ಅ. 27ರಂದು ಮಂಗಳೂರಿಗೆ ಸಿಎಂ ಭೇಟಿ

 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 27ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಸಂಜೆ 4ಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿ 4.25ಕ್ಕೆ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಚೀಫ್‌ ಮಿನಿಸ್ಟರ್ಸ್‌ ಮಂಗಳೂರು ಇಂಡಿಯಾ ಇಂಟರ್‌ನ್ಯಾಶನಲ್‌ ಚಾಲೆಂಜ್‌ -2025 ಬ್ಯಾಡ್ಮಿಂಟನ್‌ ಟೂರ್ನಮೆಂಟ್‌ ಉದ್ಘಾಟಿಸುವರು. ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾತ್ರಿ 7.25ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಮರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Related Posts

Leave a Reply

Your email address will not be published.