ಬಂಟ್ವಾಳ: ಮತದಾರರ ಪಟ್ಟಿಯ ಸಮಗ್ರ ಪರಿಶೀಲನೆ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕಿನಲ್ಲಿ ಮಂಗಳವಾರ ಪ್ರಾರಂಭಿಸಲಾಯಿತು .

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಭಾಗ ಸಂಖ್ಯೆ 130 ರಲ್ಲಿಯ ಬಿ.ಮೂಡ ಗ್ರಾಮದ ಬಸ್ತಿಪಡ್ಪು ಚೆನ್ನಮ್ಮ ಕುಟೀರ ನಿವಾಸದಲ್ಲಿ ವಾಸ್ತವ್ಯ ಇರುವ ಕೇಂದ್ರ ಸರಕಾರದ ಮಾಜಿ ಹಣಕಾಸು ಸಚಿವ ಬಿ.ಜನಾರ್ಧನ ಪೂಜಾರಿಯವರಿಗೆ ಮೊದಲನೇ ಎನಿಮೇಷನ್ ಫಾರ್ಮ್ ವಿತರಿಸಲಾಯಿತು. ಈ ಸಮೀಕ್ಷೆ ಯ ಬಗ್ಗೆ ಜನಾರ್ದನ ಪೂಜಾರಿಯವರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಮಯದಲ್ಲಿ ಬಂಟ್ವಾಳ ತಹಶೀಲ್ದಾರರಾದ ಮಂಜುನಾಥ್, ಚುನಾವಣೆ ಶಾಖೆಯ ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು, ಬಿ ಎಲ್ ಎ ಸುನೀಲ್ ಕುಮಾರ್ ಭಂಡಾರಿಬೆಟ್ಟು , ಮೇಲ್ವಿಚಾರಕಿ, ಗ್ರಾಮ ಆಡಳಿತ ಅಧಿಕಾರಿ ಯಶ್ವಿತಾ, ಮತಗಟ್ಟೆ ಅಧಿಕಾರಿ ದಾಮೋದರ ಪಡಿಯಾರ್, ಕಚೇರಿ ಸಿಬ್ಬಂದಿ ಸದಾಶಿವ ಕೈಕಂಬ, ಅಕ್ಷತ್ ವಿಟ್ಲ ಉಪಸ್ಥಿತರಿದ್ದರು.

