಯಮ ವಿಭಾಗದ ಹಳೆಯ ವಿದ್ಯಾರ್ಥಿಗಳ ಸಂಘವು ನೀಡುವಮಾಮ್ ಇನ್ಸ್ಪೈರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಮಾಧ್ಯಮದ ವಿವಿಧ ವಲಯಗಳಿಗೆ ಕಾಲೇಜಿನ ವಿದ್ಯಾರ್ಥಿಗಳಾದ ರಶ್ಮಿ ಯಾದವ್, ಶ್ಯಾಮಪ್ರಸಾದ್ ಎಚ್.ಪಿ (ಪತ್ರಿಕೋದ್ಯಮ ಪದವಿ ವಿಭಾಗ), ಚೈತ್ರಾ ರಾವ್,

ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಅದನ್ನು ಉಳಿಸಲು ಹೋರಾಟ ಮಾಡಬೇಕಿದೆ : ಮಲ್ಲಿಕಾರ್ಜುನ ಖರ್ಗೆ

ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿ ಸಿಲುಕಿದೆ. ಇದನ್ನು ಉಳಿಸಲು ಎಲ್ಲರೂ ಹೋರಾಟ ಮಾಡಬೇಕಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ. ಟಿಎಂಎ ಪೈ ಹಾಲ್‍ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.ಈಗ ಕೇಂದ್ರದಲ್ಲಿರುವ ಬಿಜೆಪಿ ಸರಕಾರ ಸಂವಿಧಾನ, ಪ್ರಜಾಪ್ರಭುತ್ವದ ಪ್ರಕಾರ ನಡೆದುಕೊಳ್ಳುತ್ತಿಲ್ಲ. ಒಬ್ಬರಿಗೆ ಒಂದು ಕಾನೂನು, ಇನ್ನೊಬ್ಬರಿಗೆ ಇನ್ನೊಂದು ಕಾನೂನು

ಉಡುಪಿ. ಪಾರದರ್ಶಕ ಆಡಳಿತ ಕಾಂಗ್ರೆಸ್‍ನಿಂದ ಮಾತ್ರ ನೀಡಲು ಸಾಧ್ಯ : ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್

” 18 ವರ್ಷದವರಿಗೆ ಮತದಾನ ಮಾಡುವ ಅವಕಾಶವನ್ನು ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ನೀಡಿದ್ದಾರೆ. ಸರ್ಕಾರದಿಂದ ಆಗುವ ತೊಂದರೆಗಳನ್ನು ಯುವಕರು ತಿಳಿದುಕೊಳ್ಳಬೇಕು. ಯುವಕರಿಗಿಂದು ಉದ್ಯೋಗವಿಲ್ಲ. ಪಾರದರ್ಶಕ ಆಡಳಿತ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ಯುವಜನತೆ ಗೆ ಉಗ್ಯೋಗದ ಬಾಗಿಲು ತೆರೆಯಬೇಕಾಗಿದೆ. ಕಾಂಗ್ರೆಸ್ ಹಲವು ಇಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪಿಸಿದೆ. ಕಾಂಗ್ರೆಸ್ ಯುವಜನರಿಗೆ ಸಾಕಷ್ಟು ಅವಕಾಶ ನೀಡಿದೆ.” ಎಂದು ಉಡುಪಿ ವಿಧಾನಸಭಾ

ಶಾಸಕರ ಮಾನಹಾನಿ ಪ್ರಕರಣ ಸಮಗ್ರ ತನಿಖೆಯಾಗಲಿ – CPIM ಒತ್ತಾಯ

ಶಾಸಕ ವೇದವ್ಯಾಸ ಕಾಮತ್ ರವರು ತನ್ನ ಮಾನಹಾನಿಕರ ಸುದ್ದಿ ಪ್ರಕಟವಾಗದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿರುವ ಬಗ್ಗೆ ಸಮಗ್ರ ತನಖೆಯಾಗಬೇಕು.ಜನರಿಂದ ಆಯ್ಕೆಯಾದ ಜನಪ್ರತಿನಿಧಿಯೊಬ್ಬರು ಮಾನಹಾನಿ ಆಗುವಂತಹ ವಿಚಾರದ ಬಗ್ಗೆ ಕನಿಷ್ಟ ದೂರನ್ನು ಕೊಡದೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವುದು ಶಾಸಕರ ಸಚ್ಚಾರಿತ್ಯದ ಬಗ್ಗೆ ಸಾರ್ವಜನಿಕರಿಗೆ ಅನುಮಾನಗಳು ವ್ಯಕ್ತವಾಗುತ್ತಿದ್ದು,ಈ ಬಗ್ಗೆ ಕೂಡಲೇ ಶಾಸಕ ವೇದವ್ಯಾಸ ಕಾಮತರು ಸ್ಪಷ್ಟನೆ ನೀಡಬೇಕು ಎಂದು CPIM ದ.ಕ. ಜಿಲ್ಲಾ