ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ : ಮಂಗಳೂರು ಉತ್ತರ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿ ಘೋಷಿಸಿಲ್ಲ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ರಿಲೀಸ್ ಮಾಡಿದೆ. 43 ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ.ಪ್ರಮುಖವಾಗಿ ಬಿಜೆಪಿ ಬಿಟ್ಟು ಇತ್ತೀಚೆಗೆ ಕಾಂಗ್ರೆಸ್ ಸೇರಿದ ಮಾಜಿ ಡಿಸಿಎಂ ಲಕ್ಷ್ಮಂ ಸವದಿ ಅವರಿಗೆ ಅಥಣಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಕುತೂಹಲ ಕೆರಳಿಸಿದ್ದ ಪುತ್ತೂರು ಕ್ಷೇತ್ರಕ್ಕೆ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಕಾರ್ಕಳ ಕ್ಷೇತ್ರಕ್ಕೆ ಉದಯ್ ಕುಮಾರ್ ಶೆಟ್ಟಿ ಅವರನ್ನು ಚುನಾವಣಾ ಕಣಕ್ಕೆ ಇಳಿಸಲಾಗಿದೆ. ಮಂಗಳೂರು ದಕ್ಷಿಣಕ್ಕೆ ಜಾನ್ ರಿಚರ್ಡ್ ಲೋಬೋ ಅವರಿಗೆ ಟಿಕೆಟ್ ನೀಡಲಾಗಿದೆ. ಕುತೂಹಲ ಹೆಚ್ಚಿಸಿದ್ದ ಕೋಲಾರ ಕ್ಷೇತ್ರಕ್ಕೆ ಕೊತ್ತೂರು ಮಂಜುನಾಥ್ ಅವರಿಗೆ ಟಿಕೆಟ್ ನೀಡಿದ್ದಾರೆ. ಆ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಾರೆ ಎನ್ನುವ ಕುತೂಹಲಕ್ಕೆ ತೆರಬಿದ್ದಿದೆ. ಮೂಡಿಗೆರೆ ಕ್ಷೇತ್ರಕ್ಕೆ ಮೋಟಮ್ಮ ಅವರ ಪುತ್ರಿ ನಯನ ಜ್ಯೋತಿ ಜವಾರ್ ಟಿಕೆಟ್ ನೀಡಲಾಗಿದೆ.