ಗ್ಯಾರಂಟಿ ಕಾರ್ಡ್ ಅದು ಜಸ್ಟ್ ವಿಸಿಟಿಂಗ್ ಕಾರ್ಡ್ : ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಸಿಎಂ ಬೊಮ್ಮಾಯಿ ಲೇವಡಿ

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ನಾವು ಅವರ ಯೋಜನೆ ಬಗ್ಗೆ ಯಾಕೆ ಹತಾಶೆ ಆಗಬೇಕು. ಕಾಂಗ್ರೆಸ್ ಏನು ಎಂಬುದು ಇಡೀ ಜಗತ್ತಿಗೆ ಗೊತ್ತಿದೆ. ಜನರೇ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಇವರ ಮಾತಿಗೆ ಗ್ಯಾರಂಟಿ ಇಲ್ವಾ? ಗ್ಯಾರಂಟಿ ಕಾರ್ಡ್ ಯಾಕೆ ಕೊಡಬೇಕು. ಗ್ಯಾರಂಟಿ ಕಾರ್ಡ್ ಅಲ್ಲ ಅದು ಜಸ್ಟ್ ವಿಸಿಟಿಂಗ್ ಕಾರ್ಡ್ ಎಂದು ಹೇಳಿದ್ದಾರೆ.

ಮಂಗಳೂರಿನ ಹೆಲಿ ಪ್ಯಾಡ್ ನಲ್ಲಿ ಈ ಕುರಿತ ಪ್ರಶ್ನೆಗೆ ಸಿಎಂ ಬೊಮ್ಮಾಯಿ ಉತ್ತರಿಸಿದರು. ಸೋಮಣ್ಣ- ಯಡಿಯೂರಪ್ಪ ವೈಮನಸ್ಸಿನ ಕುರಿತ ಪ್ರಶ್ನೆಗೆ, ಸೋಮಣ್ಣ ಮತ್ತು ಯಡಿಯೂರಪ್ಪ ಅವರದ್ದು ತಂದೆ-ಮಗನ ಸಂಬಂಧ. ಅವರು ದೆಹಲಿಗೆ ವೈಯಕ್ತಿಕ ಕಾರಣದಿಂದಷ್ಟೆ ಹೋಗಿದ್ದಾರೆ. ಯಾವುದೇ ಭಿನ್ನಾಭಿಪ್ರಾಯವನ್ನು ಅವರು ಹೊಂದಿಲ್ಲ. ಯಡಿಯೂರಪ್ಪ ಅವರು ಎಲ್ಲರಿಗಿಂತ ಎತ್ತರದ ಲೀಡರ್ ಎಂದು ಹೇಳಿದರು. ಪಶ್ಚಿಮ ಘಟ್ಟ ಭಾಗದಲ್ಲಿ ಭಾರೀ ಕಾಡ್ಗಿಚ್ಚು ಉಂಟಾಗುತ್ತಿರುವ ಪ್ರಶ್ನೆಗೆ, ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಅಲ್ಲಲ್ಲಿ ಬೆಂಕಿ ಬೀಳುತ್ತದೆ. ಬೆಂಕಿ ನಂದಿಸಲು ಕ್ರಮ ಕೈಗೊಳ್ಳಲಾಗಿದೆ. ಆದರೆ ಬೆಂಕಿ ಬೀಳದಂತೆ ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಡಿಸಿಗಳ ಜೊತೆ ಸಭೆಯನ್ನು ಮಾಡಿದ್ದೇನೆ. ಬೆಂಕಿ ನಂದಿಸುವ ಬದಲು ಬೆಂಕಿ ಬೀಳದಂತೆ ಕ್ರಮ ಕೈಗೊಳ್ಳುತ್ತೇವೆ. ಅರಣ್ಯ ಇಲಾಖೆಗೆ ಬೆಂಕಿ ನಂದಿಸಲು ಹೆಲಿಕಾಪ್ಟರ್ ನೀಡುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದರು.

ಬೇಸಿಗೆಯಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿರುವ ಕುರಿತು ಕೇಳಿದ್ದಕ್ಕೆ, ಕುಡಿಯುವ ನೀರಿನ ವಿಚಾರದಲ್ಲಿ ಟಾಸ್ಕ್ ಪೊರ್ಸ್ ಮಾಡಲಾಗಿದೆ. ನೀರಿಗಾಗಿ ಕೆಲವು ಕಡೆ ತುಂಬಾ ಸಮಸ್ಯೆಗಳಿವೆ. ಕೆಲವು ಭಾಗದಲ್ಲಿ ಬೋರ್ ವೆಲ್ ಗಳು ಬತ್ತಿ ಹೋಗಿದೆ. ಈ ಬಗ್ಗೆ ವರದಿ ತರಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಬಿಜೆಪಿಯಲ್ಲಿ ಹಿರಿಯ ಶಾಸಕರಿಗೆ ಟಿಕೆಟ್ ಇಲ್ಲ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಟಿಕೆಟ್ ಹಂಚಿಕೆ ಬಗ್ಗೆ ಹಿರಿಯರು ನಿರ್ಧಾರ ಕೈಗೊಳ್ಳುತ್ತಾರೆ. ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡೋದು ಅವರ ಪಕ್ಷಕ್ಕೆ ಬಿಟ್ಟಿದ್ದು. ನಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಶೀಘ್ರವಾಗಿ ಬಿಡುಗಡೆಯಾಗಲಿದೆ. ಚುನಾವಣೆಯನ್ನು ಗೆಲ್ಲುವ ನಿಟ್ಟಿನಲ್ಲಿ ಪಕ್ಷ ಗೆಲ್ಲುವ ನಿರ್ಧಾರ ಕೈಗೊಳ್ಳಲಿದೆ ಎಂದರು.

Related Posts

Leave a Reply

Your email address will not be published.