ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಯೆಯ್ಯಾಡಿಯಲ್ಲಿ ಪ್ರಚಾರಾಂದೋಲನಾ ಸಭೆ

ಕೇಂದ್ರ ಸರ್ಕಾರದ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಸಿಐಟಿಯು ನೇತೃತ್ವದಲ್ಲಿ ಆಗಸ್ಟ್ 9ರಂದು ಮಂಗಳೂರಲ್ಲಿ ಪ್ರತಿಭಟನಾ ಪ್ರದರ್ಶನವನ್ನು ಹಮ್ಮಿಕೊಂಡಿದ್ದು, ಈ ಪ್ರಯುಕ್ತ ನಗರದ ಯೆಯ್ಯಾಡಿಯಲ್ಲಿ ಪ್ರಚಾರಂದೋಲನಾ ಸಭೆ ನಡೆಯಿತು.

ಈ ವೇಳೆ ಮಾತನಾಡಿದ ಅಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ, ಕೇಂದ್ರದ ನರೇಂದ್ರ ಮೋದಿ ಸರ್ಕಾರ ಸಂಪೂರ್ಣವಾಗಿ ದೇಶದ ಎಲ್ಲ ಸಂಪತ್ತನ್ನು ಅಭಿವೃದ್ಧಿಯ ಹೆಸರಿನಲ್ಲಿ ದೇಶಿ ಮತ್ತು ವಿದೇಶಿ ಬಂಡವಾಳಗಾರರಿಗೆ ಅನಿಯಂತ್ರಿತವಾಗಿ ಲೂಟಿ ಮಾಡಲು ದಾರಿಯನ್ನು ತೆರೆದಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಸೇರಿದಂತೆ ಮೊದಲಾದವರು ಭಾಗಿಯಾಗಿದ್ದರು.

Related Posts

Leave a Reply

Your email address will not be published.