ಚುನಾವಣೆ ಹಿನ್ನೆಲೆ, ಕೇರಳ-ಕರ್ನಾಟಕ ಗಡಿಭಾಗದಲ್ಲಿ ತೀವ್ರ ತಪಾಸಣೆ

ಮಂಜೇಶ್ವರ : ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕೇರಳ ಪೆÇಲೀಸರು ಕೂಡಾ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಗಡಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಿದ್ದಾರೆ.ಕರ್ನಾಟಕ ಭಾಗಕ್ಕೆ ವ್ಯಾಪಾರ, ಚಿಕಿತ್ಸೆ, ಶಿಕ್ಷಣ ಪ್ರವೇಶ ಸೇರಿದಂತೆ ವಿವಿದ ಉದ್ದೇಶಗಳಿಗಾಗಿ ಅನೇಕ ಜನರು ಕೇರಳದಿಂದ ಗಡಿ ದಾಟಿರವರು ಮರಳಿ ಬರುವಾಗ ದೊಡ್ಡ ಮೊತ್ತದ ಹಣ ಜೊತೆಯಾಗಿದ್ದರೆ ಸಾಕಷ್ಟು ದಾಖಲೆಗಳನ್ನು ಹೊಂದಿರಬೇಕು.

ದಾಖಲೆಗಳ ಕೊರತೆಯಿಂದ ವಶಪಡಿಸಿಕೊಂಡ ಹಣವನ್ನು ಚುನಾವಣಾ ಪ್ರಕ್ರಿಯೆ ಮುಗಿದ ನಂತರವೇ ಹಿಂತಿರುಗಿಸಲಾಗುತ್ತದೆ. ಪುರಾವೆಗಳಿಲ್ಲದೆ ಹೆಚ್ಚುವರಿ ಹಣವನ್ನು ಕೊಂಡೊಯ್ಯದಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಕೇರಳ ಮತ್ತು ಕರ್ನಾಟಕದ ಗಡಿ ಪ್ರದೇಶವಾದ ತಲಪ್ಪಾಡಿಯಲ್ಲಿ ಬುಧವಾರ ಸಂಜೆಯಿಂದ ಕೇರಳ ಪೊಲೀಸರು ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ.

ಕಾಸರಗೋಡು ಡಿವೈಎಸ್ಪಿ ಸುಧಾಕರನ್, ಮಂಜೇಶ್ವರ ಎಸ್‍ಐ ಅನ್ಸಾರ್, ಎಸ್‍ಐ ಸುಮೇಶ್ ಮೊದಲಾದವರು ವಾಹನ ತಪಾಸಣೆಗೆ ನೇತೃತ್ವ ನೀಡಿದರು. ಕರ್ನಾಟಕದ ಚುನಾವಣೆ ಮುಗಿಯುವ ತನಕ ತಪಾಸಣೆ ಮುಂದುವರಿಯಲಿದೆ.

Related Posts

Leave a Reply

Your email address will not be published.