ಹಿಂದೂ ಭಾಷಣಕಾರ್ತಿ ಚೈತ್ರ ಕುಂದಾಪುರ ಅರೆಸ್ಟ್

ಉಡುಪಿ:ಉದ್ಯಮಿಗೆ ಎಂಎಲ್‍ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸುಮಾರುಬಹುಕೋಟಿ ರೂಪಾಯಿ ವಂಚನೆ ನಡೆಸಿರು ಹಿಂದೂ ಭಾಷಣಕಾರ್ತಿ ಚೈತ್ರ ಕುಂದಾಪುರ ಸಿಸಿಬಿ ಉಡುಪಿ ಪೊಲೀಸರು ಶ್ರೀ ಕೃಷ್ಣ ಮಠದ ಬಳಿ ಮಿಂಚಿನ ಕಾರ್ಯಚರಣೆ ನಡೆಸಿ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ವಂಚನೆ ಅರೋಪದಲ್ಲಿ ತಲೆಮರೆಸಿಕೊಂಡಿದ್ದ ಶ್ರೀಕಾಂತ್ ನಾಯಕ್ ಪೆಲತ್ತೂರು ಮತ್ತು ಚೈತ್ರ ಕುಂದಾಪುರನನ್ನು ವಶಕ್ಕೆ ಪಡೆದಿದ್ದಾರೆ.

ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಉಡುಪಿ ಜಿಲ್ಲೆಯ, ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ಟಿಕೆಟ್ ಮಾಡಿಸಿಕೊಡುವುದಾಗಿ ನಂಬಿಸಿ ಸುಮಾರು ಏಳು ಕೋಟಿ ರೂಪಾಯಿ ವಂಚನೆ ಮಾಡಿದ್ದರು.

ಈ ಬಗ್ಗೆ ಗೋವಿಂದ ಪೂಜಾರಿ ಬೆಂಗಳೂರಿನಲ್ಲಿದೂರನ್ನ ದಾಖಲಿಸಿದ್ದರು. ಬೆಂಗಳೂರು ಸಿಸಿಬಿ ಪೊಲೀಸರು ಒಟ್ಟು ನಾಲ್ವರನ್ನು ಬಂಧಿಸಿದ್ದಾರೆ.

Related Posts

Leave a Reply

Your email address will not be published.