HomeFresh Newsಜ್ಞಾನಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಸಂಘಕ್ಕೆ ಚಾಲನೆ

ಜ್ಞಾನಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಸಂಘಕ್ಕೆ ಚಾಲನೆ

ಸಿದ್ದಾಪುರ: ವಿದ್ಯಾರ್ಥಿಗಳಲ್ಲಿ ವಾಣಿಜ್ಯ ಜ್ಞಾನ, ಉದ್ಯಮಶೀಲತೆ ಹಾಗೂ ವ್ಯವಹಾರಿಕ ಕೌಶಲಗಳನ್ನು ಬೆಳೆಸುವ ಉದ್ದೇಶದಿಂದ ಜ್ಞಾನಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಜ್ಞಾನಸರಸ್ವತಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಬಿ.ಎಸ್. ಸುರೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೋಟ ವಿವೇಕ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಸಂಜೀವ ಗುಂಡ್ಮಿ ಅವರು ವಾಣಿಜ್ಯ ಸಂಘವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವಾಣಿಜ್ಯ ಜ್ಞಾನ, ಉದ್ಯಮಶೀಲತೆ ಹಾಗೂ ವ್ಯವಹಾರಿಕ ಕೌಶಲ ಬೆಳೆಸುವಲ್ಲಿ ಇಂತಹ ಸಂಘಗಳು ಮಹತ್ವದ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳು ವಿವಿಧ ಅವಕಾಶಗಳನ್ನು ಗುರುತಿಸಿ, ಸೃಜನಶೀಲತೆ ಹಾಗೂ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ಕರೆ ನೀಡಿದರು.
ವಾಣಿಜ್ಯ ವಿಭಾಗದ ಮುಖ್ಯಸ್ಥ ಜಗದೀಶ್ ಸ್ವಾಗತಿಸಿದರು. ಉಪಪ್ರಾಂಶುಪಾಲ ಹರ್ಷ ಶೆಟ್ಟಿ ಅಜ್ರಿ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಗಾಯತ್ರಿ ಸೋಮಯಾಜಿ ಕಾರ್ಯಕ್ರಮ ನಿರೂಪಿಸಿದರು.
ಪ್ರಾಂಶುಪಾಲ ಅಮರೇಶ್ ಹೆಗ್ಡೆ, ವಾಣಿಜ್ಯ ವಿಭಾಗದ ಉಪನ್ಯಾಸಕರು ಹಾಗೂ ವಾಣಿಜ್ಯ ಸಂಘದ ವಿದ್ಯಾರ್ಥಿ ಸದಸ್ಯರಾದ ಸುಚರಿತ ಮತ್ತು ಆಕಾಶ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments