ಗಂಧದ ಮರ ಕದಿಯಲು ಬಂದಿದ್ದ ಇಬ್ಬರ ಬಂಧನ: ಓರ್ವ ಸಾವು

ಚಿಕ್ಕಮಗಳೂರು: ಅರಣ್ಯ ಇಲಾಖೆ ಅಧಿಕಾರಿಗಳ ವಶದಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲಾಖೆಯ ಕಲ್ಲುಹೊಳ ಕೋಟೆಯ ಆನೆ ಶಿಬಿರದ ಶೌಚಾಲಯದಲ್ಲಿ ವ್ಯಕ್ತಿ ಶವ ಪತ್ತೆಯಾಗಿದೆ. ರಾತ್ರಿ ಗಂಧದ ಮರ ಕದಿಯಲು ಬಂದಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಅರಣ್ಯ ಇಲಾಖೆ ಕ್ವಾರ್ಟರ್ಸ್ನಲ್ಲಿ ವ್ಯಕ್ತಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ನಂತರ ಆನೆ ಶಿಬಿರಕ್ಕೆ ವ್ಯಕ್ತಿಯ ಶವ ತಂದಿದ್ದಾರೆಂದು ಅರಣ್ಯ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆರೋಪಿಸುತ್ತಿದ್ದಾರೆ. ಸ್ಥಳಕ್ಕೆ ಸಖರಾಯಪಟ್ಟಣ ಪೊಲೀಸರು ಭೇಟಿ, ಪರಿಶೀಲನೆ ಮಾಡಿದರು