ಕಾಂಗ್ರೆಸ್ ಕಾರ್ಯಕರ್ತರಲ್ಲದ ಅಭ್ಯರ್ಥಿಗೆ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ : ಕಾರ್ಕಳದಲ್ಲಿ ಕಾಂಗ್ರೆಸ್ ಮುಖಂಡರ ಪುನರುಚ್ಚಾರ

ಕಾರ್ಕಳ: ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲದ ಐದನೇ ಅಭ್ಯರ್ಥಿಗೆ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ. ನಾವೆಲ್ಲಾ ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಜಯಶಾಲಿಯಾಗಲಿದ್ದೇವೆ ಎಂದು ಕಾರ್ಕಳ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ನೀರೆ ಕೃಷ್ಣ ಶೆಟ್ಟಿ, ಮಂಜುನಾಥ್ ಪೂಜಾರಿ ಮುದ್ರಾಡಿ, ಡಿ ಆರ್ ರಾಜು, ಸುರೇಂದ್ರ ಶೆಟ್ಟಿ ಪುನರುಚ್ಚರಿಸಿದ್ದಾರೆ.

ಕಾರ್ಕಳ ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಪೂಜಾರಿ ಅವರು ಕಾರ್ಕಳ ತಾಲೂಕು ಮೊದಲು ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದು ಅದನ್ನು ಮರಳಿ ತರಲಿದ್ದೇವೆ. ಬಿಜೆಪಿ ಪಕ್ಷ ಐದನೆ ವ್ಯಕ್ತಿಗೆ ಟಿಕೆಟ್ ನೀಡುವ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡುವ ಬಗ್ಗೆ ವೀರಪ್ಪ ಮೊಯ್ಲಿ ಭರವಸೆ ನೀಡಿದ್ದಾರೆ . ಒಂದು ವಾರದಲ್ಲಿ ಟಿಕೆಟ್ ನೀಡುವ ಬಗ್ಗೆ ಅಭ್ಯರ್ಥಿಯ ಘೋಷಣೆ ಅಂತಿಮವಾಗಲಿದೆ ಎಂದು ಹೇಳಿದರು.

ಕೆಪಿಸಿಸಿ ಸದಸ್ಯ ಹಾಗೂ ಕಾಂಗ್ರೇಸ್ ಪಕ್ಷದ ಟಿಕೆಟ್ ಅಕಾಂಕ್ಷಿ ಸುರೇಂದ್ರ ಶೆಟ್ಟಿ ಮಾತನಾಡಿ, ಬಿಜೆಪಿ ಪಕ್ಷದ ಸದಸ್ಯರು ಕಾಂಗ್ರೆಸ್‍ನಲ್ಲಿ ಅಸ್ಥಿರಗೊಳಿಸುವ ಷಡ್ಯಂತ್ರ ರೂಪಿಸುತ್ತಿದ್ದಾರೆ. ಐದನೆ ಅಭ್ಯರ್ಥಿ ಆಯ್ಕೆ ಮಾಡಿಯೇ ಇಲ್ಲಾ ! ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಕಾಂಗ್ರೆಸ್ ಪಕ್ಷದ ಬಗ್ಗೆ ಅಪಪ್ರಚಾರ ಮಾಡಿ ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದೆ ಎಂದರು

ಉದ್ಯಮಿ ಹಾಗೂ ಟಿಕೆಟ್ ಅಕಾಂಕ್ಷಿ ಡಿ ಅರ್ ರಾಜು ಅವರು ಮಾತನಾಡಿ ಪಕ್ಷ ಸಿದ್ದಾಂತದ ಮೂಲಕ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಪ್ರಚಾರಕ್ಕೆ ಇಳಿದಿದ್ದೇವೆ. ನಾವೆಲ್ಲರು ಟಿಕೆಟ್ ಅಕಾಂಕ್ಷಿಗಳು ನಿಜ ಆದರೆ ಮೊಯ್ಲಿಯವರು ಐದನೆ ವ್ಯಕ್ತಿಗೆ ಟಿಕೆಟ್ ನೀಡುವುದನ್ನು ಅಲ್ಲಗಳೆದಿದ್ದಾರೆ. ಕೇವಲ ಊಹಾ ಪೆÇೀಹಗಳಷ್ಟೆ ಎಂದರು .

ಸುದ್ದಿ ಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ನೀರೆ ಕೃಷ್ಣ ಶೆಟ್ಟಿ, ಕಾರ್ಕಳ ಬ್ಲಾಕ್ ಅಧ್ಯಕ್ಷ ನವೀನ ದೇವಾಡಿಗ, ಯೂತ್ ಕಾಂಗ್ರೆಸ್ ಅಧ್ಯಕ್ಷ ಯೋಗೇಶ್ ಇನ್ನಾ, ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಬಂಗೇರ, ವಕ್ತಾರ ಶುಭದರಾವ್ ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.