HomeFresh Newsಪ್ರಿಯದರ್ಶಿನಿ ಸೊಸೈಟಿಯನ್ನು ಅತ್ಯುತ್ತಮವಾಗಿ ಮುನ್ನಡೆಸಿದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗೆ ಅಭಿನಂದನೆ: ಅಲ್ವಿನ್ ಕ್ಲೆಮೆಂಟ್ ಕುಟಿನ್ಹೊ

ಪ್ರಿಯದರ್ಶಿನಿ ಸೊಸೈಟಿಯನ್ನು ಅತ್ಯುತ್ತಮವಾಗಿ ಮುನ್ನಡೆಸಿದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗೆ ಅಭಿನಂದನೆ: ಅಲ್ವಿನ್ ಕ್ಲೆಮೆಂಟ್ ಕುಟಿನ್ಹೊ

ಹಳೆಯಂಗಡಿ: ಯಾವುದೇ ಸಂಸ್ಥೆ ಅಥವಾ ಸಹಕಾರಿ ಸೊಸೈಟಿಯನ್ನು ಆರಂಭಿಸುವುದು ಸುಲಭ. ಆದರೆ ಅದನ್ನು ಹುಟ್ಟುಹಾಕಿ, ಸಮರ್ಥವಾಗಿ ಮುನ್ನಡೆಸಿಕೊಂಡು ಹೋಗುವುದು ಸವಾಲಿನ ಕೆಲಸ. ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುತ್ತಿರುವ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ ಎಂದು ಮುಲ್ಕಿ ತಾಲೂಕು ಪಂಚಾಯತ್ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಲ್ವಿನ್ ಕ್ಲೆಮೆಂಟ್ ಕುಟಿನ್ಹೊ ಹೇಳಿದರು.
ಹಳೆಯಂಗಡಿಯ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಲಿ. ಆಶ್ರಯದಲ್ಲಿ ಆಯೋಜಿಸಲಾದ ಸಹಕಾರ ಸಪ್ತಾಹ 2026ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಪ್ರಿಯದರ್ಶಿನಿ ಸೊಸೈಟಿ ಮುಂದಿನ ದಿನಗಳಲ್ಲಿಯೂ ಜನರಿಗೆ ಉತ್ತಮ ಸೇವೆ ನೀಡುವ ಮೂಲಕ ರಾಜ್ಯದ ಸಹಕಾರಿ ರಂಗದಲ್ಲಿ ವಿಶಿಷ್ಟ ಹೆಸರು ಗಳಿಸಲಿ ಎಂದು ಹಾರೈಸಿದ ಅವರು, ಸಂಸ್ಥೆಯ ಬೆಳವಣಿಗೆಗೆ ಶ್ರಮಿಸುತ್ತಿರುವ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದರು.
ಸಹಕಾರಿ ಕ್ಷೇತ್ರದ ಸಾಧಕರಿಗೆ ಸನ್ಮಾನ
ಕಾರ್ಯಕ್ರಮದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಬಿ. ರತ್ನಾಕರ ಯಾನೆ ಕಾಂತಣ್ಣ ಗುರಿಕಾರ (ನಿವೃತ್ತ ವ್ಯವಸ್ಥಾಪಕ ನಿರ್ದೇಶಕರು, ಪಡುಪಣಂಬೂರು ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘ, ಹಳೆಯಂಗಡಿ), ವಿನೋದ್ ಸಾಲ್ಯಾನ್ (ನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲಾ ಕೋಳಿ ಮಾರಾಟಗಾರರ ಸಹಕಾರ ಸಂಘ, ಮಂಗಳೂರು ಹಾಗೂ ಮಾಜಿ ನಿರ್ದೇಶಕರು, ಪಡುಪಣಂಬೂರು ಸಹಕಾರಿ ವ್ಯವಸಾಯಿಕ ಸಂಘ, ಹಳೆಯಂಗಡಿ) ಮತ್ತು ಸುಮಂಗಳ ಭಟ್ (ನಿವೃತ್ತ ಅಧಿಕಾರಿ, ಪಡುಪಣಂಬೂರು ಸಹಕಾರಿ ವ್ಯವಸಾಯಿಕ ಸಂಘ, ಹಳೆಯಂಗಡಿ) ಅವರನ್ನು ಸೊಸೈಟಿ ವತಿಯಿಂದ ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ಸ್ವರ್ಣ ಕುಂಭ ವಿವಿಧೋದ್ದೇಶ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ ಮೂಲ್ಯ ಹಾಗೂ ಪಡುಪಣಂಬೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಸುಜಾತ ಮಾತನಾಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ವಿನೋದ್ ಸಾಲ್ಯಾನ್, ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಬೆಳವಣಿಗೆಗೆ ಯಾರೂ ಅಡ್ಡಿಯಾಗಬಾರದು. ಸಂಸ್ಥೆಯ ಅಭಿವೃದ್ಧಿಯನ್ನು ಕಂಡು ಸಂತೋಷಪಡಬೇಕು. ಸೊಸೈಟಿಯನ್ನು ಅವಲಂಬಿಸಿರುವ ಸಿಬ್ಬಂದಿಗಳ ಕುಟುಂಬಗಳಿಗೆ ಯಾವುದೇ ರೀತಿಯ ಅನ್ಯಾಯವಾಗಬಾರದು. ನಾವು ಸದಾ ಸೊಸೈಟಿಯೊಂದಿಗೆ ಇರುತ್ತೇವೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ವಿಜಯಕುಮಾರ್ ಸನಿಲ್ ವಹಿಸಿದ್ದರು. ನಿರ್ದೇಶಕರಾದ ಧನಂಜಯ ಮಟ್ಟು ಮತ್ತು ಉಮನಾಥ ಜೆ. ಶೆಟ್ಟಿಗಾರ್ ಉಪಸ್ಥಿತರಿದ್ದರು.
ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಪೂಜಾರಿ ಸ್ವಾಗತಿಸಿದರು. ಶಾಖಾ ಪ್ರಬಂಧಕಿ ಪ್ರಜ್ಞಾಶ್ರೀ ವಂದಿಸಿದರು. ಲೆಕ್ಕಿಗರಾದ ಲೋಲಾಕ್ಷಿ ಹಾಗೂ ಸಾಲ ವಿಭಾಗದ ಹಿರಿಯ ವ್ಯವಸ್ಥಾಪಕ ಮೋಹನ್ ದಾಸ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments