HomeFresh Newsಪುತ್ತಿಗೆ ಶ್ರೀಪಾದರ "64 ಜನ್ಮನಕ್ಷತೋತ್ಸವ ಸಂಭ್ರಮ

ಪುತ್ತಿಗೆ ಶ್ರೀಪಾದರ “64 ಜನ್ಮನಕ್ಷತೋತ್ಸವ ಸಂಭ್ರಮ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ದಿನಾಂಕ 30-08-2025 ಶನಿವಾರದಂದು ನಡೆದ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ “64 ಜನ್ಮನಕ್ಷತೋತ್ಸವ ಸಂಭ್ರಮ”ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀಮನ್ಮಧ್ವಾಚಾರ್ಯ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಸಮಾರಂಭ ನೆರವೇರಿತು.

ಅದಮಾರು ಮಠದ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹಾಗೂ ಪುತ್ತಿಗೆ ಮಠದ ಶ್ರೀ ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರು ಆಶೀರ್ವಚಿಸಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳದ ಡಿ.ಕೆ ಶಿವಕುಮಾರ್, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ ಹಾಗೂ ಗಣ್ಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments