ಬಿಪಿಎಲ್ ಪಡಿತರ ಕಾರ್ಡ್‍ದಾರರ ಖಾತೆಗೆ 170 ರೂ !!

ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಹೆಚ್ಚುವರಿ ಅಕ್ಕಿ ಹೊಂದಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ 5 ಕೆ.ಜಿ ಅಕ್ಕಿಗೆ ಬದಲಾಗಿ ಹಣವನ್ನು ನೀಡಲು ಸರ್ಕಾರ ನಿರ್ಧರಿಸಿದೆ.

ಈಗಾಗಲೇ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 5.ಕೆ.ಜಿ ಅಕ್ಕಿಯನ್ನು ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ನೀಡುತ್ತಿದ್ದು, ಉಳಿದ ಹೆಚ್ಚುವರಿ 5 ಕೆ.ಜಿ ಅಕ್ಕಿಗೆ 170 ರೂ. ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಸಂಪುಟ ಸಭೆ ಬಳಿಕ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಜುಲೈ ತಿಂಗಳಿನಿಂದಲೇ ಬಿಪಿಎಲ್ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆಯಾಗಲಿದೆ. ಅಕ್ಕಿಯ ದಾಸ್ತಾನು ಆಗುವವರೆಗೂ ಹಣವನ್ನು ನೀಡಲು ಸರ್ಕಾರ ನಿರ್ಧರಿಸಿದೆ.

Related Posts

Leave a Reply

Your email address will not be published.