ಸಿಎಂ ಆಗಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆ
ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ ಅವರನ್ನ ಬುಧವಾರ ತಡರಾತ್ರಿ ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ ಎಂದು ವರದಿಯಾಗಿದೆ. ಜೊತೆಗೆ ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಆಕಾಂಕ್ಷಿಯಾಗಿದ್ದ ಅವರಿಗೆ ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರೇ ಮುಂದುವರಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಸಂಜೆ 7 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ ಎಂದು ಮೂಲಗಳಯ ತಿಳಿಸಿವೆ. ವಿಧಾನಸಭೆ, ಪರಿಷತ್, ಕಾಂಗ್ರೆಸ್ ಸಂಸದರನ್ನು ಬೆಂಗಳೂರು ಕ್ವೀನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ನಡೆಯುವ ಸಭೆಗೆ ಡಿಕೆಶಿ ಆಹ್ವಾನಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಇಡೀ ದಿನ ಕಸರತ್ತು ನಡೆಸಿ ಗುರುವಾರ ಮಧ್ಯರಾತ್ರಿ ಬಳಿಕ ರಾಜಿ ಸಂಧಾನ ಸೂತ್ರಕ್ಕೆ ಎಲ್ಲ ಮುಖಂಡರ ಮನವೊಲಿಸಿದ್ದಾರೆ ಎಂದು ಉನ್ನತ ಮೂಲಗಳು ಹೇಳಿವೆ.