ಪುತ್ತೂರಿನ ಚೆಳ್ಯಡ್ಕ ಸೇತುವೆ ಸಂಪೂರ್ಣ ಮುಳುಗಡೆ : ಸಂಚಾರ ನಿಷೇಧ

ಪುತ್ತೂರು: ಕರಾವಳಿಯಾದ್ಯಂತ ಭಾರೀ ಮಳೆಯಾಗಿದ್ದು, ಪುತ್ತೂರಿನಲ್ಲಿ ಸುರಿದ ಮಳೆಗೆ ಚೆಳ್ಯಡ್ಕ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಪುತ್ತೂರು- ಪಾಣಾಜೆ- ಪೆರ್ಲ ಸಂಪರ್ಕಿಸುವ ರಸ್ತೆ ಚೆಳ್ಯಡ್ಕ ಎಂಬಲ್ಲಿ ಈ ಸೇತುವೆಯಿದ್ದು, ಮಳೆಗಾಲ ಸಂದರ್ಭದಲ್ಲಿ ಹೆಚ್ಚಿನ ಸಮಯ ಈ ಸೇತುವೆ ಮುಳುಗಡೆಯಾಗುತ್ತಿದ್ದು, ಈ ಬಾರಿಯ ಮಳೆಗೆ ಮೊದಲ ಬಾರಿಗೆ ಈ ಸೇತುವೆ ಮುಳುಗಡೆಯಾಗಿದೆ.

ಸೇತುವೆ ಮುಳುಗಡೆಯಾದ ಹಿನ್ನಲೆಯಲ್ಲಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಶೇಧಿಸಲಾಗಿದ್ದು, ಆ ಭಾಗದ ಜನ ಪರ್ಯಾಯ ರಸ್ತೆ ಬಳಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

manjushree silk and sarees

Related Posts

Leave a Reply

Your email address will not be published.